ಸೆಪ್ಟೆಂಬರ್ ತಿಂಗಳ ಮಾರಾಟದಲ್ಲಿ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿದ Toyota Fortuner

ಪೂರ್ಣ ಗಾತ್ರದ ಎಸ್‌ಯುವಿ ವಿಭಾಗದಲ್ಲಿ ಟೊಯೊಟಾ ಫಾರ್ಚೂನರ್ ತನ್ನ ಪ್ರಾಬಲ್ಯವನ್ನು ಮುಂದುವರೆಸಿದೆ. 2021ರ ಸೆಪ್ಟೆಂಬರ್ ತಿಂಗಳಿನ ಪೂರ್ಣ ಗಾತ್ರದ ಎಸ್‌ಯುವಿ ವಿಭಾಗದ ಮಾರಾಟದಲ್ಲಿ ಟೊಯೊಟಾ ಫಾರ್ಚೂನರ್ ತನ್ನ ಪ್ರತಿಸ್ಪರ್ಧಿಗಳನ್ನು ಮತ್ತೊಮ್ಮೆ ಹಿಂದಿಕ್ಕಿ ಅಗ್ರಸ್ಥಾನದಲ್ಲಿ ಮುಂದುವರೆದಿದೆ.

ಫೆಬ್ರವರಿ ತಿಂಗಳ ಮಾರಾಟದಲ್ಲಿ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿದ Toyota Fortuner

ಟೊಯೊಟಾ ಈ ವರ್ಷದ ಆರಂಭದಲ್ಲಿ ತನ್ನ ಫಾರ್ಚೂನರ್ ಎಸ್‍ಯುವಿಯ ಫೇಸ್‌ಲಿಫ್ಟ್ ಮಾದರಿಯನ್ನು ಬಿಡುಗಡೆಗೊಳಿಸಿತ್ತು. ಪೂರ್ಣ ಗಾತ್ರದ ಎಸ್‌ಯುವಿ ವಿಭಾಗದ ಮಾರಾಟದಲ್ಲಿ ಟೊಯೊಟಾ ಫಾರ್ಚೂನರ್ ದೀರ್ಘಕಾಲದಿಂದ ಅಗ್ರಸ್ಥಾನದಲ್ಲಿದೆ. ಕಳೆದ ತಿಂಗಳು ಟೊಯೊಟಾ ಫಾರ್ಚೂನರ್ ಮಾದರಿಯ 1,869 ಯುನಿಟ್‌ಗಳು ಮಾರಾಟವಾಗಿವೆ. ಕಳೆದ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ಫಾರ್ಚೂನರ್ ಮಾದರಿಯ 1,045 ಯುನಿಟ್‌ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.79 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಫೆಬ್ರವರಿ ತಿಂಗಳ ಮಾರಾಟದಲ್ಲಿ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿದ Toyota Fortuner

ಭಾರತದಲ್ಲಿ ಫೋರ್ಡ್ ಕಂಪನಿಯು ತನ್ನ ಮಾರಾಟ ಮತ್ತು ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗಿದೆ. ಫೋರ್ಡ್ ಕಂಪನಿಯ ಎಂಡೀವರ್ ಫುಲ್ ಸೈಜ್ ಎಸ್‍ಯುವಿಯ ಮಾರಾಟವು ಸ್ಥಗಿತವಾಗಿದೆ. ಇದು ಟೊಯೊಟಾ ಫಾರ್ಚೂನರ್ ಎಸ್‍ಯುವಿಗೆ ಸಹಾಯವಾಗಿದೆ. ಫೋರ್ಡ್ ಎಂಡೀವರ್ ಅನುಪಸ್ಥಿತಿಯು ಸಂಪುಟಗಳನ್ನು ಮತ್ತಷ್ಟು ಹೆಚ್ಚಿಸಿದೆ ಮತ್ತು ಟೊಯೋಟಾ ಇದರ ಲಾಭವನ್ನು ಪಡೆದುಕೊಂಡಿದೆ.

