ಬಿಎಸ್-6 ಎಂಜಿನ್ ಹೊಂದಿರುವ Force Gurkha ಹೊಸ ಟೀಸರ್ ಬಿಡುಗಡೆ

Force Motors ಕಂಪನಿಯು ತನ್ನ ಬಹುನೀರಿಕ್ಷಿತ ಬಿಎಸ್-6 Gurkha ಎಸ್‌ಯುವಿ ಕಾರು ಮಾದರಿಯನ್ನು ಭಾರತದಲ್ಲಿ ಬಿಡುಗಡೆಗಾಗಿ ಅಂತಿಮ ಸಿದ್ದತೆ ನಡೆಸುತ್ತಿದ್ದು, ಹೊಸ ಆಫ್-ರೋಡ್ ಎಸ್‌ಯುವಿಯು ಹಲವಾರು ಹೊಸ ವೈಶಿಷ್ಟ್ಯತೆಗಳೊಂದಿಗೆ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.

ಬಿಎಸ್-6 ಎಂಜಿನ್ ಹೊಂದಿರುವ ಹೊಸ Force Gurkha ಎಸ್‌ಯುವಿ ಟೀಸರ್ ಬಿಡುಗಡೆ

Gurkha ಬಿಎಸ್-6 ಆವೃತ್ತಿಯನ್ನು ಕೋವಿಡ್ ಕಾರಣಕ್ಕಾಗಿ ಬಿಡುಗಡೆಯನ್ನು ಮುಂದೂಡಿಕೆ ಮಾಡಲಾಗುತ್ತಿದ್ದು, ಇದೀಗ ಪರಿಸ್ಥಿತಿ ಸಹಜಸ್ಥಿತಿಯತ್ತ ಮರಳುತ್ತಿರುವುದರಿಂದ ಹೊಸ ಕಾರು ಬಿಡುಗಡೆಗೆ ನಿರ್ಧರಿಸಿದೆ. ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ ತ್ರಿ ಡೋರ್ ಮತ್ತು ಫೈವ್ ಡೋರ್ ಮಾದರಿಗಳೊಂದಿಗೆ ಬಿಡುಗಡೆಯಾಗುತ್ತಿದ್ದು, ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಹೊಸ ಕಾರಿನ ಟೀಸರ್ ಬಹಿರಂಗವಾಗಿದೆ.

ಬಿಎಸ್-6 ಎಂಜಿನ್ ಹೊಂದಿರುವ ಹೊಸ Force Gurkha ಎಸ್‌ಯುವಿ ಟೀಸರ್ ಬಿಡುಗಡೆ

Force Motors ಕಂಪನಿಯು ಈ ಹಿಂದಿನ ಮಾದರಿಯಂತೆ ಹೊಸ ಕಾರಿನಲ್ಲಿ ತ್ರಿ ಡೋರ್ ಮಾದರಿಯನ್ನು ಆಫ್ ರೋಡ್ ವೈಶಿಷ್ಟ್ಯತೆಗಾಗಿ ಅಭಿವೃದ್ದಿಪಡಿಸಿದ್ದು, ತ್ರಿ ಡೋರ್ ಮಾದರಿಯು ಬಿಡುಗಡೆಯಾದ ಕೆಲ ತಿಂಗಳ ನಂತರ ಫೈವ್ ಡೋರ್ ಮಾದರಿಯು ಮಾರುಕಟ್ಟೆ ಪ್ರವೇಶಿಸಲಿದೆ.

ಬಿಎಸ್-6 ಎಂಜಿನ್ ಹೊಂದಿರುವ ಹೊಸ Force Gurkha ಎಸ್‌ಯುವಿ ಟೀಸರ್ ಬಿಡುಗಡೆ

ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ Gurkha ಎಸ್‌ಯುವಿಯನ್ನು Force Motors ಕಂಪನಿಯು ಉನ್ನತೀಕರಿಸಿದ್ದು, ಹೊಸ ಕಾರು ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಹೊರ ಮತ್ತು ಒಳ ವಿನ್ಯಾಸದಲ್ಲಿ ಸಾಕಷ್ಟು ಸುಧಾರಣೆಗೊಂಡಿದೆ.

