ಎಲೆಕ್ಟ್ರಿಕ್ ವಾಹನ ಖರೀದಿಸುವ ಸರ್ಕಾರಿ ನೌಕರರಿಗೆ ಸಿಗಲಿದೆ ಪ್ರೋತ್ಸಾಹ ಧನ

ಭಾರತದಲ್ಲಿ ವಾಯು ಮಾಲಿನ್ಯದ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಪೆಟ್ರೋಲ್, ಡೀಸೆಲ್‌ನಲ್ಲಿ ಎಂಜಿನ್ ನಿಂದ ಚಲಿಸುವ ವಾಹನಗಳು ವಾಯು ಮಾಲಿನ್ಯಕ್ಕೆ ಪ್ರಮುಖ ಕಾರಣವೆಂದು ಪರಿಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಈಗ ಹರಿಯಾಣ ರಾಜ್ಯ ಸರ್ಕಾರವು ಸಹ ಪ್ರಮುಖ ನಿರ್ಧಾರವೊಂದನ್ನು ಕೈಗೊಂಡಿದೆ.

ಎಲೆಕ್ಟ್ರಿಕ್ ವಾಹನ ಖರೀದಿಸುವ ಸರ್ಕಾರಿ ನೌಕರರಿಗೆ ಸಿಗಲಿದೆ ಪ್ರೋತ್ಸಾಹ ಧನ

ಹರಿಯಾಣ ರಾಜ್ಯ ಸರ್ಕಾರವು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸ ಬಯಸುವ ಸರ್ಕಾರಿ ನೌಕರರಿಗೆ ವಿಶೇಷ ಕೊಡುಗೆಗಳನ್ನು ನೀಡಲು ನಿರ್ಧರಿಸಿದೆ. ಈ ಕೊಡುಗೆಯನ್ವಯ ಸರ್ಕಾರಿ ನೌಕರರು ಖರೀದಿಸುವ ಮೊದಲ ಎಲೆಕ್ಟ್ರಿಕ್ ವಾಹನಕ್ಕೆ ಪ್ರೋತ್ಸಾಹ ಧನ ನೀಡಲಾಗುವುದು. ಇದರ ಜೊತೆಗೆ ಹರಿಯಾಣ ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ತೊಡಗಿರುವ ಯಾವುದೇ ರಾಜ್ಯ, ರಾಷ್ಟ್ರೀಯ ಹಾಗೂ ಅಂತರ್ ರಾಷ್ಟ್ರೀಯ ಸಂಸ್ಥೆಗಳಿಗೆ ರೂ. 5 ಕೋಟಿಗಳವರೆಗೆ ಪ್ರೋತ್ಸಾಹ ಧನ ನೀಡಲಾಗುವುದು.

ಎಲೆಕ್ಟ್ರಿಕ್ ವಾಹನ ಖರೀದಿಸುವ ಸರ್ಕಾರಿ ನೌಕರರಿಗೆ ಸಿಗಲಿದೆ ಪ್ರೋತ್ಸಾಹ ಧನ

ಹರಿಯಾಣ ಎಲೆಕ್ಟ್ರಿಕ್ ವಾಹನ ನೀತಿಯ 2021 ರ ಬಗ್ಗೆ ಅಕ್ಟೋಬರ್ 21 ರಂದು ಸಭೆ ನಡೆದಿತ್ತು. ಈ ಸಭೆಯಲ್ಲಿ ಹರಿಯಾಣ ಉಪ ಮುಖ್ಯಮಂತ್ರಿ ದುಷ್ಯಂತ್ ಚೌಧರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು. ಸಭೆಯ ನಂತರ ದುಶ್ಯಂತ್ ಚೌಧರಿ ರವರು ಮಾಹಿತಿ ನೀಡಿದರು. ಹರಿಯಾಣ ಎಲೆಕ್ಟ್ರಿಕ್ ವೆಹಿಕಲ್ ಪಾಲಿಸಿ 2021 ರ ರಚನೆಗೆ ಸಂಬಂಧಿಸಿದಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಮೂರು ಸುತ್ತಿನ ಚರ್ಚೆಗಳು ನಡೆದಿವೆ.

