ಮಾನ್ಯತೆ ಮುಕ್ತಾಯವಾದ ಲರ್ನರ್ ಲೈಸೆನ್ಸ್'ಗಳ ಅವಧಿ ವಿಸ್ತರಿಸಿದ ಸಾರಿಗೆ ಇಲಾಖೆ

2020ರ ಫೆಬ್ರವರಿ ಹಾಗೂ 2021ರ ನವೆಂಬರ್ ನಡುವೆ ಮುಕ್ತಾಯಗೊಳ್ಳುವ ಲರ್ನರ್ ಲೈಸೆನ್ಸ್ ಗಳ ಮಾನ್ಯತೆಯನ್ನು 2020ರ ಜನವರಿವರೆಗೆ ವಿಸ್ತರಿಸುತ್ತಿರುವುದಾಗಿ ದೆಹಲಿ ಸರ್ಕಾರ ತಿಳಿಸಿದೆ. ಕೋವಿಡ್ 19 ಸಾಂಕ್ರಾಮಿಕ ಹಾಗೂ ಡ್ರೈವಿಂಗ್ ಟೆಸ್ಟ್'ಗೆ ಸ್ಲಾಟ್‌ಗಳನ್ನು ಪಡೆಯಲು ಜನರು ಎದುರಿಸುತ್ತಿರುವ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ದೆಹಲಿ ಸರ್ಕಾರ ಹೇಳಿದೆ.

ಮಾನ್ಯತೆ ಮುಕ್ತಾಯವಾದ ಲರ್ನರ್ ಲೈಸೆನ್ಸ್'ಗಳ ಅವಧಿ ವಿಸ್ತರಿಸಿದ ಸಾರಿಗೆ ಇಲಾಖೆ

ದೆಹಲಿ ಸಾರಿಗೆ ಇಲಾಖೆಯು ತನ್ನ ಆದೇಶದಲ್ಲಿ ವಿವಿಧ ಆರ್‌ಟಿಒ ಕಚೇರಿಗಳು ಹಾಗೂ ಫಿಟ್‌ನೆಸ್ ಕೇಂದ್ರಗಳಲ್ಲಿ ಉಂಟಾಗುತ್ತಿರುವ ಭಾರೀ ಜನದಟ್ಟಣೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಇಲಾಖೆಯು ಇದನ್ನು ಅರ್ಜಿದಾರರು ಹಾಗೂ ಸಾರ್ವಜನಿಕ ಸೇವಾ ನೌಕರರ ಭದ್ರತೆಯ ಕಾಳಜಿ ಎಂದು ಕರೆದಿದೆ. ರಸ್ತೆಯಲ್ಲಿ ಸಂಚರಿಸುವ ವಾಹನಗಳು ಮಾಲಿನ್ಯ ನಿಯಂತ್ರಣಕ್ಕಾಗಿ ಪಿಯುಸಿ (ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ) ಪ್ರಮಾಣಪತ್ರ ಹೊಂದಿರುವುದು ಕಡ್ಡಾಯವೆಂದು ಇಲಾಖೆ ತಿಳಿಸಿದೆ.

ಮಾನ್ಯತೆ ಮುಕ್ತಾಯವಾದ ಲರ್ನರ್ ಲೈಸೆನ್ಸ್'ಗಳ ಅವಧಿ ವಿಸ್ತರಿಸಿದ ಸಾರಿಗೆ ಇಲಾಖೆ

ದೆಹಲಿಯಲ್ಲಿ ಲರ್ನರ್ ಲೈಸೆನ್ಸ್ ನೀಡುವ ಪ್ರಕ್ರಿಯೆಯನ್ನು ಈಗ ಆನ್‌ಲೈನ್ ಮಾಡಲಾಗಿದೆ. ದೆಹಲಿಯಲ್ಲಿ ಕಲಿಕಾ ಪರವಾನಗಿಗಾಗಿ ಆನ್‌ಲೈನ್ ಅರ್ಜಿಯ ಪ್ರಕ್ರಿಯೆಯನ್ನು ಈ ವರ್ಷದ ಆಗಸ್ಟ್ 11 ರಿಂದ ಆರಂಭಿಸಲಾಯಿತು. ಇದಾದ ನಂತರ ಲರ್ನರ್ ಲೈಸೆನ್ಸ್ ಪಡೆಯಲು ಬಯಸುವವರು ಆನ್‌ಲೈನ್ ಕಲಿಕಾ ಪರವಾನಗಿಗಾಗಿ ಮನೆಯಲ್ಲಿ ಕುಳಿತೇ ಅರ್ಜಿ ಸಲ್ಲಿಸುತ್ತಿದ್ದಾರೆ.

