Just In
- 59 min ago ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಬೆಸ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓಡುತ್ತವೆ!
- 2 hrs ago Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- 15 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 16 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
Don't Miss!
- Movies ಹಳೇ ಟ್ವೀಟ್ ಹಾಕಿ ರಕ್ಷಿತ್ ಶೆಟ್ಟಿ ಹೇಳಿದ್ದೇನು? 'ರಿಚರ್ಡ್ ಆಂಟನಿ' ಕಥೆ ಏನಾಯ್ತು?
- News Kolar Lok Sabha elections: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ 'ಸ್ಥಳೀಯ' V/s 'ಹೊರಗಿನವ' ಫೈಟ್!
- Finance bangalore royal challengers ತಂಡದಿಂದ ನಗರದ ಎರಡು ಕೆರೆಗಳ ಪುನರುಜ್ಜೀವನ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರತಕ್ಕೆ ಮರಳಿ ಬರಲಿದೆ ಜನಪ್ರಿಯ Ford Endeavour ಎಸ್ಯುವಿ
ಅಮೆರಿಕಾ ಮೂಲದ ಜನಪ್ರಿಯ ಕಾರು ತಯಾರಕ ಕಂಪನಿಯಾದ ಫೋರ್ಡ್ 1990ರ ದಶಕದಿಂದಲೂ ಭಾರತೀಯ ಮಾರುಕಟ್ಟೆಯಲ್ಲಿ ವಾಹನಗಳನ್ನು ಮಾರಾಟ ಮಾಡುತ್ತಿದೆ. ಈ ಫೋರ್ಡ್ ಕಂಪನಿಯು ಹಲವು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಾರ್ಯಚರಣೆ ನಡೆಸುತ್ತಿರುವ ಜನಪ್ರಿಯ ಕಾರು ತಯಾರಕ ಕಂಪನಿಯಾಗಿದೆ.
ಫೋರ್ಡ್ ಕಂಪನಿಯು ಕಳೆದ 10 ವರ್ಷಗಳಿಂದ ಭಾರತದಲ್ಲಿ ಸುಮಾರು 2 ಬಿಲಿಯನ್ ಡಾಲರ್ ನಷ್ಟವನ್ನು ಅನುಭವಿಸಿದೆ. ಫೋರ್ಡ್ ಭಾರತದಲ್ಲಿ ಉತ್ಪಾದನೆಯನ್ನು ನಿಲ್ಲಿಸುವ ಸುದ್ದಿಯಯು ಫೋರ್ಡ್ ಅಭಿಮಾನಿಗಳು ಮಾತ್ರವಲ್ಲ, ವಿಮರ್ಶಕರಿಗೂ ಬೇಸರವಾಗಿತ್ತು. ಫೋರ್ಡ್ 25 ವರ್ಷಗಳಿಗಿಂತ ಹೆಚ್ಚು ಕಾಲ ಭಾರತದಲ್ಲಿ ಕಾರ್ಯಚರಣೆಯನ್ನು ನಡೆಸಿದೆ. ಭಾರತದಲ್ಲಿ ಉತ್ಪಾದನೆಯನ್ನು ನಿಲ್ಲಿಸುವ ಮುನ್ನ ಕಂಪನಿಯು ತನ್ನ ಜನಪ್ರಿಯ ಎಸ್ಯುವಿ ಎಂಡೀವರ್ ಎಸ್ಯುವಿಯನ್ನು ಉಳಿಸಲು ಪ್ರಯತ್ನಿಸಿತು.
ಫೋರ್ಡ್ ಮತ್ತೊಂದು ಕಾರು ತಯಾರಕರೊಂದಿಗೆ ಒಪ್ಪಂದದ ಆಧಾರದ ಮೇಲೆ ಎಂಡೀವರ್ ಅನ್ನು ಉತ್ಪಾದಿಸಲು ಪ್ರಯತ್ನಿಸಿತು. ಆದರೆ ಈ ಒಪ್ಪಂದ ಪ್ರಯತ್ನಯು ವಿಫಲವಾಯ್ತು. ಇದರಿಂದ ಎಂಡೀವರ್ ಎಸ್ಯುವಿಯನ್ನು ಉಳಿಸುವಲ್ಲಿ ವಿಫಲವಾಗಿತ್ತು.
