ಪ್ರಸಕ್ತ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ವಿವಿಧ ಎಲೆಕ್ಟ್ರಿಕ್ ಕಾರುಗಳಿಗೆ ಭರ್ಜರಿ ಬೇಡಿಕೆ

ಹೆಚ್ಚುತ್ತಿರುವ ಇಂಧನಗಳ ಬೆಲೆ ಪರಿಣಾಮ ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಮಾರಾಟವು ನಿಧಾನವಾಗಿ ಬೆಳವಣಿಗೆ ಸಾಧಿಸುತ್ತಿದ್ದು, ಕಳೆದ ವರ್ಷಕ್ಕಿಂತಲೂ ಇದೀಗ ಹೆಚ್ಚಿನ ಮಟ್ಟದ ಎಲೆಕ್ಟ್ರಿಕ್ ಕಾರುಗಳ ಮಾರಾಟವು ದಾಖಲಾಗಿದೆ.

ಪ್ರಸಕ್ತ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ವಿವಿಧ ಎಲೆಕ್ಟ್ರಿಕ್ ಕಾರುಗಳಿಗೆ ಭರ್ಜರಿ ಬೇಡಿಕೆ

ದೇಶಿಯ ಮಾರುಕಟ್ಟೆಯಲ್ಲಿರುವ ಎಲೆಕ್ಟ್ರಿಕ್ ಕಾರುಗಳ ಪೈಕಿ ಟಾಟಾ ನೆಕ್ಸಾನ್, ಎಂಜಿ ಜೆಡ್ಎಸ್ ಎಲೆಕ್ಟ್ರಿಕ್, ಟಾಟಾ ಟಿಗೋರ್ ಇವಿ ಮತ್ತು ಹ್ಯುಂಡೈ ಕೊನಾ ಇವಿ ಕಾರುಗಳು ಗ್ರಾಹಕರನ್ನು ಸೆಳೆಯುತ್ತಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳ ಮಾರಾಟಕ್ಕೆ ಹೋಲಿಕೆ ಮಾಡಿದರೆ ಇದು ಶೇ. 1ರಷ್ಟಿಲ್ಲವಾದರೂ ಇತ್ತೀಚೆಗೆ ಇವಿ ವಾಹನ ಖರೀದಿದಾರರ ಸಂಖ್ಯೆಯು ನಿಧಾನವಾಗಿ ಏರಿಕೆಯಾಗುತ್ತಿದೆ.

ಪ್ರಸಕ್ತ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ವಿವಿಧ ಎಲೆಕ್ಟ್ರಿಕ್ ಕಾರುಗಳಿಗೆ ಭರ್ಜರಿ ಬೇಡಿಕೆ

ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಸದ್ಯ ಟಾಟಾ ನೆಕ್ಸಾನ್ ಇವಿ ಪ್ರಥಮ ಸ್ಥಾನದಲ್ಲಿದ್ದರೆ ಎರಡನೇ ಸ್ಥಾನದಲ್ಲಿ ಎಂಜಿ ಜೆಡ್ಎಸ್, ಮೂರನೇ ಸ್ಥಾನದಲ್ಲಿ ಟಾಟಾ ಟಿಗೋರ್ ಮತ್ತು ನಾಲ್ಕನೇ ಸ್ಥಾನದಲ್ಲಿ ಹ್ಯುಂಡೈ ಕೊನಾ ಮಾರಾಟಗೊಳ್ಳುತ್ತಿದೆ.

ಪ್ರಸಕ್ತ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ವಿವಿಧ ಎಲೆಕ್ಟ್ರಿಕ್ ಕಾರುಗಳಿಗೆ ಭರ್ಜರಿ ಬೇಡಿಕೆ

ಟಾಟಾ ಮೋಟಾರ್ಸ್ ಕಂಪನಿಯು ಕಳೆದ ತಿಂಗಳು ಅಕ್ಟೋಬರ್‌ನಲ್ಲಿ ಸುಮಾರು 1,500 ಯುನಿಟ್ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟಗೊಳಿಸಿದ್ದು, ಪನಿಯು ವಿವಿಧ ಮಾದರಿಯ ಇವಿ ಆವೃತ್ತಿಗಳೊಂದಿಗೆ ಅತ್ಯುತ್ತಮ ಬೇಡಿಕೆ ದಾಖಲಿಸುತ್ತಿದೆ.

