ಕೇಂದ್ರ ಸರ್ಕಾರದ ಸಬ್ಸಡಿ ಯೋಜನೆಯಡಿ ಕಾರ್ಯನಿರ್ವಹಣೆ ಆರಂಭಿಸಿದ ಸಾವಿರಾರು ಇವಿ ಚಾರ್ಜಿಂಗ್ ನಿಲ್ದಾಣಗಳು

ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಕೇಂದ್ರ ಸರ್ಕಾರವು ಫೇಮ್ ಸಬ್ಸಡಿ ಯೋಜನೆ ಅಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗಾಗಿ ದೇಶಾದ್ಯಂತ ಸಾವಿರಾರು ಹೊಸ ಚಾರ್ಜಿಂಗ್ ನಿಲ್ದಾಣಗಳಿಗೆ ಚಾಲನೆ ನೀಡಿದೆ.

ಕೇಂದ್ರ ಸರ್ಕಾರದ ಸಬ್ಸಡಿ ಯೋಜನೆಯಡಿ ಕಾರ್ಯನಿರ್ವಹಣೆ ಆರಂಭಿಸಿದ ಸಾವಿರಾರು ಇವಿ ಚಾರ್ಜಿಂಗ್ ನಿಲ್ದಾಣಗಳು

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ. ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಫೇಮ್ 2 ಸಬ್ಸಡಿ ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳಿಗೆ ಮತ್ತು ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದೆ.

ಕೇಂದ್ರ ಸರ್ಕಾರದ ಸಬ್ಸಡಿ ಯೋಜನೆಯಡಿ ಕಾರ್ಯನಿರ್ವಹಣೆ ಆರಂಭಿಸಿದ ಸಾವಿರಾರು ಇವಿ ಚಾರ್ಜಿಂಗ್ ನಿಲ್ದಾಣಗಳು

ಹಾಗೆಯೇ ಫೇಮ್ 2 ಯೋಜನೆಯೊಂದಿಗೆ ವಿವಿಧ ರಾಜ್ಯ ಸರ್ಕಾರಗಳು ಸಹ ತಮ್ಮದೇ ಆದ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿದ್ದು, ಫೇಮ್ 2 ಯೋಜನೆಯ ಸಬ್ಸಡಿ ಜೊತೆಗೆ ವಿವಿಧ ರಾಜ್ಯದ ಸರ್ಕಾರಗಳು ಸಹ ಕೆಲವು ವಿನಾಯ್ತಿಗಳನ್ನು ನೀಡುತ್ತಿವೆ.

ಕೇಂದ್ರ ಸರ್ಕಾರದ ಸಬ್ಸಡಿ ಯೋಜನೆಯಡಿ ಕಾರ್ಯನಿರ್ವಹಣೆ ಆರಂಭಿಸಿದ ಸಾವಿರಾರು ಇವಿ ಚಾರ್ಜಿಂಗ್ ನಿಲ್ದಾಣಗಳು

ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಕೇಂದ್ರ ಸರ್ಕಾರದ ಸಬ್ಸಡಿ ಯೋಜನೆಯಡಿ ಕಾರ್ಯನಿರ್ವಹಣೆ ಆರಂಭಿಸಿದ ಸಾವಿರಾರು ಇವಿ ಚಾರ್ಜಿಂಗ್ ನಿಲ್ದಾಣಗಳು

ಜೊತೆಗೆ ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣಕ್ಕೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸರ್ಕಾರಿ ಹಾಗೂ ಖಾಸಗಿ ಕಂಪನಿಗಳ ಸಹಭಾಗಿತ್ವದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರದ ಹೊಸ ಯೋಜನೆ ಅಡಿ ಇದುವರೆಗೆ ದೇಶಾದ್ಯಂತ ಸಾವಿರಾರು ಚಾರ್ಜಿಂಗ್ ನಿಲ್ದಾಣಗಳು ಆರಂಭವಾಗಿದ್ದು, ಕರ್ನಾಟಕದಲ್ಲೂ 209 ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳು ಕಾರ್ಯನಿರ್ವಹಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಹೆಚ್ಚಿದಂತೆ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತಿದೆ.

ಕೇಂದ್ರ ಸರ್ಕಾರದ ಸಬ್ಸಡಿ ಯೋಜನೆಯಡಿ ಕಾರ್ಯನಿರ್ವಹಣೆ ಆರಂಭಿಸಿದ ಸಾವಿರಾರು ಇವಿ ಚಾರ್ಜಿಂಗ್ ನಿಲ್ದಾಣಗಳು

ಇನ್ನು ಕೇಂದ್ರ ಸರ್ಕಾರವು ಖಾಸಗಿ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣಕ್ಕೂ ಫೇಮ್ 2 ಯೋಜನೆ ಅಡಿ ಸಬ್ಸಡಿ ಪ್ರಕಟಿಸಿದ್ದು, ಹೊಸ ಯೋಜನೆಗಾಗಿ ಕೇಂದ್ರ ಸರ್ಕಾರವು ಒಟ್ಟು ರೂ.10 ಸಾವಿರ ಕೋಟಿ ಮೀಸಲಿಟ್ಟಿದೆ.

