ಭಾರತದಲ್ಲಿ ಕಾರು ಮಾರಾಟಕ್ಕಾಗಿ ಅಧಿಕೃತ ವೆಬ್‌ಸೈಟ್ ತೆರೆದ ಗ್ರೇಟ್ ವಾಲ್ ಮೋಟಾರ್ಸ್

ಚೀನಿ ಜನಪ್ರಿಯ ಕಾರು ಉತ್ಪಾದನಾ ಕಂಪನಿ ಗ್ರೇಟ್ ವಾಲ್ ಮೋಟಾರ್ಸ್ ಹಾಗೂ ತನ್ನ ಅಂಗಸಂಸ್ಥೆಯಾದ ಹವಾಲ್ ಕಾರು ಭಾರತದಲ್ಲಿ ಬಿಡುಗಡೆಗೊಳ್ಳುವುದು ಬಹುತೇಕ ಖಚಿತವಾಗಿದ್ದು, ಹೊಸ ಕಾರುಗಳ ಬಿಡುಗಾಗಿ ಅಂತಿಮ ಹಂತದ ಸಿದ್ದತೆಯಲ್ಲಿದೆ.

ಭಾರತದಲ್ಲಿ ಕಾರು ಮಾರಾಟಕ್ಕಾಗಿ ಅಧಿಕೃತ ವೆಬ್‌ಸೈಟ್ ತೆರೆದ ಗ್ರೇಟ್ ವಾಲ್ ಮೋಟಾರ್ಸ್

ಗ್ರೇಟ್ ವಾಲ್ ಮೋಟಾರ್ಸ್ ಕಂಪನಿಯು ಮಧ್ಯಮ ಗಾತ್ರದ ಐಷಾರಾಮಿ ಎಸ್‌ಯುವಿ ಆವೃತ್ತಿಯಾಗಿರುವ ಹವಾಲ್ ಹೊಸ ಕಾರುಗಳೊಂದಿಗೆ ದೇಶಿಯ ಮಾರುಕಟ್ಟೆಯನ್ನು ಪ್ರವೇಶಿಸುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಎಸ್‌ಯುವಿ, ಸೆಡಾನ್, ಎಂಪಿವಿ ಮತ್ತು ಎಲೆಕ್ಟ್ರಿಕ್ ಕಾರುಗಳನ್ನು ಅನಾವರಣಗೊಳಿಸಿ ಬಿಡುಗಡೆ ಮಾಡುತ್ತಿದೆ.

ಭಾರತದಲ್ಲಿ ಕಾರು ಮಾರಾಟಕ್ಕಾಗಿ ಅಧಿಕೃತ ವೆಬ್‌ಸೈಟ್ ತೆರೆದ ಗ್ರೇಟ್ ವಾಲ್ ಮೋಟಾರ್ಸ್

ಗ್ರೇಟ್ ವಾಲ್ ಮೋಟಾರ್ಸ್ ಕಂಪನಿಯು ಭಾರತದಲ್ಲಿ ಕಾರು ಉತ್ಪಾದನೆಗಾಗಿ ಬರೋಬ್ಬರಿ 1 ಬಿಲಿಯನ್ ಯುಎಸ್‌ಡಿ ಡಾಲರ್(ರೂ. 7 ಸಾವಿರ ಕೋಟಿ) ಹೂಡಿಕೆಗೆ ಒಪ್ಪಿಗೆ ಸೂಚಿಸಿದ್ದು, ಮಹಾರಾಷ್ಟ್ರದ ತಲೆಗಾಂವ್‌ನಲ್ಲಿ ಕಾರು ಉತ್ಪಾದನಾ ಘಟಕ ಆರಂಭವಾಗುತ್ತಿದೆ.

ಭಾರತದಲ್ಲಿ ಕಾರು ಮಾರಾಟಕ್ಕಾಗಿ ಅಧಿಕೃತ ವೆಬ್‌ಸೈಟ್ ತೆರೆದ ಗ್ರೇಟ್ ವಾಲ್ ಮೋಟಾರ್ಸ್

ಇದರ ಜೊತಗೆ ನಮ್ಮ ಬೆಂಗಳೂರಿನಲ್ಲಿ ಆರ್‌ಡಿ(ಸಂಶೋಧನೆ ಮತ್ತು ಅಭಿವೃದ್ದಿ) ಕೇಂದ್ರವನ್ನು ತೆರೆಯಲು ಯೋಜನೆ ರೂಪಿಸಿದ್ದು, ಮೊದಲ ಹಂತದಲ್ಲಿ ಸುಮಾರು 3 ಸಾವಿರ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಿದೆ.

