Just In
- 49 min ago ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
- 1 hr ago Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ದೊಡ್ಡ ಘೋಷಣೆ.. ಏನದು?
- 2 hrs ago ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- 3 hrs ago ಸಾಮಾನ್ಯರಂತೆ ಹಳ್ಳಿಯಲ್ಲಿರುವ ದೇಶದ 55ನೇ ಶ್ರೀಮಂತ ಶ್ರೀಧರ್ ವೆಂಬು: ಕಚೇರಿಗೆ ಹೋಗಲು ಎಲೆಕ್ಟ್ರಿಕ್ ಆಟೋ ಖರೀದಿ!
Don't Miss!
- News ಡಿಕೆ ಬ್ರದರ್ಸ್ ಭದ್ರಕೋಟೆಯಲ್ಲಿ ಮೋದಿ, ಅಮಿತ್ ಶಾ, ಯೋಗಿ ಪ್ರಚಾರ: ಡಿ ಕೆ ಸುರೇಶ್ ಹೇಳಿದ್ದೇನು?
- Movies ಡಾರ್ಲಿಂಗ್ ಕೃಷ್ಣ ನಟಿಸಿದ ಮೊದಲ ಸೀರಿಯಲ್ ನಟಿ 13 ವರ್ಷಗಳ ಬಳಿಕ ಕನ್ನಡ ಕಿರುತೆರೆ ಎಂಟ್ರಿ; ಯಾರಿವರು?
- Lifestyle ರೆಸಿಪಿ: ಮಾವಿನ ಕಾಯಿ ತುರಿದು ಮಾಡುವ ಉಪ್ಪಿನಕಾಯಿ, ಎಣ್ಣೆ ಬಳಸಿಲ್ಲ, ವರ್ಷದವರೆಗೆ ಇಡಲೂ ಬಹುದು
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Finance ಇನ್ಮುಂದೆ ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ, ಏನಿದು ಹೋಸ ನಿಯಮ?
- Sports IPL 2024: ಆರ್ಸಿಬಿ ಕಪ್ ಗೆಲ್ಲದಿರಲು ಅತಿಯಾದ ಪಾರ್ಟಿ ಕಾರಣವೇ?; ರೈನಾ ಬಿಚ್ಚಿಟ್ಟ ಸತ್ಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ತಂತ್ರಜ್ಞಾನ ಪ್ರೇರಿತ Force Gurkha ಆಫ್-ರೋಡ್ ಎಸ್ಯುವಿ ಬಿಡುಗಡೆ
ಬಹುನೀರಿಕ್ಷಿತ ಫೋರ್ಸ್ ಮೋಟಾರ್ಸ್(Force Motors) ಕಂಪನಿಯ ಗೂರ್ಖಾ(Gurkha) ಎಸ್ಯುವಿ ಮಾದರಿಯು ಭಾರತದಲ್ಲಿ ಬಿಡುಗಡೆಯಾಗಿದ್ದು, ಹೊಸ ಕಾರು ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ. 13.59 ಲಕ್ಷ ಬೆಲೆ ಹೊಂದಿದೆ.
ಬಿಎಸ್-6 ಎಮಿಷನ್ಗೆ ಅನುಗುಣವಾಗಿ ಹೊಸ ಗೂರ್ಖಾ ಎಸ್ಯುವಿ ಮಾದರಿಯನ್ನು ಫೋರ್ಸ್ ಮೋಟಾರ್ಸ್ ಕಂಪನಿಯು ಉನ್ನತೀಕರಿಸಿದ್ದು, ಹೊಸ ಕಾರು ಈ ಬಾರಿ ಹಲವಾರು ಪ್ರೀಮಿಯಂ ಫೀಚರ್ಸ್ಗಳೊಂದಿಗೆ ಹೊರ ಮತ್ತು ಒಳ ವಿನ್ಯಾಸದಲ್ಲಿ ಸಾಕಷ್ಟು ಬದಲಾವಣೆಗಳೊಂದಿಗೆ ಅಭಿವೃದ್ದಿಗೊಂಡಿದೆ.
ಹೊಸ ಕಾರನ್ನು ಫೋರ್ಸ್ ಮೋಟಾರ್ಸ್ ಕಂಪನಿಯು ಕೇವಲ ಒಂದೇ ವೆರಿಯೆಂಟ್ನಲ್ಲಿ ಬಿಡುಗಡೆ ಮಾಡಿದ್ದು, ಹೊಸ ಕಾರು ಖರೀದಿಗೆ ಈಗಾಗಲೇ ಬುಕ್ಕಿಂಗ್ ಆರಂಭಿಸಿರುವ ಕಂಪನಿಯು ಅಕ್ಟೋಬರ್ 15ರಿಂದ ವಿತರಣೆ ಆರಂಭಿಸಲಿದೆ.
