ಚಾರ್ಜಿಂಗ್ ನಿಲ್ದಾಣಗಳ ಹೆಚ್ಚಳಕ್ಕಾಗಿ ರಾಜಧಾನಿ ದೆಹಲಿಯಲ್ಲಿ ಹೊಸ ಇವಿ ನೀತಿ ಜಾರಿ

ಹೆಚ್ಚುತ್ತಿರುವ ಇಂಧನಗಳ ಪರಿಣಾಮ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ.

ಚಾರ್ಜಿಂಗ್ ನಿಲ್ದಾಣಗಳ ಹೆಚ್ಚಳಕ್ಕಾಗಿ ರಾಜಧಾನಿ ದೆಹಲಿ ಹೊಸ ಇವಿ ನೀತಿ ಜಾರಿ

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಈಗಾಗಲೇ ಫೇಮ್ 2 ಸಬ್ಸಡಿ ಯೋಜನೆಯನ್ನು ಜಾರಿಗೆ ತಂದಿದ್ದು, ಹೊಸ ಯೋಜನೆಯಡಿ ಎಲೆಕ್ಟ್ರಿಕ್ ವಾಹನ ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದೆ.

ಚಾರ್ಜಿಂಗ್ ನಿಲ್ದಾಣಗಳ ಹೆಚ್ಚಳಕ್ಕಾಗಿ ರಾಜಧಾನಿ ದೆಹಲಿ ಹೊಸ ಇವಿ ನೀತಿ ಜಾರಿ

ಹಾಗೆಯೇ ಫೇಮ್ 2 ಯೋಜನೆಯೊಂದಿಗೆ ವಿವಿಧ ರಾಜ್ಯ ಸರ್ಕಾರಗಳು ಸಹ ತಮ್ಮದೇ ಆದ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿದ್ದು, ಕೇಂದ್ರ ಸರ್ಕಾರದ ಯೋಜನೆಗಳ ಜೊತಗೆ ರಾಜ್ಯ ಸರ್ಕಾರಗಳು ಸಹ ಇವಿ ವಾಹನ ಬಳಕೆ ಹೆಚ್ಚಳಕ್ಕೆ ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತಂದಿವೆ.

ಚಾರ್ಜಿಂಗ್ ನಿಲ್ದಾಣಗಳ ಹೆಚ್ಚಳಕ್ಕಾಗಿ ರಾಜಧಾನಿ ದೆಹಲಿ ಹೊಸ ಇವಿ ನೀತಿ ಜಾರಿ

ದೆಹಲಿ ಸರ್ಕಾರವು ಇತರೆ ರಾಜ್ಯಗಳಿಗಳಿಂತಲೂ ಹೊಸ ಇವಿ ನೀತಿ ಅಡಿಯಲ್ಲಿ ಪರಿಸರಕ್ಕೆ ಪೂರಕವಾದ ವಾಹನಗಳ ನೋಂದಣಿಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿದಾರರನ್ನು ಉತ್ತೇಜಿಸಲು ಗರಿಷ್ಠ ಸಬ್ಸಡಿ ಮತ್ತು ನೋಂದಣಿ ಶುಲ್ಕ ಮನ್ನಾದಂತಹ ಯೋಜನೆಗಳನ್ನು ಪ್ರಕಟಿಸಿ ಇವಿ ವಾಹನ ಬಳಕೆ ಉತ್ತೇಜಿಸುತ್ತಿದೆ.

