ಇವಿ ನೀತಿ: ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಎಲೆಕ್ಟ್ರಿಕ್ ವಾಹನಗಳ ಮಾರಾಟ!

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗುತ್ತಿದೆ.

ಇವಿ ನೀತಿ: ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಎಲೆಕ್ಟ್ರಿಕ್ ವಾಹನಗಳ ಮಾರಾಟ!

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಈಗಾಗಲೇ ಫೇಮ್ 2 ಸಬ್ಸಡಿ ಯೋಜನೆಯನ್ನು ಜಾರಿಗೆ ತಂದಿದ್ದು, ಹೊಸ ಯೋಜನೆಯಡಿ ಎಲೆಕ್ಟ್ರಿಕ್ ವಾಹನ ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದೆ.

ಇವಿ ನೀತಿ: ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಎಲೆಕ್ಟ್ರಿಕ್ ವಾಹನಗಳ ಮಾರಾಟ ಪ್ರಮಾಣ

ಹಾಗೆಯೇ ಫೇಮ್ 2 ಯೋಜನೆಯೊಂದಿಗೆ ವಿವಿಧ ರಾಜ್ಯ ಸರ್ಕಾರಗಳು ಸಹ ತಮ್ಮದೇ ಆದ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿದ್ದು, ಕೇಂದ್ರ ಸರ್ಕಾರದ ಯೋಜನೆಗಳ ಜೊತಗೆ ರಾಜ್ಯ ಸರ್ಕಾರಗಳು ಸಹ ಇವಿ ವಾಹನ ಬಳಕೆ ಹೆಚ್ಚಳಕ್ಕೆ ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತಂದಿವೆ.

ಇವಿ ನೀತಿ: ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಎಲೆಕ್ಟ್ರಿಕ್ ವಾಹನಗಳ ಮಾರಾಟ ಪ್ರಮಾಣ

ದೆಹಲಿ ಸರ್ಕಾರವು ಇತರೆ ರಾಜ್ಯಗಳಿಗಳಿಂತಲೂ ಹೊಸ ಇವಿ ನೀತಿ ಅಡಿಯಲ್ಲಿ ಪರಿಸರಕ್ಕೆ ಪೂರಕವಾದ ವಾಹನಗಳ ನೋಂದಣಿಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿದಾರರನ್ನು ಉತ್ತೇಜಿಸಲು ಗರಿಷ್ಠ ಸಬ್ಸಡಿ ಮತ್ತು ನೋಂದಣಿ ಶುಲ್ಕ ಮನ್ನಾದಂತಹ ಯೋಜನೆಗಳನ್ನು ಪ್ರಕಟಿಸಿ ಇವಿ ವಾಹನ ಬಳಕೆಯನ್ನು ಉತ್ತೇಜಿಸುತ್ತಿದೆ.

ಇವಿ ನೀತಿ: ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಎಲೆಕ್ಟ್ರಿಕ್ ವಾಹನಗಳ ಮಾರಾಟ!

ಹೊಸ ಸಬ್ಸಡಿ ಯೋಜನೆಯ ಪರಿಣಾಮ ದೆಹಲಿಯಲ್ಲಿ ಇವಿ ವಾಹನಗಳ ನೋಂದಣಿ ತಿಂಗಳಿನಿಂದ ತಿಂಗಳಿಗೆ ದ್ವಿಗುಣಗೊಳ್ಳುತ್ತಿದ್ದು, ಜುಲೈ ಅವಧಿಯಲ್ಲಿ ಸುಮಾರು ಶೇ.20ರಷ್ಟು ಬೆಳವಣಿಗೆ ಕಂಡುಬಂದಿದೆ.

