ಫೈವ್ ಡೋರ್ ಮಾದರಿಯಲ್ಲೂ ಬಿಡುಗಡೆಯಾಗಲಿದೆ ಬಿಎಸ್-6 ಫೋರ್ಸ್ ಗೂರ್ಖಾ ಎಸ್‌ಯುವಿ
ಫೋರ್ಸ್ ಮೋಟಾರ್ಸ್ ಕಂಪನಿಯು ತನ್ನ ಬಹುನೀರಿಕ್ಷಿತ ಬಿಎಸ್-6 ಗೂರ್ಖಾ ಎಸ್‌ಯುವಿ ಕಾರು ಮಾದರಿಯನ್ನು ಭಾರತದಲ್ಲಿ ಬಿಡುಗಡೆಗಾಗಿ ಅಂತಿಮ ಸಿದ್ದತೆ ನಡೆಸುತ್ತಿದ್ದು, ಹೊಸ ಆಫ್ ರೋಡ್ ಎಸ್‌ಯುವಿಯು ಹಲವಾರು ಹೊಸ ವೈಶಿಷ್ಟ್ಯತೆಗಳೊಂದಿಗೆ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.

ಗೂರ್ಖಾ ಬಿಎಸ್-6 ಆವೃತ್ತಿಯನ್ನು ಕೋವಿಡ್ ಪರಿಸ್ಥಿತಿಯಿಂದಾಗಿ ಬಿಡುಗಡೆಯನ್ನು ಮುಂದೂಡಿಕೆ ಮಾಡಲಾಗುತ್ತಿದ್ದು, ಇದೀಗ ಪರಿಸ್ಥಿತಿ ಸಹಜಸ್ಥಿತಿಯತ್ತ ಮರಳುತ್ತಿರುವುದರಿಂದ ಹೊಸ ಕಾರು ಬಿಡುಗಡೆಗೆ ನಿರ್ಧರಿಸಿದೆ. ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ ತ್ರಿ ಡೋರ್ ಮತ್ತು ಫೈವ್ ಡೋರ್ ಮಾದರಿಗಳೊಂದಿಗೆ ಬಿಡುಗಡೆಯಾಗುತ್ತಿದ್ದು, ಸದ್ಯ ಹೊಸ ಕಾರು ಮಾದರಿಯಲ್ಲಿ ತ್ರಿ ಡೋರ್ ಮಾದರಿಯು ಖರೀದಿಗೆ ಲಭ್ಯವಾಗಲಿದೆ.

ಫೋರ್ಸ್ ಮೋಟಾರ್ಸ್ ಕಂಪನಿಯು ಈ ಹಿಂದಿನ ಮಾದರಿಯಂತೆ ಹೊಸ ಕಾರಿನಲ್ಲಿ ತ್ರಿ ಡೋರ್ ಮಾದರಿಯನ್ನು ಆಫ್ ರೋಡ್ ವೈಶಿಷ್ಟ್ಯತೆಗಾಗಿ ಅಭಿವೃದ್ದಿಪಡಿಸಿದ್ದು, ತ್ರಿ ಡೋರ್ ಮಾದರಿಯು ಬಿಡುಗಡೆಯಾದ ಕೆಲ ತಿಂಗಳ ನಂತರ ಫೈವ್ ಡೋರ್ ಮಾದರಿಯು ಮಾರುಕಟ್ಟೆ ಪ್ರವೇಶಿಸಲಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಗೂರ್ಖಾ ಎಸ್‌ಯುವಿಯನ್ನು ಫೋರ್ಸ್ ಮೋಟಾರ್ಸ್ ಕಂಪನಿಯು ಉನ್ನತೀಕರಿಸಿದ್ದು, ಹೊಸ ಕಾರು ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಹೊರ ಮತ್ತು ಒಳ ವಿನ್ಯಾಸದಲ್ಲಿ ಸಾಕಷ್ಟು ಸುಧಾರಣೆಗೊಂಡಿದೆ.

ಬಿಎಸ್-6 ಎಮಿಷನ್ ನಿಯಮದೊಂದಿಗೆ ಉನ್ನತೀಕರಣಗೊಂಡಿರುವ ಫೋರ್ಸ್ ಗೂರ್ಖಾ ಕಾರು ಮಾದರಿಯು ಪ್ರತಿಸ್ಪರ್ಧಿ ಮಾದರಿಗಿಂತಲೂ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಜೋಡಣೆ ಹೊಂದಿರಲಿದ್ದು, ಆಫ್ ರೋಡ್ ಕೌಶಲ್ಯತೆಗೆ ಪೂರಕವಾದ ತಾಂತ್ರಿಕ ಅಂಶಗಳನ್ನು ಹೊಂದಿದೆ.

