ಫೆಬ್ರವರಿ ಅವಧಿಯಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡ ಎಲೆಕ್ಟ್ರಿಕ್ ಕಾರುಗಳು!

ಹೆಚ್ಚುತ್ತಿರುವ ಇಂಧನಗಳ ಬೆಲೆ ಪರಿಣಾಮ ದೇಶಾದ್ಯಂತ ಎಲೆಕ್ಟ್ರಿಕ್ ಕಾರುಗಳ ಮಾರಾಟವು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ಕಳೆದ ವರ್ಷಕ್ಕಿಂತಲೂ ಇದೀಗ ಹೆಚ್ಚಿನ ಮಟ್ಟದ ಎಲೆಕ್ಟ್ರಿಕ್ ಕಾರುಗಳ ಮಾರಾಟವು ದಾಖಲಾಗಿದೆ. ಇದರಲ್ಲಿ ಟಾಟಾ ನೆಕ್ಸಾನ್, ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಮತ್ತು ಹ್ಯುಂಡೈ ಕೊನಾ ಕಾರುಗಳು ಅಗ್ರಸ್ಥಾನದಲ್ಲಿವೆ.

ಫೆಬ್ರವರಿ ಅವಧಿಯಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡ ಎಲೆಕ್ಟ್ರಿಕ್ ಕಾರುಗಳು!

ಪ್ರಸ್ತುತ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಕಾರುಗಳ ಮಾರಾಟವು ಕಡಿಮೆ ಸಂಖ್ಯೆ ಹೊಂದಿದ್ದರೂ ಕಳೆದ ವರ್ಷಕ್ಕಿಂತಲೂ ಹೆಚ್ಚು ಬೇಡಿಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಸಾರ್ವಜನಿಕ ಬಳಕೆಯ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆ ಹೆಚ್ಚಿದಂತೆ ಇವಿ ಕಾರುಗಳ ಮಾರಾಟವು ಹೆಚ್ಚು ಬೇಡಿಕೆ ಪಡೆದುಕೊಳ್ಳುತ್ತಿವೆ. ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಸದ್ಯ ಟಾಟಾ ನೆಕ್ಸಾನ್ ಇವಿ ಪ್ರಥಮ ಸ್ಥಾನದಲ್ಲಿದ್ದು, ತದನಂತರ ಎಂಜಿ ಜೆಡ್ಎಸ್ ಮತ್ತು ಹ್ಯುಂಡೈ ಕೊನಾ ಕಾರುಗಳು ಎರಡನೇ ಮತ್ತು ಮೂರನೇ ಸ್ಥಾನದಲ್ಲಿವೆ.

ಫೆಬ್ರವರಿ ಅವಧಿಯಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡ ಎಲೆಕ್ಟ್ರಿಕ್ ಕಾರುಗಳು!

ಟಾಟಾ ಮೋಟಾರ್ಸ್ ಕಂಪನಿಯು ಈ ಫೆಬ್ರವರಿ ತಿಂಗಳಿನಲ್ಲಿ 427 ಯುನಿಟ್ ನೆಕ್ಸಾನ್ ಇವಿ ಮಾರಾಟ ಮಾಡಿದ್ದು, 2020ರ ಜನವರಿಯಲ್ಲಿ ಬಿಡುಗಡೆಗೊಂಡಿರುವ ನೆಕ್ಸಾನ್ ಇವಿ ಮಾದರಿಯು ಇದುವರೆಗೆ 4 ಸಾವಿರ ಯನಿಟ್‌ ಮಾರಾಟಗೊಂಡಿವೆ.

ಫೆಬ್ರವರಿ ಅವಧಿಯಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡ ಎಲೆಕ್ಟ್ರಿಕ್ ಕಾರುಗಳು!

ಟಾಟಾ ಮೋಟಾರ್ಸ್ ಕಂಪನಿಯು ಇವಿ ವಾಹನಗಳ ಕಾರ್ಯಕ್ಷಮತೆ ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳಲು ಸುಧಾರಿತ ತಂತ್ರಜ್ಞಾನ ಪ್ರೇರಿತ ಜಿಪ್‌ಟ್ರಾನ್ ತಂತ್ರಜ್ಞಾನ ಬಳಕೆ ಮಾಡುತ್ತಿದ್ದು, ಇವಿ ವಾಹನಗಳ ಮೇಲೆ ಗರಿಷ್ಠ ಎಂಟು ವರ್ಷಗಳ ವಾರಂಟಿ ನೀಡುತ್ತಿರುವುದು ಪ್ರಮುಖ ಆಕರ್ಷಣೆಯಾಗಿದೆ ಎನ್ನಬಹುದು.

