ಇವಿ ಬಳಕೆ ಉತ್ತೇಜಿಸಲು ಎಲೆಕ್ಟ್ರಿಕ್ ವಾಹನ ನೀತಿ ಜಾರಿಗೊಳಿಸಿದ ಗೋವಾ ಸರ್ಕಾರ

ಎಲೆಕ್ಟ್ರಿಕ್ ವಾಹನಗಳ ಬಳಕೆ ಹಾಗೂ ಮಾರಾಟವನ್ನು ಉತ್ತೇಜಿಸಲು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರವರು ಶನಿವಾರ ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ನೀತಿಯನ್ನು ಆರಂಭಿಸಿದ್ದಾರೆ. ರಾಜ್ಯದಲ್ಲಿ ಬ್ಯಾಟರಿ ಚಾಲಿತ ವಾಹನಗಳ ಬಳಕೆಯನ್ನು ಉತ್ತೇಜಿಸುವುದು ಈ ನೀತಿಯ ಪ್ರಮುಖ ಉದ್ದೇಶವಾಗಿದೆ ಎಂದು ಸಾವಂತ್ ಹೇಳಿದರು. ಎಲೆಕ್ಟ್ರಿಕ್ ವಾಹನಗಳ ಮೇಲಿನ ಪ್ರೋತ್ಸಾಹದ ಬಗ್ಗೆಯೂ ಅವರು ಮಾಹಿತಿ ನೀಡಿದರು.

ಇವಿ ಬಳಕೆ ಉತ್ತೇಜಿಸಲು ಎಲೆಕ್ಟ್ರಿಕ್ ವಾಹನ ನೀತಿ ಜಾರಿಗೊಳಿಸಿದ ಗೋವಾ ಸರ್ಕಾರ

ಗೋವಾ ಸರ್ಕಾರವು ತನ್ನ ಎಲೆಕ್ಟ್ರಿಕ್ ವಾಹನ ನೀತಿಯ ಅಡಿಯಲ್ಲಿ ಎಲ್ಲಾ ರೀತಿಯ ಎಲೆಕ್ಟ್ರಿಕ್ ವಾಹನಗಳಿಗೆ ಐದು ವರ್ಷಗಳವರೆಗೆ ರಸ್ತೆ ತೆರಿಗೆಯಿಂದ ವಿನಾಯಿತಿ ನೀಡುತ್ತದೆ. ಇನ್ನು ಸಬ್ಸಿಡಿ ಕುರಿತು ಮಾತನಾಡಿದ ಸಾವಂತ್, ಈ ನೀತಿಯು ಎರಡು, ಮೂರು ಹಾಗೂ ನಾಲ್ಕು ಚಕ್ರಗಳ ಎಲೆಕ್ಟ್ರಿಕ್ ವಾಹನಗಳನ್ನು ಒಳಗೊಂಡಿರುತ್ತದೆ ಎಂದು ತಿಳಿಸಿದರು. ಗೋವಾ ರಾಜ್ಯ ಸರ್ಕಾರವು ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ 30% ನಷ್ಟು ಹಾಗೂ ಎಲೆಕ್ಟ್ರಿಕ್ ತ್ರಿಚಕ್ರ ವಾಹನಗಳಿಗೆ 40% ನಷ್ಟು ಸಬ್ಸಿಡಿ ನೀಡಲಿದೆ.

ಇವಿ ಬಳಕೆ ಉತ್ತೇಜಿಸಲು ಎಲೆಕ್ಟ್ರಿಕ್ ವಾಹನ ನೀತಿ ಜಾರಿಗೊಳಿಸಿದ ಗೋವಾ ಸರ್ಕಾರ

ಮತ್ತೊಂದೆಡೆ ನಾಲ್ಕು ಚಕ್ರದ ಎಲೆಕ್ಟ್ರಿಕ್ ವಾಹನಗಳಿಗೆ ರೂ. 3 ಲಕ್ಷದವರೆಗೆ ಸಹಾಯಧನ ನೀಡಲಾಗುವುದು. ಮೊದಲು ಬಂದವರಿಗೆ ಮೊದಲು ಎಂಬ ಆಧಾರದ ಮೇಲೆ ಸುಮಾರು 400 ವಾಹನಗಳಿಗೆ ಸಬ್ಸಿಡಿ ನೀಡಲಾಗುತ್ತದೆ ಎಂದು ಅವರು ಹೇಳಿದರು. ಈ ನೀತಿಯು ರಾಜ್ಯದಲ್ಲಿ ಸುಮಾರು 10,000 ಪ್ರತ್ಯಕ್ಷ ಹಾಗೂ ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ.