ಬಿಎಸ್-6 ಎಂಜಿನ್ ಹೊಂದಿರುವ ಹೊಸ Force Gurkha ಎಸ್‌ಯುವಿ ಟೀಸರ್ ಬಿಡುಗಡೆ

ಬಿಎಸ್-6 ಎಮಿಷನ್ ನಿಯಮದೊಂದಿಗೆ ಉನ್ನತೀಕರಣಗೊಂಡಿರುವ Force Gurkha ಕಾರು ಮಾದರಿಯು ಪ್ರತಿಸ್ಪರ್ಧಿ ಮಾದರಿಗಿಂತಲೂ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಜೋಡಣೆ ಹೊಂದಿರಲಿದ್ದು, ಆಫ್-ರೋಡ್ ಕೌಶಲ್ಯತೆಗೆ ಪೂರಕವಾದ ಹಲವು ಹೊಸ ತಾಂತ್ರಿಕ ಅಂಶಗಳನ್ನು ಹೊಂದಿದೆ.

ಬಿಎಸ್-6 ಎಂಜಿನ್ ಹೊಂದಿರುವ ಹೊಸ Force Gurkha ಎಸ್‌ಯುವಿ ಟೀಸರ್ ಬಿಡುಗಡೆ

ಹೊಸ ಎಮಿಷನ್ ನಿಯಮದಿಂದಾಗಿ ಕಾರಿನ ಎಂಜಿನ್‌ ಆಯ್ಕೆಯಲ್ಲಿ ಮಾತ್ರವಲ್ಲದೇ ಪ್ರೀಮಿಯಂ ಫೀಚರ್ಸ್‌ಗಳು ಮತ್ತು ಪ್ರಯಾಣಿಕ ಸುರಕ್ಷತೆಯಲ್ಲೂ ಸಾಕಷ್ಟು ಬದಲಾವಣೆ ಹೊಂದಿದ್ದು, ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ನೊಂದಿಗೆ ಆಫ್-ರೋಡ್ ಪ್ರಿಯರನ್ನು ಸೆಳೆಯಲಿದೆ.

ಬಿಎಸ್-6 ಎಂಜಿನ್ ಹೊಂದಿರುವ ಹೊಸ Force Gurkha ಎಸ್‌ಯುವಿ ಟೀಸರ್ ಬಿಡುಗಡೆ

ಜೊತೆಗೆ ಕಾರಿನ ಹೊರ ಮತ್ತು ಒಳಭಾಗದ ತಾಂತ್ರಿಕ ಅಂಶಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ವಿಶೇಷವಾಗಿ ವಿನ್ಯಾಸಗೊಳಿಸಲಾದ ಮುಂಭಾಗದ ಗ್ರಿಲ್, ಬಂಪರ್ ಮೇಲೆ ನೀಡಲಾಗಿರುವ ಹೆಡ್‌ಲ್ಯಾಂಪ್ ಕ್ಲಸ್ಟರ್ ಗಮನಸೆಳೆಯಲಿದೆ.

ಬಿಎಸ್-6 ಎಂಜಿನ್ ಹೊಂದಿರುವ ಹೊಸ Force Gurkha ಎಸ್‌ಯುವಿ ಟೀಸರ್ ಬಿಡುಗಡೆ

ಬಲಿಷ್ಠವಾದ ಬಾಡಿ ಕ್ಲ್ಯಾಡಿಂಗ್ ಸೌಲಭ್ಯವು ಆಫ್ ರೋಡ್ ಕಾರಿನ ಪರ್ಫಾಮೆನ್ಸ್‌ಗೆ ಸಾಕಷ್ಟು ಸಹಕಾರಿಯಾಗಿದ್ದು, ಹೊಸ ಕಾರು ಹಳೆಯ ಮಾದರಿಗಿಂತಲೂ ಉತ್ತಮ ಹೊರವಿನ್ಯಾಸದೊಂದಿಗೆ ಪ್ರೀಮಿಯಂ ಮಾದರಿಯಾಗಿ ಮಿಂಚಲಿದೆ.

