ಹೊಸ ಮೋಟಾರು ವಾಹನ ಕಾಯ್ದೆ ಜಾರಿಗೆ ತರುವುದನ್ನು ಮುಂದೂಡಿದ ಸರ್ಕಾರ

ಕರೋನಾ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಹೊಸ ಮೋಟಾರು ವಾಹನ ಕಾಯ್ದೆಯನ್ನು ಜಾರಿಗೆ ತರುವ ನಿರ್ಧಾರವನ್ನು ಗೋವಾ ಸರ್ಕಾರವು ಮುಂದೂಡಿದೆ. ಈ ಹೊಸ ಕಾಯ್ದೆಯನ್ವಯ ಸಂಚಾರ ನಿಯಮಗಳನ್ನು ಉಲ್ಲಂಘಿಸಿದರೆ ಭಾರೀ ಪ್ರಮಾಣದ ದಂಡ ವಿಧಿಸಲಾಗುತ್ತದೆ.

ಹೊಸ ಮೋಟಾರು ವಾಹನ ಕಾಯ್ದೆ ಜಾರಿಗೆ ತರುವುದನ್ನು ಮುಂದೂಡಿದ ಸರ್ಕಾರ

ಪತ್ರಕರ್ತರೊಂದಿಗೆ ನಡೆಸಿದ ಸಂವಾದದಲ್ಲಿ ಮಾತನಾಡಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಈ ಹೊಸ ಕಾಯ್ದೆಯು ವಾಹನ ಸವಾರರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಾಡುತ್ತದೆ. ಆದರೆ ಕರೋನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಈ ಕಾಯ್ದೆ ಜಾರಿಯನ್ನು ಕೆಲ ಕಾಲದವರೆಗೆ ಮುಂದೂಡಲು ನಿರ್ಧರಿಸಿದೆ ಎಂದು ಹೇಳಿದರು.

ಹೊಸ ಮೋಟಾರು ವಾಹನ ಕಾಯ್ದೆ ಜಾರಿಗೆ ತರುವುದನ್ನು ಮುಂದೂಡಿದ ಸರ್ಕಾರ

ಈ ತಿಂಗಳ ಮೊದಲ ವಾರದಲ್ಲಿ ಗೋವಾ ಸಾರಿಗೆ ಸಚಿವ ಮೌವಿನ್ ಗೋಧಿನೊರವರು ಗೋವಾದಲ್ಲಿ ಈ ವರ್ಷದ ಮೇ 1ರಿಂದ ಹೊಸ ಮೋಟಾರು ವಾಹನ ಕಾಯ್ದೆಯನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದರು.

MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಹೊಸ ಮೋಟಾರು ವಾಹನ ಕಾಯ್ದೆ ಜಾರಿಗೆ ತರುವುದನ್ನು ಮುಂದೂಡಿದ ಸರ್ಕಾರ

ಹೊಸ ನಿಯಮಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಏಪ್ರಿಲ್ ತಿಂಗಳಲ್ಲಿ ಪೊಲೀಸ್ ಇಲಾಖೆಯು ಜಾಗೃತಿ ಅಭಿಯಾನ ನಡೆಸಲಿದೆ ಎಂದು ಅವರು ತಿಳಿಸಿದ್ದರು. ಆದರೆ ಈಗ ಹೊಸ ಸಂಚಾರ ನಿಯಮದ ಅನುಷ್ಠಾನ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಗೋವಾ ಮುಖ್ಯಮಂತ್ರಿ ಹೇಳಿದ್ದಾರೆ.

