Just In
- 2 hrs ago
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- 3 hrs ago
ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ
- 3 hrs ago
ಸಿಎನ್ಜಿ ವರ್ಷನ್ನಲ್ಲೂ ಬಿಡುಗಡೆಯಾಗಲಿದೆ ಸ್ಕೋಡಾ ರ್ಯಾಪಿಡ್ ಸೆಡಾನ್
- 4 hrs ago
ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ
Don't Miss!
- News
ಪೆಟ್ರೋಲ್, ಡೀಸೆಲ್ ದರ ಏರಿಕೆ: ಕೇಂದ್ರಕ್ಕೆ ಬಿಸಿ ಮುಟ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ
- Movies
ಬಿಗ್ಬಾಸ್: ಪ್ರಶಾಂತ್ ಸಂಬರ್ಗಿ ಮೇಲೆ ಉರಿದು ಬಿದ್ದ ಮನೆ ಸದಸ್ಯರು
- Education
UAS Dharwad Recruitment 2021: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮಾ.10ಕ್ಕೆ ನೇರ ಸಂದರ್ಶನ
- Sports
ಐಎಸ್ಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಫಾಸ್ಟ್‌ಟ್ಯಾಗ್ ಕಡ್ಡಾಯದ ನಂತರ ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಟೋಲ್ ಸಂಗ್ರಹ
ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರವು ಫೆಬ್ರವರಿ 15ರ ಮಧ್ಯ ರಾತ್ರಿಯಿಂದಲೇ ಹೆದ್ದಾರಿಯಲ್ಲಿ ಸಂಚರಿಸುವ ಪ್ರತಿಯೊಂದು ವಾಹನಗಳಿಗೂ ಫಾಸ್ಟ್‌ಟ್ಯಾಗ್ ಅಳವಡಿಕೆಯನ್ನು ಕಡ್ಡಾಯಗೊಳಿಸಿದ್ದು, ಫಾಸ್ಟ್‌ಟ್ಯಾಗ್ ಹೊಂದಿರದ ವಾಹನಗಳಿಗೆ ದುಪ್ಪಟ್ಟು ಟೋಲ್ ಸಂಗ್ರಹಿಸಲಾಗುತ್ತಿದೆ.

ಫಾಸ್ಟ್‌ಟ್ಯಾಗ್ ಕಡ್ಡಾಯಗೊಳಿಸಲು ಹಲವಾರು ಬಾರಿ ಗಡುವು ನೀಡಿ ಮುಂದೂಡಿಕೆ ಮಾಡುತ್ತಾ ಬಂದಿದ್ದ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರವು ಅಂತಿಮವಾಗಿ ಫೆ.15 ರಿಂದ ಕಡ್ಡಾಯವಾಗಿ ಜಾರಿಗೆ ತಂದಿದ್ದು, ಫಾಸ್ಟ್‌ಟ್ಯಾಗ್ ಕಡ್ಡಾಯಕ್ಕೂ ಮುನ್ನ ಶೇ. 70ರಷ್ಟು ಬಳಕೆಯಲ್ಲಿದ್ದ ಫಾಸ್ಟ್‌ಟ್ಯಾಗ್ ಬಳಕೆದಾರರ ಸಂಖ್ಯೆ ಇದೀಗ ಶೇ. 90ಕ್ಕಿಂತಲೂ ಹೆಚ್ಚು ಬಳಕೆಯಾಗುತ್ತಿರುವುದು ಟೋಲ್ ಸಂಗ್ರಹದಲ್ಲಿ ಗಣನೀಯವಾಗಿ ಏರಿಕೆಯಾಗಿದೆ.

ಈ ಹಿಂದೆ ಒಂದೇ ದಿನದಲ್ಲಿ ಗರಿಷ್ಠ ರೂ. 80 ಕೋಟಿ ಟೋಲ್ ಸಂಗ್ರಹಿಸಿದ್ದ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರವು ಫಾಸ್ಟ್‌ಟ್ಯಾಗ್ ಕಡ್ಡಾಯ ನಂತರ ದಿನವೊಂದಲ್ಲಿ ಅತ್ಯಧಿಕ ರೂ. 95 ಕೋಟಿ ಟೋಲ್ ಸಂಗ್ರಹಿಸಿದ್ದು, ಕಳೆದ ಎರಡು ದಿನಗಳಲ್ಲಿ ಹೊಸದಾಗಿ 2.50 ಲಕ್ಷ ವಾಹನ ಮಾಲೀಕರು ಹೊಸ ಟೋಲ್ ಪಾವತಿ ಸೌಲಭ್ಯವನ್ನು ಅಳವಡಿಸಿಕೊಂಡಿದ್ದಾರೆ.

