ಫೆಬ್ರವರಿ ತಿಂಗಳ ಮಾರಾಟದಲ್ಲಿ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿದ ಟೊಯೊಟಾ ಫಾರ್ಚೂನರ್

ಪೂರ್ಣ ಗಾತ್ರದ ಎಸ್‌ಯುವಿ ವಿಭಾಗದಲ್ಲಿ ಟೊಯೊಟಾ ಫಾರ್ಚೂನರ್ ತನ್ನ ಪ್ರಾಬಲ್ಯವನ್ನು ಮುಂದುವರೆಸಿದೆ. 2021ರ ಫೆಬ್ರವರಿ ತಿಂಗಳಿನ ಪೂರ್ಣ ಗಾತ್ರದ ಎಸ್‌ಯುವಿ ವಿಭಾಗದ ಮಾರಾಟದಲ್ಲಿ ಟೊಯೊಟಾ ಫಾರ್ಚೂನರ್ ತನ್ನ ಪ್ರತಿಸ್ಪರ್ಧಿಗಳನ್ನು ಮತ್ತೊಮ್ಮೆ ಹಿಂದಿಕ್ಕಿ ಅಗ್ರಸ್ಥಾನದಲ್ಲಿ ಮುಂದುವರೆದಿದೆ.

ಫೆಬ್ರವರಿ ತಿಂಗಳ ಮಾರಾಟದಲ್ಲಿ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿದ ಟೊಯೊಟಾ ಫಾರ್ಚೂನರ್

ಟೊಯೊಟಾ ಇತ್ತೀಚೆಗೆ ತನ್ನ ಫಾರ್ಚೂನರ್ ಎಸ್‍ಯುವಿಯ ಫೇಸ್‌ಲಿಫ್ಟ್ ಮಾದರಿಯನ್ನು ಬಿಡುಗಡೆಗೊಳಿಸಿತ್ತು. ಪೂರ್ಣ ಗಾತ್ರದ ಎಸ್‌ಯುವಿ ವಿಭಾಗದ ಮಾರಾಟದಲ್ಲಿ ಟೊಯೊಟಾ ಫಾರ್ಚೂನರ್ ದೀರ್ಘಕಾಲದಿಂದ ಅಗ್ರಸ್ಥಾನದಲ್ಲಿದೆ. ಕಳೆದ ತಿಂಗಳು ಟೊಯೊಟಾ ಫಾರ್ಚೂನರ್ ಮಾದರಿಯ 2,053 ಯುನಿಟ್‌ಗಳು ಮಾರಾಟವಾಗಿವೆ. ಕಳೆದ ವರ್ಷದ ಫೆಬ್ರವರಿ ತಿಂಗಳಲ್ಲಿ ಫಾರ್ಚೂನರ್ ಮಾದರಿಯ 1,510 ಯುನಿಟ್‌ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.36 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಫೆಬ್ರವರಿ ತಿಂಗಳ ಮಾರಾಟದಲ್ಲಿ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿದ ಟೊಯೊಟಾ ಫಾರ್ಚೂನರ್

ಫಾರ್ಚೂನರ್ ಎಸ್‍ಯುವಿ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಈ ಎಸ್‍ಯುವಿ 2.7-ಲೀಟರ್ ಪೆಟ್ರೋಲ್ ಮತ್ತು 2.8-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಗಳನ್ನು ಒಳಗೊಂಡಿದೆ. 2.7-ಲೀಟರ್ ಪೆಟ್ರೋಲ್ ಎಂಜಿನ್ 166 ಬಿಹೆಚ್‍ಪಿ ಪವರ್ ಮತ್ತು 245 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಫೆಬ್ರವರಿ ತಿಂಗಳ ಮಾರಾಟದಲ್ಲಿ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿದ ಟೊಯೊಟಾ ಫಾರ್ಚೂನರ್

ಇನ್ನು ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗೆ ಹೊಂದಿಕೆಯಾದ ಡೀಸೆಲ್ ಎಂಜಿನ್ 177 ಬಿಹೆಚ್‍ಪಿ ಪವರ್ ಮತ್ತು 420 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಆರು-ಸ್ಪೀಡ್ ಟಾರ್ಕ್ ಕರ್ನವಾಟರ್ ಗೇರ್ ಬಾಕ್ಸ್ ಜೋಡಿಸಲಾದ ಯುನಿಟ್ 201 ಬಿಹೆಚ್‍ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಫೆಬ್ರವರಿ ತಿಂಗಳ ಮಾರಾಟದಲ್ಲಿ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿದ ಟೊಯೊಟಾ ಫಾರ್ಚೂನರ್