ನವೀಕೃತ ಗೂರ್ಖಾ ಎಸ್ಯುವಿ ಕಾರು ಮಾದರಿಯು ಪ್ರತಿಸ್ಪರ್ಧಿ ಮಾದರಿಗಿಂತಲೂ ಹಲವಾರು ಪ್ರೀಮಿಯಂ ಫೀಚರ್ಸ್ಗಳನ್ನು ಹೊಂದಿದ್ದು, ದೆಹಲಿ ಆಟೋ ಎಕ್ಸ್ಪೋದಲ್ಲಿ ಅನಾವರಣಗೊಳಿಸಿದ್ದ ಕಾನ್ಸೆಪ್ಟ್ ಮಾದರಿಯಲ್ಲೇ ಉತ್ಪಾದನಾ ಮಾದರಿಯನ್ನು ಉಳಿಸಿಕೊಳ್ಳಲಾಗಿದೆ.
2021ರ ಗೂರ್ಖಾ ಕಾರಿನ ಸ್ಪೋರ್ಟಿ ವಿನ್ಯಾಸ ಮತ್ತು ಪ್ರೀಮಿಯಂ ಫೀಚರ್ಸ್ಗಳು ಆಫ್ ರೋಡ್ ಎಸ್ಯುವಿ ಪ್ರೀಯರನ್ನು ಸೆಳೆಯಲಿದ್ದು, ಎಲ್ಇಡಿ ಹೆಡ್ಲ್ಯಾಂಪ್ ಜೊತೆ ಎಲ್ಇಡಿ ಡಿಆರ್ಎಲ್ಎಸ್, ಬ್ಲ್ಯಾಕ್ ಔಟ್ ಫ್ರಂಟ್ ಬಂಪರ್, ಎಂಜಿನ್ ಬಾಷ್ ಪ್ಲೇಟ್, ಫಾಗ್ ಲ್ಯಾಂಪ್, ಬಾಡಿ ಕ್ಲ್ಯಾಡಿಂಗ್, ಸ್ನೋರ್ಕಲ್ ಸೌಲಭ್ಯವಿದೆ.
ಹೊಸ ಕಾರಿನ ಕ್ಯಾಬಿನ್ ಕೂಡಾ ಆಕರ್ಷಕವಾಗಿದ್ದು, ಡ್ಯಾಶ್ಬೋರ್ಡ್ನಲ್ಲಿ ಈ ಬಾರಿ ಸೆಂಟ್ರಲ್ 7 ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್ಮೆಂಟ್, ಹೊಸದಾದ ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇ ಮಲ್ಟಿ ಇನ್ಫಾರ್ಮೆಷನ್ ಡಿಸ್ಪ್ಲೇ, ಪ್ರತ್ಯೇಕವಾದ ಆಸನ ಸೌಲಭ್ಯಗಳು, ಮ್ಯಾನುವಲ್ ಎಸಿ ವೆಂಟ್ಸ್ , 12V ಚಾರ್ಜಿಂಗ್ ಸಾಕೆಟ್ ಮತ್ತು ಡ್ಯುಯಲ್ ಯುಎಸ್ಬಿ ಸಾಕೆಟ್ ನೀಡಲಾಗಿದೆ.
ಫೋರ್ಸ್ ಮೋಟಾರ್ಸ್ ಕಂಪನಿಯು ಕಾರು ಆಫ್ ರೋಡ್ ಕಾರಿನಲ್ಲಿ ಪ್ರಯಾಣಿಕ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಿದ್ದು, ಚಾರ್ಸಿ ಬದಲಾವಣೆ ಸೇರಿದಂತೆ ಹಲವು ಸ್ಟ್ಯಾಂಡರ್ಡ್ ಸೆಫ್ಟಿ ಫೀಚರ್ಸ್ಗಳನ್ನು ಹೊಸ ಕಾರಿನಲ್ಲಿ ಸೇರ್ಪಡೆ ಮಾಡಲಾಗಿದೆ.
ಹೊಸ ಕಾರಿನಲ್ಲಿ ಸ್ಪೋರ್ಟಿ ಸ್ಟೈಲ್ ಹೆಚ್ಚಿಸುವುದಕ್ಕಾಗಿ 16-ಇಂಚಿನ ಅಲಾಯ್ ವೀಲ್ಹ್, 245/70 ವಿನ್ಯಾಸದ ಟೈರ್ ನೀಡಲಾಗಿದ್ದು, ಹೊಸ ಕಾರು ಆಫ್-ರೋಡ್ ಎಸ್ಯುವಿ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಮಹೀಂದ್ರಾ ಥಾರ್ ಮಾದರಿಗೆ ಪ್ರಬಲ ಪೈಪೋಟಿ ನೀಡಲಿದೆ.
ಹೊಸ ಗೂರ್ಖಾ ಆವೃತ್ತಿಯು 4116 ಎಂಎಂ ಉದ್ದ, 1812 ಎಂಎಂ ಎತ್ತರ, 2400 ವ್ಹೀಲ್ ಬೆಸ್ ಮತ್ತು 210 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಹೊಸ ಕಾರನ್ನು ಡೀಸೆಲ್ ಆವೃತ್ತಿಯಲ್ಲಿ ಮಾತ್ರ ಖರೀದಿಸಬಹುದಾಗಿದೆ.