ಫೆಬ್ರವರಿ ತಿಂಗಳ ಮಾರಾಟದಲ್ಲಿ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿದ Toyota Fortuner

2021ರ ಸೆಪ್ಟೆಂಬರ್ ತಿಂಗಳಿನಲ್ಲಿ ಎಂಜಿ ಗ್ಲೊಸ್ಟರ್ ಮಾದರಿಯ 292 ಯುನಿಟ್ ಮಾರಾಟದೊಂದಿಗೆ ಎರಡನೇ ಸ್ಥಾನದಲ್ಲಿದೆ. ಏಳು ಸೀಟುಗಳ ಫಾರ್ಚುನರ್‌ಗಿಂತ ದೊಡ್ಡ ಪ್ರಮಾಣವನ್ನು ಹೊಂದಿವೆ ಮತ್ತು ರೇಡಾರ್ ಆಧಾರಿತ ಸಹಾಯಕ ತಂತ್ರಜ್ಞಾನಗಳು ಮತ್ತು ದೊಡ್ಡ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಸೇರಿದಂತೆ ಹೆಚ್ಚಿನ ಸಾಧನಗಳನ್ನು ಹೊಂದಿದೆ.

ಫೆಬ್ರವರಿ ತಿಂಗಳ ಮಾರಾಟದಲ್ಲಿ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿದ Toyota Fortuner

ಇನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ಹ್ಯುಂಡೈ ಟ್ಯೂಸನ್ ಮಾದರಿಯು 139 ಯುನಿಟ್‌ಗಳೊಂದಿಗೆ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಇನ್ನು ಕಳೆದ ವರ್ಷದ ಸೆಪ್ಟೆಂಬರ್ ತಿಂಗಳಿನಲ್ಲಿ ಟ್ಯೂಸನ್ ಮಾದರಿಯ 85 ಯೂನಿಟ್‌ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ,64 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಫೆಬ್ರವರಿ ತಿಂಗಳ ಮಾರಾಟದಲ್ಲಿ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿದ Toyota Fortuner

2021ರ ಸೆಪ್ಟೆಂಬರ್ ತಿಂಗಳಿನಲ್ಲಿ ಮಹೀಂದ್ರಾ ಅಲ್ಟುರಾಸ್ ಜಿ4 ಮಾದರಿಯ 51 ಯುನಿಟ್‌ಗಳು ಮಾರಾಟವಾಗಿವೆ. ಇನ್ನು ಕಳೆದ ವರ್ಷದ ಸೆಪ್ಟೆಂಬರ್ ತಿಂಗಳಿನಲ್ಲಿ ಮಹೀಂದ್ರಾ ಅಲ್ಟುರಾಸ್ ಜಿ4 ಮಾದರಿಯ 73 ಯುನಿಟ್‌ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ,30 ರಷ್ಟು ಕುಸಿತವಾಗಿದೆ.

ಫೆಬ್ರವರಿ ತಿಂಗಳ ಮಾರಾಟದಲ್ಲಿ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿದ Toyota Fortuner

ಇನ್ನು ಫೋರ್ಡ್ ಎಂಡೀವರ್ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಭಾರತದ ಮಾರುಕಟ್ಟೆಯಲ್ಲಿ ಪುಲ್ ಸೈಜ್ ಎಸ್‍ಯುವಿ ವಿಭಾಗದಲ್ಲಿ ಫೋರ್ಡ್ ಎಂಡೀವರ್ ಎರಡನೇ ಸ್ಥಾನದಲ್ಲಿರುತ್ತಿತ್ತು. ಅಲ್ಲದೇ ಅಗ್ರಸ್ಥಾನದಲ್ಲಿರುವ ಟೊಯೊಟಾ ಫಾರ್ಚೂನರ್ ಎಸ್‍ಯುವಿಗೆ ಪ್ರಬಲ ಪೈಪೋಟಿಯನ್ನು ನೀಡುತ್ತಿತ್ತು.