ಬಿಎಸ್-6 ಎಂಜಿನ್ ಹೊಂದಿರುವ ಹೊಸ Force Gurkha ಎಸ್‌ಯುವಿ ಟೀಸರ್ ಬಿಡುಗಡೆ

Gurkha ಹೊಸ ಕಾರಿನಲ್ಲಿ ಸ್ಪೋರ್ಟಿ ಸ್ಟೈಲ್ ಹೆಚ್ಚಿಸುವುದಕ್ಕಾಗಿ 16-ಇಂಚಿನ ಅಲಾಯ್ ವೀಲ್ಹ್, 245/70 ವಿನ್ಯಾಸದ ಟೈರ್ ನೀಡಲಾಗಿದ್ದು, ಒಳಭಾಗದ ವಿನ್ಯಾಸದಲ್ಲೂ ಭಾರೀ ಬದಲಾವಣೆಯೊಂದಿಗೆ ಪ್ರೀಮಿಯಂ ಫೀಚರ್ಸ್ ನೀಡಲಾಗಿದೆ.

ಬಿಎಸ್-6 ಎಂಜಿನ್ ಹೊಂದಿರುವ ಹೊಸ Force Gurkha ಎಸ್‌ಯುವಿ ಟೀಸರ್ ಬಿಡುಗಡೆ

ಡ್ಯಾಶ್‌ಬೋರ್ಡ್‌ನಲ್ಲಿ ಈ ಬಾರಿ ಸೆಂಟ್ರಲ್ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್, ಹೊಸದಾದ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಮಲ್ಟಿ ಇನ್‌ಫಾರ್ಮೆಷನ್ ಡಿಸ್‌ಪ್ಲೇ, ಪ್ರತ್ಯೇಕವಾದ ಆಸನ ಸೌಲಭ್ಯಗಳು, ಹೊಸದಾದ ಎಸಿ ವೆಂಟ್ಸ್ ಮತ್ತು ವಿವಿಧ ಬಣ್ಣದ ಆಯ್ಕೆಗಳನ್ನು ನೀಡಲಾಗಿದೆ.

ಬಿಎಸ್-6 ಎಂಜಿನ್ ಹೊಂದಿರುವ ಹೊಸ Force Gurkha ಎಸ್‌ಯುವಿ ಟೀಸರ್ ಬಿಡುಗಡೆ

ಇದರೊಂದಿಗೆ ಹೊಸ Gurkha ಕಾರು ಆಫ್ ರೋಡ್ ಕಾರಿನಲ್ಲಿ ಪ್ರಯಾಣಿಕ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಚಾರ್ಸಿ ಬದಲಾವಣೆ ಸೇರಿದಂತೆ ಹಲವು ಸ್ಟ್ಯಾಂಡರ್ಡ್ ಸೆಫ್ಟಿ ಫೀಚರ್ಸ್‌ಗಳನ್ನು ಹೊಸ ಕಾರಿನಲ್ಲಿ ನೀಡಲಾಗಿದೆ.

ಬಿಎಸ್-6 ಎಂಜಿನ್ ಹೊಂದಿರುವ ಹೊಸ Force Gurkha ಎಸ್‌ಯುವಿ ಟೀಸರ್ ಬಿಡುಗಡೆ

2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಂಡಿದ್ದ Force Gurkha ಹೊಸ ಆವೃತ್ತಿಯು ಕಳೆದ ವರ್ಷದ ಜುಲೈ ವೇಳೆಗೆ ಬಿಡುಗಡೆಯಾಗುವ ನೀರಿಕ್ಷೆಯಲ್ಲಿತ್ತು. ಆದರೆ ಕೋವಿಡ್ ಪರಿಣಾಮ ಹೊಸ ಕಾರಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳಿಗೆ ಬಹುದಿನಗಳ ನಂತರ ಮರುಚಾಲನೆ ನೀಡಿದ್ದರಿಂದ ಈ ವರ್ಷದ ಆರಂಭದಲ್ಲಿ ಬಿಡುಗಡೆ ಮಾಡಬೇಕಿತ್ತು.

