Just In
- 15 min ago
ಮಕ್ಕಳಿಗಾಗಿ 60-70 ಕಿ.ಮೀ ಮೈಲೇಜ್ ನೀಡುವ ಮಿನಿ ಎಲೆಕ್ಟ್ರಿಕ್ ಜೀಪ್ ತಯಾರಿಸಿದ ತಂದೆ
- 1 hr ago
ಮಿನಿ ಎಂಪಿವಿ ಕಾರು ಮಾರಾಟದಲ್ಲಿ ರೆನಾಲ್ಟ್ ಟ್ರೈಬರ್ ಹೊಸ ಮೈಲಿಗಲ್ಲು
- 2 hrs ago
ಎಕ್ಸ್ಯುವಿ700 ಬಿಡುಗಡೆಯ ನಂತರ ತಾತ್ಕಾಲಿಕವಾಗಿ ಮಾರಾಟದಿಂದ ಸ್ಥಗಿತವಾಗಲಿದೆ ಎಕ್ಸ್ಯುವಿ500
- 3 hrs ago
ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ರಾಯಲ್ ಎನ್ಫೀಲ್ಡ್ ಹಂಟರ್ ಬೈಕ್
Don't Miss!
- News
ವರ್ಷಕ್ಕೆ 850 ಮಿಲಿಯನ್ ಸ್ಪುಟ್ನಿಕ್ V ಲಸಿಕೆ ತಯಾರಿಸಲಿದೆ ಭಾರತ
- Sports
ಐಪಿಎಲ್ : ಈ ದಾಖಲೆ ಮಾಡಿದ್ದು ಕೊಹ್ಲಿ ಬಿಟ್ರೆ ಸಂಜು ಸ್ಯಾಮ್ಸನ್
- Lifestyle
ಅಧ್ಯಯನ: ಸ್ಥೂಲಕಾಯದವರ ಸ್ಮರಣಾ ಶಕ್ತಿ ಕಾಪಾಡುತ್ತೆ ಬೆಣ್ಣೆಹಣ್ಣು
- Finance
ಏಪ್ರಿಲ್ 13ರ ಬಿಟ್ಕಾಯಿನ್ ರೇಟ್ ಎಷ್ಟಿದೆ?
- Movies
ಸಾಮಾಜಿಕ ಜಾಲತಾಣಕ್ಕೆ ಅದ್ಧೂರಿಯಾಗಿ ಎಂಟ್ರಿ ಕೊಟ್ಟ ಕನಸುಗಾರ
- Education
WCL Recruitment 2021: 44 ಮೆಡಿಕಲ್ ಸ್ಪೆಷಲಿಸ್ಟ್ ಮತ್ತು ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಫೋರ್ಸ್ ಹೊಸ ಗೂರ್ಖಾ ಆಫ್ ರೋಡ್ ಎಸ್‌ಯುವಿ
ಫೋರ್ಸ್ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೇ ತನ್ನ ಬಿಎಸ್-6 ಎಂಜಿನ್ ಪ್ರೇರಿತ ಗೂರ್ಖಾ ಆಫ್-ರೋಡ್ ಎಸ್‌ಯುವಿ ಕಾರು ಆವೃತ್ತಿಯನ್ನು ಬಿಡುಗಡೆ ಮಾಡುವ ಅಂತಿಮ ಸಿದ್ದತೆಯಲ್ಲಿದ್ದು, ಹೊಸ ಆಫ್ ರೋಡ್ ಕಾರು ಮಾದರಿಯು ವಿವಿಧ ಬಣ್ಣಗಳ ಆಯ್ಕೆಯೊಂದಿಗೆ ಹೊಸ ವೆರಿಯೆಂಟ್‌ನಲ್ಲಿ ರೋಡ್ ಟೆಸ್ಟಿಂಗ್ ಪೂರ್ಣಗೊಳಿಸುತ್ತಿದೆ.

