2030ರ ವೇಳೆಗೆ ಭಾರೀ ಪ್ರಮಾಣದ ವಹಿವಾಟು ನಡೆಸಲಿದೆ ಎಲೆಕ್ಟ್ರಿಕ್ ವಾಹನಗಳ ಫೈನಾನ್ಸ್ ಉದ್ಯಮ

ಭಾರತದ ಎಲೆಕ್ಟ್ರಿಕ್ ವಾಹನ ಫೈನಾನ್ಸ್ ಉದ್ಯಮವು 2030ರ ವೇಳೆಗೆ ರೂ.3.7 ಲಕ್ಷ ಕೋಟಿಗಳಷ್ಟಾಗಲಿದೆ. ನೀತಿ ಆಯೋಗ ಹಾಗೂ ರಾಕಿ ಮೌಂಟೇನ್ ಇನ್‌ಸ್ಟಿಟ್ಯೂಟ್ ನಡೆಸಿದ ಸಮೀಕ್ಷೆಯ ಪ್ರಕಾರ 2030ರ ವೇಳೆಗೆ ಎಲೆಕ್ಟ್ರಿಕ್ ವಾಹನ ಉದ್ಯಮವು ಈಗಿರುವುದಕ್ಕಿಂತ 80%ಗಳಷ್ಟು ಹೆಚ್ಚಾಗಲಿದೆ ಎಂದು ಹೇಳಲಾಗಿದೆ.

2030ರ ವೇಳೆಗೆ ಭಾರೀ ಪ್ರಮಾಣದ ವಹಿವಾಟು ನಡೆಸಲಿದೆ ಎಲೆಕ್ಟ್ರಿಕ್ ವಾಹನಗಳ ಫೈನಾನ್ಸ್ ಉದ್ಯಮ

ಸದ್ಯಕ್ಕೆ ಭಾರತದಲ್ಲಿನ ವಾಹನ ಫೈನಾನ್ಸ್ ದುಬಾರಿಯಾಗಿದೆ ಎಂದು ವರದಿ ಹೇಳಿದೆ. ಹಣಕಾಸು ಕಂಪನಿಗಳು ಗ್ರಾಹಕರಿಗೆ ಹೆಚ್ಚಿನ ಸಾಲ ದರದಲ್ಲಿ ವಾಹನ ಸಾಲವನ್ನು ನೀಡುತ್ತಿವೆ. ಇದರ ಜೊತೆಗೆ ವಾಹನದ ವಿಮಾ ದರವೂ ಹೆಚ್ಚಾಗಿದೆ. ಇದರಿಂದಾಗಿ ಗ್ರಾಹಕರು ವಾಹನವನ್ನು ಫೈನಾನ್ಸ್ ಮೇಲೆ ಖರೀದಿಸುವುದು ದುಬಾರಿಯಾಗಿದೆ.

2030ರ ವೇಳೆಗೆ ಭಾರೀ ಪ್ರಮಾಣದ ವಹಿವಾಟು ನಡೆಸಲಿದೆ ಎಲೆಕ್ಟ್ರಿಕ್ ವಾಹನಗಳ ಫೈನಾನ್ಸ್ ಉದ್ಯಮ

ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಮೂಲಸೌಕರ್ಯಗಳನ್ನು ನಿರ್ಮಿಸಲು ರೂ.19.7 ಲಕ್ಷ ಕೋಟಿ ಬಂಡವಾಳ ಹೂಡಿಕೆ ಅಗತ್ಯವಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಈ ಹೂಡಿಕೆಯೊಂದಿಗೆ ದೇಶಾದ್ಯಂತ ಚಾರ್ಜಿಂಗ್ ಕೇಂದ್ರ, ಬ್ಯಾಟರಿ ಘಟಕ ಹಾಗೂ ವಿಲೇವಾರಿ ಘಟಕಗಳನ್ನು ನಿರ್ಮಿಸಲಾಗುವುದು.

MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

2030ರ ವೇಳೆಗೆ ಭಾರೀ ಪ್ರಮಾಣದ ವಹಿವಾಟು ನಡೆಸಲಿದೆ ಎಲೆಕ್ಟ್ರಿಕ್ ವಾಹನಗಳ ಫೈನಾನ್ಸ್ ಉದ್ಯಮ

ಈ ವರದಿಯು ಹಣಕಾಸು ಹಾಗೂ ಬ್ಯಾಂಕೇತರ ಸಂಸ್ಥೆಗಳಿಗೆ 10 ಅಂಶಗಳ ಪರಿಹಾರಗಳನ್ನು ಸಹ ಒದಗಿಸಿದೆ. ಈ 10 ಪರಿಹಾರಗಳಲ್ಲಿ ಆದ್ಯತೆಯ ವಲಯದಲ್ಲಿ ಹೂಡಿಕೆ ಮಾಡುವುದು ಹಾಗೂ ಬಡ್ಡಿದರ ಕಡಿತದಂತಹ ಹಣಕಾಸು ಸಾಧನಗಳು ಸೇರಿವೆ.

2030ರ ವೇಳೆಗೆ ಭಾರೀ ಪ್ರಮಾಣದ ವಹಿವಾಟು ನಡೆಸಲಿದೆ ಎಲೆಕ್ಟ್ರಿಕ್ ವಾಹನಗಳ ಫೈನಾನ್ಸ್ ಉದ್ಯಮ

ಇತರ ಪರಿಹಾರಗಳಲ್ಲಿ, ವಾಹನಗಳ ಮೇಲೆ ವಾರಂಟಿ ಹಾಗೂ ಗ್ಯಾರಂಟಿಗಳನ್ನು ಒದಗಿಸುವ ಮೂಲಕ ಒಇಎಂ ಹಾಗೂ ಹಣಕಾಸು ಸಂಸ್ಥೆಗಳ ನಡುವೆ ಉತ್ತಮ ಸಹಭಾಗಿತ್ವವನ್ನು ನಿರ್ಮಿಸುವುದು ಸೇರಿವೆ.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

2030ರ ವೇಳೆಗೆ ಭಾರೀ ಪ್ರಮಾಣದ ವಹಿವಾಟು ನಡೆಸಲಿದೆ ಎಲೆಕ್ಟ್ರಿಕ್ ವಾಹನಗಳ ಫೈನಾನ್ಸ್ ಉದ್ಯಮ

ಈ ವರದಿಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್, ಎಲೆಕ್ಟ್ರಿಕ್ ವಾಹನಗಳಿಗೆ ಮೂಲಸೌಕರ್ಯ ಒದಗಿಸಲು ಹೆಚ್ಚು ಬಂಡವಾಳ ಹೂಡಿಕೆ ಮಾಡುವುದು ಅವಶ್ಯಕವಾಗಿದೆ ಎಂದು ಹೇಳಿದರು.

2030ರ ವೇಳೆಗೆ ಭಾರೀ ಪ್ರಮಾಣದ ವಹಿವಾಟು ನಡೆಸಲಿದೆ ಎಲೆಕ್ಟ್ರಿಕ್ ವಾಹನಗಳ ಫೈನಾನ್ಸ್ ಉದ್ಯಮ

ಎಲೆಕ್ಟ್ರಿಕ್ ವಾಹನಗಳನ್ನು ಬಳಸುವುದರಿಂದ ದೇಶದಲ್ಲಿ ಆರ್ಥಿಕ ಹಾಗೂ ಸಾಮಾಜಿಕ ಪ್ರಯೋಜನಗಳನ್ನು ಪಡೆಯಬಹುದು ಎಂದು ಅವರು ಹೇಳಿದರು. ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಮೂಲಸೌಕರ್ಯವನ್ನು ವೇಗವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

2030ರ ವೇಳೆಗೆ ಭಾರೀ ಪ್ರಮಾಣದ ವಹಿವಾಟು ನಡೆಸಲಿದೆ ಎಲೆಕ್ಟ್ರಿಕ್ ವಾಹನಗಳ ಫೈನಾನ್ಸ್ ಉದ್ಯಮ

ದೇಶದಲ್ಲಿ ನಿರ್ಮಿಸಲಾಗುತ್ತಿರುವ ಹೆದ್ದಾರಿ ಹಾಗೂ ಎಕ್ಸ್‌ಪ್ರೆಸ್‌ವೇಗಳಲ್ಲೂ ಎಲೆಕ್ಟ್ರಿಕ್ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯವನ್ನು ಕಲ್ಪಿಸಲಾಗುತ್ತಿದೆ. ಸದ್ಯಕ್ಕೆ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಪ್ರಮಾಣವು ನಿರೀಕ್ಷಿತ ಮಟ್ಟದಲ್ಲಿಲ್ಲ.

