Just In
Don't Miss!
- Sports
ಐಪಿಎಲ್ನಲ್ಲಿ ಕೆಟ್ಟ ದಾಖಲೆ ಬರೆದ ಕೂಲ್ ಕ್ಯಾಪ್ಟನ್ ಎಂಎಸ್ ಧೋನಿ
- Finance
ಶಾಲೆಯನ್ನ ಅರ್ಧಕ್ಕೆ ತೊರೆದು, 8,000 ರೂ. ವೇತನ ಪಡೆಯುತ್ತಿದ್ದ ನಿಖಿಲ್ ಕಾಮತ್ ಶತಕೋಟ್ಯಧಿಪತಿ ಆಗಿದ್ದೇಗೆ?
- News
ನೈಟ್ ಕರ್ಫ್ಯೂ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪೊಲೀಸರ ಬಿಗಿ ರೂಲ್ಸ್
- Education
Bank Of Baroda Recruitment 2021: 512 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಯುಗಾದಿ ಆರ್ಥಿಕ ಭವಿಷ್ಯ 2021: ನಿಮ್ಮ ನಕ್ಷತ್ರ ಪ್ರಕಾರ ಈ ವರ್ಷ ಆದಾಯ ಸ್ಥಿತಿ ಹೇಗಿರಲಿದೆ
- Movies
ಅಜಯ್ ದೇವಗನ್-ಅಮಿತಾಭ್ ಸಿನಿಮಾದ ಚಿತ್ರೀಕರಣಕ್ಕೆ ಕೊರೊನಾ ಅಡ್ಡಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ ಬಿಡುಗಡೆಯಾಗಲಿದೆ ಜನಪ್ರಿಯ ಫೋರ್ಡ್ ಟೆರಿಟೋರಿ ಎಸ್‍ಯುವಿ
ಫೋರ್ಡ್ ಟೆರಿಟೋರಿ ಮಾದರಿಯು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ. ಅಮೆರಿಕ ಮೂಲದ ವಾಹನ ತಯಾರಕ ಕಂಪನಿಯಾದ ಪೋರ್ಡ್ ತನ್ನ ಈ ಜನಪ್ರಿಯ ಟೆರಿಟೋರಿ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ ಎಂದು ವರದಿಗಳಾಗಿದೆ.

ವರದಿಗಳ ಪ್ರಕಾರ, ಮುಂದಿನ ಕೆಲವು ತಿಂಗಳುಗಳಲ್ಲಿ ಈ ಜನಪ್ರಿಯ ಫೋರ್ಡ್ ಟೆರಿಟೋರಿ ಎಸ್‍ಯುವಿಯು ಭಾರತೀಯ ಮಾರುಕಟ್ಟೆಗೆ ಲಗ್ಗೆಯಿಡಲಿದೆ. ಇನ್ನು ಟೆರಿಟೋರಿ ಆಗಿ ಎಸ್‍ಯುವಿಯ ಬಗ್ಗೆ ಹೇಳುವುದಾದರೆ, ಇದನ್ನು ಚೆಂಗ್ಡು ಆಟೋ ಪ್ರದರ್ಶನದಲ್ಲಿ, ಚೀನಾ, ಕಾಂಬೋಡಿಯಾ, ಲಾವೋಸ್ ಮತ್ತು ಫಿಲಿಪೈನ್ಸ್‌ನಂತಹ ಕೆಲವು ಏಷ್ಯಾದ ಮಾರುಕಟ್ಟೆಗಳಲ್ಲಿ 2018ರಲ್ಲಿ ಮೊದಲ ಬಾರಿಗೆ ಪರಿಚಯಿಸಿತು. ಇದೀಗ ಈ ಏಷ್ಯಾ ಮಾರುಕಟ್ಟೆಗಳಲ್ಲಿ ಟೆರಿಟೊರಿ ಎಸ್‍ಯುವಿಯು ಮಾರಾಟವಾಗುತ್ತಿದೆ.