ಇವಿ ಬಳಕೆ ಉತ್ತೇಜಿಸಲು ಎಲೆಕ್ಟ್ರಿಕ್ ವಾಹನ ನೀತಿ ಜಾರಿಗೊಳಿಸಿದ ಗೋವಾ ಸರ್ಕಾರ

ಈ ನೀತಿಯು ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಬೇಡಿಕೆಯನ್ನು ಹೆಚ್ಚಿಸುತ್ತದೆ. ಜೊತೆಗೆ ಹೂಡಿಕೆಗಳನ್ನು ಆಕರ್ಷಿಸಲು ನೆರವಾಗುತ್ತದೆ ಎಂದು ಅವರು ಹೇಳಿದರು. ಎಲೆಕ್ಟ್ರಿಕ್ ವಾಹನಗಳಿಗೆ ಚಾರ್ಜಿಂಗ್ ಮೂಲಸೌಕರ್ಯಗಳನ್ನು ಸ್ಥಾಪಿಸುವವರಿಗೆ ರಾಜ್ಯ ಸರ್ಕಾರವು ಸಬ್ಸಿಡಿ ನೀಡಲಿದೆ ಎಂದು ಸಾವಂತ್ ಹೇಳಿದರು. ಗೋವಾದಲ್ಲಿರುವ ರಾಜ್ಯ ಹೆದ್ದಾರಿಗಳಲ್ಲಿ ಪ್ರತಿ 25 ಕಿ.ಮೀ.ಗೆ ಚಾರ್ಜಿಂಗ್‌ಗೆ ಮೂಲ ಸೌಕರ್ಯ ಕಲ್ಪಿಸಲಾಗುವುದು.

ಇವಿ ಬಳಕೆ ಉತ್ತೇಜಿಸಲು ಎಲೆಕ್ಟ್ರಿಕ್ ವಾಹನ ನೀತಿ ಜಾರಿಗೊಳಿಸಿದ ಗೋವಾ ಸರ್ಕಾರ

ಇದು ಮಾತ್ರವಲ್ಲದೇ ನಗರದಲ್ಲಿ ಕಡಿಮೆ ಅಂತರದಲ್ಲಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಪ್ರಮೋದ್ ಸಾವಂತ್ ಹೇಳಿದರು. ಸದ್ಯಕ್ಕೆ ಪೆಟ್ರೋಲ್ ಹಾಗೂ ಡೀಸೆಲ್‌ ಎಂಜಿನ್ ವಾಹನಗಳಿಗಿಂತ ಎಲೆಕ್ಟ್ರಿಕ್ ವಾಹನಗಳ ಬೆಲೆ ಹೆಚ್ಚು. ಆದರೆ ಮುಂಬರುವ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಬೆಲೆ ಪೆಟ್ರೋಲ್, ಡೀಸೆಲ್ ವಾಹನಗಳ ಬೆಲೆಗೆ ಸಮನಾಗಿರಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಇವಿ ಬಳಕೆ ಉತ್ತೇಜಿಸಲು ಎಲೆಕ್ಟ್ರಿಕ್ ವಾಹನ ನೀತಿ ಜಾರಿಗೊಳಿಸಿದ ಗೋವಾ ಸರ್ಕಾರ

ಕೇಂದ್ರ ಸರ್ಕಾರವು ಮುಂಬರುವ ವರ್ಷಗಳಲ್ಲಿ ಎಲೆಕ್ಟ್ರಿಕ್ ವಾಹನಗಳಿಂದ ಉಂಟಾಗುವ ಮಾಲಿನ್ಯವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ಇನ್ನು ಎರಡು ವರ್ಷಗಳಲ್ಲಿ ಎಲೆಕ್ಟ್ರಿಕ್ ವಾಹನದ ಬೆಲೆ ಡೀಸೆಲ್, ಪೆಟ್ರೋಲ್ ವಾಹನಗಳ ಬೆಲೆಗೆ ಸಮನಾಗಿರಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ರವರು ಹೇಳಿದ್ದಾರೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿವೆ.

