Just In
Don't Miss!
- News
ಪೊಲೀಸ್ ಠಾಣೆಯಲ್ಲಿ ಬಗೆಹರಿದ ಒಂದು ಕೋಣದ ವಿವಾದ!
- Movies
'ದೀಪ್ ಸಿಧು ಜೊತೆ ನನಗೆ ಯಾವುದೇ ಸಂಬಂಧವಿಲ್ಲ': ಸಂಸದ, ನಟ ಸನ್ನಿ ಡಿಯೋಲ್ ಸ್ಪಷ್ಟನೆ
- Finance
ಬಜೆಟ್ 2021: ಸ್ಟ್ಯಾಂಡರ್ಡ್ ಡಿಡಕ್ಷನ್ ರು. 1 ಲಕ್ಷಕ್ಕೆ ಹೆಚ್ಚಳ ನಿರೀಕ್ಷೆ
- Sports
ಬೈರ್ಸ್ಟೋವ್ಗೆ 2 ಪಂದ್ಯಗಳ ವಿಶ್ರಾಂತಿ ನೀಡಿರುವುದನ್ನು ಸಮರ್ಥಿಸಿದ ಇಂಗ್ಲೆಂಡ್ ಕೋಚ್
- Education
WCD Chitradurga Recruitment 2021: ಅಂಗನವಾಡಿಯಲ್ಲಿ 129 ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ: ಇದರ ಅಪಾಯಗಳೇನು, ತಡೆಗಟ್ಟುವುದು ಹೇಗೆ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಿಸಲು ಬೃಹತ್ ಯೋಜನೆಗೆ ಚಾಲನೆ ನೀಡುತ್ತಿದೆ ಇಇಎಸ್ಎಲ್
ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಸರ್ಕಾರಿ ಸಂಸ್ಥೆಗಳ ಅಧಿಕೃತ ವಾಹನಗಳ ನಿರ್ವಹಣಾ ಜವಾಬ್ದಾರಿ ಹೊತ್ತಿರುವ ಎನರ್ಜಿ ಎಫಿಷಿಯೆನ್ಸಿ ಸರ್ವೀಸಸ್ ಲಿಮಿಟೆಡ್ (ಇಇಎಸ್ಎಲ್) ಸಂಸ್ಥೆಯು ಡೀಸೆಲ್ ವಾಹನಗಳ ಬಳಕೆಯನ್ನ ತಗ್ಗಿಸಿ ಪೂರ್ಣಪ್ರಮಾಣದಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೆಚ್ಚಿನ ಒತ್ತು ನೀಡುತ್ತಿದೆ.

ಪ್ರಮುಖ ಸರ್ಕಾರಿ ಇಲಾಖೆಗಳಿಗೆ ಈಗಾಗಲೇ ವಿವಿಧ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಬಜೆಟ್‌ಗೆ ಅನುಗುಣವಾಗಿ ಪೂರೈಕೆ ಮಾಡುತ್ತಿರುವ ಇಇಎಸ್ಎಲ್ ಕಂಪನಿಯು ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡುತ್ತಿದ್ದು, ಸರ್ಕಾರಿ ಕಚೇರಿಗಳ ಆವರಣದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಸಹ ನಿರ್ಮಾಣ ಮಾಡುತ್ತಿರುವುದು ಎಲೆಕ್ಟ್ರಿಕ್ ವಾಹನಳ ಬಳಕೆಯನ್ನು ಉತ್ತೇಜಿಸಲು ಸಹಕಾರಿಯಾಗಲಿದೆ.

ದೇಶಾದ್ಯಂತ ಈಗಾಗಲೇ ಪ್ರಮುಖ ಸರ್ಕಾರಿ ಇಲಾಖೆಗಳ ಆವರಣಗಳಲ್ಲಿ ಈಗಾಗಲೇ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣ ಮಾಡಿರುವ ಇಇಎಸ್ಎಲ್ ಸಂಸ್ಥೆಯು ಮುಂದಿನ 3 ವರ್ಷಗಳಲ್ಲಿ ಒಟ್ಟು 10 ಸಾವಿರ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುವ ಸಿದ್ದತೆಯಲ್ಲಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟಕ್ಕೆ ಪೂರಕವಾದ ವಾತಾವರಣವಿದ್ದರೂ ಚಾರ್ಜಿಂಗ್ ನಿಲ್ದಾಣಗಳ ಕೊರತೆಯು ಇವಿ ವಾಹನಗಳ ಖರೀದಿಗೆ ಹಿನ್ನಡೆಯುಂಟು ಮಾಡುತ್ತಿದೆ.

ಈ ಹಿನ್ನಲೆಯಲ್ಲಿ ಸರ್ಕಾರಿ ಸ್ವಾಮ್ಯದ ಎನರ್ಜಿ ಎಫಿಷಿಯೆನ್ಸಿ ಸರ್ವೀಸಸ್ ಲಿಮಿಟೆಡ್ (ಇಇಎಸ್ಎಲ್) ಸಂಸ್ಥೆಯು ವಿವಿಧ ಸರ್ಕಾರಿ ಸಂಸ್ಥೆಗಳ ಸಹಯೋಗದೊಂದಿಗೆ ಆಯಾಕಟ್ಟಿನ ಪ್ರದೇಶಗಳಲ್ಲಿ ಸಾರ್ವಜನಿಕ ಬಳಕೆಯ ಚಾರ್ಜಿಂಗ್ ನಿಲ್ದಾಣಗಳನ್ನು ಸ್ಥಾಪನೆ ಮಾಡುತ್ತಿದ್ದು, ಕರೋನಾ ವೈರಸ್ ಪರಿಣಾಮದಿಂದಾಗಿ ಹೊಸ ಯೋಜನೆಯನ್ನು ತಟಸ್ಥವಾಗಿಟ್ಟದ್ದ ಇಇಎಸ್ಎಲ್ ಸಂಸ್ಥೆಯು ಇದೀಗ ಮತ್ತೆ ಪುನಾರಂಭಿಸಿದೆ.

