ಎಕ್ಸ್‌ಯುವಿ700 ಕಾರಿನಲ್ಲಿರುವ ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್ ಹೇಗೆ ಕಾರ್ಯನಿರ್ವಹಿಸುತ್ತದೆ?
ಮಧ್ಯಮ ಕ್ರಮಾಂಕದ ಎಸ್‌ಯುವಿ ಮಾದರಿಗಳಲ್ಲಿ ಅತಿ ಹೆಚ್ಚು ಫೀಚರ್ಸ್ ಹೊಂದಿರುವ ಮಹೀಂದ್ರಾ ಎಕ್ಸ್‌ಯುವಿ700 ಮಾದರಿಯು ಇತ್ತೀಚೆಗೆ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್‌ನೊಂದಿಗೆ ಅತ್ಯುತ್ತಮ ಕಾರು ಮಾದರಿಯಾಗಿ ಹೊರಹೊಮ್ಮಿದ್ದು, ಹೊಸ ಕಾರಿನಲ್ಲಿ ಸುಧಾರಿತ ತಂತ್ರಜ್ಞಾನ ಪ್ರೇರಿತ ಸೇಫ್ಟಿ ಫೀಚರ್ಸ್ ಕುರಿತಾಗಿ ಗ್ಲೋಬಲ್ ಎನ್‌ಸಿಎಪಿ ಕೂಡಾ ಮೆಚ್ಚುಗೆ ವ್ಯಕ್ತಪಡಿಸಿದೆ.

ಗ್ಲೋಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಎಕ್ಸ್‌ಯುವಿ300 ನಂತರ ಎಕ್ಸ್‌ಯುುವಿ700 ಮಾದರಿಯು ಗರಿಷ್ಠ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡ ಎರಡನೇ ಕಾರು ಮಾದರಿಯಾಗಿ ಹೊರಹೊಮ್ಮಿದ್ದು, ಹಲವಾರು ಸೇಫ್ಟಿ ಫೀಚರ್ಸ್ ಹೊಂದಿರುವ ಹೊಸ ಎಕ್ಸ್‌ಯುವಿ700 ಮಾದರಿಯು ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡಿದೆ.

ಪ್ರಯಾಣಿಕ ವಾಹನಗಳ ಸುರಕ್ಷತೆ ಕುರಿತು ಜಾಗತಿಕ ಮಟ್ಟದ ಅಭಿಯಾನ ಕೈಗೊಂಡಿರುವ ಗ್ಲೊಬಲ್ ಎಸ್‌ಸಿಎಪಿ ಸಂಸ್ಥೆಯು ಭಾರತದಲ್ಲಿ #SAFERCARSFORINDIA ಅಭಿಯಾನದಡಿ ಹೊಸ ಕಾರುಗಳ ಸುರಕ್ಷತೆಯನ್ನು ಸುಧಾರಿಸಲು ಕಾರಣವಾಗಿದೆ.

ಮಹೀಂದ್ರಾ ನಿರ್ಮಾಣದ ಹೊಸ ಕಾರುಗಳು ಗ್ಲೊಬಲ್ ಎನ್‌ಸಿಎಪಿ ಕ್ರ್ಯಾಶ್‌ಟೆಸ್ಟಿಂಗ್‌ನಲ್ಲಿ ಹೊಸ ದಾಖಲೆಗೆ ಕಾರಣವಾಗುತ್ತಿದ್ದು, ಎಕ್ಸ್‌ಯುವಿ700 ಮಾದರಿಯು ಕೂಡಾ ವಯಸ್ಕ ಪ್ರಯಾಣಿಕರ ಸುರಕ್ಷತೆಗಾಗಿ ನೀಡುವ 17 ಅಂಕಗಳಲ್ಲಿ 16.03 ಅಂಕಗಳನ್ನು ಮತ್ತು ಮಕ್ಕಳ ಸುರಕ್ಷತೆಗಾಗಿ ನೀಡಲಾಗುವ 49 ಅಂಕಗಳಲ್ಲಿ 41.66 ಅಂಕಗಳೊಂದಿಗೆ 5 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡಿದೆ.

ಹೊಸ ಕಾರಿನಲ್ಲಿ ಮತ್ತೊಂದು ಪ್ರಮುಖ ಫೀಚರ್ಸ್ ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್ ಸೌಲಭ್ಯದ ಬಗೆಗೆ ಗ್ಲೋಬಲ್ ಎನ್‌ಸಿಎಪಿ ಸಂಸ್ಥೆಯು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿವಿಧ ಕಾರಣಗಳಿಂದ ಸಂಭವಿಸಬಹುದಾದ ರಸ್ತೆ ಅಪಘಾತಗಳನ್ನು ತಗ್ಗಿಸಲು ಮತ್ತು ಪಾದಾಚಾರಿಗಳನ್ನು ರಕ್ಷಿಸುವಲ್ಲಿ ಹೊಸ ಫೀಚರ್ಸ್ ಸಾಕಷ್ಟು ಸಹಕಾರಿಯಾಗಿದೆ.