ಪ್ರಸಕ್ತ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ವಿವಿಧ ಎಲೆಕ್ಟ್ರಿಕ್ ಕಾರುಗಳಿಗೆ ಭರ್ಜರಿ ಬೇಡಿಕೆ

ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಸದ್ಯ ಅಗ್ರಸ್ಥಾನದಲ್ಲಿರುವ ಟಾಟಾ ಮೋಟಾರ್ಸ್ ಕಂಪನಿಯು ಮಾರುಕಟ್ಟೆಯಲ್ಲಿನ ಗ್ರಾಹಕರ ಬೇಡಿಕೆಯೆಂತೆ ನೆಕ್ಸಾನ್ ಇವಿ, ಟಿಗೋರ್ ಇವಿ ಮತ್ತು ಎಕ್ಸ್‌ಪ್ರೆಸ್-ಟಿ ಇವಿ ಕಾರು ಮಾದರಿಗಳ ಮಾರಾಟದೊಂದಿಗೆ ಹೊಸ ದಾಖಲೆಗಳಿಗೆ ಕಾರಣವಾಗಿದೆ.

ಪ್ರಸಕ್ತ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ವಿವಿಧ ಎಲೆಕ್ಟ್ರಿಕ್ ಕಾರುಗಳಿಗೆ ಭರ್ಜರಿ ಬೇಡಿಕೆ

ಹಾಗೆಯೇ ಟಾಟಾ ಮೋಟಾರ್ಸ್ ಕಂಪನಿಯು 2021-22ರ ಆರ್ಥಿಕ ವರ್ಷದ(ಏಪ್ರಿಲ್ ನಿಂದ ಸೆಪ್ಟೆಂಬರ್ ತನಕ) ಮೊದಲಾರ್ಧದಲ್ಲಿ ಒಟ್ಟು 3618 ಯುನಿಟ್ ಮಾರಾಟಗೊಳಿಸಿದ್ದು, ಇದು ಕಳೆದ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ(1152 ಯುನಿಟ್) ಇವಿ ಕಾರು ಮಾರಾಟಕ್ಕಿಂತಲೂ ಶೇ.214 ರಷ್ಟು ಏರಿಕೆಯಾಗಿದೆ.

ಪ್ರಸಕ್ತ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ವಿವಿಧ ಎಲೆಕ್ಟ್ರಿಕ್ ಕಾರುಗಳಿಗೆ ಭರ್ಜರಿ ಬೇಡಿಕೆ

ಹೊಸ ನೆಕ್ಸಾನ್ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಮತ್ತು ಹ್ಯುಂಡೈ ಕೊನಾ ಕಾರುಗಳಿಗೆ ಪೈಪೋಟಿಯಾಗಿ ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳಲು ಸುಧಾರಿತ ಜಿಪ್‌ಟ್ರಾನ್ ತಂತ್ರಜ್ಞಾನ ಬಳಕೆ ಮಾಡುತ್ತಿರುವುದೇ ಟಾಟಾ ಹೊಸ ಎಲೆಕ್ಟ್ರಿಕ್ ಕಾರುಗಳ ಬೇಡಿಕೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

ಪ್ರಸಕ್ತ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ವಿವಿಧ ಎಲೆಕ್ಟ್ರಿಕ್ ಕಾರುಗಳಿಗೆ ಭರ್ಜರಿ ಬೇಡಿಕೆ

ಇನ್ನು ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಎರಡನೇ ಸ್ಥಾನದಲ್ಲಿರುವ ಎಂಜಿ ಮೋಟಾರ್ ನಿರ್ಮಾಣದ ಜೆಡ್ಎಸ್ ಇವಿ ಕೂಡಾ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಕಳೆದ ಏಪ್ರಿಲ್‌ನಿಂದ ಸೆಪ್ಟೆಂಬರ್ ಅವಧಿಯಲ್ಲಿ 1789 ಯನಿಟ್ ಮಾರಾಟಗೊಂಡಿದೆ.