2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಮೊದಲ ಬಾರಿಗೆ ಪ್ರದರ್ಶನಗೊಂಡಿದ್ದ ನ್ಯೂ ಜನರೇಷನ್ ಫೋರ್ಸ್ ಗೂರ್ಖಾ ಹೊಸ ಆವೃತ್ತಿಯು ಕಳೆದ ವರ್ಷದ ಜೂನ್ ಅಥವಾ ಜುಲೈ ವೇಳೆಗೆ ಬಿಡುಗಡೆಯಾಗಬೇಕಿತ್ತು. ಆದರೆ ಕರೋನಾ ವೈರಸ್‌ನಿಂದಾಗಿ ಹೊಸ ಕಾರಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಿದ ಪರಿಣಾಮ ಬಿಡುಗಡೆ ಪ್ರಕ್ರಿಯೆ ವಿಳಂಬವಾಗಿದ್ದು, ಇದೀಗ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವ ಮೂಲಕ ಈ ವರ್ಷ ಮೇ ಹೊತ್ತಿಗೆ ಮಾರುಕಟ್ಟೆ ಪ್ರವೇಶಿಸುವುದು ಬಹುತೇಕ ಖಚಿತವಾಗಿದೆ.

2021ರ ಗೂರ್ಖಾ ಎಸ್‌ಯುವಿಯನ್ನು ಫೋರ್ಸ್ ಮೋಟಾರ್ಸ್ ಕಂಪನಿಯು ಹೊಸ ಎಮಿಷನ್ ನಿಯಮದೊಂದಿಗೆ ಉನ್ನತೀಕರಿಸಿದ್ದು, ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಜೋಡಣೆ ಮಾಡಲಾಗಿದೆ.

ನ್ಯೂ ಜನರೇಷನ್ ಗೂರ್ಖಾ ಎಸ್‌ಯುವಿಯನ್ನು ಫೋರ್ಸ್ ಮೋಟಾರ್ಸ್ ಕಂಪನಿಯು ಬಿಎಸ್-6 ಎಮಿಷನ್ ನಿಯಮದೊಂದಿಗೆ ಉನ್ನತೀಕರಿಸಿದ್ದು, ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಜೋಡಣೆ ಮಾಡಲಾಗಿದೆ.

ಹೊಸ ಎಮಿಷನ್ ನಿಯಮದಿಂದಾಗಿ ಹೊಸ ಎಂಜಿನ್ ಆಯ್ಕೆಯಲ್ಲಿ ಮಾತ್ರವಲ್ಲದೇ ಪ್ರೀಮಿಯಂ ಫೀಚರ್ಸ್‌ಗಳು ಮತ್ತು ಪ್ರಯಾಣಿಕ ಸುರಕ್ಷತೆಯಲ್ಲೂ ಸಾಕಷ್ಟು ಬದಲಾವಣೆ ಹೊಂದಿದ್ದು, ಹೊರ ಮತ್ತು ಒಳಭಾಗದ ತಾಂತ್ರಿಕ ಅಂಶಗಳಲ್ಲಿ ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ನೊಂದಿಗೆ ಆಫ್ ರೋಡ್ ಕೌಶಲ್ಯದಲ್ಲಿ ಗಮನಸೆಳೆಯಲಿದೆ.

ಬಿಎಸ್-6 ಗೂರ್ಖಾ ಕಾರು ಮಾದರಿಯು ಆಫ್ ರೋಡ್ ಚಾಲನೆಗೆ ಪೂರಕವಾದ ಹಲವು ಫೀಚರ್ಸ್‌ಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಬೆಲೆ ವಿಚಾರದಲ್ಲೂ ಪ್ರತಿಸ್ಪರ್ಧಿ ಕಾರು ಮಾದರಿಗಿಂತಲೂ ಆಕರ್ಷಕವಾಗಿರಲಿದೆ. ಹೊಸ ಎಮಿಷನ್ ನಿಯಮದಿಂದಾಗಿ ಗೂರ್ಖಾ ಹೊಸ ಕಾರು ಮಾದರಿಯ ಎಂಜಿನ್ ಮಾತ್ರವಲ್ಲದೇ ಪ್ರೀಮಿಯಂ ಫೀಚರ್ಸ್‌ಗಳ ಜೊತೆಗೆ ಪ್ರಯಾಣಿಕ ಸುರಕ್ಷತೆಯಲ್ಲೂ ಸಾಕಷ್ಟು ಬದಲಾವಣೆ ಹೊಂದಿದೆ.

