Just In
Don't Miss!
- News
ಅಂತರರಾಷ್ಟ್ರೀಯ ವಿಮಾನ ಸಂಚಾರದ ಮೇಲಿನ ನಿರ್ಬಂಧ ಮುಂದುವರಿಕೆ
- Movies
ನಿರ್ದೇಶಕನಿಗೆ ಅವಮಾನ: ಸ್ಟಾರ್ ನಟ ಆಗಿದ್ರೆ ಸುಮ್ಮನೆ ಬಿಡುತ್ತಿದ್ರಾ? ಚಂದ್ರಶೇಖರ್ ಅಸಮಾಧಾನ
- Finance
ಮುಂದಿನ 6 ತಿಂಗಳಿನಲ್ಲಿ ದೆಹಲಿಯ ಎಲ್ಲಾ ಸರ್ಕಾರಿ ಕಾರುಗಳು, ಎಲೆಕ್ಟ್ರಿಕ್ ಕಾರುಗಳಾಗಿ ಬದಲಾಗಲಿವೆ!
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Sports
ಐಪಿಎಲ್ 2021: ರಾಜಸ್ಥಾನ್ ರಾಯಲ್ಸ್ ಜೊತೆ ಇಶ್ ಸೋಧಿ ಒಪ್ಪಂದ
- Lifestyle
ಅರಿಶಿನದ ಈ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ, ನೀವೂ ಶಾಕ್ ಆಗ್ತೀರಾ!
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ತರಲು ಪ್ರಧಾನಿ ನೇತೃತ್ವದ ಸಭೆಯಲ್ಲಿ ಮಹತ್ವದ ನಿರ್ಣಯ
15 ವರ್ಷ ಮೇಲ್ಪಟ್ಟ ಹಳೆಯ ವಾಹನಗಳ ಓಡಾಟಕ್ಕೆ ಸಂಪೂರ್ಣವಾಗಿ ಬ್ರೇಕ್ ಹಾಕಲು ಸ್ಕ್ರ್ಯಾಪಿಂಗ್ ನೀತಿಯನ್ನು ಕಡ್ಡಾಯ ಜಾರಿಗೆ ತರಲು ಯತ್ನಿಸುತ್ತಿಸುತ್ತಿರುವ ಕೇಂದ್ರ ಸರ್ಕಾರವು ಈಗಾಗಲೇ ಹಲವಾರು ಬಾರಿ ಚರ್ಚೆ ನಡೆಸಿದ್ದು, ಈ ಬಾರಿ ಸ್ಕ್ರ್ಯಾಪಿಂಗ್ ನೀತಿಯನ್ನು ಜಾರಿಗೆ ತರಲು ಕೆಲವು ಮಹತ್ವದ ಬದಲಾವಣೆಗಳೊಂದಿಗೆ ಕಡ್ಡಾಯವಾಗಿ ಜಾರಿಗೆ ತರಲು ಸಿದ್ದವಾಗಿದೆ.

ಹೆಚ್ಚುತ್ತಿರುವ ವಾಹನಗಳ ಪರಿಣಾಮ ಮಾಲಿನ್ಯ ಪ್ರಮಾಣವು ಕೂಡಾ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಕೇಂದ್ರ ಸರ್ಕಾರವು ಮಾಲಿನ್ಯ ಉತ್ಪಾದನೆಯನ್ನು ಪರಿಣಾಮಕಾರಿ ತಗ್ಗಿಸಲು ಹಲವಾರು ಹೊಸ ಆಟೋ ಉತ್ಪಾದನಾ ನೀತಿಗಳನ್ನು ಜಾರಿಗೆ ತಂದಿದೆ. ಆದರೆ ಅವಧಿ ಮೀರಿದ ವಾಹನ ಬಳಕೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಸ್ಕ್ರ್ಯಾಪಿಂಗ್ ನೀತಿಯನ್ನು ಜಾರಿ ಮಾಡಲು ಮುಂದಾಗಿದ್ದು, ಕಾರಣಾಂತರಗಳಿಂದ ಹೊಸ ಆಟೋ ನೀತಿ ಜಾರಿಯಲ್ಲಿ ವಿಳಂಬವಾಗುತ್ತಿದೆ.

