ಫಾಸ್ಟ್ ಚಾರ್ಜಿಂಗ್ ಸೌಲಭ್ಯಕ್ಕಾಗಿ ಹೊಸ ಯೋಜನೆಗೆ ಚಾಲನೆ ನೀಡಿದ ಇವೆರೆ ಮತ್ತು ಮ್ಯಾಡ್

ಬೆಂಗಳೂರು ಮೂಲದ ಇವೆರೆ(EVRE) ಮತ್ತು ಮ್ಯಾಡ್ ಅಬೌಟ್ ವ್ಹೀಲ್ಸ್(Mad About Wheels) ಕಂಪನಿಗಳು ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಹೆಚ್ಚಿಸಲು ಹೊಸ ಯೋಜನೆಯೊಂದನ್ನು ರೂಪಿಸಿದ್ದು, ಹೊಸ ಯೋಜನೆಯಡಿ ಇವೆರೆ ಮತ್ತು ಮ್ಯಾಡ್ ಕಂಪನಿಗಳು ಮುಂದಿನ ಮೂರು ವರ್ಷದಲ್ಲಿ 500 ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಮುಂದಾಗಿವೆ.

ಫಾಸ್ಟ್ ಚಾರ್ಜಿಂಗ್ ಸೌಲಭ್ಯಕ್ಕಾಗಿ ಹೊಸ ಯೋಜನೆಗೆ ಚಾಲನೆ ನೀಡಿದ ಇವೆರೆ ಮತ್ತು ಮ್ಯಾಡ್

ಇವಿ ವಾಹನಗಳಿಗೆ ಪೂರಕವಾಗಿ ಹಲವಾರು ಸ್ಟಾರ್ಟ್ಅಪ್ ಕಂಪನಿಗಳು ಇವಿ ಚಾರ್ಜಿಂಗ್ ಸೌಲಭ್ಯವನ್ನು ಹೆಚ್ಚಿಸುವತ್ತ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು, ಸ್ವದೇಶಿ ಕಂಪನಿಯಾಗಿರುವ ಇವೆರೆ ಮತ್ತು ಮ್ಯಾಡ್ ಕಂಪನಿಗಳು ಕೂಡಾ ರಾಜಧಾನಿ ಬೆಂಗಳೂರು ನೂರು ನಗರಗಳಲ್ಲಿ ಬೃಹತ್ ಇವಿ ಚಾರ್ಜಿಂಗ್ ನಿಲ್ದಾಣಗಳ ಜಾಲ ತೆರೆಯುವ ಯೋಜನೆ ರೂಪಿಸಿವೆ.

ಫಾಸ್ಟ್ ಚಾರ್ಜಿಂಗ್ ಸೌಲಭ್ಯಕ್ಕಾಗಿ ಹೊಸ ಯೋಜನೆಗೆ ಚಾಲನೆ ನೀಡಿದ ಇವೆರೆ ಮತ್ತು ಮ್ಯಾಡ್

ಭಾರತದಲ್ಲಿ ಹೆಚ್ಚುತ್ತಿರುವ ಇವಿ ವಾಹನಗಳಿಗೆ ಪೂರಕವಾಗಿ ವಿವಿಧ ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳು ಇವಿ ವಾಹನಗಳ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣ ಪ್ರಕ್ರಿಯೆಯನ್ನು ಹೆಚ್ಚಿಸಿದ್ದು, ಚಾರ್ಜಿಂಗ್ ಕೇಂದ್ರಗಳ ಹೆಚ್ಚಳಕ್ಕೆ ಪ್ರಮುಖ ಕಂಪನಿಗಳು ವಿಶೇಷ ಆಸಕ್ತಿ ವಹಿಸಿವೆ.

ಫಾಸ್ಟ್ ಚಾರ್ಜಿಂಗ್ ಸೌಲಭ್ಯಕ್ಕಾಗಿ ಹೊಸ ಯೋಜನೆಗೆ ಚಾಲನೆ ನೀಡಿದ ಇವೆರೆ ಮತ್ತು ಮ್ಯಾಡ್

ಇವೆರೆ ಕಂಪನಿಯು ಈಗಾಗಲೇ ಇವಿ ವಾಹನಗಳಿಗಾಗಿ ಸಣ್ಣ ಪ್ರಮಾಣದ ಚಾರ್ಜಿಂಗ್ ನಿಲ್ದಾಣಗಳ ಸೌಲಭ್ಯ ಒದಗಿಸುತ್ತಿದ್ದು, ಇವೆರೆ ಕಂಪನಿಯು ಇದೀಗ ಸಾರ್ವಜನಿಕ ಬಳಕೆಗಾಗಿ ಮ್ಯಾಡ್ ಜೊತೆಗೂಡಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ವಿಸ್ತರಿಸುತ್ತಿದೆ. ಹೊಸ ಒಪ್ಪಂದದ ಪ್ರಕಾರ ಇವೆರೆ ಕಂಪನಿಯು ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದ್ದರೆ ಚಾರ್ಜಿಂಗ್ ನಿಲ್ದಾಣ ನಿರ್ವಹಣೆ ಮತ್ತು ಗ್ರಾಹಕರ ಸೇವೆಗಳನ್ನು ಮ್ಯಾಡ್ ಕಂಪನಿಯು ನಿರ್ವಹಿಸಲಿದೆ.