ಪ್ರಮುಖ ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಹೊಸ ಸೇಫ್ಟಿ ಫೀಚರ್ಸ್ ಕಡ್ಡಾಯವಾಗಿದ್ದು, ಭಾರತದಲ್ಲೂ ಇದೀಗ ಕೆಲವೇ ಕೆಲವು ಐಷಾರಾಮಿ ಕಾರುಗಳಲ್ಲಿ ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್ ಸೌಲಭ್ಯವು ಆಯ್ಕೆ ರೂಪದಲ್ಲಿ ನೀಡುತ್ತಿವೆ. ಆದರೆ ಮಧ್ಯಮ ಕ್ರಮಾಂಕದ ಕಾರು ಉತ್ಪಾದಿಸುವ ಮಹೀಂದ್ರಾ ಕಂಪನಿಯು ಹೊಸ ಎಕ್ಸ್‌ಯುವಿ700 ಮಾದರಿಯಲ್ಲಿ ಹೊಸ ಫೀಚರ್ಸ್ ಅನ್ನು ಅಳವಡಿಸಿರುವುದು ಉತ್ತಮ ಬೆಳವಣಿಗೆಯಾಗಿದ್ದು, ಸೆನ್ಸಾರ್ ಮೂಲಕ ಕಾರ್ಯನಿರ್ವಹಣೆ ಮಾಡುವ ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್ ಸೌಲಭ್ಯವು ಕಾರು ಚಾಲಕನ ಗಮನಕ್ಕೆ ಬಾರದೇ ಆಗಬಹುದಾದ ಅನಾಹುತಗಳನ್ನು ತಪ್ಪಿಸಲು ನೆರವಾಗುತ್ತದೆ.

ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್ ಸೌಲಭ್ಯವು ಮುಂದಿರುವ ವಾಹನಗಳ ವೇಗವನ್ನು ಆಧರಿಸಿ ಚಲಿಸಲಿದ್ದು, ಒಂದು ವೇಳೆ ಸಡನ್ ಬ್ರೇಕಿಂಗ್ ಅಥವಾ ಪಾದಾಚಾರಿಗಳಿಂದ ಆಗಬಹುದಾದ ರಸ್ತೆ ಅಪಘಾತಗಳನ್ನು ತಪ್ಪಿಸಲು ಅತಿ ಕಡಿಮೆ ಅಂತರದಲ್ಲಿ ವೇಗ ನಿಯಂತ್ರಣಕ್ಕೆ ಬರಲು ಸಹಕಾರಿಯಾಗುತ್ತದೆ.

ಜೊತೆಗೆ ಹೊಸ ಎಕ್ಸ್‌ಯುವಿ700 ಮಾದರಿಯಲ್ಲಿರುವ 7-ಏರ್‌ಬ್ಯಾಗ್, ಎಬಿಎಸ್ ಜೊತೆಗೆ ಇಬಿಡಿ, ಎಲೆಕ್ಟ್ರಾನಿಕ್ ಲಾಕಿಂಗ್, ಟ್ರಾಕ್ಷನ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಆಟೋ ಹೆಡ್‌ಲ್ಯಾಂಪ್ ಬೂಸ್ಟರ್, ವ್ಯಯಕ್ತಿಕರಣಗೊಳಿಸಿದ ಸೇಫ್ಟಿ ಅಲರ್ಟ್, ಡ್ರೈವರ್ ಡ್ರಾಸಿನೆಸ್ ಅಲರ್ಟ್, ಲೆನ್ ಕಿಪ್ ಅಸಿಸ್ಟ್ ಸೌಲಭ್ಯಗಳು ಕೂಡಾ ಕಾರು ಚಾಲನೆಯನ್ನು ಮತ್ತಷ್ಟು ಸುರಕ್ಷಿತಗೊಳಿಸುತ್ತವೆ.

ಇನ್ನು ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ 5 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.99 ಲಕ್ಷಕ್ಕೆ ಮತ್ತು ಹೆಚ್ಚಿನ ಮಟ್ಟದ ಫೀಚರ್ಸ್ ಹೊಂದಿರುವ ಟಾಪ್ ಎಂಡ್ ಮಾದರಿಯನ್ನು ರೂ. 22.89 ಲಕ್ಷ ಬೆಲೆ ಹೊಂದಿದೆ.

ಹೊಸ ಕಾರಿನಲ್ಲಿ 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯ ಹೊಂದಿದ್ದರೆ 5 ಸೀಟರ್ ಮಾದರಿಯು 2+3 ಆಸನ ಸೌಲಭ್ಯ ಹೊಂದಿದ್ದು, ಹೊಸ ಕಾರಿನಲ್ಲಿ ಕಂಪನಿಯು 2.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ನೀಡಿದೆ.