ಫೆಬ್ರವರಿ ತಿಂಗಳ ಮಾರಾಟದಲ್ಲಿ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿದ Toyota Fortuner

ಪುಲ್ ಸೈಜ್ ಎಸ್‍ಯುವಿ ವಿಭಾಗದ ಸೆಪ್ಟೆಂಬರ್ ತಿಂಗಳ ಮಾರಾಟದಲ್ಲಿ ಅಗ್ರ ಸ್ಥಾನವನ್ನು ಪಡೆದ ಟೊಯೊಟಾ ಫಾರ್ಚೂನರ್ ಬಗ್ಗೆ ಹೇಳುವುದಾದರೆ, ಈ ಎಸ್‍ಯುವಿ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಈ ಎಸ್‍ಯುವಿ 2.7-ಲೀಟರ್ ಪೆಟ್ರೋಲ್ ಮತ್ತು 2.8-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಗಳನ್ನು ಒಳಗೊಂಡಿದೆ. 2.7-ಲೀಟರ್ ಪೆಟ್ರೋಲ್ ಎಂಜಿನ್ 166 ಬಿಹೆಚ್‍ಪಿ ಪವರ್ ಮತ್ತು 245 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಫೆಬ್ರವರಿ ತಿಂಗಳ ಮಾರಾಟದಲ್ಲಿ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿದ Toyota Fortuner

ಇನ್ನು ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗೆ ಹೊಂದಿಕೆಯಾದ ಡೀಸೆಲ್ ಎಂಜಿನ್ 177 ಬಿಹೆಚ್‍ಪಿ ಪವರ್ ಮತ್ತು 420 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಆರು-ಸ್ಪೀಡ್ ಟಾರ್ಕ್ ಕರ್ನವಾಟರ್ ಗೇರ್ ಬಾಕ್ಸ್ ಜೋಡಿಸಲಾದ ಯುನಿಟ್ 201 ಬಿಹೆಚ್‍ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಫೆಬ್ರವರಿ ತಿಂಗಳ ಮಾರಾಟದಲ್ಲಿ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿದ Toyota Fortuner

ಇನ್ನು ಟೊಯೊಟಾ ತನ್ನ ಫಾರ್ಚುನರ್ ಲೆಜೆಂಡರ್ 4X4 ವೆರಿಯೆಂಟ್ ಕೊನೆಗೂ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ .2021ರ ಆರಂಭದಲ್ಲಿ ಬಿಡುಗಡೆಗೊಂಡ ಟೊಯೊಟಾ ಫಾರ್ಚುನರ್ ಲೆಜೆಂಡರ್ 4X2 ವೆರಿಯಂಟ್ 2,700ಕ್ಕೂ ಹೆಚ್ಚು ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ ಎಂದು ಕಂಪನಿಯು ಬಹಿರಂಗಪಡಿಸಿದೆ. ಈ ಹೊಸ ಟೊಯೊಟಾ ಫಾರ್ಚುನರ್ ಲೆಜೆಂಡರ್ 4X4 ವೆರಿಯೆಂಟ್ ಡ್ಯುಯಲ್ ಟೋನ್ ಪರ್ಲ್ ವೈಟ್ ಜೊತೆಗೆ ಬ್ಲಾಕ್ ರೂಫ್ ಕಲರ್ ಸ್ಕೀಮ್ ನಲ್ಲಿ ನೀಡಲಾಗುತ್ತಿದೆ.

