ಎಲೆಕ್ಟ್ರಾನಿಕ್ ಚಿಪ್ ಕೊರತೆ: ಮಾರುತಿ ಸುಜುಕಿ ಕಾರು ಉತ್ಪಾದನೆಯಲ್ಲಿ ಕುಂಠಿತ!

ಕೋವಿಡ್ ಪರಿಣಾಮ ಹೊಸ ವಾಹನ ಉತ್ಪಾದನೆ ಮತ್ತು ಮಾರಾಟದಲ್ಲಿ ನಿರಂತರವಾಗಿ ಏರಿಳಿತ ಉಂಟಾಗುತ್ತಿದ್ದು, ಹೊಸ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲೇ ಎಲೆಕ್ಟ್ರಾನಿಕ್ ಬಿಡಿಭಾಗಗಳ ಕೊರತೆ ಆಟೋ ಉದ್ಯಮಕ್ಕೆ ಹೊಡೆತ ನೀಡುತ್ತಿದೆ.

ಎಲೆಕ್ಟ್ರಾನಿಕ್ ಚಿಪ್ ಕೊರತೆ: ಮಾರುತಿ ಸುಜುಕಿ ಕಾರು ಉತ್ಪಾದನೆಯಲ್ಲಿ ಕುಂಠಿತ!

ಹೌದು, ಹೊಸ ವಾಹನಗಳ ಉತ್ಪಾದನೆಗೆ ಅವಶ್ಯವಾಗಿರುವ ಎಲೆಕ್ಟ್ರಾನಿಕ್ ಚಿಪ್(ಸೆಮಿಕಂಡಕ್ಟರ್) ಕೊರತೆಯು ಜಾಗತಿಕ ಆಟೋ ಉದ್ಯಮದ ಮೇಲೆ ಪರಿಣಾಮ ಬೀರಿದೆ. ಎಲೆಕ್ಟ್ರಾನಿಕ್ ಚಿಪ್ ಕೊರತೆಯಿಂದಾಗಿ ಭಾರತ ಮಾತ್ರವಲ್ಲ ಯುರೋಪ್, ಅಮೆರಿಕಾ ಹಾಗೂ ಏಷ್ಯಾದ ದೇಶಗಳಲ್ಲಿನ ವಾಹನ ಉತ್ಪಾದನೆಯು ನಿಧಾನವಾಗುತ್ತಿದ್ದು, ವಾಹನ ಉತ್ಪಾದನಾ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ.

ಎಲೆಕ್ಟ್ರಾನಿಕ್ ಚಿಪ್ ಕೊರತೆ: ಮಾರುತಿ ಸುಜುಕಿ ಕಾರು ಉತ್ಪಾದನೆಯಲ್ಲಿ ಕುಂಠಿತ!

ಚೀನಾ, ತೈವಾನ್ ಹಾಗೂ ಯುರೋಪಿನಿಂದ ಬರುವ ಎಲೆಕ್ಟ್ರಾನಿಕ್ ಚಿಪ್ ಗಳನ್ನು ಕಡಿತಗೊಳಿಸಲಾಗುತ್ತಿರುವುದರಿಂದ ವಿಶ್ವಾದ್ಯಂತದ ಎಲೆಕ್ಟ್ರಾನಿಕ್ ಬಿಡಿಭಾಗಗ ಕೊರತೆಯೂ ಹೆಚ್ಚಳವಾಗುತ್ತಿದ್ದು, ಎಲೆಕ್ಟ್ರಾನಿಕ್ ಚಿಪ್‌ಗಳಿಲ್ಲದೆ ಕಾರು ಉತ್ಪಾದನೆಯನ್ನೇ ಸ್ಥಗಿತಗೊಳಿಸಲಾಗುತ್ತಿದೆ.

ಎಲೆಕ್ಟ್ರಾನಿಕ್ ಚಿಪ್ ಕೊರತೆ: ಮಾರುತಿ ಸುಜುಕಿ ಕಾರು ಉತ್ಪಾದನೆಯಲ್ಲಿ ಕುಂಠಿತ!