ಹೊಸ ಮೋಟಾರು ವಾಹನ ಕಾಯ್ದೆ ಜಾರಿಗೆ ತರುವುದನ್ನು ಮುಂದೂಡಿದ ಸರ್ಕಾರ

ನಿಯಮಗಳನ್ನು ಜಾರಿಗೊಳಿಸದಿರುವ ಬಗ್ಗೆ ಕೇಂದ್ರ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡುವುದಾಗಿ ಅವರು ಹೇಳಿದ್ದಾರೆ. ಕರೋನಾ ವೈರಸ್ ವೇಗವಾಗಿ ಹರಡುತ್ತಿರುವುದರಿಂದ ಹೊಸ ನಿಯಮ ಜಾರಿಗೊಳಿಸುವುದನ್ನು ಕೆಲವು ದಿನಗಳವರೆಗೆ ಮುಂದೂಡಬೇಕೆಂದು ಗೋವಾದ ಘಟಕದ ಬಿಜೆಪಿ ರಾಜ್ಯ ಅಧ್ಯಕ್ಷರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದರು.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಹೊಸ ಮೋಟಾರು ವಾಹನ ಕಾಯ್ದೆ ಜಾರಿಗೆ ತರುವುದನ್ನು ಮುಂದೂಡಿದ ಸರ್ಕಾರ

ಈ ಹಿನ್ನೆಲೆಯಲ್ಲಿ ಹೊಸ ಮೋಟಾರು ಕಾಯ್ದೆಯನ್ನು ಮುಂದೂಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕರೋನಾ ಸಾಂಕ್ರಾಮಿಕ ರೋಗದಿಂದ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನಿಂದ ಜನರು ಈಗಾಗಲೇ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಹೊಸ ಮೋಟಾರು ವಾಹನ ಕಾಯ್ದೆ ಜಾರಿಗೆ ತರುವುದನ್ನು ಮುಂದೂಡಿದ ಸರ್ಕಾರ

ಹೊಸ ಮೋಟಾರು ವಾಹನ ಕಾಯ್ದೆಯಡಿ ವಿಧಿಸಲಾಗುವ ಭಾರಿ ದಂಡದಿಂದಾಗಿ ಅವರು ಮತ್ತಷ್ಟು ತೊಂದರೆಗಳು ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ. ಭಾರಿ ದಂಡ ವಿಧಿಸುವುದರಿಂದ ರಸ್ತೆ ಸುರಕ್ಷತೆ ಬಗ್ಗೆ ಜನರಲ್ಲಿ ಜಾಗೃತಿ ಮೂಡುವುದಿಲ್ಲ.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಹೊಸ ಮೋಟಾರು ವಾಹನ ಕಾಯ್ದೆ ಜಾರಿಗೆ ತರುವುದನ್ನು ಮುಂದೂಡಿದ ಸರ್ಕಾರ

ಬದಲಿಗೆ ಸರ್ಕಾರವು ಸಾರ್ವಜನಿಕರ ಬಳಿ ತೆರಳಿ ಸಂಚಾರ ನಿಯಮಗಳನ್ನು ವಿವರಿಸಿ ಅವುಗಳನ್ನು ಪಾಲಿಸುವಂತೆ ಕೇಳಿಕೊಳ್ಳಬೇಕು ಎಂದು ಹೇಳಿದರು. ಹೊಸ ಮೋಟಾರು ವಾಹನ ಕಾಯ್ದೆ 2019ರ ಅನ್ವಯ ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರಿಗೆ 10 ಪಟ್ಟು ಹೆಚ್ಚು ದಂಡ ವಿಧಿಸಲಾಗುತ್ತದೆ.

ಹೊಸ ಮೋಟಾರು ವಾಹನ ಕಾಯ್ದೆ ಜಾರಿಗೆ ತರುವುದನ್ನು ಮುಂದೂಡಿದ ಸರ್ಕಾರ

ಹೊಸ ನಿಯಮದ ಪ್ರಕಾರ ರೂ.1000ಗಳಿದ್ದ ದಂಡದ ಮೊತ್ತವನ್ನು ರೂ.10,000ಗಳಿಗೆ ಏರಿಕೆ ಮಾಡಲಾಗಿದೆ. ಹೆಲ್ಮೆಟ್ ಧರಿಸದಿದ್ದರೆ ವಿಧಿಸಲಾಗುತ್ತಿದ್ದ ರೂ.100 ದಂಡವನ್ನು ರೂ.1,000ಗಳಿಗೆ ಏರಿಕೆ ಮಾಡಲಾಗಿದೆ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಹೊಸ ಮೋಟಾರು ವಾಹನ ಕಾಯ್ದೆ ಜಾರಿಗೆ ತರುವುದನ್ನು ಮುಂದೂಡಿದ ಸರ್ಕಾರ