ಚಾರ್ಜಿಂಗ್ ನಿಲ್ದಾಣಗಳ ಹೆಚ್ಚಳಕ್ಕಾಗಿ ರಾಜಧಾನಿ ದೆಹಲಿ ಹೊಸ ಇವಿ ನೀತಿ ಜಾರಿ

ಎಲೆಕ್ಟ್ರಿಕ್ ವಾಹನಗಳ ಖರೀದಿದಾರರಿಗೆ ದೆಹಲಿ ಸರ್ಕಾರವು ಈಗಾಗಲೇ ಗರಿಷ್ಠ ಪ್ರಮಾಣದ ಸಬ್ಸಡಿ ಯೋಜನೆಯನ್ನು ಜಾರಿಗೆ ತಂದಿದ್ದು, ರಸ್ತೆ ತೆರಿಗೆ ಮತ್ತು ವಾಹನ ನೋಂದಣಿಯಿಂದಲೂ ವಿನಾಯ್ತಿ ನೀಡಲಾಗಿದೆ. ಇದರ ಪರಿಣಾಮ ರಾಷ್ಟ್ರ ರಾಜಧಾನಿಯಲ್ಲಿ ಇವಿ ವಾಹನಗಳ ಸಂಖ್ಯೆಯು ಕಳೆದ ಕೆಲ ತಿಂಗಳ ಅವಧಿಯಲ್ಲಿ 9 ಸಾವಿರಕ್ಕೆ(ನೊಂದಣಿಯಾಗಿರುವ) ಏರಿಕೆಯಾಗಿದ್ದು, ಇವುಗಳಿಗೆ ಸೂಕ್ತವಾದ ಫಾಸ್ಟ್ ಚಾರ್ಜಿಂಗ್ ಸೌಲಭ್ಯದ ಕೊರತೆ ಎದ್ದುಕಾಣುತ್ತಿದೆ.

ಚಾರ್ಜಿಂಗ್ ನಿಲ್ದಾಣಗಳ ಹೆಚ್ಚಳಕ್ಕಾಗಿ ರಾಜಧಾನಿ ದೆಹಲಿ ಹೊಸ ಇವಿ ನೀತಿ ಜಾರಿ

ದೆಹಲಿ ಮತ್ತು ಎನ್‌ಸಿಆರ್‌ನಲ್ಲಿ ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದ 77 ಚಾರ್ಜಿಂಗ್ ನಿಲ್ದಾಣಗಳು ಕಾರ್ಯನಿರ್ವಹಿಸುತ್ತಿದ್ದು, ಸದ್ಯ ಚಾಲನೆಯಲ್ಲಿರುವ ಎಲೆಕ್ಟ್ರಿಕ್ ವಾಹನಗಳಿಗೆ ಲಭ್ಯವಿರುವ ಚಾರ್ಜಿಂಗ್ ನಿಲ್ದಾಣಗಳು ಸಾಕಾಗುತ್ತಿಲ್ಲ.

ಚಾರ್ಜಿಂಗ್ ನಿಲ್ದಾಣಗಳ ಹೆಚ್ಚಳಕ್ಕಾಗಿ ರಾಜಧಾನಿ ದೆಹಲಿ ಹೊಸ ಇವಿ ನೀತಿ ಜಾರಿ

ಒಂದು ಮಾಹಿತಿ ಪ್ರಕಾರ, ದೆಹಲಿಯಲ್ಲಿ ನೋಂದಣಿಯಾಗಿರುವ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆಯು 9 ಸಾವಿರವಾಗಿದ್ದರೆ ನೋಂದಣಿಯಾಗದೆ ಕಾರ್ಯಾಚರಣೆಯಲ್ಲಿರುವ ಇವಿ ವಾಹನ ಸಂಖ್ಯೆಗಳು ಸುಮಾರು 60 ಸಾವಿರದಷ್ಟು ಇರಬಹುದೆಂದು ಅಂದಾಜಿಸಲಾಗಿದ್ದು, ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸಲು ದೆಹಲಿ ಹೊಸ ನೀತಿಯೊಂದನ್ನು ಜಾರಿಗೆ ತಂದಿದೆ.

ಚಾರ್ಜಿಂಗ್ ನಿಲ್ದಾಣಗಳ ಹೆಚ್ಚಳಕ್ಕಾಗಿ ರಾಜಧಾನಿ ದೆಹಲಿ ಹೊಸ ಇವಿ ನೀತಿ ಜಾರಿ

ಸರ್ಕಾರದೊಂದಿಗೆ ಸಹಭಾಗಿತ್ವದಲ್ಲಿ ಚಾರ್ಜಿಂಗ್ ನಿಲ್ದಾಣ ನಿರ್ಮಾಣ ಮತ್ತು ನಿರ್ವಹಣೆ ಮಾಡುವ ಖಾಸಗಿ ವ್ಯಕ್ತಿಗಳಿಗೆ ಸರಳ ನಿಯಮಗಳನ್ನು ಜಾರಿಗೆ ತಂದಿದ್ದು, ಸ್ಥಳಾವಕಾಶದ ಲಭ್ಯತೆ ಮೇಲೆ ಇವಿ ಚಾರ್ಜಿಂಗ್ ನಿಲ್ದಾಣ ತೆರೆಯಲು ದೆಹಲಿ ಸರ್ಕಾರ ಅವಕಾಶ ನೀಡುತ್ತಿದೆ.