ಫಾಸ್ಟ್‌ಟ್ಯಾಗ್ ಕಡ್ಡಾಯದ ನಂತರ ದುಪ್ಪಟ್ಟು ಹಣ ಪಾವತಿಸುವ ಸಂಬಂಧ ಟೋಲ್ ಸಿಬ್ಬಂದಿ ಮತ್ತು ವಾಹನ ಮಾಲೀಕರ ಮಧ್ಯೆ ಕಿರಿಕಿರಿ ಉಂಟಾದರೂ ಕೂಡಾ ಹೊಸ ಫಾಸ್ಟ್‌ಟ್ಯಾಗ್ ಸೌಲಭ್ಯ ಬಳಕೆಯನ್ನು ಉತ್ತೇಜಿಸುವ ಹಲವು ಹೊಸ ಕ್ರಮಗಳು ಅತಿ ಕಡಿಮೆ ಅವಧಿಯಲ್ಲಿ ಟೋಲ್ ಪ್ಲಾಜಾಗಳಲ್ಲೇ ಫಾಸ್ಟ್‌ಟ್ಯಾಗ್ ತೆರೆಯುವ ಸುಲಭ ಆಯ್ಕೆಗಳನ್ನು ನೀಡಲಾಗಿದೆ.

ಮುಂದಿನ ಕೆಲವೇ ದಿನಗಳಲ್ಲಿ ಶೇ.100 ರಷ್ಟು ವಾಹನಗಳಲ್ಲಿ ಫಾಸ್ಟ್‌ಟ್ಯಾಗ್ ಜೋಡಣೆ ಮಾಡಬೇಕೆಂಬ ಯೋಜನೆ ಹೊಂದಿರುವ ಕೇಂದ್ರ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರವು ಈಗಾಗಲೇ ಹೊಸ ವಾಹನಗಳಿಗೆ ಶೋರೂಂನಲ್ಲಿಯೇ ಫಾಸ್ಟ್‌ಟ್ಯಾಗ್ ಜೋಡಣೆ ಮಾಡಿ ವಿತರಣೆ ಮಾಡಲಾಗುತ್ತಿದ್ದು, ಹಳೆಯ ವಾಹನ ಮಾಲೀಕರನ್ನು ಸಹ ಹೊಸ ಸೌಲಭ್ಯವನ್ನು ಕಡ್ಡಾಯವಾಗಿ ಬಳಕೆ ಮಾಡುವಂತೆ ಉತ್ತೇಜಿಸಲಾಗುತ್ತಿದೆ.

ಹೊಸ ಸೌಲಭ್ಯದಿಂದ ದುಪ್ಪಟ್ಟು ಟೋಲ್‌ನಿಂದ ತಪ್ಪಿಸಿಕೊಳ್ಳಬಹುದಲ್ಲದೆ ಹಣ ರಹಿತ ವ್ಯವಹಾರವನ್ನು ಉತ್ತೇಜಿಸುವುದಲ್ಲದೆ ಚಿಲ್ಲರೆ ಸಮಸ್ಯೆಯಿಂದ ಇತರೆ ವಾಹನಗಳಿಗೆ ವಿಳಂಬವಾಗುವುದನ್ನು ತಪ್ಪಿಸುವ ಮೂಲಕ ಸರಾಗವಾದ ಚಾಲನೆಗೆ ಅನುವು ಮಾಡಿಕೊಡುತ್ತದೆ.