ಕೇಂದ್ರ ಸರ್ಕಾರದ ಸಬ್ಸಡಿ ಯೋಜನೆಯಡಿ ಕಾರ್ಯನಿರ್ವಹಣೆ ಆರಂಭಿಸಿದ ಸಾವಿರಾರು ಇವಿ ಚಾರ್ಜಿಂಗ್ ನಿಲ್ದಾಣಗಳು

ಫೇಮ್ ಯೋಜನೆಯ ಮೊದಲ ಹಂತದಲ್ಲಿ ಸುಮಾರು ರೂ. 3 ಸಾವಿರ ಕೋಟಿ ನೀಡಿದ್ದ ಕೇಂದ್ರ ಸರ್ಕಾರವು ಎರಡನೇ ಹಂತದ ಯೋಜನೆಗಾಗಿ ರೂ. 10 ಸಾವಿರ ಕೋಟಿ ಮೀಸಲಿಟ್ಟಿದೆ. ಎರಡನೇ ಹಂತದಲ್ಲಿ 62 ಸಾವಿರ ಪ್ಯಾಸೆಂಜರ್ ಕಾರುಗಳು ಮತ್ತು ಬಸ್‌ಗಳಿಗೆ, 15 ಲಕ್ಷ ದ್ವಿಚಕ್ರ ವಾಹನಗಳ ಮತ್ತು ತ್ರಿ ಚಕ್ರ ವಾಹನಗಳು ಸಬ್ಸಡಿ ನೀಡುವ ಯೋಜನೆ ಹೊಂದಲಾಗಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಕೇಂದ್ರ ಸರ್ಕಾರದ ಸಬ್ಸಡಿ ಯೋಜನೆಯಡಿ ಕಾರ್ಯನಿರ್ವಹಣೆ ಆರಂಭಿಸಿದ ಸಾವಿರಾರು ಇವಿ ಚಾರ್ಜಿಂಗ್ ನಿಲ್ದಾಣಗಳು

ಹೆಚ್ಚುತ್ತಿರುವ ಮಾಲಿನ್ಯ ತಡೆ ಜೊತೆಗೆ ಹೆಚ್ಚುತ್ತಿರುವ ಇಂಧನ ಬಳಕೆ ಪ್ರಮಾಣವನ್ನು ತಗ್ಗಿಸಲು ಇದರ ಪ್ರಮುಖ ಉದ್ದೇಶವಾಗಿದ್ದು, ಫೇಮ್ 2 ಯೋಜನೆ ಅಡಿ ಒಟ್ಟು 7 ಸಾವಿರ ಇ-ಬಸ್‌ಗಳು, 5 ಲಕ್ಷ ತ್ರಿಚಕ್ರ ಇವಿ ವಾಹನಗಳು, 55 ಸಾವಿರ ಎಲೆಕ್ಟ್ರಿಕ್ ಕಾರುಗಳು ಮತ್ತು 10 ಲಕ್ಷ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಸಬ್ಸಿಡಿ ಸಿಗಲಿದೆ.

ಕೇಂದ್ರ ಸರ್ಕಾರದ ಸಬ್ಸಡಿ ಯೋಜನೆಯಡಿ ಕಾರ್ಯನಿರ್ವಹಣೆ ಆರಂಭಿಸಿದ ಸಾವಿರಾರು ಇವಿ ಚಾರ್ಜಿಂಗ್ ನಿಲ್ದಾಣಗಳು

ಕೇಂದ್ರ ಸರ್ಕಾರವು ಇಂಧನಗಳ ಬೆಲೆ ಇಳಿಕೆಗೆ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಫೇಮ್ 2 ಯೋಜನೆಯು ನಮಗೆ ಭವಿಷ್ಯದಲ್ಲಿ ಉತ್ತಮ ಫಲಿತಾಂಶ ನೀಡಲಿದೆ ಎಂದು ಸಾರಿಗೆ ಸಚಿವ ನಿತಿನ್ ಗಡ್ಕರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಕೇಂದ್ರ ಸರ್ಕಾರದ ಸಬ್ಸಡಿ ಯೋಜನೆಯಡಿ ಕಾರ್ಯನಿರ್ವಹಣೆ ಆರಂಭಿಸಿದ ಸಾವಿರಾರು ಇವಿ ಚಾರ್ಜಿಂಗ್ ನಿಲ್ದಾಣಗಳು

ಎಲೆಕ್ಟ್ರಿಕ್ ವಾಹನಗಳ ಬಳಕೆಯೊಂದಿಗೆ ನಗರ ಪ್ರದೇಶಗಳಲ್ಲಿ ಹೆಚ್ಚಿರುವ ಮಾಲಿನ್ಯ ತಡೆಯುವುದರ ಜೊತೆಗೆ ಇಂಧನ ವೆಚ್ಚಗಳನ್ನು ಗಣನೀಯವಾಗಿ ಇಳಿಕೆ ಮಾಡಬಹುದಾಗಿದೆ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದು, ಹೊಸ ಯೋಜನೆಗಾಗಿ ಕೇಂದ್ರ ಸರ್ಕಾರದ ಜೊತೆ ವಿವಿಧ ರಾಜ್ಯಗಳು ಸಹ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿವೆ.

Most Read Articles

Kannada
English summary
EV Charging Stations Established Under Fame Schemes. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X