ಮಾನ್ಯತೆ ಮುಕ್ತಾಯವಾದ ಲರ್ನರ್ ಲೈಸೆನ್ಸ್'ಗಳ ಅವಧಿ ವಿಸ್ತರಿಸಿದ ಸಾರಿಗೆ ಇಲಾಖೆ

ಮಾಹಿತಿಗಳ ಪ್ರಕಾರ, ಲರ್ನಿಂಗ್ ಡ್ರೈವಿಂಗ್ ಲೈಸೆನ್ಸ್‌ಗೆ ಅರ್ಜಿ ಸಲ್ಲಿಸುವಾಗ, ಆನ್‌ಲೈನ್ ಪರೀಕ್ಷೆಯ ದಿನಾಂಕ ಹಾಗೂ ಸಮಯದ ಬಗ್ಗೆ ಅರ್ಜಿದಾರರಿಗೆ ಮಾಹಿತಿ ನೀಡಲಾಗುತ್ತದೆ. ಇದರ ನಂತರ ಅರ್ಜಿದಾರರು ನಿಗದಿತ ಸಮಯದಲ್ಲಿ ಮನೆಯಲ್ಲಿ ಕುಳಿತು ಆನ್‌ಲೈನ್ ಮೂಲಕ ಪರೀಕ್ಷೆಯನ್ನು ತೆಗೆದುಕೊಳ್ಳಬೇಕಾಗುತ್ತದೆ. ಇದು ಆಧಾರ್ ಸಕ್ರಿಯಗೊಳಿಸಿದ ಪ್ಲಾಟ್ ಫಾರಂ ಆಗಿದ್ದು, ಇದರಲ್ಲಿ ಅರ್ಜಿದಾರರ ಬಯೋಮೆಟ್ರಿಕ್ ಮಾಹಿತಿಯನ್ನು ಸಾಫ್ಟ್‌ವೇರ್ ಗುರುತಿಸುತ್ತದೆ.

ಮಾನ್ಯತೆ ಮುಕ್ತಾಯವಾದ ಲರ್ನರ್ ಲೈಸೆನ್ಸ್'ಗಳ ಅವಧಿ ವಿಸ್ತರಿಸಿದ ಸಾರಿಗೆ ಇಲಾಖೆ

ಇದು ಅರ್ಜಿದಾರರೇ ಪರೀಕ್ಷೆಯನ್ನು ತೆಗೆದುಕೊಳ್ಳುತ್ತಾರೆ ಎಂದು ತೋರಿಸುತ್ತದೆ. ಈ ಆನ್‌ಲೈನ್ ಪರೀಕ್ಷೆಯ ನಂತರ, ಅರ್ಜಿದಾರರು ಶಾಶ್ವತ ಪರವಾನಗಿಗಾಗಿ ಆರ್‌ಟಿ‌ಒಗೆ ತೆರಳಿ ಡ್ರೈವಿಂಗ್ ಟೆಸ್ಟ್ ನೀಡಬೇಕಾಗುತ್ತದೆ. ದೆಹಲಿ ಸರ್ಕಾರವು ಆರಂಭಿಸಿರುವ ಆನ್‌ಲೈನ್ ಸೇವೆಗಳನ್ನು ಪಡೆಯಲು ಅರ್ಜಿದಾರರು ಆಧಾರ್ ಕಾರ್ಡ್ ಅನ್ನು ಹೊಂದಿರಬೇಕು. ಅರ್ಜಿದಾರರು ದೆಹಲಿ ಸಾರಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಲಾಗ್ ಇನ್ ಆಗಬೇಕು. (https://transport.delhi.gov.in/home/transport-department)

