ಏಪ್ರಿಲ್ ತಿಂಗಳ ಮಾರಾಟದಲ್ಲಿ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿದ ಟೊಯೊಟಾ ಫಾರ್ಚೂನರ್

ಪೂರ್ಣ ಗಾತ್ರದ ಎಸ್‌ಯುವಿ ವಿಭಾಗದಲ್ಲಿ ಟೊಯೊಟಾ ಫಾರ್ಚೂನರ್ ತನ್ನ ಪ್ರಾಬಲ್ಯವನ್ನು ಮುಂದುವರೆಸಿದೆ. 2021ರ ಏಪ್ರಿಲ್ ತಿಂಗಳಿನ ಪೂರ್ಣ ಗಾತ್ರದ ಎಸ್‌ಯುವಿ ವಿಭಾಗದ ಮಾರಾಟದಲ್ಲಿ ಟೊಯೊಟಾ ಫಾರ್ಚೂನರ್ ತನ್ನ ಪ್ರತಿಸ್ಪರ್ಧಿಗಳನ್ನು ಮತ್ತೊಮ್ಮೆ ಹಿಂದಿಕ್ಕಿ ಅಗ್ರಸ್ಥಾನದಲ್ಲಿ ಮುಂದುವರೆದಿದೆ.

ಏಪ್ರಿಲ್ ತಿಂಗಳ ಮಾರಾಟದಲ್ಲಿ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿದ ಟೊಯೊಟಾ ಫಾರ್ಚೂನರ್

ಟೊಯೊಟಾ ಇತ್ತೀಚೆಗೆ ತನ್ನ ಫಾರ್ಚೂನರ್ ಎಸ್‍ಯುವಿಯ ಫೇಸ್‌ಲಿಫ್ಟ್ ಮಾದರಿಯನ್ನು ಬಿಡುಗಡೆಗೊಳಿಸಿತ್ತು. ಪೂರ್ಣ ಗಾತ್ರದ ಎಸ್‌ಯುವಿ ವಿಭಾಗದ ಮಾರಾಟದಲ್ಲಿ ಟೊಯೊಟಾ ಫಾರ್ಚೂನರ್ ಮಾದರಿಯು ದೀರ್ಘಕಾಲದಿಂದ ಅಗ್ರಸ್ಥಾನದಲ್ಲಿದೆ. ಕಳೆದ ತಿಂಗಳು ಟೊಯೊಟಾ ಫಾರ್ಚೂನರ್ ಮಾದರಿಯ 1,414 ಯುನಿಟ್‌ಗಳು ಮಾರಾಟವಾಗಿವೆ. ಆದರೆ ಕಳೆದ ವರ್ಷದ ಏಪ್ರಿಲ್ ತಿಂಗಳಿನಲ್ಲಿ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿ ಇದ್ದ ಕಾರಣ ಮಾರಾಟ ಮತ್ತು ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗಿತ್ತು.

ಏಪ್ರಿಲ್ ತಿಂಗಳ ಮಾರಾಟದಲ್ಲಿ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿದ ಟೊಯೊಟಾ ಫಾರ್ಚೂನರ್

ಫಾರ್ಚೂನರ್ ಎಸ್‍ಯುವಿ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಈ ಎಸ್‍ಯುವಿ 2.7-ಲೀಟರ್ ಪೆಟ್ರೋಲ್ ಮತ್ತು 2.8-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಗಳನ್ನು ಒಳಗೊಂಡಿದೆ. 2.7-ಲೀಟರ್ ಪೆಟ್ರೋಲ್ ಎಂಜಿನ್ 166 ಬಿಹೆಚ್‍ಪಿ ಪವರ್ ಮತ್ತು 245 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಏಪ್ರಿಲ್ ತಿಂಗಳ ಮಾರಾಟದಲ್ಲಿ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿದ ಟೊಯೊಟಾ ಫಾರ್ಚೂನರ್

2021ರ ಫೆಬ್ರವರಿ ತಿಂಗಳಲ್ಲಿ ಫೋರ್ಡ್ ಎಂಡೀವರ್ 840 ಯುನಿಟ್‌ಗಳು ಮಾರಾಟವಾಗಿವೆ. ಫೋರ್ಡ್ ಎಂಡೀವರ್ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ. ಈ ಎಸ್‍ಯುವಿಯು ಅತ್ಯಾಧುನಿಕ ಫೀಚರ್ಸ್ ಗಳು ಮತ್ತು ಉತ್ತಮ ಆಫ್-ರೋಡ್ ಸಾಮರ್ಥ್ಯದಿಂದ ಹೆಚ್ಚಿನ ಜನಪ್ರಿಯತೆಯನ್ನು ಗಳಿಸಿದೆ.

