ಫೆಬ್ರವರಿ ತಿಂಗಳ ಮಾರಾಟದಲ್ಲಿ ಎಂಜಿ ಗ್ಲೊಸ್ಟರ್ ಎಸ್‍ಯುವಿಯನ್ನು ಹಿಂದಿಕ್ಕಿದ ಪೋರ್ಡ್ ಎಂಡೀವರ್
ಫೋರ್ಡ್ ಕಂಪನಿಯ ಎಂಡೀವರ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮವಾಗಿ ಮಾರಾಟವಾಗಿತ್ತಿದೆ. ಕಳೆದ ತಿಂಗಳ ಮಾರಾಟದಲ್ಲಿ ಪೋರ್ಡ್ ಎಂಡೀವರ್ ತನ್ನ ಪ್ರತಿಸ್ಪರ್ಧಿ ಎಂಜಿ ಗ್ಲೊಸ್ಟರ್ ಎಸ್‍ಯುವಿಯನ್ನು ಮಾರಾಟದಲ್ಲಿ ಹಿಂದಿಕ್ಕಿದೆ.

2021ರ ಫೆಬ್ರವರಿ ತಿಂಗಳಲ್ಲಿ ಪೋರ್ಡ್ ಎಂಡೀವರ್ 801 ಯುನಿಟ್‌ಗಳು ಮಾರಾಟವಾಗಿವೆ. ಕಳೆದ ವರ್ಷದ ಫೆಬ್ರವರಿ ತಿಂಗಳಲ್ಲಿ ಪೋರ್ಡ್ ಎಂಡೀವರ್ 555 ಯುನಿಟ್‌ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.44.3 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಆದರೆ ಎಂಜಿ ಗ್ಲೊಸ್ಟರ್ ಮಾದರಿಯ 463 ಯುನಿಟ್‌ಗಳಷ್ಟು ಮಾತ್ರ ಮಾರಾಟವಾಗಲು ಸಾಧ್ಯವಾಯಿತು.

ಆದರೆ ಪೂರ್ಣ ಗಾತ್ರದ ಎಸ್‌ಯುವಿ ವಿಭಾಗದಲ್ಲಿ ಟೊಯೊಟಾ ಫಾರ್ಚೂನರ್ ತನ್ನ ಪ್ರಾಬಲ್ಯ ಮುಂದುವರೆಸಿದೆ. ಕಳೆದ ತಿಂಗಳು ಟೊಯೊಟಾ ಫಾರ್ಚೂನರ್ ಮಾದರಿಯ 2,053 ಯುನಿಟ್‌ಗಳು ಮಾರಾಟವಾಗಿವೆ. ಕಳೆದ ವರ್ಷದ ಫೆಬ್ರವರಿ ತಿಂಗಳಲ್ಲಿ ಫಾರ್ಚೂನರ್ ಮಾದರಿಯ 1,510 ಯುನಿಟ್‌ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.36 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಫಾರ್ಚೂನರ್ ಎಸ್‍ಯುವಿ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಈ ಎಸ್‍ಯುವಿ 2.7-ಲೀಟರ್ ಪೆಟ್ರೋಲ್ ಮತ್ತು 2.8-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಗಳನ್ನು ಒಳಗೊಂಡಿದೆ. 2.7-ಲೀಟರ್ ಪೆಟ್ರೋಲ್ ಎಂಜಿನ್ 166 ಬಿಹೆಚ್‍ಪಿ ಪವರ್ ಮತ್ತು 245 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಇನ್ನು ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗೆ ಹೊಂದಿಕೆಯಾದ ಡೀಸೆಲ್ ಎಂಜಿನ್ 177 ಬಿಹೆಚ್‍ಪಿ ಪವರ್ ಮತ್ತು 420 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಆರು-ಸ್ಪೀಡ್ ಟಾರ್ಕ್ ಕರ್ನವಾಟರ್ ಗೇರ್ ಬಾಕ್ಸ್ ಜೋಡಿಸಲಾದ ಯುನಿಟ್ 201 ಬಿಹೆಚ್‍ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್ಯುವಿ

ಫೋರ್ಡ್ ಎಂಡೀವರ್ ಎಸ್‍ಯುವಿಯಲ್ಲಿ 2.0 ಲೀಟರ್ ಇಕೋಬ್ಲೂ ಟರ್ಬೊ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಿದೆ. ಈ ಎಂಜಿನ್ 168 ಬಿಹೆಚ್‍ಪಿ ಪವರ್ ಮತ್ತು 420 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನೊಂದಿಗೆ 10 ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಅನ್ನು ಅಳವಡಿಸಲಿದೆ.