ಮಾನ್ಯತೆ ಮುಕ್ತಾಯವಾದ ಲರ್ನರ್ ಲೈಸೆನ್ಸ್'ಗಳ ಅವಧಿ ವಿಸ್ತರಿಸಿದ ಸಾರಿಗೆ ಇಲಾಖೆ

ಈ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಸೇವೆಗಳನ್ನು ಪಡೆಯಲು ಅರ್ಜಿದಾರರು ತಮ್ಮ ವೈಯಕ್ತಿಕ ವಿವರಗಳನ್ನು ಹಾಗೂ ಅವರ ದೈಹಿಕ ಸಾಮರ್ಥ್ಯದ ಬಗ್ಗೆ ಸ್ವಯಂ ಘೋಷಣೆಯನ್ನು ಮಾಡಿ ಪ್ರತ್ಯೇಕ ಫಾರಂಗಳನ್ನು ಭರ್ತಿ ಮಾಡಬೇಕು. ಅರ್ಜಿದಾರರು ಫಾರಂ ಸಲ್ಲಿಸಿದ ನಂತರ ಎಸ್‌ಎಂಎಸ್ ಮೂಲಕ ಅರ್ಜಿ ಸಂಖ್ಯೆಯನ್ನು ಪಡೆಯುತ್ತಾರೆ. ಲರ್ನರ್ ಲೈಸೆನ್ಸ್'ಗೆ ಅರ್ಜಿ ಸಲ್ಲಿಸುವವರಿಗೆ 20 ಪ್ರಶ್ನೆಗಳನ್ನು ಒಳಗೊಂಡ ಆನ್‌ಲೈನ್ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಮಾನ್ಯತೆ ಮುಕ್ತಾಯವಾದ ಲರ್ನರ್ ಲೈಸೆನ್ಸ್'ಗಳ ಅವಧಿ ವಿಸ್ತರಿಸಿದ ಸಾರಿಗೆ ಇಲಾಖೆ

ಈ ಪರೀಕ್ಷೆಯಲ್ಲಿ ರಸ್ತೆ ಸುರಕ್ಷತೆ ಹಾಗೂ ಸಂಚಾರ ಚಿಹ್ನೆಗಳಿಗೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಲಾಗುತ್ತದೆ. 10 ರಲ್ಲಿ ಆರು ಅಥವಾ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಅಭ್ಯರ್ಥಿಗಳನ್ನು ಉತ್ತೀರ್ಣರೆಂದು ಪರಿಗಣಿಸಲಾಗುತ್ತದೆ. ಬೇರೊಬ್ಬರ ಸಹಾಯ ಪಡೆದು ಆನ್‌ಲೈನ್ ಪರೀಕ್ಷೆಯಲ್ಲಿ ತೇರ್ಗಡೆಯಾದವರು ಶಾಶ್ವತ ಚಾಲನಾ ಪರವಾನಗಿಯನ್ನು ಪಡೆಯಲು ಸಾರಿಗೆ ಕಚೇರಿ ನಡೆಸುವ ದೈಹಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಾಗುತ್ತದೆ.

