ಇನ್ನೆರಡು ವರ್ಷಗಳಲ್ಲಿ ಕೈಗೆಟಕುವ ದರದಲ್ಲಿ ಲಭ್ಯವಾಗಲಿವೆ ಎಲೆಕ್ಟ್ರಿಕ್ ವಾಹನಗಳು

ಇತ್ತೀಚಿಗೆ ಆಟೋಕಾರ್ ಇಂಡಿಯಾ, ಕಾರ್ಯಕ್ರಮವೊಂದನ್ನು ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆ ಸಚಿವ ನಿತಿನ್ ಗಡ್ಕರಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಅಲ್ಪಾವಧಿಯಲ್ಲಿಯೇ ಬಿಎಸ್ 6 ನಿಯಮಗಳಿಗೆ ಬದಲಾದ ಭಾರತದ ವಾಹನ ಉದ್ಯಮವನ್ನು ಶ್ಲಾಘಿಸಿದರು.

ಇನ್ನೆರಡು ವರ್ಷಗಳಲ್ಲಿ ಕೈಗೆಟಕುವ ದರದಲ್ಲಿ ಲಭ್ಯವಾಗಲಿವೆ ಎಲೆಕ್ಟ್ರಿಕ್ ವಾಹನಗಳು

ಬಿಎಸ್ 6 ಮಾಲಿನ್ಯ ನಿಯಮಗಳ ಅನುಷ್ಟಾನದಲ್ಲಿ ನಾವು ಯಶಸ್ವಿಯಾಗಿದ್ದೇವೆ. ಆಟೋಮೊಬೈಲ್ ಉದ್ಯಮದ ಕಠಿಣ ಪರಿಶ್ರಮ ಹಾಗೂ ಸಹಕಾರಕ್ಕಾಗಿ ನಾನು ಉದ್ಯಮಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಅವರು ಹೇಳಿದರು. ಬಿಎಸ್ 6 ಮಾಲಿನ್ಯ ನಿಯಮಗಳನ್ನು 2020ರ ಏಪ್ರಿಲ್ 1ರಿಂದ ಜಾರಿಗೊಳಿಸಲಾಗಿದೆ ಎಂಬುದು ಗಮನಾರ್ಹ.

ಇನ್ನೆರಡು ವರ್ಷಗಳಲ್ಲಿ ಕೈಗೆಟಕುವ ದರದಲ್ಲಿ ಲಭ್ಯವಾಗಲಿವೆ ಎಲೆಕ್ಟ್ರಿಕ್ ವಾಹನಗಳು

ಸದ್ಯಕ್ಕೆ ಎಲೆಕ್ಟ್ರಿಕ್ ವಾಹನಗಳತ್ತ ಗಮನ ಹರಿಸಲಾಗುತ್ತಿದೆ ಎಂದು ಸಚಿವ ನಿತಿನ್ ಗಡ್ಕರಿ ಹೇಳಿದರು. ಭಾರತವು ಪ್ರತಿವರ್ಷ 8 ಟ್ರಿಲಿಯನ್ ರೂಪಾಯಿ ಮೌಲ್ಯದ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತದೆ.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಇನ್ನೆರಡು ವರ್ಷಗಳಲ್ಲಿ ಕೈಗೆಟಕುವ ದರದಲ್ಲಿ ಲಭ್ಯವಾಗಲಿವೆ ಎಲೆಕ್ಟ್ರಿಕ್ ವಾಹನಗಳು

ಇದರಿಂದಾಗಿ ಹೆಚ್ಚಿನ ಆರ್ಥಿಕ ಹೊರೆ ಎದುರಾಗುತ್ತಿದೆ. ಜೊತೆಗೆ ಪೆಟ್ರೋಲ್, ಡೀಸೆಲ್ ವಾಹನಗಳಿಂದ ಪರಿಸರಕ್ಕೂ ಹಾನಿಯಾಗುತ್ತಿದೆ. ವಾಯು ಮಾಲಿನ್ಯ ಸಮಸ್ಯೆಯನ್ನು ಹೋಗಲಾಡಿಸಲು ದೆಹಲಿ ಸೇರಿದಂತೆ ಹಲವು ರಾಜ್ಯಗಳು ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿವೆ.

ಇನ್ನೆರಡು ವರ್ಷಗಳಲ್ಲಿ ಕೈಗೆಟಕುವ ದರದಲ್ಲಿ ಲಭ್ಯವಾಗಲಿವೆ ಎಲೆಕ್ಟ್ರಿಕ್ ವಾಹನಗಳು

ಕಚ್ಚಾ ತೈಲ ಆಮದು ಪ್ರಮಾಣವನ್ನು ಕಡಿಮೆ ಮಾಡಲು ಹಾಗೂ ವಾಯುಮಾಲಿನ್ಯ ಸಮಸ್ಯೆಗೆ ಪರಿಹಾರ ನೀಡಲು ಕೇಂದ್ರ ಸರ್ಕಾರವು ಸಿಎನ್‌ಜಿ ಹಾಗೂ ಎಥೆನಾಲ್‌ನಂತಹ ಪರ್ಯಾಯ ಇಂಧನ ಹಾಗೂ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಇನ್ನೆರಡು ವರ್ಷಗಳಲ್ಲಿ ಕೈಗೆಟಕುವ ದರದಲ್ಲಿ ಲಭ್ಯವಾಗಲಿವೆ ಎಲೆಕ್ಟ್ರಿಕ್ ವಾಹನಗಳು