ಚಿಪ್ ಇಲ್ಲದೆ ಕಾರಿನ ಎಲೆಕ್ಟ್ರಾನಿಕ್ ಸಾಧನಗಳನ್ನು ಬಳಸಲಾಗುವುದಿಲ್ಲ. ಚಿಪ್ ಕೊರತೆಯಿಂದಾಗಿ ಕಾರಿನಲ್ಲಿರುವ ಡಿಸ್ ಪ್ಲೇ, ಸ್ಪೀಕರ್, ಸ್ಟ್ಯಾಬಿಲಿಟಿ ಕಂಟ್ರೋಲ್, ಲೈಟಿಂಗ್ ಮುಂತಾದ ಫೀಚರ್ಸ್‌ಗಳು ಹಾಗೂ ಸಾಧನಗಳು ಕಾರ್ಯನಿರ್ವಹಿಸಲು ಸಾಧ್ಯವಿಲ್ಲ.

ಎಲೆಕ್ಟ್ರಾನಿಕ್ ಚಿಪ್ ಕೊರತೆ: ಮಾರುತಿ ಸುಜುಕಿ ಕಾರು ಉತ್ಪಾದನೆಯಲ್ಲಿ ಕುಂಠಿತ!

ಕೋವಿಡ್ ಪರಿಣಾಮ ಬಿಡಿಭಾಗಗಳ ಪೂರೈಕೆ ಸರಪಳಿಯಲ್ಲಿ ಆಗುತ್ತಿರುವ ಸಮಸ್ಯೆಯೇ ಎಲೆಕ್ಟ್ರಾನಿಕ್ ಚಿಪ್ ಕೊರತೆಗೆ ಪ್ರಮುಖ ಕಾರಣವಾಗಿದ್ದು, ಆಟೋ ಉತ್ಪಾದನಾ ಕಂಪನಿಗಳಿಗೆ ಪೂರೈಕೆಯಾಗಬೇಕಿದ್ದ ಹೆಚ್ಚಿನ ಪ್ರಮಾಣದ ಎಲೆಕ್ಟ್ರಾನಿಕ್ ಚಿಪ್ ಲ್ಯಾಪ್‌ಟಾಪ್‌, ಮೊಬೈಲ್‌ಗಳು ಹಾಗೂ ಇತರ ಎಲೆಕ್ಟ್ರಾನಿಕ್ ಸಾಧನ ಉತ್ಪಾದನೆಗೆ ಹೆಚ್ಚಿನ ಪ್ರಮಾಣದಲ್ಲಿ ಪೂರೈಕೆಯಾಗುತ್ತಿದೆ.

ಎಲೆಕ್ಟ್ರಾನಿಕ್ ಚಿಪ್ ಕೊರತೆ: ಮಾರುತಿ ಸುಜುಕಿ ಕಾರು ಉತ್ಪಾದನೆಯಲ್ಲಿ ಕುಂಠಿತ!

ಹೀಗಾಗಿ ಎಲೆಕ್ಟ್ರಾನಿಕ್ ಚಿಪ್ ಪೂರೈಕೆಯಲ್ಲಿನ ಕಡಿತವು ವಿಶ್ವಾದ್ಯಂತ ಪ್ರಮುಖ ಕಾರು ಕಂಪನಿಗಳಿಗೆ ಹೊಡೆತ ನೀಡುತ್ತಿದ್ದು, ಭಾರತದಲ್ಲಿ ದಿನಂಪ್ರತಿ ಸಾವಿರಾರು ಕಾರುಗಳನ್ನು ಉತ್ಪಾದಿಸುವ ಮಾರುತಿ ಸುಜುಕಿಯು ಕಾರು ಉತ್ಪಾದನಾ ಪ್ರಮಾಣವನ್ನು ತಗ್ಗಿಸುತ್ತಿದೆ.