ಫೆಬ್ರವರಿ ಅವಧಿಯಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡ ಎಲೆಕ್ಟ್ರಿಕ್ ಕಾರುಗಳು!

ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಮಾದರಿಯು ಗ್ರಾಹಕರ ಬೇಡಿಕೆ ಅನುಸಾರವಾಗಿ ಪ್ರಮುಖ ಮೂರು ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.16.40 ಲಕ್ಷ ಬೆಲೆ ಪಡೆದುಕೊಂಡಿದೆ. ಎ‍ಆರ್‌ಎಐ ಪ್ರಮಾಣ ಪತ್ರದಂತೆ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಒಂದು ಬಾರಿಗೆ ಪೂರ್ತಿಯಾಗಿ ಚಾರ್ಜ್ ಆದಲ್ಲಿ ಇಕೋ ಮೋಡ್‌ನಲ್ಲಿ ಗರಿಷ್ಠ 312 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಫೆಬ್ರವರಿ ಅವಧಿಯಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡ ಎಲೆಕ್ಟ್ರಿಕ್ ಕಾರುಗಳು!

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಎರಡನೇ ಸ್ಥಾನದಲ್ಲಿರುವ ಎಂಜಿ ಮೋಟಾರ್ ನಿರ್ಮಾಣದ ಜೆಡ್ಎಸ್ ಇವಿ ಕೂಡಾ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಫೆಬ್ರವರಿ ಅವಧಿಯಲ್ಲಿ 204 ಯನಿಟ್ ಮಾರಾಟಗೊಂಡಿದೆ. ಜೆಡ್ಎಸ್ ಇವಿ ಕಾರು ಬಿಡುಗಡೆಗೊಂಡ ಒಂದು ವರ್ಷದ ಅವಧಿಯಲ್ಲಿ ಒಟ್ಟು 1 ಸಾವಿರ ಯುನಿಟ್ ಮಾರಾಟಗೊಂಡಿದ್ದು, ಇದೀಗ 2021ರ ಆವೃತ್ತಿಯ ಮೂಲಕ ಹೆಚ್ಚಿನ ಮಟ್ಟದ ಮೈಲೇಜ್ ರೇಂಜ್‌ನಲ್ಲಿ ಮಾರಾಟಗೊಳ್ಳುತ್ತಿದೆ.

ಫೆಬ್ರವರಿ ಅವಧಿಯಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡ ಎಲೆಕ್ಟ್ರಿಕ್ ಕಾರುಗಳು!

ಜೆಡ್ಎಸ್ ಇವಿ ಕಾರು ಮಾದರಿಯನ್ನು ಮೊದಲ ಬಾರಿಗೆ 2020ರ ಫೆಬ್ರವರಿಯಲ್ಲಿ ಬಿಡುಗಡೆಗೊಂಡಿದ್ದ ಸಂದರ್ಭದಲ್ಲಿ 44.5 kWh ಬ್ಯಾಟರಿ ಪ್ಯಾಕ್‌ನೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 340 ಕಿ.ಮೀ ಮೈಲೇಜ್ ಹೊಂದಿತ್ತು. ಇದೀಗ 2021ರ ಜೆಡ್ಎಸ್ ಇವಿ ಮಾದರಿಯಲ್ಲಿ ಈ ಹಿಂದಿನ 44.5 kWh ಬ್ಯಾಟರಿ ಪ್ಯಾಕ್‌ನೊಂದಿಗೆ ಪ್ರತಿ ಚಾರ್ಚ್‌ಗೆ 419 ಕಿ.ಮೀ ಮೈಲೇಜ್ ಹೊಂದಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 20,99,800 ಮತ್ತು ಟಾಪ್ ಎಂಡ್ ಮಾದರಿಗೆ ರೂ. 24,18,000 ಬೆಲೆ ಹೊಂದಿದೆ.

ಫೆಬ್ರವರಿ ಅವಧಿಯಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡ ಎಲೆಕ್ಟ್ರಿಕ್ ಕಾರುಗಳು!