ಇವಿ ಬಳಕೆ ಉತ್ತೇಜಿಸಲು ಎಲೆಕ್ಟ್ರಿಕ್ ವಾಹನ ನೀತಿ ಜಾರಿಗೊಳಿಸಿದ ಗೋವಾ ಸರ್ಕಾರ

ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ಕ್ರಮಗಳ ನಡುವೆಯೂ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ನಿರೀಕ್ಷಿತ ಮಟ್ಟದಲ್ಲಿಲ್ಲ. ಇದಕ್ಕೆ ಪ್ರಮುಖ ಕಾರಣವೆಂದರೆ ಎಲೆಕ್ಟ್ರಿಕ್ ವಾಹನಗಳ ಬೆಲೆ. ಅದರಲ್ಲೂ ವಿಶೇಷವಾಗಿ ಎಲೆಕ್ಟ್ರಿಕ್ ಕಾರುಗಳ ಹೆಚ್ಚಿನ ಬೆಲೆಗಳನ್ನು ಹೊಂದಿವೆ. ಎಲೆಕ್ಟ್ರಿಕ್ ವಾಹನಗಳ ಚಾಲನಾ ವೆಚ್ಚವು ಪೆಟ್ರೋಲ್, ಡೀಸೆಲ್ ವಾಹನಗಳಿಗಿಂತ ತುಂಬಾ ಕಡಿಮೆಯಾಗಿದೆ.

ಇವಿ ಬಳಕೆ ಉತ್ತೇಜಿಸಲು ಎಲೆಕ್ಟ್ರಿಕ್ ವಾಹನ ನೀತಿ ಜಾರಿಗೊಳಿಸಿದ ಗೋವಾ ಸರ್ಕಾರ

ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ದೊಡ್ಡ ಪ್ರಮಾಣದಲ್ಲಿ ಬಳಸುವುದರಿಂದ ಪೆಟ್ರೋಲ್, ಡೀಸೆಲ್ ಬಳಕೆ ಕಡಿಮೆಯಾಗಿ, ಅವುಗಳ ಆಮದು ಪ್ರಮಾಣವು ಸಹಕಡಿಮೆಯಾಗುತ್ತದೆ. ಇದರಿಂದ ಭಾರತವು ಲಕ್ಷಾಂತರ ಕೋಟಿ ರೂಪಾಯಿಗಳನ್ನು ಉಳಿಸಲು ಸಾಧ್ಯವಾಗಲಿದೆ. ಎಲೆಕ್ಟ್ರಿಕ್ ವಾಹನಗಳ ಮೇಲೆ ಕೇವಲ 5% ನಷ್ಟು ಮಾತ್ರ ಜಿಎಸ್‌ಟಿ ವಿಧಿಸಲಾಗುತ್ತದೆ.

ಇವಿ ಬಳಕೆ ಉತ್ತೇಜಿಸಲು ಎಲೆಕ್ಟ್ರಿಕ್ ವಾಹನ ನೀತಿ ಜಾರಿಗೊಳಿಸಿದ ಗೋವಾ ಸರ್ಕಾರ

ಇನ್ನು ಪೆಟ್ರೋಲ್ ವಾಹನಗಳ ಮೇಲೆ 48% ನಷ್ಟು ಜಿಎಸ್‌ಟಿ ವಿಧಿಸಲಾಗುತ್ತದೆ. ಎಲೆಕ್ಟ್ರಿಕ್ ವಾಹನಗಳ ಬ್ಯಾಟರಿಗಳಲ್ಲಿ ಬಳಸುವ ಲಿಥಿಯಂನ ಬೆಲೆ ಹೆಚ್ಚಾಗಿರುವ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬೆಲೆಯು ಹೆಚ್ಚಾಗಿದೆ. ಭವಿಷ್ಯದಲ್ಲಿ ಲಿಥಿಯಂ ಉತ್ಪಾದನೆ ಹೆಚ್ಚಾಗುವುದರಿಂದ ಅದರ ಬೆಲೆ ಕಡಿಮೆಯಾಗುತ್ತದೆ. ಇದರಿಂದ ಎಲೆಕ್ಟ್ರಿಕ್ ವಾಹನಗಳ ಬೆಲೆಯೂ ಕಡಿಮೆಯಾಗಲಿದೆ.

ಇವಿ ಬಳಕೆ ಉತ್ತೇಜಿಸಲು ಎಲೆಕ್ಟ್ರಿಕ್ ವಾಹನ ನೀತಿ ಜಾರಿಗೊಳಿಸಿದ ಗೋವಾ ಸರ್ಕಾರ

ಈಗ ಭಾರತದ ಲಿಥಿಯಂ ಅಗತ್ಯತೆಯ 81% ನಷ್ಟು ಮಾತ್ರ ಸ್ಥಳೀಯವಾಗಿ ಉತ್ಪಾದನೆಯಾಗುತ್ತಿದೆ. ಪರ್ಯಾಯ ಬ್ಯಾಟರಿ ತಂತ್ರಜ್ಞಾನಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಂಶೋಧನೆಗಳು ನಡೆಯುತ್ತಿವೆ. 2030 ರ ವೇಳೆಗೆ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಖಾಸಗಿ ಕಾರುಗಳಿಗೆ 30% ನಷ್ಟು, ಕಮರ್ಷಿಯಲ್ ಕಾರುಗಳಿಗೆ 70% ನಷ್ಟು, ಬಸ್‌ಗಳಿಗೆ 40% ನಷ್ಟು ಹಾಗೂ ದ್ವಿಚಕ್ರ, ತ್ರಿಚಕ್ರ ವಾಹನಗಳಿಗೆ 80% ನಷ್ಟು ಆಗಲಿದೆ ಎಂದು ಸರ್ಕಾರ ನಿರೀಕ್ಷಿಸುತ್ತಿದೆ.