ಈ ಎಸ್‍ಯುವಿ ಇಂಟಿರಿಯರ್‍ನಲ್ಲಿ ಸ್ಟೀಯರಿಂಗ್ ಮೌಟೆಂಡ್ ಆಡಿಯೋ ಕಂಟ್ರೋಲ್, ಪನರೋಮಿಕ್ ಸನ್‌ರೂಫ್, ಡ್ಯುಯಲ್-ಜೋನ್ ಕ್ಲೈಮೆಟ್ ಕಂಟ್ರೋಲ್, 8.0-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೇನ್‌ಮೆಂಟ್ ಸಿಸ್ಟಂ ಜೊತೆ ಆ್ಯಪಲ್ ಕಾರ್ ಪ್ಲೇ, ಅಂಡ್ರಾಯಿಡ್ ಆಟೋ ಮತ್ತು 10-ಸ್ಪಿಕರ್ಸ್ ಸೌಂಡ್ ಸಿಸ್ಟಂ ಅನ್ನು ಒಳಗೊಂಡಿದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ಎಂಜಿ ಗ್ಲೊಸ್ಟರ್ ಎಸ್‌ಯುವಿಯ ಎಲ್ಲಾ ಮಾದರಿಗಳಲ್ಲಿ 2.0-ಲೀಟರಿನ ಡೀಸೆಲ್ ಎಂಜಿನ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ. ಬೇಸ್ ಮಾದರಿಗಳಲ್ಲಿರುವ 2.0-ಲೀಟರಿನ ಟರ್ಬೊ ಡೀಸೆಲ್ ಎಂಜಿನ್ 4000 ಆರ್‌ಪಿಎಂನಲ್ಲಿ 160 ಬಿಹೆಚ್‌ಪಿ ಪವರ್ ಹಾಗೂ 1500 - 2400 ಆರ್‌ಪಿಎಂನಲ್ಲಿ 375 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಟಾಪ್-ಎಂಡ್ ಮಾದರಿಗಳಲ್ಲಿರುವ 2.0-ಲೀಟರಿನ ಟ್ವಿನ್-ಟರ್ಬೊ ಎಂಜಿನ್ 4000 ಆರ್‌ಪಿಎಂನಲ್ಲಿ 216 ಬಿಹೆಚ್‌ಪಿ ಪವರ್ ಮತ್ತು 1500 - 2400 ಆರ್‌ಪಿಎಂನಲ್ಲಿ 480 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಡೀಸೆಲ್ ಎಂಜಿನ್‌ನ ಈ ಎರಡೂ ಆವೃತ್ತಿಗಳಲ್ಲಿ ಎಂಟು-ಸ್ಪೀಡಿನ ಆಟೋಮ್ಯಾಟಿಕ್ ಗೇರ್ಬಾಕ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಜೋಡಿಸಲಾಗಿದೆ.

ಒಟ್ಟಿನಲ್ಲಿ ಪೂರ್ಣ ಗಾತ್ರದ ಎಸ್‌ಯುವಿ ವಿಭಾಗದಲ್ಲಿ ಟೊಯೊಟಾ ಫಾರ್ಚೂನರ್ ತನ್ನ ಪ್ರಾಬಲ್ಯ ಮುಂದುವರೆಸಿದೆ. ಇದರಲ್ಲಿ ಟೊಯೊಟಾ ಫಾರ್ಚೂನರ್, ಎಂಜಿ ಗ್ಲೋಸ್ಟರ್ ಮತ್ತು ಫೋರ್ಡ್ ಎಂಡೀವರ್ ಎಂಬ ಮೂರು ಎಸ್‍ಯುವಿಗಳು ಆಫ್-ರೋಡ್ ಸಾಮರ್ಥ್ಯವನ್ನು ಹೊಂದಿದೆ.


Click it and Unblock the Notifications