ಈ ಕಾಯ್ದೆ ಅನ್ವಯ ಸಂಚಾರಿ ನಿಯಮಗಳನ್ನು ಹೆಚ್ಚು ಬಾರಿ ಉಲ್ಲಂಘಿಸಿದರೆ ಚಾಲನಾ ಪರವಾನಗಿಯನ್ನು ರದ್ದುಪಡಿಸಲಾಗುತ್ತದೆ. ಕಾರು ಚಾಲನೆ ವೇಳೆ ಸೀಟ್‌ಬೆಲ್ಟ್ ಧರಿಸದಿದ್ದರೆ ರೂ.1,000 ದಂಡ ವಿಧಿಸಲಾಗುತ್ತದೆ.

ಹೊಸ ಮೋಟಾರು ವಾಹನ ಕಾಯ್ದೆ ಜಾರಿಗೆ ತರುವುದನ್ನು ಮುಂದೂಡಿದ ಸರ್ಕಾರ

ಅತಿ ವೇಗದಲ್ಲಿ ವಾಹನ ಚಾಲನೆ ಮಾಡುವವರಿಗೆ ರೂ.5,000ಗಳ ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಡ್ರಿಂಕ್ ಅಂಡ್ ಡ್ರೈವ್ ಮಾಡುವವರಿಗೆ ರೂ.10,000, ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ವಾಹನ ಚಾಲನೆ ಮಾಡುವವರಿಗೆ ರೂ.5,000 ದಂಡ ವಿಧಿಸಲಾಗುತ್ತದೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಹೊಸ ಮೋಟಾರು ವಾಹನ ಕಾಯ್ದೆ ಜಾರಿಗೆ ತರುವುದನ್ನು ಮುಂದೂಡಿದ ಸರ್ಕಾರ

ಕೆಲವು ರಾಜ್ಯಗಳು ಹೊಸ ಮೋಟಾರು ವಾಹನ ಕಾಯ್ದೆಯನ್ವಯ ಭಾರೀ ಪ್ರಮಾಣದ ದಂಡ ವಿಧಿಸುತ್ತಿವೆ. ಇನ್ನೂ ಕೆಲವು ರಾಜ್ಯಗಳು ದಂಡದ ಪ್ರಮಾಣವನ್ನು ಕಡಿಮೆ ಮಾಡಿವೆ.

ಹೊಸ ಮೋಟಾರು ವಾಹನ ಕಾಯ್ದೆ ಜಾರಿಗೆ ತರುವುದನ್ನು ಮುಂದೂಡಿದ ಸರ್ಕಾರ

ಭಾರತದಲ್ಲಿ ವಿಶ್ವದಲ್ಲೇ ಅತಿ ಹೆಚ್ಚಿನ ಸಂಖ್ಯೆಯ ರಸ್ತೆ ಅಪಘಾತಗಳು ಸಂಭವಿಸುತ್ತವೆ. ಸಂಚಾರ ನಿಯಮಗಳ ಉಲ್ಲಂಘನೆಯೇ ಇದಕ್ಕೆ ಪ್ರಮುಖ ಕಾರಣ. ಈ ಹಿನ್ನೆಲೆಯಲ್ಲಿ ಸಂಚಾರ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಲು ಹಳೆಯ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ಮಾಡಿ ಹೊಸ ಕಾಯ್ದೆ ಜಾರಿಗೊಳಿಸಲಾಗಿದೆ.

ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Goa government postpones implementation of new motor vehicle act. Read in Kannada.
Story first published: Saturday, April 10, 2021, 10:56 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X