ಕೇಂದ್ರ ಸಚಿವ ನಿತಿನ್ ಗಡ್ಕರಿ ಮೊದಲಿನಿಂದಲೂ ಪರ್ಯಾಯ ಇಂಧನಗಳ ಅಗತ್ಯದ ಬಗ್ಗೆ ಹೇಳುತ್ತಿದ್ದಾರೆ. ಆದರೆ ಲಿಥಿಯಂ ಐಯಾನ್ ಬ್ಯಾಟರಿಗಳ ದುಬಾರಿ ಬೆಲೆಯಿಂದಾಗಿ ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚು ಬೆಲೆ ತೆರಬೇಕಾಗಿದೆ.

ಇನ್ನೆರಡು ವರ್ಷಗಳಲ್ಲಿ ಕೈಗೆಟಕುವ ದರದಲ್ಲಿ ಲಭ್ಯವಾಗಲಿವೆ ಎಲೆಕ್ಟ್ರಿಕ್ ವಾಹನಗಳು

ಪೆಟ್ರೋಲ್, ಡೀಸೆಲ್ ವಾಹನಗಳ ಬೆಲೆಗೆ ಹೋಲಿಸಿದರೆ ಎಲೆಕ್ಟ್ರಿಕ್ ವಾಹನಗಳ ಬೆಲೆ ಹೆಚ್ಚು. ಈ ಕಾರಣಕ್ಕೆ ಜನರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಹಿಂದೇಟು ಹಾಕುವಂತಾಗಿದೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಇನ್ನೆರಡು ವರ್ಷಗಳಲ್ಲಿ ಕೈಗೆಟಕುವ ದರದಲ್ಲಿ ಲಭ್ಯವಾಗಲಿವೆ ಎಲೆಕ್ಟ್ರಿಕ್ ವಾಹನಗಳು

ಈಗ ಕೇಂದ್ರ ಸಚಿವ ನಿತಿನ್ ಗಡ್ಕರಿರವರು ಮುಂದಿನ ಎರಡು ವರ್ಷಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಬೆಲೆ, ಪೆಟ್ರೋಲ್ - ಡೀಸೆಲ್ ವಾಹನಗಳ ಬೆಲೆಗಳಿಗೆ ಸಮನಾಗಿರುವ ನಿರೀಕ್ಷೆಗಳಿವೆ ಎಂದು ಹೇಳಿದ್ದಾರೆ.

ಇನ್ನೆರಡು ವರ್ಷಗಳಲ್ಲಿ ಕೈಗೆಟಕುವ ದರದಲ್ಲಿ ಲಭ್ಯವಾಗಲಿವೆ ಎಲೆಕ್ಟ್ರಿಕ್ ವಾಹನಗಳು

ಎಲೆಕ್ಟ್ರಿಕ್ ವಾಹನಗಳ ಬೆಲೆಯಿಂದಾಗಿ ಜನರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಹಿಂದೇಟು ಹಾಕುತ್ತಿದ್ದಾರೆ. ಬೆಲೆಗಳು ಕುಸಿದರೆ ಜನರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಹಿಂಜರಿಯುವುದಿಲ್ಲ ಎಂಬುದರಲ್ಲಿ ಸಂದೇಹವಿಲ್ಲವೆಂದು ನಿತಿನ್ ಗಡ್ಕರಿ ಹೇಳಿದ್ದಾರೆ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಇನ್ನೆರಡು ವರ್ಷಗಳಲ್ಲಿ ಕೈಗೆಟಕುವ ದರದಲ್ಲಿ ಲಭ್ಯವಾಗಲಿವೆ ಎಲೆಕ್ಟ್ರಿಕ್ ವಾಹನಗಳು

ಆಟೋಮೊಬೈಲ್ ಉದ್ಯಮವು ಕಾರ್ಯನಿರ್ವಹಿಸುತ್ತಿರುವ ವಿಧಾನದಿಂದಾಗಿ ಮುಂಬರುವ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಬೆಲೆ ಕಡಿಮೆಯಾಗುವ ಸಾಧ್ಯತೆಗಳಿವೆ ಎಂಬ ಆಶಯವನ್ನು ನಿತಿನ್ ಗಡ್ಕರಿ ವ್ಯಕ್ತ ಪಡಿಸಿದರು.

Most Read Articles

Kannada
English summary
Electric vehicle prices to come down in next two years says Nitin Gadkari. Read in Kannada.
Story first published: Friday, March 26, 2021, 10:17 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X