ಭಾರತದಲ್ಲಿ ಕಾರು ಮಾರಾಟಕ್ಕಾಗಿ ಅಧಿಕೃತ ವೆಬ್‌ಸೈಟ್ ತೆರೆದ ಗ್ರೇಟ್ ವಾಲ್ ಮೋಟಾರ್ಸ್

2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ವಿವಿಧ ಕಾರು ಮಾದರಿಗಳ ಪ್ರದರ್ಶನದ ನಂತರ ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಎಲ್ಲಾ ಸಿದ್ದತೆಗಳನ್ನು ಪೂರ್ಣಗೊಳಿಸಿತ್ತು. ಆದರೆ ಭಾರತ ಮತ್ತು ಚೀನಿ ಗಡಿ ಸಂಘರ್ಷ‌ದಿಂದಾಗಿ ಎರಡು ದೇಶಗಳ ನಡುವಿನ ವಾಣಿಜ್ಯ ವ್ಯವಹಾರವು ಬಹುತೇಕ ಕಡಿತಗೊಂಡಿತು. ಇದೇ ವೇಳೆ ಭಾರತದಲ್ಲಿ ಕಾರು ಮಾರಾಟ ಆರಂಭಿಸುವ ಸಿದ್ದತೆಯಲ್ಲಿ ಗ್ರೇಟ್ ವಾಲ್ ಮೋಟಾರ್ಸ್ ಕಂಪನಿಯ ಯೋಜನೆಗೂ ಬ್ರೇಕ್ ಹಾಕಲಾಗಿತ್ತು.

ಭಾರತದಲ್ಲಿ ಕಾರು ಮಾರಾಟಕ್ಕಾಗಿ ಅಧಿಕೃತ ವೆಬ್‌ಸೈಟ್ ತೆರೆದ ಗ್ರೇಟ್ ವಾಲ್ ಮೋಟಾರ್ಸ್

ಆದರೆ ವಾಣಿಜ್ಯ ವ್ಯವಹಾರಕ್ಕೆ ಬೇಕಾದ ಪ್ರಮುಖ ತಾಂತ್ರಿಕ ಅಡಚಣೆಗಳನ್ನು ನಿವಾರಿಸಿರುವ ಕಂಪನಿಯು ಇದೀಗ ಅಂತಿಮವಾಗಿ ಕಾರು ಬಿಡುಗಡೆಯನ್ನು ಖಚಿತಪಡಿಸಿದ್ದು, ತೆಲೆಗಾಂವ್‌ನಲ್ಲಿದ್ದ ಈ ಹಿಂದಿನ ಜನರಲ್ ಮೋಟಾರ್ಸ್(ಜಿಎಂ) ಕಂಪನಿಯ ಹಳೆಯ ಕಾರು ಉತ್ಪಾದನಾ ಘಟಕವನ್ನೇ ಗ್ರೆಟ್ ವಾಲ್ ಮೋಟಾರ್ಸ್ ಕಂಪನಿಯು ಉನ್ನತೀಕರಿಸಿ ಕಾರು ಉತ್ಪಾದನೆ ಆರಂಭಿಸುತ್ತಿದೆ.

ಭಾರತದಲ್ಲಿ ಕಾರು ಮಾರಾಟಕ್ಕಾಗಿ ಅಧಿಕೃತ ವೆಬ್‌ಸೈಟ್ ತೆರೆದ ಗ್ರೇಟ್ ವಾಲ್ ಮೋಟಾರ್ಸ್

ಭಾರತದಿಂದ ಜನರಲ್ ಮೋಟಾರ್ಸ್ ಕಂಪನಿಯು ಹೊರ ಹೋದ ನಂತರ ಖಾಲಿ ಉಳಿದಿರುವ ಕಾರು ಉತ್ಪಾದನಾ ಘಟಕವನ್ನೇ ಸ್ವಾಧಿನಪಡಿಸಿಕೊಂಡಿರುವ ಗ್ರೇಟ್ ವಾಲ್ ಮೋಟಾರ್ಸ್ ಕಂಪನಿಯು ಮಹಾರಾಷ್ಟ್ರ ಸರ್ಕಾರದೊಂದಿಗೆ ಹಲವು ಒಪ್ಪಂದಗಳೊಂದಿಗೆ ಸಹಿ ಹಾಕಿದೆ.

ಭಾರತದಲ್ಲಿ ಕಾರು ಮಾರಾಟಕ್ಕಾಗಿ ಅಧಿಕೃತ ವೆಬ್‌ಸೈಟ್ ತೆರೆದ ಗ್ರೇಟ್ ವಾಲ್ ಮೋಟಾರ್ಸ್

ಹೊಸ ಒಪ್ಪಂದದ ಪ್ರಕಾರ, ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ಅವಕಾಶ ಮತ್ತು ಸೂಕ್ತ ಮೂಲಭೂತ ಸೌಕರ್ಯಗಳಿಗಾಗಿ ಪರಸ್ಪರ ಒಪ್ಪಿಗೆ ಸೂಚಿಸಲಾಗಿದ್ದು, ಗ್ರೇಟ್ ವಾಲ್ ನಿರ್ಮಾಣದ ಹೊಸ ಕಾರುಗಳು 2022ರ ಆರಂಭದಲ್ಲಿ ಅಧಿಕೃತವಾಗಿ ರಸ್ತೆಗಿಳಿಯಲಿವೆ.