ಎಲೆಕ್ಟ್ರಾನಿಕ್ ಚಿಪ್ ಕೊರತೆ: ಮಾರುತಿ ಸುಜುಕಿ ಕಾರು ಉತ್ಪಾದನೆಯಲ್ಲಿ ಕುಂಠಿತ!

ಎಲೆಕ್ಟ್ರಾನಿಕ್ ಚಿಪ್ ಅಗತ್ಯ ಪ್ರಮಾಣ ಸ್ಟಾಕ್ ಇಲ್ಲದಿರುವ ಕಾರಣಕ್ಕೆ ಕೇವಲ ಒಂದೇ ಶಿಫ್ಟ್ ಮೂಲಕ ಉತ್ಪಾದನೆ ನಿರ್ಧರಿಸಿದ್ದು, ಈ ತಿಂಗಳು 7ರಿಂದ 21ರ ತನಕ ಕನಿಷ್ಠ ಪ್ರಮಾಣದ ಕಾರು ಉತ್ಪಾದನೆ ಮಾಡಲಿದೆ.

ಎಲೆಕ್ಟ್ರಾನಿಕ್ ಚಿಪ್ ಕೊರತೆ: ಮಾರುತಿ ಸುಜುಕಿ ಕಾರು ಉತ್ಪಾದನೆಯಲ್ಲಿ ಕುಂಠಿತ!

ವಿವಿಧ ರಾಜ್ಯಗಳಲ್ಲಿ ಪ್ರಮುಖ ಮೂರು ಕಾರು ಉತ್ಪಾದನಾ ಘಟಕಗಳನ್ನು ಹೊಂದಿರುವ ಮಾರುತಿ ಸುಜುಕಿಯು ಗುಜರಾತ್‌ನಲ್ಲಿರುವ ಹನ್ಸಲ್ಪುರ್ ಕಾರು ಉತ್ಪಾದನಾ ಘಟಕದಲ್ಲಿ ಉತ್ಪಾದನೆಯನ್ನು ಸದ್ಯಕ್ಕೆ ಕಡಿತಗೊಳಿಸುತ್ತಿದ್ದು, ಚಿಪ್ ಪೂರೈಕೆಯ ಆಧಾರದ ಮೇಲೆ ಇನ್ನುಳಿದ ಘಟಕಗಳ ಉತ್ಪಾದನೆಯನ್ನು ಕಡಿತಗೊಳಿಸುವ ನಿರ್ಧಾರ ಪ್ರಕಟಿಸಲಿದೆ.

ಎಲೆಕ್ಟ್ರಾನಿಕ್ ಚಿಪ್ ಕೊರತೆ: ಮಾರುತಿ ಸುಜುಕಿ ಕಾರು ಉತ್ಪಾದನೆಯಲ್ಲಿ ಕುಂಠಿತ!

ಪ್ರತಿ ದಿನ ಮೂರು ಶಿಫ್ಟ್‌ಗಳಲ್ಲಿ ನಡೆಯುತ್ತಿದ್ದ ಕಾರು ಉತ್ಪಾದನೆಗೆ ಎಲೆಕ್ಟ್ರಿಕ್ ಚಿಪ್ ಕೊರತೆಯು ಭಾರೀ ಹೊಡೆತ ನೀಡುತ್ತಿದ್ದು, ಇಷ್ಟು ದಿನ ಕೋವಿಡ್ ಪರಿಣಾಮ ವಾಹನ ಉತ್ಪಾದನೆ ಸ್ಥಗಿತಗೊಳಿಸಿದ್ದ ಕಾರು ಕಂಪನಿಗಳಿಗೆ ಇದೀಗ ಸಂಕಷ್ಟ ಎದುರಾಗಿದೆ.

ಎಲೆಕ್ಟ್ರಾನಿಕ್ ಚಿಪ್ ಕೊರತೆ: ಮಾರುತಿ ಸುಜುಕಿ ಕಾರು ಉತ್ಪಾದನೆಯಲ್ಲಿ ಕುಂಠಿತ!