ಪ್ರಸಕ್ತ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ವಿವಿಧ ಎಲೆಕ್ಟ್ರಿಕ್ ಕಾರುಗಳಿಗೆ ಭರ್ಜರಿ ಬೇಡಿಕೆ

ಜೆಡ್ಎಸ್ ಇವಿ ಕಾರು ಬಿಡುಗಡೆಗೊಂಡ ಮೊದಲ ವರ್ಷದ ಅವಧಿಯಲ್ಲಿ ಒಟ್ಟು 1 ಸಾವಿರ ಯುನಿಟ್ ಮಾರಾಟಗೊಂಡಿದ್ದು, ಇದೀಗ 2021-22 ಆರ್ಥಿಕ ಮೊದಲಾರ್ಧದಲ್ಲಿ ಜೆಡ್ಎಸ್ ಇವಿ ಆವೃತ್ತಿಯ ಮೂಲಕ ಹೆಚ್ಚಿನ ಮಟ್ಟದ ಮೈಲೇಜ್ ರೇಂಜ್‌ನೊಂದಿಗೆ ಶೇ.250 ರಷ್ಟು ಹೆಚ್ಚು ಬೇಡಿಕೆ ಪಡೆದುಕೊಂಡಿದೆ.

ಪ್ರಸಕ್ತ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ವಿವಿಧ ಎಲೆಕ್ಟ್ರಿಕ್ ಕಾರುಗಳಿಗೆ ಭರ್ಜರಿ ಬೇಡಿಕೆ

2021ರ ಜೆಡ್ಎಸ್ ಇವಿ ಮಾದರಿಯಲ್ಲಿ ಈ ಹಿಂದಿನ 44.5 kWh ಬ್ಯಾಟರಿ ಪ್ಯಾಕ್‌ ಮಾದರಿಯನ್ನೇ ಸುಧಾರಿತ ತಂತ್ರಜ್ಞಾನದೊಂದಿಗೆ ಉನ್ನತೀಕರಿಸಲಾಗಿದ್ದು, ಪ್ರಸ್ತುತ ಮಾದರಿಯು ಪ್ರತಿ ಚಾರ್ಚ್‌ಗೆ 419 ಕಿ.ಮೀ ಮೈಲೇಜ್ ಹೊಂದಿದೆ. ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 21 ಲಕ್ಷ ಮತ್ತು ಟಾಪ್ ಎಂಡ್ ಮಾದರಿಗೆ ರೂ. 24.68 ಲಕ್ಷ ಬೆಲೆ ಹೊಂದಿದೆ.

ಪ್ರಸಕ್ತ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ವಿವಿಧ ಎಲೆಕ್ಟ್ರಿಕ್ ಕಾರುಗಳಿಗೆ ಭರ್ಜರಿ ಬೇಡಿಕೆ

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಮೂರನೇ ಸ್ಥಾನದಲ್ಲಿರುವ ಹ್ಯುಂಡೈ ನಿರ್ಮಾಣದ ಕೊನಾ ಇವಿ ಕಾರು ಮಾದರಿಯು ದುಬಾರಿ ಬೆಲೆ ನಡುವೆಯೂ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ಕೊನಾ ಇವಿ 2021-22ರ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ಒಟ್ಟು 51 ಯುನಿಟ್‌ಗಳನ್ನು ಮಾರಾಟ ಮಾಡಿದೆ.