ಚಾರ್ಜಿಂಗ್ ನಿಲ್ದಾಣಗಳ ಹೆಚ್ಚಳಕ್ಕಾಗಿ ರಾಜಧಾನಿ ದೆಹಲಿ ಹೊಸ ಇವಿ ನೀತಿ ಜಾರಿ

ಚಾರ್ಜಿಂಗ್ ನಿಲ್ದಾಣ ನಿರ್ಮಾಣಕ್ಕಾಗಿ ಸಾರ್ವಜನಿಕ ನೀಡಲಾಗುತ್ತಿದ್ದ ಪರವಾನಿಗೆ ಪತ್ರವನ್ನು ಸರಳಗೊಳಿಸಿರುವ ದೆಹಲಿ ಸರ್ಕಾರವು ಮುಂದಿನ ಒಂದು ವರ್ಷದೊಳಗೆ ಸಾವಿರಾರು ಹೊಸ ಚಾರ್ಜಿಂಗ್ ನಿಲ್ದಾಣ ನಿರ್ಮಾಣ ಮಾಡುವ ಗುರಿಹೊಂದಿದ್ದು, ಶೀಘ್ರದಲ್ಲೇ ಹೊಸ ಪರವಾನಿಗೆ ಪತ್ರ ವಿತರಣೆಯನ್ನು ಆರಂಭಿಸಲಿದೆ.

ಚಾರ್ಜಿಂಗ್ ನಿಲ್ದಾಣಗಳ ಹೆಚ್ಚಳಕ್ಕಾಗಿ ರಾಜಧಾನಿ ದೆಹಲಿ ಹೊಸ ಇವಿ ನೀತಿ ಜಾರಿ

ಇನ್ನು ಕೇಂದ್ರ ಸರ್ಕಾರವು ತುರ್ತಾಗಿ ಎಲೆಕ್ಟ್ರಿಕ್ ವಾಹನ ಬಳಕೆಯತ್ತ ಹೊಸ ವಾಹನ ಸವಾರರನ್ನು ಸೆಳೆಯುವ ಪ್ರಯತ್ನ ನಡೆಸಿದ್ದು, ಫೇಮ್ 2 ತಿದ್ದುಪಡಿಯ ಮೂಲಕ ಇವಿ ದ್ವಿಚಕ್ರ ವಾಹನಗಳಿಗೆ ಹೆಚ್ಚುವರಿ ಸಬ್ಸಡಿ ನೀಡಲು ಒಪ್ಪಿಗೆ ಸೂಚಿಸಿದೆ.

ಚಾರ್ಜಿಂಗ್ ನಿಲ್ದಾಣಗಳ ಹೆಚ್ಚಳಕ್ಕಾಗಿ ರಾಜಧಾನಿ ದೆಹಲಿ ಹೊಸ ಇವಿ ನೀತಿ ಜಾರಿ

ಫೇಮ್ 2 ತಿದ್ದುಪಡಿಯ ಪರಿಣಾಮ ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚುವರಿಯಾಗಿ ಇದೀಗ ರೂ. 10 ಸಾವಿರದಿಂದ ರೂ.15 ಸಾವಿರ ಹೆಚ್ಚುವರಿ ಸಬ್ಸಡಿ ದೊರೆಯುತ್ತಿದ್ದು, ಹೊಸ ಸಬ್ಸಡಿ ತಿದ್ದುಪಡಿ ಘೋಷಣೆ ಮಾಡುತ್ತಿದ್ದದಂತೆ ಎಥರ್ ಸೇರಿದಂತೆ ಪ್ರಮುಖ ಕಂಪನಿಗಳು ತಮ್ಮ ವಾಹನಗಳ ಬೆಲೆ ಕಡಿತ ಮಾಡಿದೆ. ಹೀಗಾಗಿ ಕೇಂದ್ರ ಯೋಜನೆಗೆ ಪೂರಕವಾಗಿ ದೆಹಲಿ ಸರ್ಕಾರವು ಚಾರ್ಜಿಂಗ್ ನಿಲ್ದಾಣ ಹೆಚ್ಚಳಕ್ಕೆ ಹೊಸ ನಿಯಮ ಜಾರಿಗೆ ತರುತ್ತಿದೆ.

Most Read Articles

Kannada
English summary
EV Charger Installation In Delhi Becomes Easier. Read in Kannada.
Story first published: Wednesday, June 16, 2021, 10:31 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X