2021ರ ಫೆಬ್ರವರಿ ತಿಂಗಳಲ್ಲಿ ಪೋರ್ಡ್ ಎಂಡೀವರ್ 801 ಯುನಿಟ್‌ಗಳು ಮಾರಾಟವಾಗಿವೆ. ಕಳೆದ ವರ್ಷದ ಫೆಬ್ರವರಿ ತಿಂಗಳಲ್ಲಿ ಪೋರ್ಡ್ ಎಂಡೀವರ್ 555 ಯುನಿಟ್‌ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.44.3 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಫೆಬ್ರವರಿ ತಿಂಗಳ ಮಾರಾಟದಲ್ಲಿ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿದ ಟೊಯೊಟಾ ಫಾರ್ಚೂನರ್

ನಿರೀಕ್ಷೆಯಂತೆ, ಎಂಜಿ ಗ್ಲೊಸ್ಟರ್ ಮಾರಾಟದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು, ಕಳೆದ ತಿಂಗಳು 463 ಯುನಿಟ್ ಮಾರಾಟವಾಗಿದೆ. ಪೂರ್ಣ ಗಾತ್ರದ ಎಸ್‌ಯುವಿ ವಿಭಾಗದ ಮಾರಾಟದಲ್ಲಿ ಎಂಜಿ ಗ್ಲೊಸ್ಟರ್ ಮೂರನೇ ಸ್ಥಾನದಲ್ಲಿದೆ.

ಫೆಬ್ರವರಿ ತಿಂಗಳ ಮಾರಾಟದಲ್ಲಿ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿದ ಟೊಯೊಟಾ ಫಾರ್ಚೂನರ್

ಇನ್ನು ಹ್ಯುಂಡೈ ಕಂಪನಿಯ ಟ್ಯೂಸನ್ ಎಸ್‍ಯುವಿ ಮಾದರಿಯ 152 ಯುನಿಟ್‌ಗಳು ಮಾರಾಟವಾಗಿವೆ. ಹ್ಯುಂಡೈ ಟ್ಯೂಸನ್ ತನ್ನ ಪ್ರತಿಸ್ಪರ್ಧಿಗಳಿಗೆ ಪ್ರಬಲ ಪೈಪೋಟಿಯನ್ನು ನೀಡುವಲ್ಲಿ ವಿಫಲವಾಗಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಫೆಬ್ರವರಿ ತಿಂಗಳ ಮಾರಾಟದಲ್ಲಿ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿದ ಟೊಯೊಟಾ ಫಾರ್ಚೂನರ್

ಕಳೆದ ವರ್ಷ ಫೋಕ್ಸ್‌ವ್ಯಾಗನ್ ಟಿಗ್ವಾನ್ ಎಸ್‍ಯುವಿ ಮಾದರಿಯ 63 ಯುನಿಟ್‌ಗಳು ಮಾರಾಟವಾಗಿವೆ. ಇನ್ನು ಕಳೆದ ತಿಂಗಳು ಮಹೀಂದ್ರಾ ಅಲ್ಟುರಾಸ್ ಜಿ4 ಮಾದರಿಯ 36 ಯುನಿಟ್‌ಗಳು ಮಾತ್ರ ಮಾರಾಟವಾಗಲು ಸಾಧ್ಯವಾಗಿದೆ.

ಫೆಬ್ರವರಿ ತಿಂಗಳ ಮಾರಾಟದಲ್ಲಿ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿದ ಟೊಯೊಟಾ ಫಾರ್ಚೂನರ್

ಒಟ್ಟಿನಲ್ಲಿ ಪೂರ್ಣ ಗಾತ್ರದ ಎಸ್‌ಯುವಿ ವಿಭಾಗದಲ್ಲಿ ಟೊಯೊಟಾ ಫಾರ್ಚೂನರ್ ಮಾದರಿಯು ತನ್ನ ಪ್ರಾಬಲ್ಯವನ್ನು ಮುಂದುವರೆದಿದೆ. ಉಳಿದಂತೆ ಈ ವಿಭಾಗದಲ್ಲಿ ಫೋರ್ಡ್ ಎಂಡೀವರ್ ಮತ್ತು ಎಂಜಿ ಗ್ಲೊಸ್ಟರ್ ಎಸ್‌ಯುವಿಗಳು ಕೂಡ ಉತ್ತಮವಾಗಿ ಮಾರಾಟವಾಗುತ್ತಿದೆ.

Most Read Articles

Kannada
English summary
Full-Size SUV Sales In Feb 2021. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X