ಕಳೆದ ವರ್ಷದ ಏಪ್ರಿಲ್ ತಿಂಗಳಿನಲ್ಲಿಯೇ ಸ್ಕ್ರ್ಯಾಪಿಂಗ್ ನೀತಿ ಜಾರಿ ತರಲು ಸಿದ್ದವಾಗಿದ್ದ ಕೇಂದ್ರ ಸರ್ಕಾರಕ್ಕೆ ಕರೋನಾ ವೈರಸ್ ಹೊಡೆತ ಕೊಟ್ಟಿದ್ದರಿಂದ ಹೊಸ ನೀತಿ ಜಾರಿಯಿಂದ ಹಿಂದೆ ಸರಿಯಲಾಗಿತ್ತು. ಇದೀಗ ಮತ್ತೆ ಹೊಸ ನೀತಿ ಜಾರಿ ತರುವ ಸಾಧ್ಯತೆ ಕುರಿತಂತೆ ಆರ್ಥಿಕ ಇಲಾಖೆ, ಸಾರಿಗೆ ಇಲಾಖೆ ಮತ್ತು ಆಟೋ ತಜ್ಞರ ಜೊತೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮಾತುಕತೆ ನಡೆಸಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದ ಸಭೆಯಲ್ಲಿ ಆರ್ಥಿಕ ತಜ್ಞರು ಮತ್ತು ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ಅಭಿಪ್ರಾಯದಂತೆ ಸ್ಕ್ರ್ಯಾಪಿಂಗ್ ನೀತಿಯನ್ನು ಸಾಮೂಹಿಕವಾಗಿ ಜಾರಿಗೆ ತರದೆ ಮೊದಲ ಹಂತದಲ್ಲಿ ಸರ್ಕಾರಿ ವಾಹನಗಳ ಮೇಲೆ ಅನ್ವಯವಾಗುವಂತೆ ಹೊಸ ನೀತಿ ಜಾರಿಗೆ ತರಲು ನಿರ್ಣಯ ಕೈಗೊಳ್ಳಲಾಗಿದೆ.

ಸಲಹಾ ಸಮಿತಿಯ ಅಭಿಪ್ರಾಯಕ್ಕೆ ಪ್ರಧಾನಿ ಮೋದಿಯವರು ಕೂಡಾ ಒಪ್ಪಿಗೆ ಸೂಚಿಸಿದ್ದು, ಹೊಸ ಸ್ಕ್ರ್ಯಾಪಿಂಗ್ ನೀತಿಯನ್ನು ಬಜೆಟ್ಗೆ ಮುಂಚಿತವಾಗಿ ಅಂತಿಮಗೊಳಿಸುವಂತೆ ಸೂಚನೆ ನೀಡಲಾಗಿದೆ. ಜೊತೆಗೆ 15 ವರ್ಷಗಳಿಗೂ ಹೆಚ್ಚು ಕಾಲ ಬಳಕೆಯಲ್ಲಿರುವ ಸರ್ಕಾರಿ ವಾಹನಗಳನ್ನು ಗುರುತಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಆದೇಶಿಸಲು ಸೂಚನೆ ನೀಡಿರುವ ಪ್ರಧಾನಿ ಮೋದಿಯವರು ಸ್ಕ್ರ್ಯಾಪಿಂಗ್ ನೀತಿಯನ್ನು ಜಾರಿಗೆ ತರುವುದು ಸರ್ಕಾರದ ಸಂಕಲ್ಪವಾಗಿದೆ ಎಂದಿದ್ದಾರೆ.

