ಮೂರು ವರ್ಷಗಳಲ್ಲಿ ದುಪ್ಪಟ್ಟು ಏರಿಕೆಯಾದ ಎಲೆಕ್ಟ್ರಿಕ್ ವಾಹನ ಮಾರಾಟ

ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಕೇಂದ್ರ ಸರ್ಕಾರದ ಇ-ವೆಹಿಕಲ್ ಪೋರ್ಟಲ್‌ನ ಅಂಕಿಅಂಶಗಳ ಪ್ರಕಾರ ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಪ್ರಮಾಣವು ಕಳೆದ ಮೂರು ವರ್ಷಗಳಲ್ಲಿ ದ್ವಿಗುಣಗೊಂಡಿದೆ.

ಮೂರು ವರ್ಷಗಳಲ್ಲಿ ದುಪ್ಪಟ್ಟು ಏರಿಕೆಯಾದ ಎಲೆಕ್ಟ್ರಿಕ್ ವಾಹನ ಮಾರಾಟ

ಎಲೆಕ್ಟ್ರಿಕ್ ವಾಹನಗಳ ಮಾರಾಟದ ಕುರಿತು ಬಿಡುಗಡೆಗೊಳಿಸಲಾದ ವರದಿಯ ಪ್ರಕಾರ, 2017-18ರಲ್ಲಿ ದೇಶದಲ್ಲಿ 69,012 ಎಲೆಕ್ಟ್ರಿಕ್ ವಾಹನಗಳು ಮಾರಾಟವಾಗಿದ್ದರೆ, 2018-19ರಲ್ಲಿ 1,43,358 ಯುನಿಟ್ ಹಾಗೂ 2019-20ರ ಅವಧಿಯಲ್ಲಿ ದೇಶದಲ್ಲಿ ಒಟ್ಟು 1,67,041 ಯುನಿಟ್ ಎಲೆಕ್ಟ್ರಿಕ್ ವಾಹನಗಳು ಮಾರಾಟವಾಗಿವೆ.

ಮೂರು ವರ್ಷಗಳಲ್ಲಿ ದುಪ್ಪಟ್ಟು ಏರಿಕೆಯಾದ ಎಲೆಕ್ಟ್ರಿಕ್ ವಾಹನ ಮಾರಾಟ

ಈ ಅಂಕಿಅಂಶಗಳನ್ನು ಕಂಪನಿಗಳು ಇ-ವೆಹಿಕಲ್ ಪೋರ್ಟಲ್‌ನಲ್ಲಿ ಬಿಡುಗಡೆಗೊಳಿಸಿರುವ ಮಾರಾಟದ ಅಂಕಿ ಅಂಶಗಳಿಂದ ತೆಗೆದುಕೊಳ್ಳಲಾಗಿದೆ. ತೈಲ ಬೆಲೆ ಏರಿಕೆಯ ನಂತರ ಎಲೆಕ್ಟ್ರಿಕ್ ಹಾಗೂ ಸಿಎನ್‌ಜಿ ವಾಹನಗಳ ಮಾರಾಟ ಪ್ರಮಾಣವು ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ವರದಿ ಮಾಡಿದೆ.

MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಮೂರು ವರ್ಷಗಳಲ್ಲಿ ದುಪ್ಪಟ್ಟು ಏರಿಕೆಯಾದ ಎಲೆಕ್ಟ್ರಿಕ್ ವಾಹನ ಮಾರಾಟ

ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರವು ಫೇಮ್ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯಡಿ ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಗಳು ಹಾಗೂ ಗ್ರಾಹಕರಿಗೆ ತೆರಿಗೆ ವಿನಾಯಿತಿ ಸೇರಿದಂತೆ ವಿವಿಧ ರೀತಿಯ ತಾಂತ್ರಿಕ ಹಾಗೂ ಆರ್ಥಿಕ ನೆರವು ನೀಡಲಾಗುತ್ತದೆ.

