ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಚಾರ್ಜ್ ಮಾಡಬಹುದಾದ ಇ-ಪ್ಯಾಕ್ ಬ್ಯಾಕ್ಅಪ್ ಬ್ಯಾಟರಿ ಅಭಿವೃದ್ದಿ

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಸರ್ಕಾರದ ಜೊತೆಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿರುವ ಇವಿ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹವು ಹೊಸ ಬದಲಾವಣೆಗೆ ಕಾರಣವಾಗುತ್ತಿದೆ.

ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಚಾರ್ಜ್ ಮಾಡಬಹುದಾದ ಇ-ಪ್ಯಾಕ್ ಬ್ಯಾಕ್ಅಪ್ ಬ್ಯಾಟರಿ ಅಭಿವೃದ್ದಿ

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಫೇಮ್ 2 ಸಬ್ಸಡಿ ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳಿಗೆ ಮತ್ತು ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಫೇಮ್ 2 ಯೋಜನೆಯ ಸಬ್ಸಡಿ ಜೊತೆಗೆ ವಿವಿಧ ರಾಜ್ಯದ ಸರ್ಕಾರಗಳು ಸಹ ಕೆಲವು ವಿನಾಯ್ತಿಗಳನ್ನು ನೀಡುತ್ತಿವೆ.

ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಚಾರ್ಜ್ ಮಾಡಬಹುದಾದ ಇ-ಪ್ಯಾಕ್ ಬ್ಯಾಕ್ಅಪ್ ಬ್ಯಾಟರಿ ಅಭಿವೃದ್ದಿ

ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಚಾರ್ಜ್ ಮಾಡಬಹುದಾದ ಇ-ಪ್ಯಾಕ್ ಬ್ಯಾಕ್ಅಪ್ ಬ್ಯಾಟರಿ ಅಭಿವೃದ್ದಿ

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರ ಸರ್ಕಾರದ ಫೇಮ್ 2 ಹೊರತುಪಡಿಸಿ ವಿವಿಧ ರಾಜ್ಯಗಳು ತಮ್ಮ ತಮ್ಮ ರಾಜ್ಯಗಳಲ್ಲಿ ಕೇಂದ್ರ ಸರ್ಕಾರದ ಸಬ್ಸಡಿ ಜೊತೆಗೆ ರಾಜ್ಯ ಮಟ್ಟದಲ್ಲೂ ಹೆಚ್ಚಿನ ಮಟ್ಟದ ಪ್ರೊತ್ಸಾಹ ನೀಡುತ್ತಿದ್ದು, ಕಳೆದ ಕೆಲ ತಿಂಗಳಿನಿಂದ ವಿವಿಧ ರಾಜ್ಯಗಳಲ್ಲಿ ಇವಿ ವಾಹನಗಳ ನೋಂದಣಿ ಸಂಖ್ಯೆಯಲ್ಲಿ ಸಾಕಷ್ಟು ಏರಿಕೆಯಾಗಿದೆ.

ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಚಾರ್ಜ್ ಮಾಡಬಹುದಾದ ಇ-ಪ್ಯಾಕ್ ಬ್ಯಾಕ್ಅಪ್ ಬ್ಯಾಟರಿ ಅಭಿವೃದ್ದಿ

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆ ಸಾಕಷ್ಟು ಸಹಕಾರಿಯಾಗಿದ್ದರೂ ಇವಿ ವಾಹನಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣವು ಇದೀಗ ಹೊಸ ಸವಾಲಾಗಿದೆ.

ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಚಾರ್ಜ್ ಮಾಡಬಹುದಾದ ಇ-ಪ್ಯಾಕ್ ಬ್ಯಾಕ್ಅಪ್ ಬ್ಯಾಟರಿ ಅಭಿವೃದ್ದಿ

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಖರೀದಿ ಮಾಡುವ ಗ್ರಾಹಕರಿಗೆ ಮಾತ್ರವಲ್ಲ ಉತ್ಪಾದಕ ಕಂಪನಿಗಳಿಗೂ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಇವಿ ವಾಹನಗಳು ಹೆಚ್ಚಿದಂತೆ ಅವುಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣಕ್ಕೂ ಯೋಜನೆ ಜಾರಿಗೆ ತರಲಾಗಿದೆ.

ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಚಾರ್ಜ್ ಮಾಡಬಹುದಾದ ಇ-ಪ್ಯಾಕ್ ಬ್ಯಾಕ್ಅಪ್ ಬ್ಯಾಟರಿ ಅಭಿವೃದ್ದಿ

ಸದ್ಯ ಕೇಂದ್ರ ಸರ್ಕಾರದ ಹೊಸ ಯೋಜನೆಗೆ ಅನುಗುಣವಾಗಿ ವಿವಿಧ ನಗರಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆ ನಿಧಾನವಾಗಿ ಹೆಚ್ಚಳವಾಗುತ್ತಿದ್ದು, ಖಾಸಗಿ ಮತ್ತು ಸರ್ಕಾರಿ ಸಹಭಾಗೀತ್ವದಲ್ಲಿ ಚಾರ್ಜಿಂಗ್ ನಿಲ್ದಾಣಗಳು ಒಂದೊಂದಾಗಿ ಕಾರ್ಯನಿರ್ವಹಣೆ ಆರಂಭಿಸುತ್ತಿವೆ.

ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಚಾರ್ಜ್ ಮಾಡಬಹುದಾದ ಇ-ಪ್ಯಾಕ್ ಬ್ಯಾಕ್ಅಪ್ ಬ್ಯಾಟರಿ ಅಭಿವೃದ್ದಿ

ಇವಿ ವಾಹನಗಳಿಗೆ ಸಮರ್ಪಕವಾದ ಸುಧಾರಿತ ಬ್ಯಾಟರಿ ಮತ್ತು ಚಾರ್ಜಿಂಗ್ ಸೌಲಭ್ಯವನ್ನು ಸುಲಭಗೊಳಿಸಲು ನಮ್ಮ ಬೆಂಗಳೂರು ಮೂಲಕ 'ಎಕ್ಸ್‌ಪೋನೆಂಟ್ ಎನರ್ಜಿ' ಕಂಪನಿಯು ಬ್ಯಾಟರಿ ಬ್ಲ್ಯಾಕ್ ಅಪ್ ಬಿಡುಗಡೆ ಮಾಡಿದ್ದು, ಬ್ಯಾಟರಿ ಚಾರ್ಜಿಂಗ್‌ಗಾಗಿ ಚಾರ್ಜಿಂಗ್ ಸಾಧನವನ್ನು ಸಹ ಬಿಡುಗಡೆ ಮಾಡಿದೆ.

ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಚಾರ್ಜ್ ಮಾಡಬಹುದಾದ ಇ-ಪ್ಯಾಕ್ ಬ್ಯಾಕ್ಅಪ್ ಬ್ಯಾಟರಿ ಅಭಿವೃದ್ದಿ

ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನ ಹೊಂದಿರುವ ಎಕ್ಸ್‌ಪೋನೆಂಟ್ ಎನರ್ಜಿ ಕಂಪನಿಯ ಚಾರ್ಜಿಂಗ್ ಸಾಧನದ ಮೂಲಕ ಎಲೆಕ್ಟ್ರಿಕ್ ದ್ವಿಚಕ್ರ ವಾಹನ, ಕಾರು ಮತ್ತು ತ್ರಿ ಚಕ್ರ ವಾಹನಗಳ ಬ್ಯಾಟರಿಯನ್ನು ಕೇವಲ 15 ನಿಮಿಷಗಳಲ್ಲಿ ಚಾರ್ಜ್ ಮಾಡಿಕೊಳ್ಳುವಂತೆ ಅಭಿವೃದ್ದಿಗೊಳಿಸಲಾಗಿದೆ.

ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಚಾರ್ಜ್ ಮಾಡಬಹುದಾದ ಇ-ಪ್ಯಾಕ್ ಬ್ಯಾಕ್ಅಪ್ ಬ್ಯಾಟರಿ ಅಭಿವೃದ್ದಿ

ಫ್ಲೆಕ್ಸಿಬಲ್ ಎನರ್ಜಿ ಸ್ಟಾಕ್ ತಂತ್ರಜ್ಞಾನದ ಮೂಲಕ ಹೊಸ ಬ್ಯಾಟರಿ ಪ್ಯಾಕ್ ಮತ್ತು ಚಾರ್ಜಿಂಗ್ ಸಾಧನಗಳನ್ನು ನಿರ್ಮಾಣಗೊಳಿಸಲಾಗಿದ್ದು, ಆಕರ್ಷಕ ಬೆಲೆಗಳಲ್ಲಿ ಲಭ್ಯವಾಗಲಿರುವ ಹೊಸ ಬ್ಯಾಟರಿ ಪ್ಯಾಕ್ ಅನ್ನು 3 ಸಾವಿರ ಬಾರಿ ಚಾರ್ಜ್ ಮಾಡಬಹುದಾಗಿದೆ.

ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಚಾರ್ಜ್ ಮಾಡಬಹುದಾದ ಇ-ಪ್ಯಾಕ್ ಬ್ಯಾಕ್ಅಪ್ ಬ್ಯಾಟರಿ ಅಭಿವೃದ್ದಿ

ಹೈ-ಸ್ಪೀಡ್ ಚಾರ್ಜರ್ ಮತ್ತು ಬ್ಯಾಟರಿ ಜಂಟಿ ಉದ್ಯಮವನ್ನ ಆರಂಭಿಸಿರುವ ಎಕ್ಸ್‌ಪೋನೆಂಟ್ ಎನರ್ಜಿ ಕಂಪನಿಯು ಶೀಘ್ರದಲ್ಲೇ ತನ್ನದೆ ಆದ ಇವಿ ಸ್ಕೂಟರ್‌ಗಳನ್ನು ಸಹ ಮಾರಾಟ ಆರಂಭಿಸಲಿದ್ದು, ಸದ್ಯ ಸುಧಾರಿತ ಬ್ಯಾಟರಿ ಮತ್ತು ಚಾರ್ಜಿಂಗ್ ಸಾಧನಗಳ ಮೂಲಕ ಜನರಲ್ಲಿ ಆತ್ಮವಿಶ್ವಾಸ ತುಂಬಲು ಸಜ್ಜಾಗಿದೆ.

ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಚಾರ್ಜ್ ಮಾಡಬಹುದಾದ ಇ-ಪ್ಯಾಕ್ ಬ್ಯಾಕ್ಅಪ್ ಬ್ಯಾಟರಿ ಅಭಿವೃದ್ದಿ

ಪ್ರಸ್ತುತ ಮಾರಾಟದಲ್ಲಿರುವ ಹೆಚ್ಚಿನ ಎಲೆಕ್ಟ್ರಿಕ್ ವಾಹನಗಳು ಸಂಪೂರ್ಣವಾಗಿ ಚಾರ್ಜ್ ಆಗಲು ಹಲವು ಗಂಟೆಗಳನ್ನು ತೆಗೆದುಕೊಳ್ಳುವ ವೈಶಿಷ್ಟ್ಯತೆ ಹೊಂದಿದ್ದು, ಎಕ್ಸ್‌ಪೋನೆಂಟ್ ಎನರ್ಜಿ ಕಂಪನಿಯು ಆರಂಭಿಸಿರುವ ಬ್ಯಾಟರಿ ಪ್ಯಾಕ್ ಮತ್ತು ಚಾರ್ಜಿಂಗ್ ಸಾಧನವು ಸುಲಭವಾಗಿ ಚಾರ್ಜಿಂಗ್ ಮಾಡಲು ನೆರವಾಗಲಿವೆ.

Article Published On: Friday, October 15, 2021, 13:01 [IST]
English summary
Exponent energy to shape the future of india s ev ecosystem details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+