ಇವಿ ಬಳಕೆ ಉತ್ತೇಜಿಸಲು ಎಲೆಕ್ಟ್ರಿಕ್ ವಾಹನ ನೀತಿ ಜಾರಿಗೊಳಿಸಿದ ಗೋವಾ ಸರ್ಕಾರ

ಎಲೆಕ್ಟ್ರಿಕ್ ವಾಹನಗಳನ್ನು ಚಾರ್ಜ್ ಮಾಡಲು ಕಲ್ಲಿದ್ದಲಿನ ಬದಲು ಸೋಲಾರ್ ಹಾಗೂ ಬಯೋಮಾಸ್‌ನಂತಹ ನವೀಕರಿಸಬಹುದಾದ ಇಂಧನ ಮೂಲಗಳಿಂದ ವಿದ್ಯುತ್ ಉತ್ಪಾದಿಸಲು ಕೇಂದ್ರ ಸರ್ಕಾರವು ಚಿಂತನೆ ನಡೆಸುತ್ತಿದೆ. ಎಲೆಕ್ಟ್ರಿಕ್ ವಾಹನಗಳನ್ನು ಸುಲಭವಾಗಿ ಚಾರ್ಜ್ ಮಾಡಲು, ಪೆಟ್ರೋಲ್ ಬಂಕ್ ಗಳಲ್ಲಿ ಚಾರ್ಜಿಂಗ್ ಪಾಯಿಂಟ್‌ಗಳನ್ನು ಒದಗಿಸುವ ಕೆಲಸಗಳು ಪ್ರಗತಿಯಲ್ಲಿವೆ.

ಇವಿ ಬಳಕೆ ಉತ್ತೇಜಿಸಲು ಎಲೆಕ್ಟ್ರಿಕ್ ವಾಹನ ನೀತಿ ಜಾರಿಗೊಳಿಸಿದ ಗೋವಾ ಸರ್ಕಾರ

ಎಲೆಕ್ಟ್ರಿಕ್ ವಾಹನಗಳನ್ನು ಹೊಂದುವುದರಿಂದ ಮಾಲಿನ್ಯ ಮುಕ್ತ ಪರಿಸರಕ್ಕೆ ಕೊಡುಗೆ ನೀಡಬಹುದು. ಎಲೆಕ್ಟ್ರಿಕ್ ವಾಹನಗಳಿಂದ ಯಾವುದೇ ಮಾಲಿನ್ಯ ಉಂಟಾಗುವುದಿಲ್ಲ. ಹೀಗಾಗಿ ವಾಯು ಮಾಲಿನ್ಯವನ್ನು ಗಣನೀಯವಾಗಿ ಕಡಿಮೆ ಮಾಡಬಹುದು. ಎಲೆಕ್ಟ್ರಿಕ್ ವಾಹನಗಳು ಆರ್ಥಿಕ ಮಿತವ್ಯಯಕಾರಿಯಾಗಿರುವುದರ ಜೊತೆಗೆ ಪರಿಸರಕ್ಕೂ ಪ್ರಯೋಜನಕಾರಿಯಾಗಿವೆ.

ಇವಿ ಬಳಕೆ ಉತ್ತೇಜಿಸಲು ಎಲೆಕ್ಟ್ರಿಕ್ ವಾಹನ ನೀತಿ ಜಾರಿಗೊಳಿಸಿದ ಗೋವಾ ಸರ್ಕಾರ

ಇನ್ನು ವಾಹನ ತಯಾರಕ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯನ್ನು ಭಾಗಶಃ ಅಥವಾ ಸಂಪೂರ್ಣವಾಗಿ ಬದಲಾಯಿಸುವ ಮಹತ್ವಾಕಾಂಕ್ಷೆಯ ಗುರಿಗಳನ್ನು ಹೊಂದಿದ್ದು, ಮಾರುಕಟ್ಟೆಯಲ್ಲಿ ಆಕರ್ಷಕವಾದ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸುತ್ತಿವೆ.

ಗಮನಿಸಿ: ಈ ಲೇಖನದಲ್ಲಿರುವ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Goa government implements ev policy to promote electric vehicles details
Story first published: Monday, December 6, 2021, 10:27 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X