ಎಲೆಕ್ಟ್ರಾನಿಕ್ ಚಿಪ್ ಕೊರತೆಯು ಈ ವರ್ಷ ಮಾತ್ರವಲ್ಲ ಕಳೆದ ವರ್ಷ ಕೂಡಾ ಕಾರು ಉತ್ಪಾದನೆಗೆ ಹೊಡೆತ ನೀಡಿತ್ತು. ಕಳೆದ ವರ್ಷದ ಎಲೆಕ್ಟ್ರಾನಿಕ್ ಚಿಪ್ ಸ್ಟಾಕ್ ಇಲ್ಲದ ಪರಿಣಾಮ ಮಹೀಂದ್ರಾ ಕಂಪನಿಯು ಸುಮಾರು ಒಂದು ವಾರ ಕಾರು ಉತ್ಪಾದನೆಯನ್ನು ಸಂಪೂರ್ಣವಾಗಿ ನಿಲ್ಲಿಸಿತ್ತು.

ಎಲೆಕ್ಟ್ರಾನಿಕ್ ಚಿಪ್ ಕೊರತೆ: ಮಾರುತಿ ಸುಜುಕಿ ಕಾರು ಉತ್ಪಾದನೆಯಲ್ಲಿ ಕುಂಠಿತ!

ಇದೀಗ ಮತ್ತೆ ಎಲೆಕ್ಟ್ರಿಕ್ ಚಿಪ್ ಕೊರತೆಯು ಮುಂದುವರಿಯುತ್ತಿದ್ದು, ಭಾರತದಲ್ಲಿ ವಿವಿಧ ಕಂಪನಿಗಳು ಸೆಮಿಕಂಡಕ್ಟರ್ ಉತ್ಪಾದನಾ ಸೌಲಭ್ಯ ಹೊಂದಿದ್ದರೂ ಸೆಮಿಕಂಡಕ್ಟರ್‌ಗಳಿಗೆ ಬೇಕಿರುವ ವಿವಿಧ ರಾಸಾಯನಿಕ ವಸ್ತುಗಳಿಗೆ ಚೀನಾ ಮತ್ತು ತೈವಾನ್ ಮಾರುಕಟ್ಟೆಯನ್ನು ಅವಲಂಬಿಸಿವೆ.

ಎಲೆಕ್ಟ್ರಾನಿಕ್ ಚಿಪ್ ಕೊರತೆ: ಮಾರುತಿ ಸುಜುಕಿ ಕಾರು ಉತ್ಪಾದನೆಯಲ್ಲಿ ಕುಂಠಿತ!

ಇದರಿಂದಾಗಿ ಹೊಸ ಕಾರುಗಳನ್ನು ಖರೀದಿಸುವ ಯೋಜನೆಯಲ್ಲಿರುವ ಗ್ರಾಹಕರು ಬುಕ್ಕಿಂಗ್ ನಂತರ ಹೆಚ್ಚು ದಿನಗಳ ಕಾಲ ಕಾಯುವಂತಾಗಲಿದೆ. ವರದಿಗಳ ಪ್ರಕಾರ, ಭಾರತದಲ್ಲಿ 5 ಲಕ್ಷಕ್ಕೂ ಹೆಚ್ಚು ಬುಕ್ಕಿಂಗ್ ಮಾಡಲಾದ ಕಾರುಗಳ ವಿತರಣೆ ವಿಳಂಬವಾಗಬಹುದಾಗಿದ್ದು, ಕೆಲವು ಕಾರು ಕಂಪನಿಗಳು ತಮ್ಮ ಹೊಸ ಕಾರುಗಳ ಕಾಯುವ ಅವಧಿಯನ್ನು 5ರಿಂದ 6 ತಿಂಗಳಿಗೆ ನಿಗದಿಪಡಿಸುತ್ತಿವೆ.

Article Published On: Friday, August 6, 2021, 8:45 [IST]
English summary
Due to chip shortage maruti suzuki to halt down car production
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+