ಮಾನ್ಯತೆ ಮುಕ್ತಾಯವಾದ ಲರ್ನರ್ ಲೈಸೆನ್ಸ್'ಗಳ ಅವಧಿ ವಿಸ್ತರಿಸಿದ ಸಾರಿಗೆ ಇಲಾಖೆ

ದೆಹಲಿ ಸಾರಿಗೆ ಇಲಾಖೆಯು ಒಟ್ಟು 33 ಸೇವೆಗಳನ್ನು ಆನ್‌ಲೈನ್‌ ಮೂಲಕ ನೀಡುತ್ತಿದೆ. ಇವುಗಳಲ್ಲಿ ನಕಲಿ ಚಾಲನಾ ಪರವಾನಗಿ, ವಿಳಾಸ ಬದಲಾವಣೆ, ಹೊಸ ಕಂಡಕ್ಟರ್ ಪರವಾನಗಿ, ನೋಂದಣಿ ಪ್ರಮಾಣಪತ್ರ, ಎನ್‌ಒಸಿ, ಕೈಗಾರಿಕಾ ಚಾಲನಾ ಪರವಾನಗಿ, ಡಿಎಲ್ ಬದಲಿ, ರಸ್ತೆ ತೆರಿಗೆ, ವಿಮೆ ಎನ್‌ಒಸಿ, ಸರಕು ವಾಹನಕ್ಕೆ ಹೊಸ ಪರವಾನಗಿ, ಪರವಾನಗಿ ನವೀಕರಣ, ನಕಲಿ ಪರವಾನಗಿ, ಸರೆಂಡರ್ ಪರವಾನಗಿ, ಪರವಾನಗಿ ವರ್ಗಾವಣೆ, ಪ್ರಯಾಣಿಕ ಸೇವಾ ವಾಹನದ ಬ್ಯಾಡ್ಜ್‌ ಹಾಗೂ ಇನ್ನಿತರ ಸೇವೆಗಳು ಸೇರಿವೆ.

ಮಾನ್ಯತೆ ಮುಕ್ತಾಯವಾದ ಲರ್ನರ್ ಲೈಸೆನ್ಸ್'ಗಳ ಅವಧಿ ವಿಸ್ತರಿಸಿದ ಸಾರಿಗೆ ಇಲಾಖೆ

ಇನ್ನು ದೆಹಲಿಯಲ್ಲಿ ವಾಯು ಮಾಲಿನ್ಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪೆಟ್ರೋಲ್, ಡೀಸೆಲ್ ಎಂಜಿನ್ ವಾಹನಗಳ ಸಂಚಾರವನ್ನು ನಿಷೇಧಿಸುವಂತಹ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ದೆಹಲಿಯಲ್ಲಿ 10 ವರ್ಷ ಹಳೆಯ ಡೀಸೆಲ್ ಹಾಗೂ 15 ವರ್ಷ ಹಳೆಯ ಪೆಟ್ರೋಲ್ ವಾಹನಗಳ ಬಳಕೆಯನ್ನು ನಿಷೇಧಿಸಲಾಗಿದೆ. ಈ ವಾಹನಗಳು ದೆಹಲಿ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ ಕಾರ್ಯನಿರ್ವಹಿಸುವಂತಿಲ್ಲ.

ಮಾನ್ಯತೆ ಮುಕ್ತಾಯವಾದ ಲರ್ನರ್ ಲೈಸೆನ್ಸ್'ಗಳ ಅವಧಿ ವಿಸ್ತರಿಸಿದ ಸಾರಿಗೆ ಇಲಾಖೆ

ಈ ನಿಯಮ ಉಲ್ಲಂಘಿಸುವ ವಾಹನಗಳ ಜಪ್ತಿ ಮಾಡುವುದರ ಜೊತೆಗೆ ಕಠಿಣ ಕ್ರಮ ಜರುಗಿಸಲಾಗುವುದು. ಇದರಿಂದ ಹಳೆ ವಾಹನ ಮಾಲೀಕರಿಗೆ ವಿವಿಧ ಸಮಸ್ಯೆಗಳಾಗುತ್ತಿವೆ. ಈ ನಿಯಮದಿಂದಾಗಿ ಸಾವಿರಾರು ವಾಹನಗಳು ಸಂಚರಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ದೆಹಲಿ ರಾಜ್ಯ ಸರ್ಕಾರವು ಹೊಸ ನಿಯಮವನ್ನು ಜಾರಿಗೆ ತಂದಿದೆ. ಇದರಿಂದ ಹಳೆ ವಾಹನ ಮಾಲೀಕರಿಗೆ ಕೊಂಚ ನೆಮ್ಮದಿ ಸಿಕ್ಕಂತಾಗಿದೆ.

