ದಿನಂಪ್ರತಿ ರೂ.100 ಕೋಟಿಗೆ ಏರಿಕೆಯಾದ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಸಂಗ್ರಹ

ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರವು ಫೆಬ್ರವರಿ 15ರಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಗಳಿಗೂ ಫಾಸ್ಟ್‌ಟ್ಯಾಗ್ ಅಳವಡಿಕೆಯನ್ನು ಕಡ್ಡಾಯಗೊಳಿಸಿದ್ದು, ಫಾಸ್ಟ್‌ಟ್ಯಾಗ್ ಹೊಂದಿರದ ವಾಹನಗಳಿಗೆ ದುಪ್ಪಟ್ಟು ಟೋಲ್ ಸಂಗ್ರಹಿಸಲಾಗುತ್ತಿದೆ.

ದಿನಂಪ್ರತಿ ರೂ.100 ಕೋಟಿಗೆ ಏರಿಕೆಯಾದ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಸಂಗ್ರಹ

ಫಾಸ್ಟ್‌ಟ್ಯಾಗ್ ಕಡ್ಡಾಯಗೊಳಿಸಲು ಹಲವಾರು ಬಾರಿ ಗಡುವು ನೀಡಿ ಮುಂದೂಡಿಕೆ ಮಾಡುತ್ತಾ ಬಂದಿದ್ದ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರವು ಅಂತಿಮವಾಗಿ ಫೆ.15 ರಿಂದ ಕಡ್ಡಾಯವಾಗಿ ಜಾರಿಗೆ ತಂದಿದ್ದು, ಫಾಸ್ಟ್‌ಟ್ಯಾಗ್ ಕಡ್ಡಾಯಕ್ಕೂ ಮುನ್ನ ಶೇ. 70ರಷ್ಟು ಬಳಕೆಯಲ್ಲಿದ್ದ ಫಾಸ್ಟ್‌ಟ್ಯಾಗ್ ಬಳಕೆದಾರರ ಸಂಖ್ಯೆ ಇದೀಗ ಶೇ. 90ಕ್ಕಿಂತಲೂ ಹೆಚ್ಚು ಬಳಕೆಯಾಗುತ್ತಿರುವುದು ಟೋಲ್ ಸಂಗ್ರಹದಲ್ಲಿ ಗಣನೀಯವಾಗಿ ಏರಿಕೆಯಾಗಿದೆ.

ದಿನಂಪ್ರತಿ ರೂ.100 ಕೋಟಿಗೆ ಏರಿಕೆಯಾದ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಸಂಗ್ರಹ

ಫಾಸ್ಟ್‌ಟ್ಯಾಗ್ ಕಡ್ಡಾಯಕ್ಕೂ ಮುನ್ನ ದಿನಂಪ್ರತಿ ಗರಿಷ್ಠ ರೂ.70 ಕೋಟಿಯಿಂದ ರೂ. 80 ಕೋಟಿ ಟೋಲ್ ಸಂಗ್ರಹಿಸಿದ್ದ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರವು ಫಾಸ್ಟ್‌ಟ್ಯಾಗ್ ಕಡ್ಡಾಯದ ನಂತರ ದಿನಂಪ್ರತಿ ರೂ. 100 ಕೋಟಿಗೂ ಹೆಚ್ಚು ಟೋಲ್ ಸಂಗ್ರಹಿಸುತ್ತಿದೆ.

ದಿನಂಪ್ರತಿ ರೂ.100 ಕೋಟಿಗೆ ಏರಿಕೆಯಾದ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಸಂಗ್ರಹ

ಹೊಸ ಶುಲ್ಕ ಪಾವತಿ ಸೌಲಭ್ಯವನ್ನು ಕಡ್ಡಾಯಗೊಳಿಸಿದ ನಂತರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಲ್ಕ ಸಂಗ್ರಹದಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಹೊಸ ಸೌಲಭ್ಯದೊಂದಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿರುವುದಲ್ಲದೆ ಆದಾಯ ಪ್ರಮಾಣದಲ್ಲೂ ಏರಿಕೆಯಾಗಿರುವ ಬಗ್ಗೆ ಸಾರಿಗೆ ಸಚಿವ ನಿತಿನ್ ಗಡ್ಕರಿಯವರೇ ಮಾಹಿತಿ ನೀಡಿದ್ದಾರೆ.

ದಿನಂಪ್ರತಿ ರೂ.100 ಕೋಟಿಗೆ ಏರಿಕೆಯಾದ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಸಂಗ್ರಹ

ಫಾಸ್ಟ್‌ಟ್ಯಾಗ್ ಕಡ್ಡಾಯ ನಂತರ ಕಳೆದ ಒಂದೂವರೆ ತಿಂಗಳಿನಲ್ಲಿ ಹೊಸದಾಗಿ ಸುಮಾರು 5 ಲಕ್ಷ ವಾಹನ ಮಾಲೀಕರು ಹೊಸ ಟೋಲ್ ಪಾವತಿ ಸೌಲಭ್ಯವನ್ನು ಅಳವಡಿಸಿಕೊಂಡಿದ್ದು, ಹೊಸ ಸೌಲಭ್ಯದಿಂದ ದುಪ್ಪಟ್ಟು ಟೋಲ್‌ನಿಂದ ತಪ್ಪಿಸಿಕೊಳ್ಳಬಹುದಲ್ಲದೆ ಹಣ ರಹಿತ ವ್ಯವಹಾರವನ್ನು ಉತ್ತೇಜಿಸಲು ಸಹಕಾರಿಯಾಗಿದೆ.