ಎಲೆಕ್ಟ್ರಿಕ್ ವಾಹನ ಖರೀದಿಸುವ ಸರ್ಕಾರಿ ನೌಕರರಿಗೆ ಸಿಗಲಿದೆ ಪ್ರೋತ್ಸಾಹ ಧನ

ಮೊನ್ನೆ ನಾಲ್ಕನೇ ಹಾಗೂ ಅಂತಿಮ ಸುತ್ತಿನ ಸಮಾಲೋಚನಾ ಸಭೆ ನಡೆದಿದೆ. ಹರಿಯಾಣ ಎಲೆಕ್ಟ್ರಿಕ್ ವಾಹನ ನೀತಿ 2021 ಮುಂದಿನ ಒಂದು ತಿಂಗಳಲ್ಲಿ ಜಾರಿಗೆ ಬರಲಿದೆ. ಬಹುತೇಕ ಎಲ್ಲಾ ರಾಜ್ಯಗಳು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಎಲೆಕ್ಟ್ರಿಕ್ ವಾಹನ ನೀತಿಗಳನ್ನು ಘೋಷಿಸುತ್ತಿವೆ. ಈ ಸಂದರ್ಭದಲ್ಲಿಯೇ ಹರಿಯಾಣ ಸರ್ಕಾರವು ಎಲೆಕ್ಟ್ರಿಕ್ ವಾಹನ ನೀತಿ 2021 ಜಾರಿಗೆ ತರಲು ಮುಂದಾಗಿದೆ.

ಎಲೆಕ್ಟ್ರಿಕ್ ವಾಹನ ಖರೀದಿಸುವ ಸರ್ಕಾರಿ ನೌಕರರಿಗೆ ಸಿಗಲಿದೆ ಪ್ರೋತ್ಸಾಹ ಧನ

ಈ ನೀತಿಯಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಹಾಗೂ ಮಾರಾಟವನ್ನು ಹೆಚ್ಚಿಸಲು ವಿವಿಧ ಕೊಡುಗೆಗಳನ್ನು ನೀಡುವ ನಿರೀಕ್ಷೆಗಳಿವೆ. ಇವಿ ಚಾರ್ಜಿಂಗ್ ಕೇಂದ್ರಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ತೆರೆಯಲು ಪ್ರೋತ್ಸಾಹ ನೀಡಲಾಗುವುದು. ಸರ್ಕಾರಗಳು ನೀಡುತ್ತಿರುವ ಪ್ರೋತ್ಸಾಹ ಹಾಗೂ ಪೆಟ್ರೋಲ್, ಡೀಸೆಲ್ ಬೆಲೆಗಳು ಗಗನಕ್ಕೇರಿರುವ ಹಿನ್ನೆಲೆಯಲ್ಲಿ ಬಹುತೇಕ ಎಲ್ಲಾ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲು ಮುಂದಾಗಿವೆ.

ಎಲೆಕ್ಟ್ರಿಕ್ ವಾಹನ ಖರೀದಿಸುವ ಸರ್ಕಾರಿ ನೌಕರರಿಗೆ ಸಿಗಲಿದೆ ಪ್ರೋತ್ಸಾಹ ಧನ

ಎಲೆಕ್ಟ್ರಿಕ್ ಕಾರುಗಳ ಬಗ್ಗೆ ಹೇಳುವುದಾದರೆ, Tata Motors, Hyundai ಹಾಗೂ MG ಯಂತಹ ಕಂಪನಿಗಳು ಈಗಾಗಲೇ ತಮ್ಮ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟಮಾಡುತ್ತಿವೆ. Tata Motors ಕಂಪನಿಯು Tigor ಹಾಗೂ Nexon ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡುತ್ತಿದೆ. ಇನ್ನು Hyundai ಕಂಪನಿಯು Kona ಎಲೆಕ್ಟ್ರಿಕ್ ಕಾರ್ ಅನ್ನು ಹಾಗೂ MG ಕಂಪನಿಯು ZS ಎಲೆಕ್ಟ್ರಿಕ್ ಕಾರ್ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿವೆ.