ಹಾಗೆಯೇ ಹೊರ ಮತ್ತು ಒಳಭಾಗದ ತಾಂತ್ರಿಕ ಅಂಶಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ವಿಶೇಷವಾಗಿ ವಿನ್ಯಾಸಗೊಳಿಸಲಾದ ಮುಂಭಾಗದ ಗ್ರಿಲ್, ಬಂಪರ್ ಮೇಲೆ ನೀಡಲಾಗಿರುವ ಹೆಡ್‌ಲ್ಯಾಂಪ್ ಕ್ಲಸ್ಟರ್ ಗಮನಸೆಳೆಯಲಿದೆ.

ಇದರ ಜೊತೆಗೆ ಬಲಿಷ್ಠವಾದ ಬಾಡಿ ಕ್ಲ್ಯಾಡಿಂಗ್ ಸೌಲಭ್ಯವು ಆಫ್ ರೋಡ್ ಕಾರಿನ ಪರ್ಫಾಮೆನ್ಸ್‌ಗೆ ಸಾಕಷ್ಟು ಸಹಕಾರಿಯಾಗಿದ್ದು, ಹೊಸ ಕಾರು ಹಳೆಯ ಮಾದರಿಗಿಂತಲೂ ಉತ್ತಮ ಹೊರವಿನ್ಯಾಸದೊಂದಿಗೆ ಪ್ರೀಮಿಯಂ ಮಾದರಿಯಾಗಿ ಮಿಂಚಲಿದೆ.
MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಹೊಸ ಕಾರಿನಲ್ಲಿ ಸ್ಪೋರ್ಟಿ ಸ್ಟೈಲ್ ಹೆಚ್ಚಿಸುವುದಕ್ಕಾಗಿ 16-ಇಂಚಿನ ಅಲಾಯ್ ವೀಲ್ಹ್, 245/70 ವಿನ್ಯಾಸದ ಟೈರ್ ನೀಡಲಾಗಿದ್ದು, ಒಳಭಾಗದ ವಿನ್ಯಾಸದಲ್ಲೂ ಭಾರೀ ಬದಲಾವಣೆಯೊಂದಿಗೆ ಪ್ರೀಮಿಯಂ ಫೀಚರ್ಸ್ ನೀಡಲಾಗಿದೆ.

ಡ್ಯಾಶ್‌ಬೋರ್ಡ್‌ನಲ್ಲಿ ಈ ಬಾರಿ ಸೆಂಟ್ರಲ್ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್, ಹೊಸದಾದ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಮಲ್ಟಿ ಇನ್‌ಫಾರ್ಮೆಷನ್ ಡಿಸ್‌ಪ್ಲೇ, ಪ್ರತ್ಯೇಕವಾದ ಆಸನ ಸೌಲಭ್ಯಗಳು, ಹೊಸದಾದ ಎಸಿ ವೆಂಟ್ಸ್ ಮತ್ತು ವಿವಿಧ ಬಣ್ಣದ ಆಯ್ಕೆಗಳನ್ನು ನೀಡಲಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಇದರೊಂದಿಗೆ ಹೊಸ ಆಫ್ ರೋಡ್ ಕಾರಿನಲ್ಲಿ ಪ್ರಯಾಣಿಕ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಚಾರ್ಸಿ ಬದಲಾವಣೆ ಸೇರಿದಂತೆ ಹಲವು ಸ್ಟ್ಯಾಂಡರ್ಡ್ ಸೆಫ್ಟಿ ಫೀಚರ್ಸ್‌ಗಳನ್ನು ಹೊಸ ಗೂರ್ಖಾದಲ್ಲಿ ನೀಡಲಾಗಿದೆ.