ಇವಿ ನೀತಿ: ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಎಲೆಕ್ಟ್ರಿಕ್ ವಾಹನಗಳ ಮಾರಾಟ ಪ್ರಮಾಣ

ದೆಹಲಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ರಾಜ್ಯ ಸರ್ಕಾರವು ಸಬ್ಸಿಡಿ ಆರಂಭಿಸಿದ ನಂತರ ಇದುವರೆಗೆ ಸುಮಾರು 1,12,321 ಎಲೆಕ್ಟ್ರಿಕ್ ವಾಹನಗಳು ನೋಂದಣಿಯಾಗಿದ್ದು, ಎಲೆಕ್ಟ್ರಿಕ್ ವಾಹನಗಳನ್ನು ಬಳಸುವ ಅಗತ್ಯತೆಯ ಬಗ್ಗೆ ಸಾರ್ವಜನಿಕರಲ್ಲಿ ಸಕ್ರಿಯವಾಗಿ ಜಾಗೃತಿ ಮೂಡಿಸುತ್ತಿದೆ.

ಇವಿ ನೀತಿ: ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಎಲೆಕ್ಟ್ರಿಕ್ ವಾಹನಗಳ ಮಾರಾಟ ಪ್ರಮಾಣ

ಜೊತೆಗೆ ಇವಿ ವಾಹನಗಳಿಗೆ ಸೂಕ್ತವಾದ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಹೆಚ್ಚಿಸಲು ನಿರಂತರವಾಗಿ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿದ್ದು, ಸದ್ಯ ದೆಹಲಿ ಮತ್ತು ಎನ್‌ಸಿಆರ್‌ನಲ್ಲಿ ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಸುಮಾರು 100ಕ್ಕೂ ಹೆಚ್ಚು ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳು ಕಾರ್ಯನಿರ್ವಹಿಸುತ್ತಿವೆ.

ಇವಿ ನೀತಿ: ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಎಲೆಕ್ಟ್ರಿಕ್ ವಾಹನಗಳ ಮಾರಾಟ!

ಈ ಮೂಲಕ ರಾಜ್ಯ ಸರ್ಕಾರವು ದೆಹಲಿಯನ್ನು ಭಾರತದ ಎಲೆಕ್ಟ್ರಿಕ್ ವಾಹನದ ರಾಜಧಾನಿಯನ್ನಾಗಿ ಮಾಡಲು ಪ್ರಯತ್ನಿಸುತ್ತಿದ್ದು, ಹೊಸ ಯೋಜನೆಗಳ ಯಶಸ್ವಿ ಅನುಷ್ಠಾನಕ್ಕೆ ಎಲ್ಲಾ ಪ್ರಯತ್ನಗಳನ್ನು ಕೈಗೊಂಡಿದೆ.

ಇವಿ ನೀತಿ: ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಎಲೆಕ್ಟ್ರಿಕ್ ವಾಹನಗಳ ಮಾರಾಟ!

ದೆಹಲಿಯನ್ನು ಹೊರತುಪಡಿಸಿ ಗುಜರಾತ್ ಮತ್ತು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುತ್ತಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರಿಕೆಯಾಗುತ್ತಿರುವುದರಿಂದ ಹೊಸ ವಾಹನ ಖರೀದಿದಾರರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಆದ್ಯತೆ ನೀಡುತ್ತಿದ್ದಾರೆ.

ಇವಿ ನೀತಿ: ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಎಲೆಕ್ಟ್ರಿಕ್ ವಾಹನಗಳ ಮಾರಾಟ!

ಇನ್ನು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಇಲಾಖೆಯು ಪ್ರಮುಖ ಪ್ರಕಟಣೆಯನ್ನು ಹೊರಡಿಸಿದ್ದು, ಇದರನ್ವಯ ಎಲೆಕ್ಟ್ರಿಕ್ ವಾಹನಗಳಿಗೆ ನೋಂದಣಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಇವಿ ನೀತಿ: ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಎಲೆಕ್ಟ್ರಿಕ್ ವಾಹನಗಳ ಮಾರಾಟ!