ಎಲೆಕ್ಟ್ರಿಕ್ ವಾಹನ ಖರೀದಿಸುವ ಸರ್ಕಾರಿ ನೌಕರರಿಗೆ ಸಿಗಲಿದೆ ಪ್ರೋತ್ಸಾಹ ಧನ

Tata Motors ಕಂಪನಿಯು ಎರಡು ಎಲೆಕ್ಟ್ರಿಕ್ ಕಾರುಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದೆ. ಇವುಗಳಲ್ಲಿ Nexon ಭಾರತದಲ್ಲಿ ಹೆಚ್ಚು ಮಾರಾಟವಾಗುವ ಎಲೆಕ್ಟ್ರಿಕ್ ಕಾರು ಎಂಬ ಹೆಗ್ಗಳಿಕೆಯನ್ನು ಹೊಂದಿದೆ. Tata Motors ಶೀಘ್ರದಲ್ಲಿಯೇ Altroz ಎಲೆಕ್ಟ್ರಿಕ್ ಕಾರ್ ಅನ್ನು ಬಿಡುಗಡೆಗೊಳಿಸಲಿದೆ. ಇದರ ಜೊತೆಗೆ ಕಂಪನಿಯು ಇತ್ತೀಚೆಗಷ್ಟೇ ಬಿಡುಗಡೆಯಾದ Punch ಮೈಕ್ರೋ ಎಸ್‌ಯು‌ವಿಯ ಎಲೆಕ್ಟ್ರಿಕ್ ಆವೃತ್ತಿಯನ್ನು ಬಿಡುಗಡೆಗೊಳಿಸುವ ನಿರೀಕ್ಷೆಗಳಿವೆ.

ಎಲೆಕ್ಟ್ರಿಕ್ ವಾಹನ ಖರೀದಿಸುವ ಸರ್ಕಾರಿ ನೌಕರರಿಗೆ ಸಿಗಲಿದೆ ಪ್ರೋತ್ಸಾಹ ಧನ

Punch ಮೈಕ್ರೋ ಎಸ್‌ಯು‌ವಿಯು ಜಾಗತಿಕ ಎನ್‌ಸಿಎಪಿ ಕ್ರಾಶ್ ಟೆಸ್ಟ್ ನಲ್ಲಿ ಸುರಕ್ಷತೆಗಾಗಿ 5 ಸ್ಟಾರ್ ರೇಟಿಂಗ್ ಪಡೆದಿದೆ. ಇನ್ನು ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಬಗ್ಗೆ ಹೇಳುವುದಾದರೆ TVS Motor, Bajaj ನಂತಹ ಖ್ಯಾತ ಕಂಪನಿಗಳು ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತವೆ. ಇದರ ಜೊತೆಗೆ ಕೆಲವು ಸ್ಟಾರ್ಟ್ ಅಪ್ ಕಂಪನಿಗಳು ಸಹ ದೇಶಿಯ ಮಾರುಕಟ್ಟೆಯಲ್ಲಿ ತಮ್ಮ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಮಾರಾಟ ಮಾಡುತ್ತವೆ.

ಎಲೆಕ್ಟ್ರಿಕ್ ವಾಹನ ಖರೀದಿಸುವ ಸರ್ಕಾರಿ ನೌಕರರಿಗೆ ಸಿಗಲಿದೆ ಪ್ರೋತ್ಸಾಹ ಧನ

ಓಲಾದ ಎಲೆಕ್ಟ್ರಿಕ್ ಸ್ಕೂಟರಿಗೆ ಭಾರತದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಎಲೆಕ್ಟ್ರಿಕ್ ವಾಹನಗಳು ಭವಿಷ್ಯದ ವಾಹನಗಳು ಎಂಬುದು ಸ್ಪಷ್ಟವಾಗಿದೆ. ರಾಜಸ್ಥಾನ ರಾಜ್ಯದಲ್ಲಿಯೂ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದರ ಭಾಗವಾಗಿ ನಗರಾಭಿವೃದ್ಧಿ ಹಾಗೂ ವಸತಿ ಇಲಾಖೆಯು ಎಲೆಕ್ಟ್ರಿಕ್ ವಾಹನಗಳಿಗೆ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯುವವರಿಗೆ ರಿಯಾಯಿತಿ ದರದಲ್ಲಿ ಸರ್ಕಾರಿ ಭೂಮಿಯನ್ನು ಒದಗಿಸಲಿದೆ.