ಭಾರತದಲ್ಲಿ ಕಾರು ಮಾರಾಟಕ್ಕಾಗಿ ಅಧಿಕೃತ ವೆಬ್‌ಸೈಟ್ ತೆರೆದ ಗ್ರೇಟ್ ವಾಲ್ ಮೋಟಾರ್ಸ್

2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಲಾದ ಎಫ್5, ಎಫ್7,ಎಫ್7 ಎಕ್ಸ್ ಮತ್ತು ಹೆಚ್9 ಎಸ್‌ಯುವಿ ಕಾರುಗಳಲ್ಲಿ ಎಫ್5 ಮತ್ತು ಎಫ್7 ಕಾರುಗಳು ಮೊದಲ ಹಂತದಲ್ಲಿ ಬಿಡುಗಡೆಯಾಗಲಿವೆಯೆಂತೆ.

MOST READ: ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

ಭಾರತದಲ್ಲಿ ಕಾರು ಮಾರಾಟಕ್ಕಾಗಿ ಅಧಿಕೃತ ವೆಬ್‌ಸೈಟ್ ತೆರೆದ ಗ್ರೇಟ್ ವಾಲ್ ಮೋಟಾರ್ಸ್

ಎಫ್5 ಮತ್ತು ಎಫ್7 ಮಾದರಿಯನ್ನು ಮಧ್ಯಮ ಶ್ರೇಣಿಯ ಎಸ್‌ಯುವಿ ಆವೃತ್ತಿಯಾಗಿ ಮತ್ತು ಎಫ್7 ಎಕ್ಸ್ ಕೂಪೆ ಆವೃತ್ತಿಯನ್ನು ಮಧ್ಯಮ ಕ್ರಮಾಂಕದ ಐಷಾರಾಮಿ ಕಾರು ಮಾದರಿಯಾಗಿ ಬಿಡುಗಡೆಗೊಳಿಸಲಿದೆ.

ಭಾರತದಲ್ಲಿ ಕಾರು ಮಾರಾಟಕ್ಕಾಗಿ ಅಧಿಕೃತ ವೆಬ್‌ಸೈಟ್ ತೆರೆದ ಗ್ರೇಟ್ ವಾಲ್ ಮೋಟಾರ್ಸ್

ಎಫ್5 ಮಾದರಿಯು ಮಧ್ಯಮ ಕ್ರಮಾಂಕರ ಕಂಪ್ಯಾಕ್ಟ್ ಎಸ್‌ಯುವಿ ಆವೃತ್ತಿಗಳಾದ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ಟಾಟಾ ಹ್ಯಾರಿಯರ್, ಎಂಜಿ ಹೆಕ್ಟರ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಜೀಪ್ ಕಂಪಾಸ್ ಕಾರಿಗಿಂತಲೂ ಹೆಚ್ಚು ವೀಲ್ಹ್‌ಬೆಸ್ ಪಡೆದುಕೊಂಡಿದೆ.

MOST READ: ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವ ಮುನ್ನ ತಿಳಿದಿರಬೇಕಾದ ಪ್ರಮುಖ ಅಂಶಗಳಿವು

ಭಾರತದಲ್ಲಿ ಕಾರು ಮಾರಾಟಕ್ಕಾಗಿ ಅಧಿಕೃತ ವೆಬ್‌ಸೈಟ್ ತೆರೆದ ಗ್ರೇಟ್ ವಾಲ್ ಮೋಟಾರ್ಸ್

ಇದರೊಂದಿಗೆ ಐಷಾರಾಮಿ ಫೀಚರ್ಸ್ ಹೊಂದಿರುವ ಕಾರು ಮಾದರಿಗಳನ್ನು ಸಹ ಬಿಡುಗಡೆ ಮಾಡಲಿರುವ ಗ್ರೇಟ್ ವಾಲ್ ಮೋಟಾರ್ಸ್ ಕಂಪನಿಯು ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಭಾರೀ ಬದಲಾವಣೆಯ ನೀರಿಕ್ಷೆಯಲ್ಲಿದ್ದು, ಮುಂಬರುವ ದಿನಗಳಲ್ಲಿ ಹೊಸ ಕಾರುಗಳ ಕುರಿತಾಗಿ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ.

Most Read Articles

Kannada
English summary
Great Wall Motors Indian website has gone live. Read in Kannada.
Story first published: Saturday, June 5, 2021, 10:21 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X