ಕೋವಿಡ್ ಪರಿಣಾಮ ವಾಹನಗಳ ನೊಂದಣಿಗಾಗಿ ಹೊಸ ಸೌಲಭ್ಯಕ್ಕೆ ಚಾಲನೆ

ದೇಶಾದ್ಯಂತ ಕೋವಿಡ್ 2ನೇ ಅಲೆ ಹೆಚ್ಚಿದ್ದರಿಂದ ವಿವಿಧ ರಾಜ್ಯಗಳಲ್ಲಿ ಹಲವು ಕಠಿಣ ಕ್ರಮಗಳೊಂದಿಗೆ ಲಾಕ್ಡೌನ್ ಘೋಷಣೆ ಮಾಡಲಾಗಿದ್ದು, ಹೊಸ ಸುರಕ್ಷಾ ಕ್ರಮಗಳ ಪರಿಣಾಮ ಆಟೋ ಉದ್ಯಮವು ಭಾರೀ ಪ್ರಮಾಣದ ನಷ್ಟ ಅನುಭವಿಸುತ್ತಿದೆ.

ಕೋವಿಡ್ ಪರಿಣಾಮ ಹೊಸ ವಾಹನಗಳ ನೊಂದಣಿಗಾಗಿ ಹೊಸ ಸೌಲಭ್ಯಕ್ಕೆ ಚಾಲನೆ

ಕಳೆದ ವರ್ಷದ ಲಾಕ್‌ಡೌನ್‌ ಹೊಡೆತಕ್ಕೆ ಸಿಲುಕಿ ಸುಧಾರಣೆಯ ಹಾದಿಯಲ್ಲಿದ್ದ ಆಟೋ ಉದ್ಯಮವು ಇದೀಗ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದು, ದೇಶಾದ್ಯಂತ ಹಲವು ಆಟೋ ಕಂಪನಿಗಳು ಕನಿಷ್ಠ ಪ್ರಮಾಣದ ಉದ್ಯೋಗಿಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವುದು ವಾಹನ ಉತ್ಪಾದನೆಯ ಮೇಲೆ ಸಾಕಷ್ಟು ಪರಿಣಾಮ ಬೀರಿದೆ.

ಕೋವಿಡ್ ಪರಿಣಾಮ ಹೊಸ ವಾಹನಗಳ ನೊಂದಣಿಗಾಗಿ ಹೊಸ ಸೌಲಭ್ಯಕ್ಕೆ ಚಾಲನೆ

ಹೊಸ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲೇ ವಾಹನ ಉತ್ಪಾದನೆಯು ತಗ್ಗಿರುವುರುವುದು ಭಾರೀ ನಷ್ಟ ಎದುರಿಸುವ ಭೀತಿ ಎದುರಾಗಿದ್ದು, ಹೊಸ ಸುರಕ್ಷಾ ಕ್ರಮಗಳೊಂದಿಗೆ ವಾಹನ ಮಾರಾಟವನ್ನು ಕೈಗೊಳ್ಳಲಾಗುತ್ತಿದೆ.