ಮೂರು ವರ್ಷಗಳಲ್ಲಿ ದುಪ್ಪಟ್ಟು ಏರಿಕೆಯಾದ ಎಲೆಕ್ಟ್ರಿಕ್ ವಾಹನ ಮಾರಾಟ

ಈ ಯೋಜನೆಯಡಿ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಜಿಎಸ್‌ಟಿ ದರವನ್ನು 12%ನಿಂದ 5%ಗೆ ಇಳಿಸಿದೆ. ಇದೇ ವೇಳೆ ಎಲೆಕ್ಟ್ರಿಕ್ ವಾಹನಗಳ ಮೂಲಸೌಕರ್ಯಗಳಾದ ಚಾರ್ಜಿಂಗ್ ಸ್ಟೇಷನ್ ಹಾಗೂ ಚಾರ್ಜಿಂಗ್ ಪಾಯಿಂಟ್ ಮೇಲಿನ ಜಿ‌ಎಸ್‌ಟಿ ದರವನ್ನು 18%ನಿಂದ 5%ಗಳಿಗೆ ಇಳಿಸಲಾಗಿದೆ.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಮೂರು ವರ್ಷಗಳಲ್ಲಿ ದುಪ್ಪಟ್ಟು ಏರಿಕೆಯಾದ ಎಲೆಕ್ಟ್ರಿಕ್ ವಾಹನ ಮಾರಾಟ

ಕೇಂದ್ರ ಸರ್ಕಾರವು ಮಾತ್ರವಲ್ಲದೇ ಹಲವು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವ ಗ್ರಾಹಕರಿಗೆ ಸಬ್ಸಿಡಿ ನೀಡುತ್ತಿವೆ. ಫೇಮ್ ಯೋಜನೆಯ ಎರಡನೇ ಹಂತದಲ್ಲಿ ಸಾರ್ವಜನಿಕ ಸಾರಿಗೆ ವಾಹನಗಳನ್ನು ಎಲೆಕ್ಟ್ರಿಕ್ ಆಗಿ ಬದಲಿಸುವ ಪ್ರಯತ್ನಗಳು ನಡೆಯುತ್ತಿವೆ.

ಮೂರು ವರ್ಷಗಳಲ್ಲಿ ದುಪ್ಪಟ್ಟು ಏರಿಕೆಯಾದ ಎಲೆಕ್ಟ್ರಿಕ್ ವಾಹನ ಮಾರಾಟ

ಈ ಹಿನ್ನೆಲೆಯಲ್ಲಿ ಎಲೆಕ್ಟ್ರಿಕ್ ಬಸ್, ಎಲೆಕ್ಟ್ರಿಕ್ ಕಾರ್, ಎಲೆಕ್ಟ್ರಿಕ್ ತ್ರಿಚಕ್ರ ವಾಹನ ಹಾಗೂ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಅನೇಕ ರಾಜ್ಯಗಳಲ್ಲಿ ಕಮರ್ಷಿಯಲ್ ಬಳಕೆಗಾಗಿ ಬಳಸುವುದಕ್ಕೆ ಒತ್ತು ನೀಡಲಾಗಿದೆ.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಮೂರು ವರ್ಷಗಳಲ್ಲಿ ದುಪ್ಪಟ್ಟು ಏರಿಕೆಯಾದ ಎಲೆಕ್ಟ್ರಿಕ್ ವಾಹನ ಮಾರಾಟ

ಫೇಮ್ -2 ಯೋಜನೆಯಡಿ 2022ರ ವೇಳೆಗೆ ದೇಶದಲ್ಲಿ ಹತ್ತು ಲಕ್ಷ ಎಲೆಕ್ಟ್ರಿಕ್ ವಾಹನಗಳನ್ನು ರಸ್ತೆಗಿಳಿಸುವ ಗುರಿ ಹೊಂದಲಾಗಿದೆ. ಆದರೆ ಎಲೆಕ್ಟ್ರಿಕ್ ವಾಹನಗಳ ಮಾರಾಟದ ಅಂಕಿ ಅಂಶಗಳನ್ನು ಗಮನಿಸಿದರೆ ಈ ಗುರಿ ಸಾಧನೆ ಕಷ್ಟವೆಂದೇ ಹೇಳಬಹುದು.