ಹೊಸ ಕಾರು ಎಂಎಕ್ಸ್, ಎಎಕ್ಸ್3, ಎಎಕ್ಸ್5, ಎಎಕ್ಸ್7 ಮತ್ತು ಎಎಕ್ಸ್7 ಲಗ್ಷುರಿ ಎನ್ನುವ ವಿವಿಧ ವೆರಿಯೆಂಟ್‌ಗಳೊಂದಿಗೆ ಆಕರ್ಷಕ ಫೀಚರ್ಸ್, ಬಲಿಷ್ಠ ಎಂಜಿನ್ ಆಯ್ಕೆ ಹೊಂದಿದ್ದು, ಕಂಪನಿಯೇ ಜೋಡಣೆ ಮಾಡುವ 7 ಸೀಟರ್ ಮಾದರಿಗಳನ್ನು ಹೊರತುಪಡಿಸಿ 5 ಸೀಟರ್ ಹೊಂದಿರುವ ಮಾದರಿಗಳಲ್ಲಿ 7 ಸೀಟರ್ ಬಯಸುವ ಗ್ರಾಹಕರು ಹೆಚ್ಚುವರಿ ರೂ. 70 ಸಾವಿರ ಪಾವತಿ ಮಾಡಬೇಕಾಗುತ್ತದೆ.

ಹೊಸ ಕಾರಿನಲ್ಲಿ ಫ್ರಂಟ್ ಫಾಸಿಯಾದೊಂದಿಗೆ ಸಂಯೋಜನೆಗೊಂಡಿರುವ ಎಲ್ಇಡಿ ಹೆಡ್‌ಲ್ಯಾಂಪ್ಸ್, ಸಿ ಆಕಾರದಲ್ಲಿರುವ ಎಲ್ಇಡಿ ಡಿಆರ್‌ಎಲ್ಎಸ್, ಸಿಲ್ವರ್ ಕೋಟಿಂಗ್ ಹೊಂದಿರುವ ಫ್ಲಕ್ಸ್ ಸ್ಕೀಡ್ ಪ್ಲೇಟ್, 18-ಇಂಚಿನ ಡ್ಯುಯಲ್ ಟೋನ್ ಮಲ್ಟಿ ಸ್ಪೋಕ್ ಅಲಾಯ್ ವ್ಹೀಲ್ ಪಡೆದುಕೊಂಡಿದೆ.

ಎಕ್ಸ್‌ಯುವಿ700 ಮಾದರಿಯ ಸೈಡ್ ಪ್ರೋಫೈಲ್ ಮತ್ತು ಹಿಂಬದಿಯ ವಿನ್ಯಾಸವು ಕೂಡಾ ಸಾಕಷ್ಟು ಹೊಸತನದಿಂದ ಕೂಡಿದ್ದು, ಹಿಂಬದಿಯ ಫೆಂಡರ್‌ನೊಂದಿಗೆ ಹರಡಿಕೊಂಡಿರುವ ವಿಭಜಿತ ಟೈಲ್‌ಲ್ಯಾಂಪ್, ವಿನೂತನ ವಿನ್ಯಾಸದ ಬಂಪರ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ರೂಫ್ ರೈಲ್ಸ್, ಶಾರ್ಕ್ ಫಿನ್ ಆಂಟೆನಾ, ರೂಫ್ ಸ್ಪಾಯ್ಲರ್ ಪಡೆದುಕೊಂಡಿದೆ.

ಹಾಗೆಯೇ ಹೊಸ ಕಾರಿನಲ್ಲಿ 10.25 ಇಂಚಿನ ಡಿಜಿಟಲ್ ಮತ್ತು ಇನ್ಪೋಟೈನ್‌ಮೆಂಟ್ ಟಚ್‌ಸ್ಕ್ರೀನ್ ಡಿಸ್‌ಪ್ಲೇ, ಆಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ, ಅಮೆಜಾನ್ ಅಲೆಕ್ಸಾ, 60 ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಿಸಬಹುದಾದ ಕಾರ್ ಕನೆಕ್ಟ್ ಟೆಕ್ನಾಲಜಿ, ವಾಯ್ಸ್ ಅಸಿಸ್ಟೆನ್ಸ್, ಆ್ಯಂಬಿಯೆಂಟ್ ಲೈಟಿಂಗ್ಸ್, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, 2 ಮತ್ತು 3ನೇ ಸಾಲಿನಲ್ಲೂ ಎಸಿ ವೆಂಟ್ಸ್, ಪನೋರಮಿಕ್ ಸನ್‌ರೂಫ್ ಮತ್ತು ಏರ್ ಪ್ಯೂರಿಫ್ಲೈರ್ ಸೌಲಭ್ಯಗಳಿವೆ.


Click it and Unblock the Notifications