ಫಾಸ್ಟ್ ಚಾರ್ಜಿಂಗ್ ಸೌಲಭ್ಯಕ್ಕಾಗಿ ಹೊಸ ಯೋಜನೆಗೆ ಚಾಲನೆ ನೀಡಿದ ಇವೆರೆ ಮತ್ತು ಮ್ಯಾಡ್

ಹೊಸ ಯೋಜನೆ ಅಡಿ ನಿರ್ಮಾಣವಾಗಲಿರುವ 500 ಇವಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳು ಕೇವಲ ಮಾಹಾನಗರಗಳಿಗೆ ಮಾತ್ರ ಸೀಮಿತವಾಗಿರಲಿದೆ ಟೈರ್ 1 ಮತ್ತು ಟೈರ್ 2 ನಗರಗಳಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ನಿರ್ಮಾಣವಾಗಲಿದ್ದು, 500 ಚಾರ್ಜಿಂಗ್ ನಿಲ್ದಾಣಗಳಲ್ಲಿ 100 ಚಾರ್ಜಿಂಗ್ ನಿಲ್ದಾಣಗಳು 2022ರ ಮಾರ್ಚ್ ವೇಳೆಗೆ ಕಾರ್ಯನಿರ್ವಹಣೆ ಮಾಡುವುದಾಗಿ ಇವೆರೆ ಭರವಸೆ ನೀಡಿದೆ.

ಫಾಸ್ಟ್ ಚಾರ್ಜಿಂಗ್ ಸೌಲಭ್ಯಕ್ಕಾಗಿ ಹೊಸ ಯೋಜನೆಗೆ ಚಾಲನೆ ನೀಡಿದ ಇವೆರೆ ಮತ್ತು ಮ್ಯಾಡ್

ಇನ್ನು ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಆದ್ಯತೆ ನೀಡಲಾಗುತ್ತಿದ್ದು, ಕೇಂದ್ರ ಸರ್ಕಾರದ ಜೊತೆಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿರುವ ಇವಿ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹವು ಹೊಸ ಬದಲಾವಣೆಗೆ ಕಾರಣವಾಗಿದೆ.

ಫಾಸ್ಟ್ ಚಾರ್ಜಿಂಗ್ ಸೌಲಭ್ಯಕ್ಕಾಗಿ ಹೊಸ ಯೋಜನೆಗೆ ಚಾಲನೆ ನೀಡಿದ ಇವೆರೆ ಮತ್ತು ಮ್ಯಾಡ್

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಫೇಮ್ 2 ಸಬ್ಸಡಿ ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳಿಗೆ ಮತ್ತು ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಫೇಮ್ 2 ಯೋಜನೆಯ ಸಬ್ಸಡಿ ಜೊತೆಗೆ ವಿವಿಧ ರಾಜ್ಯದ ಸರ್ಕಾರಗಳು ಸಹ ಕೆಲವು ವಿನಾಯ್ತಿಗಳನ್ನು ನೀಡುತ್ತಿವೆ.

ಫಾಸ್ಟ್ ಚಾರ್ಜಿಂಗ್ ಸೌಲಭ್ಯಕ್ಕಾಗಿ ಹೊಸ ಯೋಜನೆಗೆ ಚಾಲನೆ ನೀಡಿದ ಇವೆರೆ ಮತ್ತು ಮ್ಯಾಡ್

ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಫಾಸ್ಟ್ ಚಾರ್ಜಿಂಗ್ ಸೌಲಭ್ಯಕ್ಕಾಗಿ ಹೊಸ ಯೋಜನೆಗೆ ಚಾಲನೆ ನೀಡಿದ ಇವೆರೆ ಮತ್ತು ಮ್ಯಾಡ್

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರ ಸರ್ಕಾರದ ಫೇಮ್ 2 ಹೊರತುಪಡಿಸಿ ರಾಜ್ಯಗಳ ಮಟ್ಟದಲ್ಲೂ ವಿವಿಧ ರಾಜ್ಯ ಸರ್ಕಾರಗಳು ಸಹ ಹೆಚ್ಚಿನ ಮಟ್ಟದ ಪ್ರೊತ್ಸಾಹ ನೀಡುತ್ತಿದ್ದು ಕೇಂದ್ರ ಫೇಮ್ 2 ಜೊತೆಗೆ ವಿವಿಧ ರಾಜ್ಯ ಸರ್ಕಾರಗಳು ಕೂಡಾ ಹೊಸ ಇವಿ ನೀತಿ ಘೋಷಣೆ ಮಾಡುತ್ತಿವೆ.