ಬಿಎಸ್-6 ಎಂಜಿನ್ ಹೊಂದಿರುವ ಹೊಸ Force Gurkha ಎಸ್‌ಯುವಿ ಟೀಸರ್ ಬಿಡುಗಡೆ

ಆದರೆ ಈ ವರ್ಷ ಏಪ್ರಿಲ್ ವೇಳೆಗೆ ಕೋವಿಡ್ 2ನೇ ತೀವ್ರವಾದ ಪರಿಣಾಮ ಬಿಡುಗಡೆ ಪ್ರಕ್ರಿಯೆಯನ್ನು ಮತ್ತೆ ಮುಂದೂಡಿದ Force Motors ಕಂಪನಿಯು ಇದೀಗ ಅಂತಿಮ ಬಿಡುಗಡೆಯ ಯೋಜನೆಯಲ್ಲಿದ್ದು, ಶೀಘ್ರದಲ್ಲೇ ಮಾರಾಟ ಆರಂಭಿಸುವುದಾಗಿ ಭರವಸೆ ನೀಡಿದೆ.

ಬಿಎಸ್-6 ಎಂಜಿನ್ ಹೊಂದಿರುವ ಹೊಸ Force Gurkha ಎಸ್‌ಯುವಿ ಟೀಸರ್ ಬಿಡುಗಡೆ

ಹೊಸ ಕಾರು ಆಫ್-ರೋಡ್ ಎಸ್‌ಯುವಿ ಮಾರಾಟದಲ್ಲಿ ಮುಂಚೂಣಿಯಲ್ಲಿರುವ Mahindra Thar ಮಾದರಿಗೆ ಪ್ರಬಲ ಪೈಪೋಟಿಯಾಗಲಿದ್ದು, ಹೊಸ ಕಾರು ವಿವಿಧ ವೆರಿಯೆಂಟ್‌ಗಳೊಂದಿಗೆ ಬಿಡುಗಡೆಯಾಗಲಿದೆ.

ಬಿಎಸ್-6 ಎಂಜಿನ್ ಹೊಂದಿರುವ ಹೊಸ Force Gurkha ಎಸ್‌ಯುವಿ ಟೀಸರ್ ಬಿಡುಗಡೆ

ಸದ್ಯ Mahindra Thar ಕಾರು ಮಾದರಿಯು ವಿವಿಧ ವೆರಿಯೆಂಟ್‌ಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.78 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 15.08 ಲಕ್ಷ ಬೆಲೆ ಹೊಂದಿದ್ದು, ಪ್ರತಿ ಸ್ಪರ್ಧಿ ಮಾದರಿಯ ಬೆಲೆ ಅಂತರಕ್ಕೆ ಅನುಗುಣವಾಗಿ Force Gurkha ಮಾದರಿಯ ಫೀಚರ್ಸ್ ಮತ್ತು ಎಂಜಿನ್ ಆಯ್ಕೆಯು ನಿರ್ಧಾರವಾಗಲಿದೆ.

ಬಿಎಸ್-6 ಎಂಜಿನ್ ಹೊಂದಿರುವ ಹೊಸ Force Gurkha ಎಸ್‌ಯುವಿ ಟೀಸರ್ ಬಿಡುಗಡೆ

ಬಿಎಸ್-6 ಜಾರಿಯಾಗಿರುವ ಹಿನ್ನಲೆಯಲ್ಲಿ ಸಂಪೂರ್ಣವಾಗಿ ಎಂಜಿನ್‌ನೊಂದಿಗೆ ಬಿಡುಗಡೆಯಾಗಬೇಕಿರುವ Force Gurkha ಮಾದರಿಯು ಆಫ್ ರೋಡ್ ಪ್ರಿಯರಲ್ಲಿ ಗಮನಸೆಳೆಯಲಿದ್ದು, ಹೊಸ ಕಾರು Thar ಮಾದರಿಯಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಮಾದರಿಗಳಲ್ಲಿ ಬಿಡುಗಡೆಗೊಳ್ಳಬಹುದಾಗಿದೆ.

More from DriveSpark

Article Published On: Saturday, August 28, 2021, 8:45 [IST]
English summary
Force motors revealed new gurkha teaser image details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+