ಎಲೆಕ್ಟ್ರಿಕ್ ವಾಹನ ಖರೀದಿಸುವ ಸರ್ಕಾರಿ ನೌಕರರಿಗೆ ಸಿಗಲಿದೆ ಪ್ರೋತ್ಸಾಹ ಧನ

ಈ ಭೂಮಿಗಳಿಗೆ ಕಡಿಮೆ ಶುಲ್ಕವನ್ನು ವಿಧಿಸಲಾಗುವುದು ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಅದರಂತೆ ಸರ್ಕಾರಿ ಭೂಮಿಯನ್ನು 50% ನಷ್ಟು ರಿಯಾಯಿತಿ ದರದಲ್ಲಿ ನೀಡಲಾಗುತ್ತದೆ. ಈ ಕೊಡುಗೆ 5 ವರ್ಷಗಳಲ್ಲಿ ಸ್ಥಾಪಿಸಲ್ಪಡುವ ಮೊದಲ 500 ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಕೇಂದ್ರಗಳಿಗೆ ಅನ್ವಯವಾಗುತ್ತದೆ. ಕಳೆದ ತಿಂಗಳು ಈ ಬಗ್ಗೆ ಅಧಿಸೂಚನೆ ಹೊರಡಿಸಲಾಗಿದೆ.

ಎಲೆಕ್ಟ್ರಿಕ್ ವಾಹನ ಖರೀದಿಸುವ ಸರ್ಕಾರಿ ನೌಕರರಿಗೆ ಸಿಗಲಿದೆ ಪ್ರೋತ್ಸಾಹ ಧನ

ಇದೇ ವೇಳೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರವರು ರಾಜಸ್ಥಾನದ ಸೌರ ನೀತಿ, ರಾಜಸ್ಥಾನ ಗಾಳಿ ಹಾಗೂ ಹೈಬ್ರಿಡ್ ಇಂಧನ ನೀತಿಯ ಬಗ್ಗೆಯೂ ಘೋಷಿಸಿದ್ದಾರೆ. ಈ ನೀತಿಗಳ ಅಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯುವವರಿಗೆ ರಿಯಾಯಿತಿ ದರದಲ್ಲಿ ಭೂಮಿ ಒದಗಿಸಲು ವ್ಯವಸ್ಥೆ ಮಾಡಲಾಗಿದೆ.

ಎಲೆಕ್ಟ್ರಿಕ್ ವಾಹನ ಖರೀದಿಸುವ ಸರ್ಕಾರಿ ನೌಕರರಿಗೆ ಸಿಗಲಿದೆ ಪ್ರೋತ್ಸಾಹ ಧನ

ರಾಜಸ್ಥಾನದಲ್ಲಿ ಫಾಸ್ಟ್ ಹಾಗೂ ಸ್ಲೋ ಎಂಬ ಎರಡು ವಿಧದ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಫಾಸ್ಟ್ ಚಾರ್ಜಿಂಗ್ ಕೇಂದ್ರಗಳಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಚಾರ್ಜ್ ಮಾಡಲು ಕೇವಲ 60 ನಿಮಿಷ ಸಾಕಾಗುತ್ತದೆ. ಇನ್ನು ಸ್ಲೋ ಚಾರ್ಜಿಂಗ್ ಕೇಂದ್ರಗಳನ್ನು ಬಳಸಿದರೆ, ಎಲೆಕ್ಟ್ರಿಕ್ ವಾಹನಗಳನ್ನು ಚಾರ್ಜ್ ಮಾಡಲು ಸುಮಾರು 6 ಗಂಟೆ ಬೇಕಾಗುತ್ತದೆ.

ಗಮನಿಸಿ: ಈ ಲೇಖನದಲ್ಲಿರುವ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Government employees in haryana to get subsidy for purchasing electric vehicles details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X