ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಫೇಮ್ 2 ಮಾನ್ಯತಾ ಅವಧಿ ವಿಸ್ತರಿಸಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಖರೀದಿಯನ್ನು ಉತ್ತೇಜಿಸಲು ಹಲವಾರು ಸಬ್ಸಡಿ ಯೋಜನೆಗಳನ್ನು ಘೋಷಿಸಿದ್ದು, 2020 ಮಾರ್ಚ್ 31ಕ್ಕೆ ಮುಕ್ತಾಯಗೊಂಡಿದ್ದ ಫೇಮ್ 2 ಮಾನ್ಯತಾ ಅವಧಿಯನ್ನು ಹೆಚ್ಚುವರಿಯಾಗಿ ಮತ್ತೆ ಒಂದು ವರ್ಷ ವಿಸ್ತರಿಸಲಾಗಿದೆ.

ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಫೇಮ್ 2 ಮಾನ್ಯತಾ ಅವಧಿ ವಿಸ್ತರಿಸಿದ ಕೇಂದ್ರ ಸರ್ಕಾರ

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ. ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಫೇಮ್ 2 ಸಬ್ಸಡಿ ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳಿಗೆ ಮತ್ತು ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದೆ.

ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಫೇಮ್ 2 ಮಾನ್ಯತಾ ಅವಧಿ ವಿಸ್ತರಿಸಿದ ಕೇಂದ್ರ ಸರ್ಕಾರ

ಹಾಗೆಯೇ ಫೇಮ್ 2 ಯೋಜನೆಯೊಂದಿಗೆ ವಿವಿಧ ರಾಜ್ಯ ಸರ್ಕಾರಗಳು ಸಹ ತಮ್ಮದೇ ಆದ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿದ್ದು, ಫೇಮ್ 2 ಯೋಜನೆಯ ಸಬ್ಸಡಿ ಜೊತೆಗೆ ವಿವಿಧ ರಾಜ್ಯದ ಸರ್ಕಾರಗಳು ಸಹ ಕೆಲವು ವಿನಾಯ್ತಿಗಳನ್ನು ನೀಡುತ್ತಿವೆ.

ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಫೇಮ್ 2 ಮಾನ್ಯತಾ ಅವಧಿ ವಿಸ್ತರಿಸಿದ ಕೇಂದ್ರ ಸರ್ಕಾರ

ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಫೇಮ್ 2 ಮಾನ್ಯತಾ ಅವಧಿ ವಿಸ್ತರಿಸಿದ ಕೇಂದ್ರ ಸರ್ಕಾರ

ಜೊತೆಗೆ ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣಕ್ಕೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸರ್ಕಾರಿ ಹಾಗೂ ಖಾಸಗಿ ಕಂಪನಿಗಳ ಸಹಭಾಗಿತ್ವದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಖಾಸಗಿ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣಕ್ಕೂ ಫೇಮ್ 2 ಯೋಜನೆ ಅಡಿ ಸಬ್ಸಡಿ ಪ್ರಕಟಿಸಿದ್ದು, ಹೊಸ ಯೋಜನೆಗಾಗಿ ಕೇಂದ್ರ ಸರ್ಕಾರವು ಒಟ್ಟು ರೂ.10 ಸಾವಿರ ಕೋಟಿ ಮೀಸಲಿಟ್ಟಿದೆ. ಫೇಮ್ ಯೋಜನೆಯ ಮೊದಲ ಹಂತದಲ್ಲಿ ಸುಮಾರು ರೂ. 3 ಸಾವಿರ ಕೋಟಿ ನೀಡಿದ್ದ ಕೇಂದ್ರ ಸರ್ಕಾರವು ಎರಡನೇ ಹಂತದ ಯೋಜನೆಗಾಗಿ ರೂ. 10 ಸಾವಿರ ಕೋಟಿ ಮೀಸಲಿಟ್ಟಿದೆ.

ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಫೇಮ್ 2 ಮಾನ್ಯತಾ ಅವಧಿ ವಿಸ್ತರಿಸಿದ ಕೇಂದ್ರ ಸರ್ಕಾರ

ಎರಡನೇ ಹಂತದಲ್ಲಿ 62 ಸಾವಿರ ಪ್ಯಾಸೆಂಜರ್ ಕಾರುಗಳು ಮತ್ತು ಬಸ್‌ಗಳಿಗೆ, 15 ಲಕ್ಷ ದ್ವಿಚಕ್ರ ವಾಹನಗಳ ಮತ್ತು ತ್ರಿ ಚಕ್ರ ವಾಹನಗಳು ಸಬ್ಸಡಿ ನೀಡುವ ಯೋಜನೆ ಹೊಂದಲಾಗಿದ್ದು, ವ್ಯಯಕ್ತಿಕ ಬಳಕೆಯ ವಾಹನಗಳ ಜೊತೆಗೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲೂ ಎಲೆಕ್ಟ್ರಿಕ್ ವಾಹನಗಳ ಅಳವಡಿಸಿಕೊಳ್ಳಲು ಮಹತ್ವದ ಕ್ರಮ ಕೈಗೊಳ್ಳಲಾಗಿದೆ.

ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಫೇಮ್ 2 ಮಾನ್ಯತಾ ಅವಧಿ ವಿಸ್ತರಿಸಿದ ಕೇಂದ್ರ ಸರ್ಕಾರ

ಹೆಚ್ಚುತ್ತಿರುವ ಮಾಲಿನ್ಯ ತಡೆ ಜೊತೆಗೆ ಹೆಚ್ಚುತ್ತಿರುವ ಇಂಧನ ಬಳಕೆ ಪ್ರಮಾಣವನ್ನು ತಗ್ಗಿಸಲು ಇದರ ಪ್ರಮುಖ ಉದ್ದೇಶವಾಗಿದ್ದು, ಫೇಮ್ 2 ಯೋಜನೆ ಅಡಿ ಒಟ್ಟು 7 ಸಾವಿರ ಇ-ಬಸ್‌ಗಳು, 5 ಲಕ್ಷ ತ್ರಿಚಕ್ರ ಇವಿ ವಾಹನಗಳು, 55 ಸಾವಿರ ಎಲೆಕ್ಟ್ರಿಕ್ ಕಾರುಗಳು ಮತ್ತು 10 ಲಕ್ಷ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಸಬ್ಸಿಡಿ ಸಿಗಲಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಫೇಮ್ 2 ಮಾನ್ಯತಾ ಅವಧಿ ವಿಸ್ತರಿಸಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರವು ಇಂಧನಗಳ ಬೆಲೆ ಇಳಿಕೆಗೆ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಫೇಮ್ 2 ಯೋಜನೆಯು ನಮಗೆ ಭವಿಷ್ಯದಲ್ಲಿ ಉತ್ತಮ ಫಲಿತಾಂಶ ನೀಡಲಿದೆ ಎಂದು ಸಾರಿಗೆ ಸಚಿವ ನಿತಿನ್ ಗಡ್ಕರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಫೇಮ್ 2 ಮಾನ್ಯತಾ ಅವಧಿ ವಿಸ್ತರಿಸಿದ ಕೇಂದ್ರ ಸರ್ಕಾರ

ಇನ್ನು ಎಲೆಕ್ಟ್ರಿಕ್ ವಾಹನಗಳ ಬಳಕೆಯೊಂದಿಗೆ ನಗರ ಪ್ರದೇಶಗಳಲ್ಲಿ ಹೆಚ್ಚಿರುವ ಮಾಲಿನ್ಯ ತಡೆಯುವುದರ ಜೊತೆಗೆ ಇಂಧನ ವೆಚ್ಚಗಳನ್ನು ಗಣನೀಯವಾಗಿ ಇಳಿಕೆ ಮಾಡಬಹುದಾಗಿದೆ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದು, ಹೊಸ ಯೋಜನೆಗಾಗಿ ಕೇಂದ್ರ ಸರ್ಕಾರದ ಜೊತೆ ವಿವಿಧ ರಾಜ್ಯಗಳು ಸಹ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿವೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಫೇಮ್ 2 ಮಾನ್ಯತಾ ಅವಧಿ ವಿಸ್ತರಿಸಿದ ಕೇಂದ್ರ ಸರ್ಕಾರ

ರಾಜ್ಯಗಳ ಪೈಕಿ ದೆಹಲಿ ಸರ್ಕಾರವು ಇತರೆ ರಾಜ್ಯಗಳಿಗಳಿಂತಲೂ ಹೊಸ ಇವಿ ನೀತಿ ಅಡಿಯಲ್ಲಿ ಪರಿಸರಕ್ಕೆ ಪೂರಕವಾದ ವಾಹನಗಳ ನೋಂದಣಿಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ದೆಹಲಿಯಲ್ಲಿ ಗರಿಷ್ಠ ಪ್ರಮಾಣದ ಸಬ್ಸಡಿಯೊಂದಿಗೆ ರಸ್ತೆ ತೆರಿಗೆ ಮತ್ತು ವಾಹನ ನೋಂದಣಿಯಿಂದಲೂ ವಿನಾಯ್ತಿ ನೀಡಿರುವುದು ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿನ ಮಟ್ಟದ ಇವಿ ವಾಹನಗಳು ನೋಂದಣಿಯಾಗುತ್ತಿರುವು ಉತ್ತಮ ಬೆಳವಣಿಯಾಗಿದೆ.

Article Published On: Wednesday, April 14, 2021, 14:21 [IST]
English summary
Fame-2 certificate validity extended for one year from date of issue. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+