ಎಲೆಕ್ಟ್ರಿಕ್ ವಾಹನಗಳ ದಾಖಲೆಯನ್ನು ನವೀಕರಿಸಲು ಸಹ ಯಾವುದೇ ಶುಲ್ಕವನ್ನು ಪಾವತಿಸುವಂತಿಲ್ಲ. ಇದಕ್ಕೂ ವಿನಾಯಿತಿ ನೀಡಲಾಗಿದೆ. ಆಗಸ್ಟ್ 2 ರಂದು ಎಲೆಕ್ಟ್ರಿಕ್ ವಾಹನಗಳಿಗೆ ನೋಂದಣಿ ಶುಲ್ಕ ಹಾಗೂ ನೋಂದಣಿ ನವೀಕರಣ ಶುಲ್ಕವನ್ನು ಪಾವತಿಸುವುದರಿಂದ ವಿನಾಯಿತಿ ನೀಡಲಾಗಿದೆ.

ಇವಿ ನೀತಿ: ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಎಲೆಕ್ಟ್ರಿಕ್ ವಾಹನಗಳ ಮಾರಾಟ ಪ್ರಮಾಣ

ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಈ ಘೋಷಣೆ ಮಾಡಲಾಗಿದೆ ಎಂದು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆ ಹೇಳಿದೆ. ಈ ಘೋಷಣೆಯು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಮುಂದಾಗಿರುವವರಲ್ಲಿ ಉತ್ಸಾಹವನ್ನು ಉಂಟು ಮಾಡಿದೆ.

ಇವಿ ನೀತಿ: ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಎಲೆಕ್ಟ್ರಿಕ್ ವಾಹನಗಳ ಮಾರಾಟ!

ಮೇ 27 ರಂದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಇಲಾಖೆ ಕರಡು ಅಧಿಸೂಚನೆ ಹೊರಡಿಸಿ ಎಲೆಕ್ಟ್ರಿಕ್ ವಾಹನಗಳಿಗೆ ನೋಂದಣಿ ಶುಲ್ಕ ಹಾಗೂನೋಂದಣಿ ನವೀಕರಣ ಶುಲ್ಕದಿಂದ ವಿನಾಯಿತಿ ನೀಡುವ ಯೋಜನೆಯನ್ನು ಪ್ರಸ್ತಾಪಿಸಿತು.

ಇವಿ ನೀತಿ: ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಎಲೆಕ್ಟ್ರಿಕ್ ವಾಹನಗಳ ಮಾರಾಟ!

ಕರಡು ಸೂಚನೆಯನ್ನು ಪ್ರಕಟಿಸಿದ 30 ದಿನಗಳ ಒಳಗಾಗಿ ಸಾರ್ವಜನಿಕರು ಹಾಗೂ ಮಧ್ಯಸ್ಥಗಾರರಿಗೆ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸುವಂತೆ ತಿಳಿಸಲಾಗಿತ್ತು. ಆದರೆ ಕರಡು ಪ್ರಕಟಣೆಗೆ ಯಾವುದೇ ಆಕ್ಷೇಪಗಳು ಇದುವರೆಗೂ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಈ ಮಹತ್ವದ ಘೋಷಣೆಯನ್ನು ಮಾಡಲಾಗಿದೆ.

ಇವಿ ನೀತಿ: ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಎಲೆಕ್ಟ್ರಿಕ್ ವಾಹನಗಳ ಮಾರಾಟ!

ಇದರೊಂದಿಗೆ ಕೇಂದ್ರ ಸರ್ಕಾರವು ಫೇಮ್ 2 ತಿದ್ದುಪಡಿಯ ಪರಿಣಾಮ ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚುವರಿಯಾಗಿ ಇದೀಗ ರೂ. 10 ಸಾವಿರದಿಂದ ರೂ. 30 ಸಾವಿರ ಹೆಚ್ಚುವರಿ ಸಬ್ಸಡಿ ದೊರೆಯುತ್ತಿದ್ದು, ಹೊಸ ಸಬ್ಸಡಿ ತಿದ್ದುಪಡಿ ಘೋಷಣೆ ಮಾಡುತ್ತಿದ್ದದಂತೆ ಎಥರ್ ಸೇರಿದಂತೆ ಪ್ರಮುಖ ಕಂಪನಿಗಳು ತಮ್ಮ ವಾಹನಗಳ ಬೆಲೆ ಕಡಿತ ಮಾಡಿವೆ.

Most Read Articles

Kannada
English summary
Electric vehicles sales increased double in national capital
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X