ಮಾನ್ಯತೆ ಮುಕ್ತಾಯವಾದ ಲರ್ನರ್ ಲೈಸೆನ್ಸ್'ಗಳ ಅವಧಿ ವಿಸ್ತರಿಸಿದ ಸಾರಿಗೆ ಇಲಾಖೆ

ಹೊಸ ನಿಯಮಗಳ ಪ್ರಕಾರ, 10 ವರ್ಷ ಹಳೆಯ ಡೀಸೆಲ್ ವಾಹನಗಳು ದೆಹಲಿ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ ಕಾರ್ಯನಿರ್ವಹಿಸುವುದನ್ನು ಮುಂದುವರಿಸಬಹುದು. ಆದರೆ ಇದಕ್ಕೆ ಒಂದು ಷರತ್ತು ವಿಧಿಸಲಾಗಿದೆ. 10 ವರ್ಷ ಮೇಲ್ಪಟ್ಟ ಡೀಸೆಲ್ ವಾಹನಗಳನ್ನು ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸಿದರೆ, ಆ ವಾಹನಗಳು ತಮ್ಮ ಕಾರ್ಯಾಚರಣೆಯನ್ನು ಮುಂದುವರಿಸಬಹುದು.

ಮಾನ್ಯತೆ ಮುಕ್ತಾಯವಾದ ಲರ್ನರ್ ಲೈಸೆನ್ಸ್'ಗಳ ಅವಧಿ ವಿಸ್ತರಿಸಿದ ಸಾರಿಗೆ ಇಲಾಖೆ

ದೆಹಲಿ ಸರ್ಕಾರವು ವಾಯು ಮಾಲಿನ್ಯದ ವಿರುದ್ಧ ಸಮರ ಸಾರಿದ್ದು, ದೆಹಲಿ ನಗರದೊಳಗೆ ಪೆಟ್ರೋಲ್, ಡೀಸೆಲ್ ಎಂಜಿನ್ ವಾಹನಗಳನ್ನು ನಿರ್ದಿಷ್ಟ ಸಮಯದಲ್ಲಿ ಮಾತ್ರ ಬಳಸಬೇಕು ಎಂದು ಸೂಚಿಸಿದೆ. ನಗರದ 250 ಪ್ರಮುಖ ರಸ್ತೆಗಳಲ್ಲಿ ಬೆಳಗ್ಗೆ 7ರಿಂದ ರಾತ್ರಿ 11ರವರೆಗೆ ಹಾಗೂ ಸಂಜೆ 5ರಿಂದ ರಾತ್ರಿ 9ರವರೆಗೆ ವಾಣಿಜ್ಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಮಾನ್ಯತೆ ಮುಕ್ತಾಯವಾದ ಲರ್ನರ್ ಲೈಸೆನ್ಸ್'ಗಳ ಅವಧಿ ವಿಸ್ತರಿಸಿದ ಸಾರಿಗೆ ಇಲಾಖೆ

ವಾಯು ಮಾಲಿನ್ಯ ತಗ್ಗಿಸುವ ಉದ್ದೇಶದಿಂದ ಈ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಇದನ್ನು ಉಲ್ಲಂಘಿಸುವ ವಾಹನಗಳಿಗೆ ಭಾರಿ ದಂಡ ವಿಧಿಸಲಾಗುವುದು ಎಂದು ವರದಿಯಾಗಿದೆ. ಈ ಅವಧಿಯಲ್ಲಿ ಮೇಲ್ಕಂಡ ನಿಷೇಧವು ಕೆಲವು ವಾಹನಗಳಿಗೆ ಅನ್ವಯಿಸುವುದಿಲ್ಲ ಎಂದು ಹೇಳಲಾಗಿದೆ. ವಾಯು ಮಾಲಿನ್ಯ ಸಮಸ್ಯೆಯನ್ನು ನಿಯಂತ್ರಿಸುವುದು ಇದರ ಹಿಂದಿರುವ ಪ್ರಮುಖ ಉದ್ದೇಶವಾಗಿದೆ.

Most Read Articles

Kannada
English summary
Delhi transport department extends validity of learner license till 31st jan 2022 details
Story first published: Wednesday, December 1, 2021, 19:20 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X