ಹೊಸ ಎಮಿಷನ್ ನಿಯಮದಿಂದಾಗಿ ಹೊಸ ಕಾರಿನ ಎಂಜಿನ್ ಆಯ್ಕೆಯಲ್ಲಿ ಮಾತ್ರವಲ್ಲದೇ ಪ್ರೀಮಿಯಂ ಫೀಚರ್ಸ್‌ಗಳು ಮತ್ತು ಪ್ರಯಾಣಿಕ ಸುರಕ್ಷತೆಯಲ್ಲೂ ಸಾಕಷ್ಟು ಬದಲಾವಣೆ ಹೊಂದಿದ್ದು, ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ನೊಂದಿಗೆ ಆಫ್ ರೋಡ್ ಪ್ರಿಯರನ್ನು ಸೆಳೆಯಲಿದೆ.

ಜೊತೆಗೆ ಕಾರಿನ ಹೊರ ಮತ್ತು ಒಳಭಾಗದ ತಾಂತ್ರಿಕ ಅಂಶಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ವಿಶೇಷವಾಗಿ ವಿನ್ಯಾಸಗೊಳಿಸಲಾದ ಮುಂಭಾಗದ ಗ್ರಿಲ್, ಬಂಪರ್ ಮೇಲೆ ನೀಡಲಾಗಿರುವ ಹೆಡ್‌ಲ್ಯಾಂಪ್ ಕ್ಲಸ್ಟರ್ ಗಮನಸೆಳೆಯಲಿದೆ.

ಬಲಿಷ್ಠವಾದ ಬಾಡಿ ಕ್ಲ್ಯಾಡಿಂಗ್ ಸೌಲಭ್ಯವು ಆಫ್ ರೋಡ್ ಕಾರಿನ ಪರ್ಫಾಮೆನ್ಸ್‌ಗೆ ಸಾಕಷ್ಟು ಸಹಕಾರಿಯಾಗಿದ್ದು, ಹೊಸ ಕಾರು ಹಳೆಯ ಮಾದರಿಗಿಂತಲೂ ಉತ್ತಮ ಹೊರವಿನ್ಯಾಸದೊಂದಿಗೆ ಪ್ರೀಮಿಯಂ ಮಾದರಿಯಾಗಿ ಮಿಂಚಲಿದೆ.

ಹೊಸ ಕಾರಿನಲ್ಲಿ ಸ್ಪೋರ್ಟಿ ಸ್ಟೈಲ್ ಹೆಚ್ಚಿಸುವುದಕ್ಕಾಗಿ 16-ಇಂಚಿನ ಅಲಾಯ್ ವೀಲ್ಹ್, 245/70 ವಿನ್ಯಾಸದ ಟೈರ್ ನೀಡಲಾಗಿದ್ದು, ಒಳಭಾಗದ ವಿನ್ಯಾಸದಲ್ಲೂ ಭಾರೀ ಬದಲಾವಣೆಯೊಂದಿಗೆ ಪ್ರೀಮಿಯಂ ಫೀಚರ್ಸ್ ನೀಡಲಾಗಿದೆ.

ಡ್ಯಾಶ್‌ಬೋರ್ಡ್‌ನಲ್ಲಿ ಈ ಬಾರಿ ಸೆಂಟ್ರಲ್ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್, ಹೊಸದಾದ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಮಲ್ಟಿ ಇನ್‌ಫಾರ್ಮೆಷನ್ ಡಿಸ್‌ಪ್ಲೇ, ಪ್ರತ್ಯೇಕವಾದ ಆಸನ ಸೌಲಭ್ಯಗಳು, ಹೊಸದಾದ ಎಸಿ ವೆಂಟ್ಸ್ ಮತ್ತು ವಿವಿಧ ಬಣ್ಣದ ಆಯ್ಕೆಗಳನ್ನು ನೀಡಲಾಗಿದೆ.

ಇದರೊಂದಿಗೆ ಹೊಸ ಆಫ್ ರೋಡ್ ಕಾರಿನಲ್ಲಿ ಪ್ರಯಾಣಿಕ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಚಾರ್ಸಿ ಬದಲಾವಣೆ ಸೇರಿದಂತೆ ಹಲವು ಸ್ಟ್ಯಾಂಡರ್ಡ್ ಸೆಫ್ಟಿ ಫೀಚರ್ಸ್‌ಗಳನ್ನು ಹೊಸ ಗೂರ್ಖಾದಲ್ಲಿ ನೀಡಲಾಗಿದೆ.


Click it and Unblock the Notifications