ಫೋರ್ಡ್ ಟೆರಿಟೊರಿ ಎಸ್‍ಯುವಿಯು 4,580 ಮಿ.ಮೀ ಉದ್ದ, 1,936 ಮಿ.ಮೀ ಅಗಲ ಮತ್ತು 1,674 ಮಿ.ಮೀ ಎತ್ತರವನ್ನು ಹೊಂದಿದೆ, ಇನ್ನು ಈ ಎಸ್‍ಯುವಿಯು 2,716 ಮಿ.ಮೀ ವ್ಹೀಲ್‌ಬೇಸ್ ಅನ್ನು ಹೊಂದಿದ್ದು, ಇದರಿಂದ ಒಳಭಾಗದಲ್ಲಿ ಸಾಕಷ್ಟು ಸ್ಪೇಸ್ ಅನ್ನು ಹೊಂದಿದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಇನ್ನು ವಾಹನಗಳ ಹೃದಯ ಭಾಗ ಎಂದೇ ಹೇಳುವ ಎಂಜಿನ್ ಬಗ್ಗೆ ಹೇಳುವುದಾದರೆ, ಈ ಎಸ್‍ಯುವಿಯಲ್ಲಿ 1.5-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 143 ಬಿಹೆಚ್‍ಪಿ ಪವರ್ ಮತ್ತು 225 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಈ ಎಂಜಿನ್ ಗಳೊಂದಿಗೆ ಎರಡು ಗೇರ್ ಬಾಕ್ಸ್ ಆಯ್ಕೆಯನ್ನು ನೀಡಲಾಗಿದೆ. ಇದು 6-ಸ್ಪೀಡ್ ಮ್ಯಾನುವಲ್ ಮತ್ತು ಸಿವಿಟಿ ಆಯ್ಕೆಗಳಾಗಿದೆ. ಚೀನಾ ಮಾರುಕಟ್ಟೆಯಲ್ಲಿ ಈ ಫೋರ್ಡ್ ಎಸ್‍ಯುವಿಯು 48ವಿ ಮೈಲ್ಡ್-ಹೈಬ್ರಿಡ್ ಸಿಸ್ಟಂನೊಂದಿಗೆ ಲಭ್ಯವಿದೆ. ಆದರೆ ಭಾರತದಲ್ಲಿ ಬಿಡುಗಡೆಯಾಗುವ ಮಾದರಿಯ ಬಗ್ಗೆ ಯಾವುದೇ ಮಾಹಿತಿಗಳು ಬಹಿರಂಗವಾಗಿಲ್ಲ.
MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಫೋರ್ಡ್ ಟೆರಿಟೋರಿ ಎಸ್‍ಯುವಿಯ ಬಗ್ಗೆ ಹೇಳುವುದಾದರೆ, ಇದರಲ್ಲಿ ತೀಕ್ಷ್ಣವಾಗಿ ಕಾಣುವ ಎಲ್‌ಇಡಿ ಹೆಡ್‌ಲ್ಯಾಂಪ್‌ಗಳು, ಅಗಲವಾದ ಮುಂಭಾಗದ ಗ್ರಿಲ್, ವಿಶಾಲವಾದ ಏರ್‌ಡ್ಯಾಮ್ ಮತ್ತು ಮುಂಭಾಗದಲ್ಲಿ ಎಲ್-ಆಕಾರದ ಎಲ್ಇಡಿ ಡಿಆರ್‌ಎಲ್‌ಗಳನ್ನು ಹೊಂದಿದೆ.

ಇನ್ನು ಈ ಎಸ್‍ಯುವಿಯಲ್ಲಿ 18 ಇಂಚಿನ ಅಲಾಯ್ ವ್ಹೀಲ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಮುಂಭಾಗ ಮತ್ತು ಹಿಂಭಾಗ ಬಂಪರ್‌ಗಳಲ್ಲಿ ಸ್ಕಿಡ್ ಪ್ಲೇಟ್‌ಗಳು, ರೂಪ್ ರೈಲ್ ಮತ್ತು ರೂಫ್-ಮೌಂಟಡ್ ಸ್ಪಾಯ್ಲರ್ ಅನ್ನು ಸಹ ಪಡೆಯುತ್ತದೆ. ಹಿಂಭಾಗದ ಬಂಪರ್ ದೊಡ್ಡ ಎಕ್ಸಾಸ್ಟ್ ಸಿಸ್ಟಂ ಅನ್ನು ಸಹ ಹೊಂದಿದೆ. ಇದು ಈ ಎಸ್‍ಯುವಿಗೆ ಸ್ಪೋರ್ಟಿ ಲುಕ್ ಅನ್ನು ನೀಡುತ್ತದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಇನ್ನು ಎಸ್‍ಯುವಿ ಒಳಭಾಗದಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ 10 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ. ಇದರೊಂದಿಗೆ 10 ಇಂಚಿನ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಕೂಡ ಒಳಗೊಂಡಿದೆ.

ಇನ್ನು ಇದರಲ್ಲಿ ಪನೋರಮಿಕ್ ಸನ್‌ರೂಫ್, ಆಂಬಿಯೆಂಟ್ ಕ್ಯಾಬಿನ್ ಲೈಟಿಂಗ್, ಎಲೆಕ್ಟ್ರಿಕ್ ಅಡಜೆಸ್ಟ್ ಮಾಡಬಹುದಾದ ಡ್ರೈವರ್ ಸೀಟ್ ಮತ್ತು ಇನ್ನಿತರ ಫೀಚರ್ ಗಳನ್ನು ಹೊಂದಿವೆ. ಇದರೊಂದಿಗೆ ಆಟೋ ಎಮರ್ಜೆನ್ಸಿ ಬ್ರೇಕಿಂಗ್, ಲೇನ್ ಎಕ್ಸಿಸ್ಟ್ ಎಚ್ಚರಿಕೆ, ಬ್ಲೈಂಡ್-ಸ್ಪಾಟ್ ಮಾನಿಟರಿಂಗ್ ಸಿಸ್ಟಮ್, 360 ಡಿಗ್ರಿ ಕ್ಯಾಮೆರಾ, ಪಾರ್ಕಿಂಗ್ ಅಸಿಸ್ಟ್, ಆರು ಏರ್‌ಬ್ಯಾಗ್‌ಗಳು ಮುಂತಾದ ಸಾಕಷ್ಟು ಸುರಕ್ಷತಾ ಫೀಚರ್ ಗಳನ್ನು ಒಳಗೊಂಡಿವೆ.