ಇನ್ನು ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರವು ಫಾಸ್ಟ್‌ಟ್ಯಾಗ್ ಬಳಕೆದಾರರಿಗೆ ಮತ್ತಷ್ಟು ಸುಲಭವಂತೆ ಅಪ್ಲಿಕೇಶನ್‌ನಲ್ಲಿ ಹೊಸ ವೈಶಿಷ್ಟ್ಯತೆಗಳನ್ನು ನವೀಕರಿಸಿದ್ದು, ಫಾಸ್ಟ್‌ಟ್ಯಾಗ್ ಆಪ್‌ನಲ್ಲಿ ಪರಿಚಯಿಸಿರುವ ಹೊಸ ವೈಶಿಷ್ಟ್ಯತೆಯಿಂದಾಗಿ ಖಾತೆಯಲ್ಲಿ ಬ್ಯಾಲೆನ್ಸ್ ಸ್ಥಿತಿಗತಿಯನ್ನು ಸುಲಭವಾಗಿ ತಿಳಿದುಕೊಳ್ಳಬಹುದಲ್ಲದೆ ಆ್ಯಪ್ ಅನ್ನು ಸುಲಭವಾಗಿ ಅಥೈಸಿಕೊಳ್ಳುವಂತೆ ಅಭಿವೃದ್ದಿಪಡಿಸಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಆ್ಯಪ್‌ನಲ್ಲಿ ಹೊಸದಾಗಿ ನೀಡಿರುವ ಬ್ಯಾಲೆನ್ಸ್ ಚೆಕ್ ಸ್ಟೇಟಸ್ ಆಯ್ಕೆಯನ್ನು ಬಳಕೆ ಮಾಡಿಕೊಂಡು ಹಣದ ಲಭ್ಯತೆಯನ್ನು ಸುಲಭವಾಗಿ ತಿಳಿಯಬಹುದಾಗಿದ್ದು, ಇದು ಟೋಲ್‌ಗಳಲ್ಲಿ ವಾಹನ ಮಾಲೀಕರು ಅನಾವಶ್ಯಕವಾಗಿ ಕಾಯುವುದನ್ನು ತಪ್ಪಿಸುತ್ತದೆ.

ಬ್ಯಾಲೆನ್ಸ್ ಚೆಕ್ ಸ್ಟೇಟಸ್ ಆಯ್ಕೆಯನ್ನು ಬಳಕೆ ಮಾಡಿದ ನಂತರ ಹಣದ ಲಭ್ಯತೆ ಕುರಿತಂತೆ ಮಾಹಿತಿ ನೀಡುವ ಫಾಸ್ಟ್‌ಟ್ಯಾಗ್ ಆ್ಯಪ್‌ನಲ್ಲಿ ನಿಗದಿತ ಮಟ್ಟದ ಬ್ಯಾನೆನ್ಸ್ ಇದ್ದಲ್ಲಿ ಹಸಿರು ಬಣ್ಣವನ್ನು, ನಿಗದಿತ ಮಟ್ಟದ ಬ್ಯಾನೆನ್ಸ್ ಇಲ್ಲವಾದಲ್ಲಿ ಆರೇಂಜ್ ಬಣ್ಣವನ್ನು ತೊರಿಸುತ್ತದೆ.
MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಒಂದು ವೇಳೆ ಫಾಸ್ಟ್‌ಟ್ಯಾಗ್ ಖಾತೆಯಲ್ಲಿ ನಿಗದಿತ ಮಟ್ಟಕ್ಕಿಂತಲೂ ಕಡಿಮೆ ಬ್ಯಾಲೆನ್ಸ್ ಹೊಂದಿದ್ದಲ್ಲಿ ರೆಡ್ ಬಣ್ಣದ ಮೂಲಕ ರೀಚಾರ್ಜ್‌ಗೆ ಸೂಚಿಸಲಿದ್ದು, ಅತಿ ಸುಲಭವಾಗಿ ಬ್ಯಾನೆಲ್ಸ್ ಚೆಕ್ ಸೌಲಭ್ಯದೊಂದಿಗೆ ಟೋಲ್ ಪ್ಲಾಜಾಗಳಲ್ಲಿರುವ ಪಾಯಿಂಟ್ ಆಫ್ ಸೇಲ್‌ಗಳ ಮೂಲಕ ರೀಚಾರ್ಜ್ ಮಾಡಿಕೊಳ್ಳಬಹುದಾಗಿದೆ.