ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ತೀರಾ ಹಿಂದುಳಿದ ಭಾರತ

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಮಾರಾಟವು ಪೆಟ್ರೋಲ್, ಡೀಸೆಲ್ ಕಾರುಗಳಿಗಿಂತ ತೀರಾ ಕಡಿಮೆ. ಆದರೆ ಎಲೆಕ್ಟ್ರಿಕ್ ಕಾರುಗಳಿಗೆ ನಿಧಾನವಾಗಿ ಬೇಡಿಕೆ ಹೆಚ್ಚಾಗುತ್ತಿದೆ. ವರದಿಗಳ ಪ್ರಕಾರ, ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಮಾರಾಟ ಪ್ರಮಾಣವು ಪೆಟ್ರೋಲ್, ಡೀಸೆಲ್ ಕಾರುಗಳ ಮಾರಾಟ ಪ್ರಮಾಣದ 1%ಗಿಂತಲೂ ಕಡಿಮೆಯಿದೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ತೀರಾ ಹಿಂದುಳಿದ ಭಾರತ

ಈ ಪರಿಸ್ಥಿತಿ ಮುಂದಿನ ಮೂರು ವರ್ಷಗಳವರೆಗೆ ಹೀಗೆಯೇ ಇರಲಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಪೆಟ್ರೋಲ್, ಡೀಸೆಲ್ ಕಾರುಗಳಿಗೆ ಹೋಲಿಸಿದರೆ ಎಲೆಕ್ಟ್ರಿಕ್ ಕಾರುಗಳ ಬೆಲೆ ಹೆಚ್ಚು. ಜೊತೆಗೆ ಇವುಗಳ ವ್ಯಾಪ್ತಿಯು ಸಹ ಕಡಿಮೆ. ಈ ಕಾರಣಕ್ಕೆ ಗ್ರಾಹಕರು ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಲು ಹಿಂದೇಟು ಹಾಕುತ್ತಾರೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ತೀರಾ ಹಿಂದುಳಿದ ಭಾರತ

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಮಾರಾಟ ಹೆಚ್ಚಾಗಬೇಕಾದರೆ ಕಡಿಮೆ ಬೆಲೆಯಲ್ಲಿ ಹೆಚ್ಚು ದೂರ ಚಲಿಸುವ ಕಾರುಗಳನ್ನು ಮಾರಾಟ ಮಾಡಬೇಕಾಗುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

MOST READ:ವಾಹನ ಖರೀದಿಸುವವರಿಗೆ, ಮಾರಾಟ ಮಾಡುವವರಿಗೆ ನೆರವಾಗುವ ಆರ್‌ಟಿಒ ಫಾರಂಗಳಿವು!

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ತೀರಾ ಹಿಂದುಳಿದ ಭಾರತ

ಭಾರತದಲ್ಲಿ ಕಳೆದ ವರ್ಷ 20.5 ಲಕ್ಷ ಕಾರುಗಳು ಮಾರಾಟವಾಗಿದ್ದವು. ಈ ಮಾರಾಟದಲ್ಲಿ 1% ಅಂದರೆ 25,000ದಷ್ಟು ಎಲೆಕ್ಟ್ರಿಕ್ ಕಾರುಗಳು ಮಾರಾಟವಾಗಬೇಕಾಗಿತ್ತು. ಆದರೆ ಕಳೆದ ವರ್ಷ ಕೇವಲ 3,500 ಎಲೆಕ್ಟ್ರಿಕ್ ಕಾರುಗಳು ಮಾರಾಟವಾಗಿವೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ತೀರಾ ಹಿಂದುಳಿದ ಭಾರತ

ಇದರಿಂದ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಭಾರತವು ಹಿಂದುಳಿದಿರುವುದು ಸ್ಪಷ್ಟವಾಗಿದೆ. ಕಾರು ಗ್ರಾಹಕರಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ ಎಲೆಕ್ಟ್ರಿಕ್ ಕಾರುಗಳನ್ನು ಇಷ್ಟಪಡುವವರು ತಮ್ಮ ಕಾರು ಪೂರ್ತಿಯಾಗಿ ಚಾರ್ಜ್ ಆದ ನಂತರ ಕನಿಷ್ಠ 200 ಕಿ.ಮೀ ಚಲಿಸಬೇಕೆಂದು ಬಯಸುತ್ತಾರೆ.