ಟೀಂ ಬಿಹೆಚ್ಪಿ ವರದಿ ಪ್ರಕಾರ, ಫೋರ್ಡ್ ಎಂಡೀವರ್ ಎಸ್ಯುವಿಯನ್ನು ಭಾರತಕ್ಕೆ ಮರಳಿ ತರಲು ಫೋರ್ಡ್ ಚಿಂತಿಸುತ್ತಿದೆ. ಚೆನ್ನೈನಲ್ಲಿನ ಅದರ ಉತ್ಪಾದನಾ ಘಟಕದ ಹೊರತಾಗಿ, ಎಂಡೀವರ್ ಅನ್ನು ಥೈಲ್ಯಾಂಡ್, ವಿಯೆಟ್ನಾಂ ಮತ್ತು ಚೀನಾದಲ್ಲಿ ಉತ್ಪಾದಿಸಲಾಗುತ್ತಿದೆ. ಅಲ್ಲಿ ಈ ಎಸ್ಯುವಿ ಮಾದರಿಗೆ ಎವರೆಸ್ಟ್ ಎಂದು ನಾಮಕರಣ ಮಾಡಲಾಗಿದೆ.
ಫೋರ್ಡ್ 2.0-ಲೀಟರ್ ಬೈ-ಟರ್ಬೊ ಡೀಸೆಲ್ ಎಂಜಿನ್ನೊಂದಿಗೆ ಎಂಡೀವರ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಬಹುದು ಎಂದು ವರದಿಗಳು ಸೂಚಿಸುತ್ತವೆ. ಈ ಎಂಡೀವರ್ ಎಸ್ಯುವಿಯನ್ನು ಭಾರತಕ್ಕೆ ಸಿಬಿಯು ಆಗಿ ಬಿಡುಗಡೆ ಮಾಡಲಾಗುವುದು ಮತ್ತು ಇದನ್ನು ಎಂಡೀವರ್ ಅಥವಾ ಎವರೆಸ್ಟ್ ಎಂಬ ಹೆಸರಿನಲ್ಲಿ ಮಾರಾಟವಾಗಬಹುದು. ಸಿಬಿಯು ಆಗಿ ಬರುವುದರಿಂದ ಈ ಎಸ್ಯುವಿಗೆ ಗಮನಾರ್ಹವಾಗಿ ಹೆಚ್ಚಿನ ಬೆಲೆಯನ್ನು ಹೊಂದಿರುತ್ತದೆ.
ಈ ಫೋರ್ಡ್ ಎಂಡೀವರ್ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಫುಲ್ ಸೈಜ್ ಎಸ್ಯುವಿಯಾಗಿತ್ತು, ಇದು ಕಳೆದ 18 ವರ್ಷಗಳಿಂದ ಭಾರತದಲ್ಲಿ ಮಾರಾಟವಾಗುತ್ತಿದೆ ಮತ್ತು ಅದರ ವಿಭಾಗದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ.ಈ ಎಂಡೀವರ್ ಎಸ್ಯುವಿಯು 2003ರಲ್ಲಿ ಬಿಡುಗಡೆಯಾದಾಗ ಭಾರತದಲ್ಲಿ ಫೋರ್ಡ್ನ ಮೊದಲ ಎಸ್ಯುವಿ ಕೊಡುಗೆಯಾಗಿತ್ತು ಮತ್ತು ಎರಡನೇ ತಲೆಮಾರಿನವರು 2016 ರಲ್ಲಿ ಬಿಡುಗಡೆಗೊಂಡಿತ್ತು.