ಇನ್ನು ಸ್ಕ್ರ್ಯಾಪಿಂಗ್ ನೀತಿಯನ್ನು ತುರ್ತಾಗಿ ಜಾರಿಗೊಳಿಸುವ ಬಗ್ಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(ಎನ್ಜಿಟಿ)ಯು ಕೂಡಾ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುತ್ತಿದ್ದು, ಹೆಚ್ಚುತ್ತಿರುವ ಮಾಲಿನ್ಯ ತಡೆಗೆ ತುರ್ತು ಕ್ರಮ ಕೈಗೊಳ್ಳುವಂತೆ ಖಡಕ್ ಸೂಚನೆ ನೀಡಿದೆ.

ಹೀಗಾಗಿ ಹೊಸ ನಿಯಮ ಜಾರಿಗೆ ಬಂದಲ್ಲಿ 15 ವರ್ಷ ಮೇಲ್ಪಟ್ಟ ವಾಹನಗಳು ಗಣನೀಯ ತಗ್ಗಲಿದ್ದು, ಹೊಸ ನೀತಿಯನ್ನು ಒಂದೇ ಬಾರಿ ಜಾರಿಗೆ ತರದೆ ಹಂತ-ಹಂತವಾಗಿ ಜಾರಿಗೆ ತರಲು ಮುಂದಾಗಿರುವುದು ಉತ್ತಮ ನಿರ್ಧಾರವಾಗಿದೆ.

ಸ್ಕ್ರ್ಯಾಪಿಂಗ್ ನೀತಿಯನ್ನು ಜಾರಿಗೆ ತರಲು ಕಳೆದ ವರ್ಷವೇ ಹೊಸ ವಿಧೇಯಕ ಒಂದನ್ನು ಮಂಡಿಸಿದ್ದ ಕೇಂದ್ರ ಸರ್ಕಾರವು ಇದೀಗ ಕಾಯ್ದೆಯನ್ನು ಜಾರಿಗೆ ತರಲು ಅಂತಿಮ ಹಂತದ ಸಿದ್ದತೆ ನಡೆಸುತ್ತಿದ್ದು, ಹೊಸ ಕಾಯ್ದೆಯಲ್ಲಿದ್ದ ಕೆಲವು ಗೊಂದಲಗಳನ್ನು ಸಹ ನಿವಾರಣೆ ಮಾಡಲಾಗಿದೆ.

ಸ್ಕ್ರ್ಯಾಪಿಂಗ್ ನೀತಿಯು ಜಾರಿಯಾಗುವುದರಿಂದ ಹಳೆಯ ವಾಹನಗಳಿಂದ ಉಂಟಾಗುತ್ತಿರುವ ಮಾಲಿನ್ಯ ತಗ್ಗಿಸುವುದರ ಜೊತೆಗೆ ನಷ್ಟದಲ್ಲಿರುವ ಆಟೋ ಉದ್ಯಮಕ್ಕೆ ಇದು ಪೂರಕವಾಗಲಿದೆ ಎನ್ನುವುದು ಆಟೋ ತಜ್ಞರ ಅಭಿಪ್ರಾಯವಾಗಿದೆ.

ಜೊತೆಗೆ ಹೊಸ ಯೋಜನೆಯಿಂದ ಮಾಲಿನ್ಯವನ್ನು ಮಾತ್ರ ತಗ್ಗಿಸುವುದಲ್ಲದೇ ಹಳೆಯ ವಾಹನಗಳನ್ನು ಸ್ಕ್ರ್ಯಾಪ್ ಮರುಬಳಕೆಯ ಮೂಲಕ ಆಟೋಮೊಬೈಲ್ ಉತ್ಪಾದನಾ ವೆಚ್ಚ ಕೂಡಾ ತಗ್ಗಿಸಬಹುದು ಎನ್ನಲಾಗಿದ್ದು, ಸ್ಕ್ರ್ಯಾಪ್ ಪ್ರಕ್ರಿಯೆಯಿಂದ ಬರುವ ಬಿಡಿಭಾಗಗಳ ನಿರ್ವಹಣೆಯು ಅತಿ ದೊಡ್ಡ ಉದ್ಯಮವಾಗಿ ಬದಲಾಗಲಿದೆ.