ಮೂರು ವರ್ಷಗಳಲ್ಲಿ ದುಪ್ಪಟ್ಟು ಏರಿಕೆಯಾದ ಎಲೆಕ್ಟ್ರಿಕ್ ವಾಹನ ಮಾರಾಟ

ಎಲೆಕ್ಟ್ರಿಕ್ ವಾಹನಗಳಿಗೆ ಚಾರ್ಜಿಂಗ್'ನಂತಹ ಮೂಲಸೌಕರ್ಯಗಳನ್ನು ಒದಗಿಸಿದರೆ ಎಲೆಕ್ಟ್ರಿಕ್ ವಾಹನಗಳ ಬೆಳವಣಿಗೆಯು ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಮೂರು ವರ್ಷಗಳಲ್ಲಿ ದುಪ್ಪಟ್ಟು ಏರಿಕೆಯಾದ ಎಲೆಕ್ಟ್ರಿಕ್ ವಾಹನ ಮಾರಾಟ

ಸದ್ಯದ ಪರಿಸ್ಥಿತಿಯಲ್ಲಿ ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಗಳು ಮಾರಾಟವನ್ನು ಹೆಚ್ಚಿಸುವುದರತ್ತ ಗಮನಹರಿಸಬೇಕು ಎಂದು ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಗಳಿಗೆ ತಿಳಿಸಿದ್ದಾರೆ.

ಮೂರು ವರ್ಷಗಳಲ್ಲಿ ದುಪ್ಪಟ್ಟು ಏರಿಕೆಯಾದ ಎಲೆಕ್ಟ್ರಿಕ್ ವಾಹನ ಮಾರಾಟ

ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಸಬ್ಸಿಡಿ ನೀಡುವ ಪ್ರಸ್ತಾಪವನ್ನು ಮಂಡಿಸಿದೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಮೂರು ವರ್ಷಗಳಲ್ಲಿ ದುಪ್ಪಟ್ಟು ಏರಿಕೆಯಾದ ಎಲೆಕ್ಟ್ರಿಕ್ ವಾಹನ ಮಾರಾಟ

ಈ ಪ್ರಸ್ತಾವನೆಯಡಿಯಲ್ಲಿ 1.5 ಮಿಲಿಯನ್ ಎಲೆಕ್ಟ್ರಿಕ್ ದ್ವಿಚಕ್ರ ಹಾಗೂ ಎಲೆಕ್ಟ್ರಿಕ್ ತ್ರಿಚಕ್ರ ವಾಹನ ಮತ್ತು 62,000 ಎಲೆಕ್ಟ್ರಿಕ್ ಕಾರು ಹಾಗೂ ಬಸ್ಸುಗಳ ಖರೀದಿಗೆ ಸಬ್ಸಿಡಿ ನೀಡಲು ನಿರ್ಧರಿಸಲಾಗಿದೆ.

ಮೂರು ವರ್ಷಗಳಲ್ಲಿ ದುಪ್ಪಟ್ಟು ಏರಿಕೆಯಾದ ಎಲೆಕ್ಟ್ರಿಕ್ ವಾಹನ ಮಾರಾಟ

ಫೇಮ್ -2 ಅಡಿಯಲ್ಲಿ ರೂ.10,000 ಕೋಟಿಗಳ ಯೋಜನೆಗಳನ್ನು ಅಂಗೀಕರಿಸಲಾಗಿದ್ದು ಅವುಗಳ ಮೇಲೆ ಗಮನ ಹರಿಸಲಾಗುತ್ತಿದೆ. ಈಗ ಸಾರ್ವಜನಿಕ ಸಾರಿಗೆಯನ್ನು ಎಲೆಕ್ಟ್ರಿಕ್'ಕರಣಗೊಳಿಸುವತ್ತ ಗಮನ ಹರಿಸಲಾಗಿದೆ.

ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Electric vehicle sales increased in last three years. Read in Kannada.
Story first published: Wednesday, March 17, 2021, 20:50 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X