ಫೋರ್ಡ್ ಸ್ಥಳೀಯ ಉತ್ಪಾದನೆಯನ್ನು ಮುಚ್ಚುವುದಾಗಿ ಘೋಷಿಸಿದ ಸಂದರ್ಭದಲ್ಲಿ, ಭಾರತದಲ್ಲಿ ಎಂಡೀವರ್ ಮಾರಾಟವು ಮಾದರಿಯ ಜಾಗತಿಕ ಮಾರಾಟದ 37 ಪ್ರತಿಶತದಷ್ಟಿತ್ತು. 2021ರ ಸೆಪ್ಟೆಂಬರ್ ಹೊತ್ತಿಗೆ, ಇದು ಪೂರ್ಣ-ಗಾತ್ರದ ಪ್ರೀಮಿಯಂ ಎಸ್ಯುವಿ ಜಾಗದಲ್ಲಿ ಶೇಕಡಾ 44 ಕ್ಕಿಂತಲೂ ಹೆಚ್ಚಿದೆ, ಎರಡನೇ ತಲೆಮಾರಿನ ಎಂಡೀವರ್ ವಾರ್ಷಿಕ 10,000 ರಿಂದ 12,000 ಯುನಿಟ್ಗಳ ಸರಾಸರಿ ಮಾರಾಟವನ್ನು ಹೊಂದಿದೆ ಎಂದು ಫೋರ್ಡ್ ಹೇಳಿದೆ,
ಎಂಡೀವರ್ ಮಾರುಕಟ್ಟೆಯಲ್ಲಿ ಬ್ರಾಂಡ್ನ ದೀರ್ಘಾವಧಿಯ ಮೋನಿಕರ್ ಆಗಿದ್ದು, ಇತ್ತೀಚಿನ ವರ್ಷಗಳಲ್ಲಿ ಹೊಸ ಸ್ಪರ್ಧಿಗಳ ಆಗಮನದ ಹೊರತಾಗಿಯೂ ಇದು ವಿಭಾಗದಲ್ಲಿ ತನ್ನ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಭಾರತದಲ್ಲಿ ಉತ್ಪಾದನೆ ಮತ್ತು ಮಾರಾಟವನ್ನು ಮುಚ್ಚುವ ಫೋರ್ಡ್ನ ನಿರ್ಧಾರವು ಕಳೆದ ಹತ್ತು ವರ್ಷಗಳಲ್ಲಿ 2 ಶತಕೋಟಿ ಡಾಲರ್ಗಳಷ್ಟು ನಷ್ಟವೇ ಪ್ರಮುಖ ಕಾರಣವಾಗಿದೆ.
ಭಾರತದಲ್ಲಿ ಮಾರಾಟದಲ್ಲಿದ್ದ ಪ್ರೀಮಿಯಂ ಎಸ್ಯುವಿಯಲ್ಲಿ 2.0 ಲೀಟರ್ ಇಕೋಬ್ಲೂ ಟರ್ಬೊ ಡೀಸೆಲ್ ಎಂಜಿನ್ ಅನ್ನು ಹೊಂದಿದೆ.ಈ ಎಂಜಿನ್ 168 ಬಿಹೆಚ್ಪಿ ಪವರ್ ಮತ್ತು 420 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನೊಂದಿಗೆ 10 ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಅನ್ನು ಅಳವಡಿಸಲಿದೆ.
ಈ ಎಂಡೀವರ್ ಎಸ್ಯುವಿ ಇಂಟಿರಿಯರ್ನಲ್ಲಿ ಸ್ಟೀಯರಿಂಗ್ ಮೌಟೆಂಡ್ ಆಡಿಯೋ ಕಂಟ್ರೋಲ್, ಪನರೋಮಿಕ್ ಸನ್ರೂಫ್, ಡ್ಯುಯಲ್-ಜೋನ್ ಕ್ಲೈಮೆಟ್ ಕಂಟ್ರೋಲ್, 8.0-ಇಂಚಿನ ಟಚ್ಸ್ಕ್ರೀನ್ ಇನ್ಪೋಟೇನ್ಮೆಂಟ್ ಸಿಸ್ಟಂ ಜೊತೆ ಆ್ಯಪಲ್ ಕಾರ್ ಪ್ಲೇ, ಅಂಡ್ರಾಯ್ಡ್ ಆಟೋ ಮತ್ತು 10-ಸ್ಪಿಕರ್ಸ್ ಸೌಂಡ್ ಸಿಸ್ಟಂ ಹೊಂದಿದೆ.