ಏಪ್ರಿಲ್ ತಿಂಗಳ ಮಾರಾಟದಲ್ಲಿ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿದ ಟೊಯೊಟಾ ಫಾರ್ಚೂನರ್

ಫೋರ್ಡ್ ಎಂಡೀವರ್ ಎಸ್‍‍ಯುವಿಯಲ್ಲಿ 2.0 ಲೀಟರ್ ಇಕೋಬ್ಲೂ ಟರ್ಬೊ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಿದೆ. ಈ ಎಂಜಿನ್ 168 ಬಿ‍‍ಹೆಚ್‍‍ಪಿ ಪವರ್ ಮತ್ತು 420 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿ‍ನೊಂದಿಗೆ 10 ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಏಪ್ರಿಲ್ ತಿಂಗಳ ಮಾರಾಟದಲ್ಲಿ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿದ ಟೊಯೊಟಾ ಫಾರ್ಚೂನರ್

ಎಂಜಿ ಗ್ಲೊಸ್ಟರ್ ಮಾರಾಟದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು, ಕಳೆದ ತಿಂಗಳು 302 ಯುನಿಟ್ ಮಾರಾಟವಾಗಿದೆ. ಪೂರ್ಣ ಗಾತ್ರದ ಎಸ್‌ಯುವಿ ವಿಭಾಗದ ಮಾರಾಟದಲ್ಲಿ ಎಂಜಿ ಗ್ಲೊಸ್ಟರ್ ಮೂರನೇ ಸ್ಥಾನದಲ್ಲಿದೆ.

ಏಪ್ರಿಲ್ ತಿಂಗಳ ಮಾರಾಟದಲ್ಲಿ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿದ ಟೊಯೊಟಾ ಫಾರ್ಚೂನರ್

ಇನ್ನು ಹ್ಯುಂಡೈ ಕಂಪನಿಯ ಟ್ಯೂಸನ್ ಎಸ್‍ಯುವಿ ಮಾದರಿಯ 105 ಯುನಿಟ್‌ಗಳು ಮಾರಾಟವಾಗಿವೆ. ಹ್ಯುಂಡೈ ಟ್ಯೂಸನ್ ತನ್ನ ಪ್ರತಿಸ್ಪರ್ಧಿಗಳಿಗೆ ಪ್ರಬಲ ಪೈಪೋಟಿಯನ್ನು ನೀಡುವಲ್ಲಿ ವಿಫಲವಾಗಿದೆ.

MOST READ: ಫೆಬ್ರವರಿ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಡೀಸೆಲ್ ಕಾರುಗಳಿವು

ಏಪ್ರಿಲ್ ತಿಂಗಳ ಮಾರಾಟದಲ್ಲಿ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿದ ಟೊಯೊಟಾ ಫಾರ್ಚೂನರ್

ಕಳೆದ ತಿಂಗಳು ಮಹೀಂದ್ರಾ ಅಲ್ಟುರಾಸ್ ಜಿ4 ಮಾದರಿಯ 24 ಯುನಿಟ್‌ಗಳು ಮಾತ್ರ ಮಾರಾಟವಾಗಲು ಸಾಧ್ಯವಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಮಹೀಂದ್ರಾ ಅಲ್ಟುರಾಸ್ ಜಿ4 ಎಸ್‍ಯುವಿಯ ಮಾರಾಟವು ತಿಂಗಳಿಂದ ತಿಂಗಳಿಗೆ ಕುಸಿಯುತ್ತಿದೆ.

ಏಪ್ರಿಲ್ ತಿಂಗಳ ಮಾರಾಟದಲ್ಲಿ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿದ ಟೊಯೊಟಾ ಫಾರ್ಚೂನರ್

ಒಟ್ಟಿನಲ್ಲಿ ಪೂರ್ಣ ಗಾತ್ರದ ಎಸ್‌ಯುವಿ ವಿಭಾಗದಲ್ಲಿ ಟೊಯೊಟಾ ಫಾರ್ಚೂನರ್ ಮಾದರಿಯು ತನ್ನ ಪ್ರಾಬಲ್ಯವನ್ನು ಮುಂದುವರೆದಿದೆ. ಉಳಿದಂತೆ ಈ ವಿಭಾಗದಲ್ಲಿ ಫೋರ್ಡ್ ಎಂಡೀವರ್ ಮತ್ತು ಎಂಜಿ ಗ್ಲೊಸ್ಟರ್ ಎಸ್‌ಯುವಿಗಳು ಕೂಡ ಉತ್ತಮವಾಗಿ ಮಾರಾಟವಾಗುತ್ತಿದೆ.

Article Published On: Monday, May 10, 2021, 12:32 [IST]
English summary
Full-Size SUVs Sales In April 2021. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+