MOST READ:ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ತೀರಾ ಹಿಂದುಳಿದ ಭಾರತ

ಈಗ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಟಾಟಾ ಮೋಟಾರ್ಸ್‌ ಕಂಪನಿಯ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಒಂದು ಬಾರಿ ಪೂರ್ತಿಯಾಗಿ ಚಾರ್ಜ್ ಆದ ನಂತರ ಸುಮಾರು 300 ಕಿ.ಮೀಗಳವರೆಗೆ ಚಲಿಸುತ್ತದೆ ಎಂದು ಹೇಳಲಾಗಿದೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ತೀರಾ ಹಿಂದುಳಿದ ಭಾರತ

ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಬೆಲೆ ರೂ.14 ಲಕ್ಷಗಳಾಗಿದೆ. ಭಾರತದಲ್ಲಿ ಹ್ಯುಂಡೈ ಕಂಪನಿಯ ಕೋನಾ ಎಲೆಕ್ಟ್ರಿಕ್ ಕಾರ್ ಅನ್ನು ಸಹ ಮಾರಾಟ ಮಾಡಲಾಗುತ್ತದೆ. ಆದರೆ ಈ ಕಾರಿನ ಬೆಲೆ ಹೆಚ್ಚಾಗಿರುವುದರಿಂದ ಹೆಚ್ಚು ಮಾರಾಟವಾಗುತ್ತಿಲ್ಲ.

MOST READ:10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ತೀರಾ ಹಿಂದುಳಿದ ಭಾರತ

ಭಾರತದಲ್ಲಿ ಮಾರಾಟವಾಗುವ ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರಿನ ಬೆಲೆ ರೂ.23.7 ಲಕ್ಷಗಳಾಗಿದೆ. ಐಷಾರಾಮಿ ಕಾರು ತಯಾರಕ ಕಂಪನಿಗಳಾದ ವೋಲ್ವೋ ಹಾಗೂ ಮರ್ಸಿಡಿಸ್ ಬೆಂಝ್'ಗಳು ಸಹ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡುತ್ತವೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ತೀರಾ ಹಿಂದುಳಿದ ಭಾರತ

ಈ ಕಂಪನಿಯ ಕಾರುಗಳು ದುಬಾರಿ ಬೆಲೆಯನ್ನು ಹೊಂದಿರುವುದರಿಂದ ಈ ಕಾರುಗಳನ್ನು ಖರೀದಿಸಲು ಜನ ಸಾಮಾನ್ಯರಿಗೆ ಸಾಧ್ಯವಾಗುವುದಿಲ್ಲ. ಹ್ಯುಂಡೈ ಕಂಪನಿಯು ಭಾರತದಲ್ಲಿ ಕೈಗೆಟುಕುವ ಬೆಲೆಯಲ್ಲಿ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಲು ಮುಂದಾಗುತ್ತಿದೆ.

MOST READ:ವರ್ಷಗಳ ಕಾಲ ಉಪ್ಪು ನೀರಿನಲ್ಲಿದ್ದರೂ ಹಡಗುಗಳ ಆಂಕರ್‌ಗಳಿಗೆ ತುಕ್ಕು ಹಿಡಿಯದಿರಲು ಕಾರಣಗಳಿವು

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ತೀರಾ ಹಿಂದುಳಿದ ಭಾರತ

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳನ್ನು ಅಭಿವೃದ್ಧಿಪಡಿಸಲು ಕಂಪನಿಯು ರೂ.1000 ಕೋಟಿ ಹೂಡಿಕೆ ಮಾಡಲಿದೆ. ಹ್ಯುಂಡೈ ಕಂಪನಿಯ ಈ ನಿರ್ಧಾರದಿಂದಾಗಿ ಮುಂಬರುವ ವರ್ಷಗಳಲ್ಲಿ ಭಾರತೀಯ ಗ್ರಾಹಕರು ಕೈಗೆಟುಕುವ ಬೆಲೆಯಲ್ಲಿ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಲು ಸಾಧ್ಯವಾಗಲಿದೆ.

ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Electric car sales in India is less than 1 percent of total car sales. Read in Kannada.
Story first published: Thursday, May 13, 2021, 10:08 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X