ಫಾಸ್ಟ್ ಚಾರ್ಜಿಂಗ್ ಸೌಲಭ್ಯಕ್ಕಾಗಿ ಹೊಸ ಯೋಜನೆಗೆ ಚಾಲನೆ ನೀಡಿದ ಇವೆರೆ ಮತ್ತು ಮ್ಯಾಡ್

ಹಾಗೆಯೇ ಇವಿ ವಾಹನಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣವು ಇದೀಗ ಹೊಸ ಸವಾಲಾಗಿದ್ದು, ಇವಿ ವಾಹನಗಳು ಹೆಚ್ಚಿದಂತೆ ಅವುಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣಕ್ಕೂ ಯೋಜನೆ ಜಾರಿಗೆ ತರಲಾಗಿದೆ. ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಖರೀದಿ ಮಾಡುವ ಗ್ರಾಹಕರಿಗೆ ಮಾತ್ರವಲ್ಲ ಉತ್ಪಾದಕ ಕಂಪನಿಗಳಿಗೂ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಖಾಸಗಿ ಮತ್ತು ಸರ್ಕಾರಿ ಸಹಭಾಗೀತ್ವದಲ್ಲಿ ಚಾರ್ಜಿಂಗ್ ನಿಲ್ದಾಣಗಳು ಒಂದೊಂದಾಗಿ ಕಾರ್ಯನಿರ್ವಹಣೆ ಆರಂಭಿಸುತ್ತಿವೆ.

ಫಾಸ್ಟ್ ಚಾರ್ಜಿಂಗ್ ಸೌಲಭ್ಯಕ್ಕಾಗಿ ಹೊಸ ಯೋಜನೆಗೆ ಚಾಲನೆ ನೀಡಿದ ಇವೆರೆ ಮತ್ತು ಮ್ಯಾಡ್

ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವ ಪ್ರಕ್ರಿಯೆಯನ್ನು ವಿವಿಧ ಕಂಪನಿಗಳು ಕಳೆದ ಕೆಲ ತಿಂಗಳಿನಿಂದ ತ್ವರಿತಗೊಳಿದ್ದು, ಪ್ರಮುಖ ಆಟೋ ಉತ್ಪಾದನಾ ಕಂಪನಿಗಳು ಸಹಭಾಗಿತ್ವ ಯೋಜನೆ ಅಡಿ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗುತ್ತಿದೆ.

ಫಾಸ್ಟ್ ಚಾರ್ಜಿಂಗ್ ಸೌಲಭ್ಯಕ್ಕಾಗಿ ಹೊಸ ಯೋಜನೆಗೆ ಚಾಲನೆ ನೀಡಿದ ಇವೆರೆ ಮತ್ತು ಮ್ಯಾಡ್

ಹೆಚ್ಚುತ್ತಿರುವ ಇಂಧನ ದರಗಳು ಮತ್ತು ಮಾಲಿನ್ಯ ಸಮಸ್ಯೆಯಿಂದಾಗಿ ಕಳೆದ ಕೆಲವು ವರ್ಷಗಳಿಂದ ವಿದ್ಯುತ್ ವಾಹನಗಳ ಪ್ರಾಮುಖ್ಯತೆಯು ತೀವ್ರವಾಗಿ ಹೆಚ್ಚುತ್ತಿದ್ದು, ಅದಕ್ಕೆ ತಕ್ಕಂತೆ ಎಲೆಕ್ಟ್ರಿಕ್ ವಾಹನಗಳಿಗೆ ಬೇಕಿರುವ ಚಾರ್ಜಿಂಗ್ ಸೌಲಭ್ಯ ಒದಗಿಸುವುದು ಕೂಡಾ ಪ್ರಮುಖವಾಗಿದೆ.

ಫಾಸ್ಟ್ ಚಾರ್ಜಿಂಗ್ ಸೌಲಭ್ಯಕ್ಕಾಗಿ ಹೊಸ ಯೋಜನೆಗೆ ಚಾಲನೆ ನೀಡಿದ ಇವೆರೆ ಮತ್ತು ಮ್ಯಾಡ್

ಈ ನಿಟ್ಟಿನಲ್ಲಿ ಇವೆರೆ ಕಂಪನಿಯು ವಿವಿಧ ಕಂಪನಿಗಳ ಜೊತೆಗೂಡಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸುತ್ತಿದ್ದು, 2025ರ ವೇಳೆಗೆ ಇವೆರೆ ಕಂಪನಿಯು ದೇಶಾದ್ಯಂತ ಸುಮಾರು 10 ಸಾವಿರಕ್ಕೂ ಹೆಚ್ಚು ಚಾರ್ಜಿಂಗ್ ನಿಲ್ದಾಣಗಳನ್ನು ಹೊಂದುವ ಗುರಿಹೊಂದಿದೆ.

Article Published On: Saturday, December 4, 2021, 11:09 [IST]
English summary
Evre and mad about wheels to add 500 ev chargers details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+