ಕೋವಿಡ್ ಪರಿಣಾಮ ಹೊಸ ವಾಹನಗಳ ನೊಂದಣಿಗಾಗಿ ಹೊಸ ಸೌಲಭ್ಯಕ್ಕೆ ಚಾಲನೆ

ಇದರ ನಡುವೆ ಹೊಸ ವಾಹನಗಳ ಖರೀದಿಗೆ ಬುಕ್ಕಿಂಗ್ ಸಲ್ಲಿಕೆ ತೀವ್ರ ಕಂಡಿರುವುದಲ್ಲದೆ ಈಗಾಗಲೇ ಬುಕ್ಕಿಂಗ್ ಸಲ್ಲಿಕೆ ಮಾಡಿದ್ದ ಲಕ್ಷಾಂತರ ಹೊಸ ವಾಹನ ಖರೀದಿದಾರರು ಈಗಾಗಲೇ ಮಾಡಲಾಗಿರುವ ಬುಕ್ಕಿಂಗ್ ಹಿಂಪಡೆಯುತ್ತಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಹೊಸ ವಾಹನ ಖರೀದಿಯು ಆರ್ಥಿಕ ಸಂಕಷ್ಟ ಇನ್ನಷ್ಟು ಹೆಚ್ಚಳವಾಗುವ ಭೀತಿಯಿಂದ ಹೊಸ ವಾಹನ ಖರೀದಿ ಪ್ರಕ್ರಿಯೆಯಿಂದ ಹಿಂದೆ ಸರಿಯುತ್ತಿದ್ದು, ಪರಿಸ್ಥಿತಿ ಸುಧಾರಣೆಯಾಗಲು ಇನ್ನು ಕೆಲ ತಿಂಗಳುಗಳೇ ಬೇಕಾಗಬಹುದು ಎನ್ನಲಾಗುತ್ತಿದೆ.

ಕೋವಿಡ್ ಪರಿಣಾಮ ಹೊಸ ವಾಹನಗಳ ನೊಂದಣಿಗಾಗಿ ಹೊಸ ಸೌಲಭ್ಯಕ್ಕೆ ಚಾಲನೆ

ಮಾಹಿತಿಗಳ ಪ್ರಕಾರ ಕಳೆದ ಮೇ ಅವಧಿಯಲ್ಲಿ ಏಪ್ರಿಲ್ ತಿಂಗಳ ವಾಹನ ಮಾರಾಟಕ್ಕಿಂತಲೂ ಶೇ.55ರಷ್ಟು ಕುಸಿತ ಕಂಡಿದ್ದು, ವಾಹನ ಮಾರಾಟ ಹೆಚ್ಚಳದ ನಂತರ ಭಾರೀ ಪ್ರಮಾಣದ ಆದಾಯ ಗಳಿಸುತ್ತಿದ್ದ ಸಾರಿಗೆ ಇಲಾಖೆಗೂ ಕೋವಿಡ್ ಹೊಡೆತಕೊಟ್ಟಿದೆ.

ಕೋವಿಡ್ ಪರಿಣಾಮ ಹೊಸ ವಾಹನಗಳ ನೊಂದಣಿಗಾಗಿ ಹೊಸ ಸೌಲಭ್ಯಕ್ಕೆ ಚಾಲನೆ

ಕೋವಿಡ್ ಪರಿಣಾಮ ವಾಹನ ನೋಂದಣಿ ಪ್ರಕ್ರಿಯೆ ಸಾಧ್ಯವಿಲ್ಲದಿರುವುದರಿಂದಲೂ ಹೊಸ ವಾಹನ ವಿತರಣೆ ಪಡೆದುಕೊಳ್ಳಲು ಗ್ರಾಹಕರು ಹಿಂದೇಟು ಹಾಕುತ್ತಿದ್ದು, ಲಾಕ್‌ಡೌನ್ ವೇಳೆ ಹೊಸ ವಾಹನ ಪಡೆದುಕೊಂಡು ನೋಂದಣಿಯಾಗದೆ ಹಾಗೆಯೇ ಉಳಿದಿರುವ ವಾಹನಗಳ ನೋಂದಣಿ ಪ್ರಕ್ರಿಯೆಯನ್ನು ತೀವ್ರಗೊಳಿಸಲು ಮಹಾರಾಷ್ಟ್ರ ಸಾರಿಗೆ ಸಂಸ್ಥೆಯು ಹೊಸ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ತೆರೆದಿದೆ.