ಹೊಸ ಗೂರ್ಖಾ ಮಾದರಿಯು ನ್ಯೂ ಜನರೇಷನ್ ಆಫ್-ರೋಡ್ ಪ್ರಿಯರನ್ನು ಸೆಳೆಯಲಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ನೊಂದಿಗೆ 2.6 ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ಪಡೆದುಕೊಂಡಿದೆ.
2.6 ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಮಾದರಿಯು 90 ಬಿಎಚ್ಪಿ ಮತ್ತು 250 ಎನ್ಎಂ ಟಾರ್ಕ್ ಉತ್ಪಾದನಾ ವೈಶಿಷ್ಟ್ಯತೆ ಹೊಂದಿದ್ದು, ಹೊಸ ಕಾರಿನಲ್ಲಿ ಸ್ಟ್ಯಾಂಡರ್ಡ್ ಆಗಿ 4X4 ಡ್ರೈವ್ ಟೆಕ್ನಾಲಜಿ ಬಳಕೆ ಮಾಡಲಾಗಿದೆ.
ಫೋರ್ಸ್ ಮೋಟಾರ್ಸ್ ಕಂಪನಿಯು ಹೊಸ ಕಾರಿನಲ್ಲಿ ಸ್ಟ್ಯಾಂಡರ್ಡ್ ಆಕ್ಸೆಸರಿಸ್ಗಳನ್ನು ಹೊರತುಪಡಿಸಿ ಆಸಕ್ತ ಗ್ರಾಹಕರಿಗೆ ಹೆಚ್ಚುವರಿ ಮೌಲ್ಯದ ಆಕ್ಸೆಸರಿಸ್ ಪ್ಯಾಕೇಜ್ ಆಯ್ಕೆ ನೀಡಲಿದ್ದು, ಹೆಚ್ಚುವರಿ ಆಕ್ಸೆಸರಿಸ್ನಲ್ಲಿ ವಿಂಡ್ ಸ್ಕೀನ್ ಬಾರ್, ರೂಫ್ ಕ್ಯಾರಿಯರ್, ರಿಯರ್ ರ್ಯಾಡರ್, ಅಲಾಯ್ ವೀಲ್ಹ್ ಮತ್ತು ರಿಯರ್ ಸೈಡ್ ಫೇಸಿಂಗ್ ಚೈಲ್ಡ್ ಸೀಟ್ ನೀಡಲಾಗಿದೆ.
ಇದರೊಂದಿಗೆ ಹೊಸ ಕಾರು ರೆಡ್, ಗ್ರಿನ್, ವೈಟ್, ಆರೇಂಜ್, ಗ್ರೆ ಎಂಬ ಐದು ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಕಾರಿನ ಸ್ಪೋರ್ಟಿ ವಿನ್ಯಾಸ ಮತ್ತು ಪ್ರೀಮಿಯಂ ಫೀಚರ್ಸ್ಗಳು ಆಫ್ ರೋಡ್ ಎಸ್ಯುವಿ ಪ್ರಿಯರನ್ನು ಸೆಳೆಯಲಿವೆ.
ಫೋರ್ಸ್ ಮೋಟಾರ್ಸ್ ಕಂಪನಿಯು ಸ್ಟ್ಯಾಂಡರ್ಡ್ ಆಕ್ಸೆಸರಿಸ್ ಫೀಚರ್ಸ್ ಹೊರತುಪಡಿಸಿ ಹೆಚ್ಚುವರಿ ಮೊತ್ತದಲ್ಲಿ ಆಫ್-ರೋಡ್ ಚಾಲನೆ ಪೂರಕವಾದ ಮತ್ತಷ್ಟು ಹೊಸ ಸೌಲಭ್ಯಗಳನ್ನು ಆಕ್ಸೆಸರಿಸ್ ಪ್ಯಾಕೇಜ್ ಮೂಲಕ ಪಡೆದುಕೊಳ್ಳಬಹುದು.
ಹೊಸ ಕಾರಿನಲ್ಲಿ ಆಸಕ್ತ ಗ್ರಾಹಕರು ಹೆಚ್ಚುವರಿ ಮೌಲ್ಯದೊಂದಿಗೆ ಆಕ್ಸೆಸರಿಸ್ ಪ್ಯಾಕೇಜ್ನಲ್ಲಿ ವಿಂಡ್ ಸ್ಕೀನ್ ಬಾರ್, ಲಗೇಜ್ ಸಂಗ್ರಹಿಸಲು ರೂಫ್ ಕ್ಯಾರಿಯರ್, ರಿಯರ್ ಪಿನ್ ಲ್ಯಾಡರ್, ಅಲಾಯ್ ಚಕ್ರದೊಂದಿಗೆ ಆಲ್ ಟೆರೇನ್ ಟೈರ್, ರಿಯರ್ ಸೈಡ್ ಫೇಸಿಂಗ್ ಚೈಲ್ಡ್ ಸೀಟ್ ಮತ್ತು ಟೈಲ್ ಲ್ಯಾಂಪ್ ಗ್ರಿಲ್ ನೀಡಲಾಗುತ್ತದೆ.