2021ರ ಕೊನೆಯಲ್ಲಿ ದೇಶಾದ್ಯಂತ ಒಟ್ಟು 3 ಸಾವಿರ ಸಾರ್ವಜನಿಕ ಬಳಕೆಯ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಿಸಲು ಗುರಿಹೊಂದಿದ್ದು, ಎಲೆಕ್ಟ್ರಿಕ್ ವಾಹನಗಳ ಮಾದರಿಗಳಿಗೆ ಅನುಗುಣವಾಗಿ ಎಸಿ ಮತ್ತು ಡಿಸಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣ ಮಾಡಲಾಗುತ್ತಿದೆ.

ಇನ್ನು ದೇಶಾದ್ಯಂತ ತೈಲ ಬೆಲೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚದಲ್ಲಿ ಭಾರೀ ಏರಿಕೆಯಾಗಿದೆ. ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿದ್ದು, ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ.

ಎಲೆಕ್ಟ್ರಿಕ್ ವಾಹನಗಳ ಬಳಕೆ ಆಸಕ್ತಿ ಇದ್ದರೂ ಕೂಡಾ ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೆ ಇವಿ ವಾಹನಗಳ ಬ್ಯಾಟರಿ ರೇಂಜ್ ಸಾಮಾರ್ಥ್ಯವು ಖರೀದಿಗೆ ಹಿಂದೇಟು ಹಾಕುವಂತೆ ಮಾಡಿದ್ದು, ಈ ಸಮಸ್ಯೆ ನಿವಾರಣೆಗಾಗಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಕಂಪನಿಯು ಸನ್ ಮೊಬಿಲಿಟಿ ಜೊತೆಗೂಡಿ ಎಲೆಕ್ಟ್ರಿಕ್ ವಾಹನಗಳಿಗೆ ತ್ವರಿತವಾಗಿ ಚಾರ್ಜಿಂಗ್ ಒದಗಿಸಲು ಬ್ಯಾಟರಿ ವಿನಿಮಯ ಕೇಂದ್ರಗಳನ್ನು ನಿರ್ಮಾಣ ಮಾಡುತ್ತಿವೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಬ್ಯಾಟರಿ ವಿನಿಯಮ ಕೇಂದ್ರಗಳಿಂದ ಎಲೆಕ್ಟ್ರಿಕ್ ವಾಹನಗಳಿಗೆ ತ್ವರಿತವಾಗಿ ಬ್ಯಾಟರಿ ಸೌಲಭ್ಯಗಳನ್ನು ಒದಗಿಸಬಹುದಾಗಿದ್ದು, ಬ್ಯಾಟರಿ ರೇಂಜ್ ಆಧಾರದ ಮೇಲೆ ಇಂತಿಷ್ಟು ಪ್ರಮಾಣದ ದರ ಪಾವತಿಸಿಬೇಕಾಗುತ್ತದೆ.

ಬ್ಯಾಟರಿ ವಿನಿಮಯದ ವೇಳೆ ಗ್ರಾಹಕರು ತಮ್ಮ ಬಳಿಯಿರುವ ಚಾರ್ಜ್ ಖಾಲಿಯಾದ ಬ್ಯಾಟರಿಯನ್ನು ವಿನಿಮಯ ಕೇಂದ್ರಗಳಿಗೆ ಹಿಂದಿರುಗಿಸುವ ಮೂಲಕ ಚಾರ್ಜ್ ಮಾಡಲಾದ ಬ್ಯಾಟರಿ ಪಡೆದುಕೊಳ್ಳುವ ವ್ಯವಸ್ಥೆ ಇದಾಗಿದ್ದು, ಹೊಸ ಸೌಲಭ್ಯವು ಚಾರ್ಜಿಂಗ್ ಸಮಯವನ್ನು ಉಳಿಸುವ ಮೂಲಕ ಬ್ಯಾಟರಿ ಖಾಲಿಯಾದ ತಕ್ಷಣವೇ ಮತ್ತೊಂದು ಬ್ಯಾಟರಿ ಪಡೆದುಕೊಳ್ಳಲು ಸಹಕಾರಿಯಾಗುತ್ತದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಸದ್ಯ ಬೆಂಗಳೂರು, ಮುಂಬೈ, ದೆಹಲಿ ಮತ್ತು ಅಹಮದಾಬಾದ್ ನಗರಗಳಲ್ಲಿನ ಆಯ್ದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪೆಟ್ರೋಲ್ ಬಂಕ್ ಆವರಣಗಳಲ್ಲೇ ಹೊಸ ಬ್ಯಾಟರಿ ವಿನಿಯಮ ಕೇಂದ್ರಗಳಿಗೆ ಚಾಲನೆ ನೀಡಲಾಗಿದ್ದು, ಪ್ರಾಯೋಗಿಕವಾಗಿ ವಿವಿಧ ನಗರಗಳಲ್ಲಿ ತಲಾ ಒಂದೊಂದು ಬ್ಯಾಟರಿ ವಿನಿಯಮ ತೆರೆದಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಕಂಪನಿಯು ಶೀಘ್ರದಲ್ಲೇ ಬೆಂಗಳೂರು ಒಂದಲ್ಲೇ ನೂರು ಕೇಂದ್ರಗಳಿಗೆ ಚಾಲನೆ ನೀಡಲಿದೆ.