ಎಲೆಕ್ಟ್ರಿಕ್ ಚಾರ್ಜಿಂಗ್ ಪಾಯಿಂಟ್‌ಗಳನ್ನು ಹೆಚ್ಚಿಸಲು ಹೊಸ ಯೋಜನೆಗೆ ಚಾಲನೆ ನೀಡಿದ ಹೆಚ್‌ಪಿ ಪೆಟ್ರೋಲ್
ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ವಿವಿಧ ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರವು ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ.

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ.

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆ ಸಾಕಷ್ಟು ಸಹಕಾರಿಯಾಗಿದ್ದು, ಇವಿ ವಾಹನಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣವು ಇದೀಗ ಹೊಸ ಸವಾಲಾಗಿದೆ.

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಖರೀದಿ ಮಾಡುವ ಗ್ರಾಹಕರಿಗೆ ಮಾತ್ರವಲ್ಲ ಉತ್ಪಾದಕ ಕಂಪನಿಗಳಿಗೂ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಇವಿ ವಾಹನಗಳು ಹೆಚ್ಚಿದಂತೆ ಅವುಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣಕ್ಕೂ ಯೋಜನೆ ಜಾರಿಗೆ ತರಲಾಗಿದೆ.

ಸದ್ಯ ಕೇಂದ್ರ ಸರ್ಕಾರದ ಹೊಸ ಯೋಜನೆಗೆ ಅನುಗುಣವಾಗಿ ವಿವಿಧ ನಗರಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆ ನಿಧಾನವಾಗಿ ಹೆಚ್ಚಳವಾಗುತ್ತಿದ್ದು, ಖಾಸಗಿ ಮತ್ತು ಸರ್ಕಾರಿ ಸಹಭಾಗೀತ್ವದಲ್ಲಿ ಚಾರ್ಜಿಂಗ್ ನಿಲ್ದಾಣಗಳು ಒಂದೊಂದಾಗಿ ಕಾರ್ಯನಿರ್ವಹಣೆ ಆರಂಭಿಸುತ್ತಿವೆ. ಸರ್ಕಾರಿ ಸ್ವಾಮ್ಯದ ಕನ್ವರ್ಜೆನ್ಸ್ ಎನರ್ಜಿ ಸರ್ವೀಸಸ್ ಲಿಮಿಟೆಡ್ (ಸಿಇಎಸ್ಎಲ್) ಸಂಸ್ಥೆಯು ಕೂಡಾ ದೇಶಾದ್ಯಂತ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸುತ್ತಿದ್ದು, ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೆಷನ್ ಲಿಮಿಟೆಡ್(ಹೆಚ್‌ಪಿಸಿಎಲ್)ನೊಂದಿಗೆ ಹೊಸ ಒಪ್ಪಂದ ಮಾಡಿಕೊಂಡಿದೆ.

ಹೊಸ ಒಪ್ಪಂದದ ಪ್ರಕಾರ ಸಿಇಎಸ್ಎಲ್ ಸಂಸ್ಥೆಯು ಹೆಚ್‌ಪಿ ಪೆಟ್ರೋಲ್ ಬಂಕ್‌ಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಒಪ್ಪಿಗೆ ಸೂಚಿಸಿದ್ದು, ಮುಂದಿನ 10 ವರ್ಷಗಳ ಹೊಸ ಒಪ್ಪಂದ ಚಾಲ್ತಿಯಲ್ಲಿರಲಿದೆ.

ಸಿಇಎಸ್ಎಲ್ ಸಂಸ್ಥೆಯು ಗ್ರಾಹಕರ ಬೇಡಿಕೆ ಆಧಾರದ ಮೇಲೆ ಡಿಸಿ ಫಾಸ್ಟ್ ಚಾರ್ಜಿಂಗ್ ಮತ್ತು ಎಸಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ನಿರ್ಧರಿಸಲಾಗಿದ್ದು, ಮುಂದಿನ 2 ವರ್ಷದಲ್ಲಿ 2 ಸಾವಿರಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ಗಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳಿಗೆ ಚಾಲನೆ ನೀಡಲು ನಿರ್ಧರಿಸಲಾಗಿದೆ.