ಪ್ರಸಕ್ತ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ವಿವಿಧ ಎಲೆಕ್ಟ್ರಿಕ್ ಕಾರುಗಳಿಗೆ ಭರ್ಜರಿ ಬೇಡಿಕೆ

ಇದು 2020-21 ಆರ್ಥಿಕ ವರ್ಷದಲ್ಲಿ ಇವಿ ಮಾರಾಟ ಪ್ರಮಾಣಕ್ಕಿಂತಲೂ ಶೇ. 50ರಷ್ಟು ಕಡಿಮೆ ಬೇಡಿಕೆ ಹೊಂದಿದ್ದು, ಶೀಘ್ರದಲ್ಲೇ ಕೊನಾ ಇವಿ ಕಾರು ಫೇಸ್‌ಲಿಫ್ಟ್ ಆವೃತ್ತಿಯೊಂದಿಗೆ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ತವಕದಲ್ಲಿದೆ.

ಪ್ರಸಕ್ತ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ವಿವಿಧ ಎಲೆಕ್ಟ್ರಿಕ್ ಕಾರುಗಳಿಗೆ ಭರ್ಜರಿ ಬೇಡಿಕೆ

ಮಾರುಕಟ್ಟೆಯಲ್ಲಿರುವ ಪ್ರತಿ ಸ್ಪರ್ಧಿ ಮಾದರಿಗಳಿಂತಲೂ ತುಸ ದುಬಾರಿಯಾದರೂ ಅತ್ಯುತ್ತಮ ಪ್ರೀಮಿಯಂ ಫೀಚರ್ಸ್ ಜೊತೆಗೆ ಹೆಚ್ಚಿನ ಮಟ್ಟದ ಬ್ಯಾಟರಿ ರೇಂಜ್ ಹೊಂದಿರುವ ಕೊನಾ ಇವಿ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 23.90 ಲಕ್ಷ ಬೆಲೆ ಹೊಂದಿದೆ. ಕೊನಾ ಇವಿ ಕಾರಿನಲ್ಲಿ 39.2kWh ಬ್ಯಾಟರಿ ಜೋಡಣೆ ಮಾಡಲಾಗಿದ್ದು, ಇದು ಪ್ರತಿ ಚಾರ್ಜ್‌ಗೆ ಗರಿಷ್ಠ 452 ಕಿ.ಮಿ ಮೈಲೇಜ್ ಹಿಂದಿರುಗಿಸುತ್ತದೆ.

ಪ್ರಸಕ್ತ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ವಿವಿಧ ಎಲೆಕ್ಟ್ರಿಕ್ ಕಾರುಗಳಿಗೆ ಭರ್ಜರಿ ಬೇಡಿಕೆ

ಈ ಮೂಲಕ ವಿವಿಧ ಎಲೆಕ್ಟ್ರಿಕ್ ಮಾರಾಟವು ದೇಶಿಯ ಮಾರುಕಟ್ಟೆಯಲ್ಲಿ ತೀವ್ರ ಬೆಳವಣಿಗೆ ಸಾಧಿಸುತ್ತಿದ್ದು, 2021-22ರ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ಒಟ್ಟು 6261 ಯುನಿಟ್‌ಗಳನ್ನು ಮಾರಾಟಗೊಂಡಿವೆ. ಇದು ಕಳೆದ ಆರ್ಥಿಕ ವರ್ಷದ ಮೊದಲಾರ್ಧದಲ್ಲಿನ ಇವಿ ಮಾರಾಟಕ್ಕಿಂತ ಶೇ. 234ರಷ್ಟು ಬೆಳವಣಿಗೆ ಸಾಧಿಸಿದ್ದು, ಮುಂಬರುವ ದಿನಗಳಲ್ಲಿ ಇವಿ ವಾಹನಗಳ ಮಾರಾಟವು ಇನ್ನಷ್ಟು ಹೆಚ್ಚಳವಾಗುವ ನೀರಿಕ್ಷೆಯಿವೆ.

Most Read Articles

Kannada
English summary
Electric car sales surge 234 percent in first half fy2021 22 details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X