ಫೆಬ್ರವರಿ ತಿಂಗಳ ಮಾರಾಟದಲ್ಲಿ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿದ Toyota Fortuner

ಈ ಎಸ್‍ಯುವಿಯಲ್ಲಿ ಪ್ರೀಮಿಯಂ 11 ಸ್ಪೀಕರ್‌ಗಳಾದ ಜೆಬಿಎಲ್ ಆಡಿಯೋ ಸಿಸ್ಟಂ, ಬ್ಯಾಕ್ ಡೋರ್ ಕಿಕ್ ಸೆನ್ಸರ್ ಮತ್ತು ವೈರ್‌ಲೆಸ್ ಸ್ಮಾರ್ಟ್‌ಫೋನ್ ಚಾರ್ಜಿಂಗ್‌ನಂತಹ ವೈಶಿಷ್ಟ್ಯಗಳನ್ನು ಪಡೆಯುತ್ತದೆ. ಆದರೆ 4X2 ಕೌಂಟರ್‌ಪಾರ್ಟ್‌ನಂತೆಯೇ, ಲೆಂಜೆಂಡರ್ 4X4 ವೆರಿಯೆಂಟ್ ಡ್ಯುಯಲ್-ಟೋನ್ (ಕಪ್ಪು ಮತ್ತು ಮರೂನ್) ಇಂಟಿರಿಯರ್ ಥೀಮ್‌ನೊಂದಿಗೆ ಬರುತ್ತದೆ ಮತ್ತು ಸ್ಟೀರಿಂಗ್ ವೀಲ್ ಮತ್ತು ಕನ್ಸೋಲ್ ಬಾಕ್ಸ್‌ಗಾಗಿ ಕಾಂಟ್ರಾಸ್ಟ್ ಸ್ಟಿಚಿಂಗ್ ಅನ್ನು ಒಳಗೊಂಡಿದೆ,

ಫೆಬ್ರವರಿ ತಿಂಗಳ ಮಾರಾಟದಲ್ಲಿ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿದ Toyota Fortuner

ಈ ಹೊಸ ಟೊಯೊಟಾ ಫಾರ್ಚುನರ್ ಲೆಜೆಂಡರ್ 4X4 ವೆರಿಯೆಂಟ್ ನಲ್ಲಿ 2.8 ಲೀಟರ್ ಡೀಸೆಲ್ ಎಂಜಿನ್‌ ಅನ್ನು ಹೊಂದಿದೆ. ಈ ಹೊಸ ಲೆಜೆಂಡರ್ ವೆರಿಯೆಂಟ್ ನಲ್ಲಿ ಸುರಕ್ಷತೆಗಾಗಿ 7 ಏರ್‌ಬ್ಯಾಗ್‌ಗಳು, ಇಬಿಡಿಯೊಂದಿಗೆ ಎಬಿಎಸ್, ಬ್ರೇಕ್ ಅಸಿಸ್ಟ್, 360 ಡಿಗ್ರಿ ಕ್ಯಾಮೆರಾ, ಸ್ಟೆಬಿಲಿಟಿ ಕಂಟ್ರೋಲ್, ಐಎಸ್‌ಒಫಿಕ್ಸ್ ಚೈಲ್ಡ್ ಸೀಟ್ ಮೌಂಟಡ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್ ಮತ್ತು ತುರ್ತು ಬ್ರೇಕ್ ಸಿಗ್ನಲ್‌ನಂತಹ ಸಾಕಷ್ಟು ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಹೊಸ ಟೊಯೊಟಾ ಫಾರ್ಚುನರ್ ಲೆಜೆಂಡರ್ 4X4 ವೆರಿಯೆಂಟ್ ಮಾರಾಟದಲ್ಲಿ ಹೆಚ್ಚಿನ ಕೊಡುಗೆಯನ್ನು ನೀಡಬಹುದು. ಫೋರ್ಡ್ ಎಂಡೀವರ್ ಸ್ಥಗಿತವಾಗಿರುವುದು ಟೊಯೊಟಾ ಫಾರ್ಚುನರ್ ಎಸ್‍ಯುವಿಯ ಮಾರಾಟಕ್ಕೆ ಹೆಚ್ಚು ಸಹಯವಾಗಿದೆ.

Most Read Articles

Kannada
English summary
Full size suv sales september 2021 toyota fortuner mg gloster details
Story first published: Friday, October 15, 2021, 10:18 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X