ಇನ್ನು ಖಾಸಗಿ ಸಹಭಾಗಿತ್ವದಲ್ಲೂ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಾಗುತ್ತಿದ್ದು, ಅತಿ ಕಡಿಮೆ ಅವಧಿಯಲ್ಲಿ ಹೆಚ್ಚಿನ ಮಟ್ಟದ ಚಾರ್ಜ್ ಮಾಡಬಹುದಾಗಿದೆ. ಇದರಿಂದ ಕೇವಲ ನಗರಪ್ರದೇಶಗಳಿಗೆ ಮಾತ್ರ ಸೀಮಿತವಾಗಿರುವ ಇವಿ ವಾಹನಗಳ ಮೂಲಕ ದೂರದ ಪ್ರಯಾಣಕ್ಕೂ ಅನುಕೂಲಕರವಾಗಲಿದ್ದು, ಹೆಚ್ಚುತ್ತಿರುವ ಇಂಧನ ಬೆಲೆ ತಗ್ಗಿಸಲು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಮಟ್ಟದ ವಿನಾಯ್ತಿಗಳನ್ನು ನೀಡುತ್ತಿದೆ.

ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಫೇಮ್ 2 ಸಬ್ಸಡಿ ಯೋಜನೆಯೊಂದಿಗೆ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳಿಗೆ ಮತ್ತು ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಫೇಮ್ 2 ಯೋಜನೆ ಅಡಿ ಇದೀಗ ಮತ್ತೆ ಇವಿ ವಾಹನಗಳ ಖರೀದಿ ಮೇಲೆ ಪ್ರೋತ್ಸಾಹ ಧನ ಹೆಚ್ಚಿಸಿದೆ.

ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಈಗಾಗಲೇ ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಆದರೆ ಭಾರತದಲ್ಲಿ ಹೆಚ್ಚುತ್ತಿರುವ ಇಂಧನ ಬೆಲೆಯನ್ನು ತಗ್ಗಿಸಲು ತುರ್ತಾಗಿ ಎಲೆಕ್ಟ್ರಿಕ್ ವಾಹನಗಳನ್ನು ಬಳಕೆ ಹೆಚ್ಚಿಸಲು ಮುಂದಾಗಿರುವ ಕೇಂದ್ರ ಸರ್ಕಾರವು ಫೇಮ್ 2 ಯೋಜನೆಗೆ ಕೆಲವು ತಿದ್ದುಪಡಿ ತರುವ ಮೂಲಕ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಸಬ್ಸಡಿ ಪ್ರಮಾಣವನ್ನು ಚಾಲ್ತಿಯಲ್ಲಿರುವ ಪ್ರಮಾಣಕ್ಕಿಂತ ಶೇ.50 ರಷ್ಟು ಹೆಚ್ಚಳ ಮಾಡಿದೆ.

ಹೊಸ ತಿದ್ದುಪಡಿಯ ಮೂಲಕ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಸಬ್ಸಿಡಿ ಪ್ರಮಾಣವನ್ನು ಬ್ಯಾಟರಿ ಪ್ಯಾಕ್ ಆಧರಿಸಿ ಪ್ರತಿ ಕಿಲೋವ್ಯಾಟ್‌ಗೆ ರೂ. 15 ಸಾವಿರ ಏರಿಕೆ ಮಾಡಲಾಗಿದ್ದು, ಹೊಸ ತಿದ್ದುಪಡಿಯ ನಂತರ ಪ್ರತಿ ಇವಿ ಸ್ಕೂಟರ್ ಖರೀದಿ ಮೇಲೆ ಗ್ರಾಹಕರು ರೂ. 5 ಸಾವಿರದಿಂದ ರೂ.30 ಸಾವಿರದಷ್ಟು ಉಳಿತಾಯ ಮಾಡಬಹುದಾಗಿದೆ.


Click it and Unblock the Notifications