ಈ ಫೋರ್ಡ್ ಎಂಡೀವರ್ ಎಸ್ಯುವಿಯಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಏಳು ಏರ್ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಟ್ರಾಕ್ಷನ್ ಕಂಟ್ರೋಲ್, ಹಿಲ್ ಅಸಿಸ್ಟ್ ಮತ್ತು ಪಾರ್ಕಿಂಗ್ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಇನ್ನು ಫೋರ್ಡ್ ಕಂಪನಿಯು ಎಂಡೀವರ್ ಸ್ಪೋರ್ಟ್ ಮಾದರಿಯನ್ನು ಕೂಡ ಹೊಂದಿತ್ತು. ಈ ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್ಯುವಿಯು ಟೈಟಾನಿಯಂ ಪ್ಲಸ್ ಮಾದರಿಯನ್ನು ಆಧರಿಸಿದೆ. ಎಂಡೀವರ್ ಸ್ಪೋರ್ಟ್ ಹೊರಭಾಗದಲ್ಲಿ ಬ್ಲ್ಯಾಕ್ ಕಾಸ್ಮೆಟಿಕ್ ಅಂಶಗಳನ್ನು ಒಳಗೊಂಡಿದೆ, ಇದು ಈ ಎಂಡೀವರ್ ಸ್ಪೋರ್ಟ್ ಎಸ್ಯುವಿಗೆ ಮತ್ತಷ್ಟು ಸ್ಪೋರ್ಟಿಯರ್ ಲುಕ್ ಅನ್ನು ನೀಡುತ್ತದೆ. ಇದರಲ್ಲಿ ಬ್ಲ್ಯಾಕ್ ಔಟ್ ಗ್ರಿಲ್ ಅನ್ನು ಹೊಂದಿದೆ. ಇನ್ನು ಬ್ಲ್ಯಾಕ್ ಲೋ ಬಂಪರ್, ಬ್ಲ್ಯಾಕ್ ಅಲಾಯ್ ವ್ಹೀಲ್ ಗಳು ಮತ್ತು ಹೆಚ್ಚುವರಿಯಾಗಿ ನೇಮ್-ಪ್ಲೇಟ್ ಮತ್ತು ಒಆರ್ವಿಎಂಗಳಲ್ಲಿ ಬ್ಲ್ಯಾಕ್ ಅಂಶಗಳು ಹೊಂದಿದೆ.
ಎಂಡೀವರ್ ಎಸ್ಯುವಿಯಲ್ಲಿ 4x4 ಡ್ರೈವ್ ಟೆಕ್ನಾಲಜಿ ಸೌಲಭ್ಯ ಹೊಂದಿದೆ. ಫೋರ್ಡ್ ಎಂಡೀವರ್ ಸಮರ್ಥ ಆನ್ ರೋಡ್ ಮತ್ತು ಆಪ್ ರೋಡ್ ಎಸ್ಯುವಿಯಾಗಿದೆ. ಅಫ್-ರೋಡ್ ವಿಭಾಗದಲ್ಲಿಯು ಫೋರ್ಡ್ ಎಂಡೀವರ್ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿದ ಎಸ್ಯುವಿಯಾಗಿದೆ.ಫೋರ್ಡ್ ಎಂಡೀವರ್ ದೇಶಿಯ ಮಾರುಕಟ್ಟೆಯಲ್ಲಿ ಟೊಯೊಟಾ ಫಾರ್ಚೂನರ್, ಮಹೀಂದ್ರಾ ಅಲ್ಟುರಾಸ್ ಜಿ4, ಎಂಜಿ ಗ್ಲೋಸ್ಟರ್ ಮತ್ತು ಇಸುಝು ಎಂಯು-ಎಕ್ಸ್ ಎಸ್ಯುವಿಗಳಿಗೆ ಪೈಪೋಟಿ ನೀಡಲಾಗುತ್ತಿತ್ತು.