ಇನ್ನು ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಮೂರನೇ ಸ್ಥಾನದಲ್ಲಿರುವ ಹ್ಯುಂಡೈ ಕೊನಾ ಇವಿ ಕಾರು ಮಾದರಿಯು ಫೆಬ್ರವರಿ ಅವಧಿಯಲ್ಲಿ 10 ಯುನಿಟ್ ಮಾರಾಟಗೊಂಡಿದ್ದು, ಕೊನಾ ಇವಿ ಕಾರು ಬಿಡುಗಡೆಗೊಂಡ ನಂತರ ಇದುವರೆಗೆ 120 ಯುನಿಟ್ ಮಾರಾಟಗೊಂಡಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಫೆಬ್ರವರಿ ಅವಧಿಯಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡ ಎಲೆಕ್ಟ್ರಿಕ್ ಕಾರುಗಳು!

ದುಬಾರಿ ಬೆಲೆಯಾದರೂ ಅತ್ಯುತ್ತಮ ಪ್ರೀಮಿಯಂ ಫೀಚರ್ಸ್ ಜೊತೆಗೆ ಹೆಚ್ಚಿನ ಮಟ್ಟದ ಬ್ಯಾಟರಿ ರೇಂಜ್ ಹೊಂದಿರುವ ಕೊನಾ ಇವಿ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 23.90 ಲಕ್ಷ ಬೆಲೆ ಹೊಂದಿದೆ. ಕೊನಾ ಇವಿ ಕಾರಿನಲ್ಲಿ 39.2kWh ಬ್ಯಾಟರಿ ಜೋಡಣೆ ಮಾಡಲಾಗಿದ್ದು, ಇದು ಪ್ರತಿ ಚಾರ್ಜ್‌ಗೆ ಗರಿಷ್ಠ 452 ಕಿ.ಮಿ ಮೈಲೇಜ್ ಹಿಂದಿರುಗಿಸುತ್ತದೆ.

ಫೆಬ್ರವರಿ ಅವಧಿಯಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡ ಎಲೆಕ್ಟ್ರಿಕ್ ಕಾರುಗಳು!

ಹ್ಯುಂಡೈ ಹೊಸ ಎಲೆಕ್ಟ್ರಿಕ್ ಕಾರು ಪರ್ಫಾಮೆನ್ಸ್ ಕಾರುಗಳಂತೆಯೇ ಉತ್ತಮ ಮುನ್ನಡೆ ಕಾಯ್ದುಕೊಂಡಿದ್ದು, 100kW ಫ್ರಂಟ್ ವೀಲ್ಹ್ ಮೋಟಾರ್ ಪವರ್ ಮೂಲಕ 131-ಬಿಎಚ್‌ಪಿ ಮತ್ತು 395-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಕೇವಲ 9.7-ಸೇಕೆಂಡುಗಳಲ್ಲಿ ಸೊನ್ನೆಯಿಂದ 100ಕಿ.ಮಿ ವೇಗ ತಲುಪಬಲ್ಲದು.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಫೆಬ್ರವರಿ ಅವಧಿಯಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡ ಎಲೆಕ್ಟ್ರಿಕ್ ಕಾರುಗಳು!

ಇನ್ನುಳಿದ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಟಾಟಾ ಟಿಗೋರ್ ಕೂಡಾ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಎಲೆಕ್ಟ್ರಿಕ್ ವಾಹನ ನೀತಿ ನಂತರ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚುತ್ತಿದೆ. ಜೊತೆಗೆ ಹೆಚ್ಚುತ್ತಿರುವ ಇಂಧನ ಬೆಲೆ ಪರಿಣಾಮದಿಂದಲೂ ತತ್ತರಿಸಿರುವ ವಾಹನ ಮಾಲೀಕರು ಅನಿವಾರ್ಯವಾಗಿ ಎಲೆಕ್ಟ್ರಿಕ್ ವಾಹನಗಳ ಮುಖಮಾಡುತ್ತಿರುವುದು ಉತ್ತಮ ಬೆಳವಣಿಗೆ ಎನ್ನಬಹುದು.

Article Published On: Friday, March 5, 2021, 11:30 [IST]
English summary
Electric Car Sales Feb 2021: Tata Nexon EV Tops The List. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+