ಕೋವಿಡ್ ಪರಿಣಾಮ ಹೊಸ ವಾಹನಗಳ ನೊಂದಣಿಗಾಗಿ ಹೊಸ ಸೌಲಭ್ಯಕ್ಕೆ ಚಾಲನೆ

ಕೋವಿಡ್ ಸಂದರ್ಭದಲ್ಲಿ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ಮೂಲಕ ವಾಹನ ಖರೀದಿಸುವ ಗ್ರಾಹಕರಿಗೆ ವಾಹನ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರ ಸಾರಿಗೆ ಸಂಸ್ಥೆಯು ಕಾಗದ ರಹಿತ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಕೋವಿಡ್ ಪರಿಣಾಮ ಹೊಸ ವಾಹನಗಳ ನೊಂದಣಿಗಾಗಿ ಹೊಸ ಸೌಲಭ್ಯಕ್ಕೆ ಚಾಲನೆ

ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ಮೂಲಕ ವಾಹನಗಳ ದಾಖಲೆಗಳನ್ನು ಲಗತ್ತಿಸಿದ್ದಲ್ಲಿ ವಿವಿಧ ಹಂತದ ಪರಿಶೀಲನೆ ನಂತರ ಸಾರಿಗೆ ಇಲಾಖೆಯು ಆನ್‌ಲೈನ್ ಮೂಲಕವೇ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಲಿದ್ದು, ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ವಾಹನದ ನೋಂದಣಿ ಸಂಖ್ಯೆಯನ್ನು ವಿತರಿಸಲಾಗುತ್ತದೆ.

ಕೋವಿಡ್ ಪರಿಣಾಮ ಹೊಸ ವಾಹನಗಳ ನೊಂದಣಿಗಾಗಿ ಹೊಸ ಸೌಲಭ್ಯಕ್ಕೆ ಚಾಲನೆ

ಹೊಸ ನೋಂದಣಿ ಪ್ರಕ್ರಿಯೆಯಿಂದ ವಾಹನ ಮಾರಾಟ ಹೆಚ್ಚಳವಾಗುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವ ಫೇಡರೇಷನ್ ಆಫ್ ಆಟೋಮೊಬೈಲ್ ಡೀಲರ್ಸ್ ಅಸೋಶಿಯನ್ಸ್(FADA) ಸಂಸ್ಥೆಯು ಶೀಘ್ರದಲ್ಲೇ ದೇಶಾದ್ಯಂತ ಹೊಸ ನೋಂದಣಿ ಸೌಲಭ್ಯವನ್ನು ವಿಸ್ತರಿಸುವಂತೆ ವಿವಿಧ ರಾಜ್ಯಗಳ ಸಾರಿಗೆ ಸಂಸ್ಥೆಗಳೊಂದಿಗೆ ಚರ್ಚೆ ನಡೆಸುತ್ತಿದೆ.

ಕೋವಿಡ್ ಪರಿಣಾಮ ಹೊಸ ವಾಹನಗಳ ನೊಂದಣಿಗಾಗಿ ಹೊಸ ಸೌಲಭ್ಯಕ್ಕೆ ಚಾಲನೆ

ಲಾಕ್‌ಡೌನ್ ನಡುವೆಯೂ ವಾಹನ ಮಾರಾಟ ಸಾಧ್ಯವಿರುವಾಗ ಈ ಅವಕಾಶ ಬಳಸಿಕೊಳ್ಳಲು ಮುಂದಾಗಿರುವ ಸಾರಿಗೆ ಇಲಾಖೆಯು ತಗ್ಗಿರುವ ವಾಹನ ನೋಂದಣಿಯನ್ನು ಸುಧಾರಿಸಲು ಮುಂದಾಗಿದ್ದು, ಶೀಘ್ರದಲ್ಲೇ ಇತರೆ ರಾಜ್ಯಗಳ ಸಾರಿಗೆ ಇಲಾಖೆಗಳು ಕೂಡಾ ಹೊಸ ಪ್ಲ್ಯಾಟ್‌ಫಾರ್ಮ್ ಬಳಕೆ ಮಾಡಿಕೊಳ್ಳುವ ನೀರಿಕ್ಷೆಯಿದೆ.

Most Read Articles

Kannada
English summary
Digital Vehicle Registration Introduced In Maharastra. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X