ದಿನಂಪ್ರತಿ ರೂ.100 ಕೋಟಿಗೆ ಏರಿಕೆಯಾದ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಸಂಗ್ರಹ

ಜೊತೆಗೆ ಟೋಲ್ ಪಾವಾತಿಗಾಗಿ ಚಿಲ್ಲರೆ ಸಮಸ್ಯೆಯಿಂದ ಇತರೆ ವಾಹನಗಳಿಗೆ ವಿಳಂಬವಾಗುವುದನ್ನು ತಪ್ಪಿಸುವ ಮೂಲಕ ಸರಾಗವಾದ ಚಾಲನೆಗೆ ಅನುವು ಮಾಡಿಕೊಡುತ್ತಿದ್ದು, ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರವು ಫಾಸ್ಟ್‌ಟ್ಯಾಗ್ ಬಳಕೆದಾರರಿಗೆ ಮತ್ತಷ್ಟು ಸುಲಭವಂತೆ ಅಪ್ಲಿಕೇಶನ್‌ನಲ್ಲಿ ಹೊಸ ವೈಶಿಷ್ಟ್ಯತೆಗಳನ್ನು ನವೀಕರಿಸಿದೆ.

ದಿನಂಪ್ರತಿ ರೂ.100 ಕೋಟಿಗೆ ಏರಿಕೆಯಾದ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಸಂಗ್ರಹ

ಫಾಸ್ಟ್‌ಟ್ಯಾಗ್ ಆಪ್‌ನಲ್ಲಿ ಪರಿಚಯಿಸಿರುವ ಹೊಸ ವೈಶಿಷ್ಟ್ಯತೆಯಿಂದಾಗಿ ಖಾತೆಯಲ್ಲಿ ಬ್ಯಾಲೆನ್ಸ್ ಸ್ಥಿತಿಗತಿಯನ್ನು ಸುಲಭವಾಗಿ ತಿಳಿದುಕೊಳ್ಳಬಹುದಲ್ಲದೆ ಆ್ಯಪ್ ಅನ್ನು ಸುಲಭವಾಗಿ ಅಥೈಸಿಕೊಳ್ಳುವಂತೆ ಅಭಿವೃದ್ದಿಪಡಿಸಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ದಿನಂಪ್ರತಿ ರೂ.100 ಕೋಟಿಗೆ ಏರಿಕೆಯಾದ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಸಂಗ್ರಹ

ಆ್ಯಪ್‌ನಲ್ಲಿ ಹೊಸದಾಗಿ ನೀಡಿರುವ ಬ್ಯಾಲೆನ್ಸ್ ಚೆಕ್ ಸ್ಟೇಟಸ್ ಆಯ್ಕೆಯನ್ನು ಬಳಕೆ ಮಾಡಿಕೊಂಡು ಹಣದ ಲಭ್ಯತೆಯನ್ನು ಸುಲಭವಾಗಿ ತಿಳಿಯಬಹುದಾಗಿದ್ದು, ಇದು ಟೋಲ್‌ಗಳಲ್ಲಿ ವಾಹನ ಮಾಲೀಕರು ಅನಾವಶ್ಯಕವಾಗಿ ಕಾಯುವುದನ್ನು ತಪ್ಪಿಸುತ್ತದೆ.

ದಿನಂಪ್ರತಿ ರೂ.100 ಕೋಟಿಗೆ ಏರಿಕೆಯಾದ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಸಂಗ್ರಹ

ಬ್ಯಾಲೆನ್ಸ್ ಚೆಕ್ ಸ್ಟೇಟಸ್ ಆಯ್ಕೆಯನ್ನು ಬಳಕೆ ಮಾಡಿದ ನಂತರ ಹಣದ ಲಭ್ಯತೆ ಕುರಿತಂತೆ ಮಾಹಿತಿ ನೀಡುವ ಫಾಸ್ಟ್‌ಟ್ಯಾಗ್ ಆ್ಯಪ್‌ನಲ್ಲಿ ನಿಗದಿತ ಮಟ್ಟದ ಬ್ಯಾನೆನ್ಸ್ ಇದ್ದಲ್ಲಿ ಹಸಿರು ಬಣ್ಣವನ್ನು, ನಿಗದಿತ ಮಟ್ಟದ ಬ್ಯಾನೆನ್ಸ್ ಇಲ್ಲವಾದಲ್ಲಿ ಆರೇಂಜ್ ಬಣ್ಣವನ್ನು ತೊರಿಸುತ್ತದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ದಿನಂಪ್ರತಿ ರೂ.100 ಕೋಟಿಗೆ ಏರಿಕೆಯಾದ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಸಂಗ್ರಹ

ಒಂದು ವೇಳೆ ಫಾಸ್ಟ್‌ಟ್ಯಾಗ್ ಖಾತೆಯಲ್ಲಿ ನಿಗದಿತ ಮಟ್ಟಕ್ಕಿಂತಲೂ ಕಡಿಮೆ ಬ್ಯಾಲೆನ್ಸ್ ಹೊಂದಿದ್ದಲ್ಲಿ ರೆಡ್ ಬಣ್ಣದ ಮೂಲಕ ರೀಚಾರ್ಜ್‌ಗೆ ಸೂಚಿಸಲಿದ್ದು, ಅತಿ ಸುಲಭವಾಗಿ ಬ್ಯಾನೆಲ್ಸ್ ಚೆಕ್ ಸೌಲಭ್ಯದೊಂದಿಗೆ ಟೋಲ್ ಪ್ಲಾಜಾಗಳಲ್ಲಿರುವ ಪಾಯಿಂಟ್ ಆಫ್ ಸೇಲ್‌ಗಳ ಮೂಲಕ ರೀಚಾರ್ಜ್ ಮಾಡಿಕೊಳ್ಳಬಹುದಾಗಿದೆ.

Most Read Articles

Kannada
English summary
Nitin Gadkari Says Daily FASTag Collection Crosses 100 Crore. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X