2030ರ ವೇಳೆಗೆ ಭಾರೀ ಪ್ರಮಾಣದ ವಹಿವಾಟು ನಡೆಸಲಿದೆ ಎಲೆಕ್ಟ್ರಿಕ್ ವಾಹನಗಳ ಫೈನಾನ್ಸ್ ಉದ್ಯಮ

ಎಲೆಕ್ಟ್ರಿಕ್ ವಾಹನಗಳ ಬೆಲೆ ಹಾಗೂ ಎಲೆಕ್ಟ್ರಿಕ್ ವಾಹನಗಳ ಸಾಮರ್ಥ್ಯದ ಬಗ್ಗೆ ಜನರಿಗೆ ಇರುವ ಅನುಮಾನಗಳು ಇದಕ್ಕೆ ಪ್ರಮುಖ ಕಾರಣ. ಎಲೆಕ್ಟ್ರಿಕ್ ವಾಹನಗಳ ಮಾರಾಟವನ್ನು ಹೆಚ್ಚಿಸಲು ಬೆಲೆ ಕಡಿಮೆ ಮಾಡುವುದು ಹಾಗೂ ಕೈಗೆಟುಕುವ ಹಣಕಾಸು ಆಯ್ಕೆಗಳಂತಹ ಪರಿಹಾರಗಳನ್ನು ಶಿಫಾರಸು ಮಾಡಲಾಗಿದೆ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

2030ರ ವೇಳೆಗೆ ಭಾರೀ ಪ್ರಮಾಣದ ವಹಿವಾಟು ನಡೆಸಲಿದೆ ಎಲೆಕ್ಟ್ರಿಕ್ ವಾಹನಗಳ ಫೈನಾನ್ಸ್ ಉದ್ಯಮ

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ, ಮಾರಾಟ ಹಾಗೂ ಮೂಲಸೌಕರ್ಯಗಳನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ಫೇಮ್ -2 ಯೋಜನೆಯಡಿ ರೂ.10,000 ಕೋಟಿ ಹೂಡಿಕೆ ಮಾಡಿದೆ.

2030ರ ವೇಳೆಗೆ ಭಾರೀ ಪ್ರಮಾಣದ ವಹಿವಾಟು ನಡೆಸಲಿದೆ ಎಲೆಕ್ಟ್ರಿಕ್ ವಾಹನಗಳ ಫೈನಾನ್ಸ್ ಉದ್ಯಮ

ಕೇಂದ್ರ ಸರ್ಕಾರವು 2030ರ ವೇಳೆಗೆ ದೇಶದಲ್ಲಿ 100%ನಷ್ಟು ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ಗುರಿಯನ್ನು ಹೊಂದಿದೆ. 2020ರ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕಗಳಲ್ಲಿ ಹೈಸ್ಪೀಡ್ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಕೇವಲ 3,000 ಯೂನಿಟ್‌ಗಳಿಗೆ ಇಳಿದಿದ್ದು, 94%ನಷ್ಟು ಕುಸಿತವನ್ನು ದಾಖಲಿಸಿದೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

2030ರ ವೇಳೆಗೆ ಭಾರೀ ಪ್ರಮಾಣದ ವಹಿವಾಟು ನಡೆಸಲಿದೆ ಎಲೆಕ್ಟ್ರಿಕ್ ವಾಹನಗಳ ಫೈನಾನ್ಸ್ ಉದ್ಯಮ

ಇದೇ ವೇಳೆ ಫೇಮ್ -2 ಯೋಜನೆಯಿಂದ ಹೊರಗಿದ್ದ ಕಡಿಮೆ ಬೆಲೆಯ ದ್ವಿಚಕ್ರ ವಾಹನಗಳು 50,000 ಯುನಿಟ್'ಗಳಿಗೂ ಹೆಚ್ಚು ಮಾರಾಟವಾಗಿವೆ. ಇದರಿಂದ ಜನರು ಎಲೆಕ್ಟ್ರಿಕ್ ವಾಹನಗಳಿಗೆ ಪರ್ಯಾಯವಾದ ಕಡಿಮೆ ಬೆಲೆಯ ವಾಹನಗಳಿಗೆ ಆದ್ಯತೆ ನೀಡುತ್ತಿರುವುದು ಸ್ಪಷ್ಟವಾಗಿದೆ.

Most Read Articles

Kannada
English summary
Electric vehicle finance industry to do huge business by 2030. Read in Kannada.
Story first published: Wednesday, March 10, 2021, 17:38 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X