ಸ್ಕ್ರ್ಯಾಪ್ ಮರುಬಳಕೆಯಿಂದ ಹೊಸ ವಾಹನಗಳ ಉತ್ಪದನಾ ವೆಚ್ಚ ತಗ್ಗುವುದರಿಂದ ಹೊಸ ವಾಹನ ಬೆಲೆಗಳನ್ನು ಕೂಡಾ ತಗ್ಗಿಸಬಹುದು ಎಂಬ ಅಭಿಪ್ರಾಯ ವ್ಯಕ್ತಪಡಿಸಲಾಗಿದ್ದು, ಇದಕ್ಕಾಗಿ ಜಿಎಸ್ಟಿ ನೀತಿಯಲ್ಲೂ ಕೆಲವು ಬದಲಾವಣೆಗಳನ್ನು ತರಲಾಗಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಒಂದು ವೇಳೆ ಹೊಸ ಯೋಜನೆಯು ಯಶಸ್ವಿಯಾಗಿ ಜಾರಿಗೊಂಡಲ್ಲಿ ಕೇಂದ್ರ ಸರ್ಕಾರಕ್ಕೆ ಪರೋಕ್ಷವಾಗಿ ಸುಮಾರು ರೂ. 25 ಸಾವಿರ ಕೋಟಿಯಿಂದ 30 ಸಾವಿರ ಕೋಟಿಯಷ್ಟು ಆದಾಯ ಹರಿದುಬರಲಿದ್ದು, ಪ್ರಮುಖವಾಗಿ ಮಾಲಿನ್ಯ ಉತ್ಪಾದನೆಗೆ ಬ್ರೇಕ್ ಹಾಕಲು ಸಹಕಾರಿಯಾಗಲಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಹೊಸ ನೀತಿಯಿಂದ ಶೇ. 65ರಷ್ಟು ಮಾಲಿನ್ಯ ಪ್ರಮಾಣವು ತಗ್ಗಿಸಬಹುದು ಎನ್ನಲಾಗಿದ್ದು, ಇದಕ್ಕಾಗಿ ಬೇಕಾಗಿರುವ ಅಗತ್ಯ ನಿಯಮಗಳನ್ನು ಸಿದ್ದಪಡಿಸಿರುವ ಕೇಂದ್ರ ಸರ್ಕಾರವು ಸಿಎಂವಿಆರ್(ಸೆಂಟ್ರಲ್ ಮೋಟಾರ್ ವೆಹಿಕಲ್ ರೂಲ್ಸ್)ಗೆ ತಿದ್ದುಪಡಿ ತರಲಾಗಿದೆ.

ಹೀಗಾಗಿ ಹೊಸ ಸ್ಕ್ರ್ಯಾರ್ಪಿಂಗ್ ನೀತಿಯು ಶೀಘ್ರದಲ್ಲೇ ಹಂತ-ಹಂತವಾಗಿ ಅನುಷ್ಠಾನಕ್ಕೆ ಬರುವುದು ಬಹುತೇಕ ಖಚಿತ ಎನ್ನಲಾಗಿದ್ದು, ಹಳೆಯ ವಾಹನಗಳನ್ನು ಸ್ಕ್ರ್ಯಾರ್ಪಿಂಗ್ ಮಾಡುವ ವಾಹನ ಮಾಲೀಕರಿಗೆ ಹೊಸ ವಾಹನ ಖರೀದಿಗೆ ಜಿಎಸ್ಟಿ ವಿನಾಯ್ತಿ ಸೇರಿದಂತೆ ಹಲವಾರು ಆಫರ್ಗಳನ್ನು ನೀಡಲು ಉದ್ದೇಶಿಸಲಾಗಿದೆ.