Just In
- 2 hrs ago
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- 3 hrs ago
ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ
- 4 hrs ago
ಸಿಎನ್‌ಜಿ ವರ್ಷನ್ನಲ್ಲೂ ಬಿಡುಗಡೆಯಾಗಲಿದೆ ಸ್ಕೋಡಾ ರ್ಯಾಪಿಡ್ ಸೆಡಾನ್
- 4 hrs ago
ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ
Don't Miss!
- News
ಪೆಟ್ರೋಲ್, ಡೀಸೆಲ್ ದರ ಏರಿಕೆ: ಕೇಂದ್ರಕ್ಕೆ ಬಿಸಿ ಮುಟ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ
- Movies
ಬಿಗ್ಬಾಸ್: ಪ್ರಶಾಂತ್ ಸಂಬರ್ಗಿ ಮೇಲೆ ಉರಿದು ಬಿದ್ದ ಮನೆ ಸದಸ್ಯರು
- Education
UAS Dharwad Recruitment 2021: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮಾ.10ಕ್ಕೆ ನೇರ ಸಂದರ್ಶನ
- Sports
ಐಎಸ್ಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮಾಲಿನ್ಯ ಉಂಟುಮಾಡುವ ವಾಹನಗಳಿಗೆ ಬ್ರೇಕ್ ಹಾಕಲು 'ಹಸಿರು ತೆರಿಗೆ' ಅಸ್ತ್ರ
ದೇಶಾದ್ಯಂತ ಹೆಚ್ಚುತ್ತಿರುವ ವಾಯುಮಾಲಿನ್ಯ ಪ್ರಮಾಣಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಕೇಂದ್ರ ಸರ್ಕಾರವು ಹಸಿರು ತೆರಿಗೆ ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದು, 8 ವರ್ಷ ಮೇಲ್ಪಟ್ಟ ಸಾರಿಗೆ ವಾಹನಗಳಿಗೆ ಮತ್ತು 15 ವರ್ಷ ಮೇಲ್ಪಟ್ಟ ಖಾಸಗಿ ವಾಹನಗಳಿಗೆ ಹಸಿರು ತೆರಿಗೆ ವಿಧಿಸುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದೆ.

ವಾಯುಮಾಲಿನ್ಯವನ್ನು ಪರಿಣಾಮಕಾರಿಯಾಗಿ ತಗ್ಗಿಸಲು ಹಳೆಯ ವಾಹನಗಳಿಗೆ ಹಸಿರು ತೆರಿಗೆ ವಿಧಿಸುವ ಪ್ರಸ್ತಾಪಕ್ಕೆ ಕೇಂದ್ರ ರಸ್ತೆಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು ಅನುಮೋದನೆ ನೀಡಿದ್ದು, ಹೊಸ ಹಸಿರು ತೆರಿಗೆ ಅಧಿಸೂಚನೆಯನ್ನು ಅಧಿಕೃತವಾಗಿ ಹೊರಡಿಸುವ ಮುನ್ನ ಹೊಸ ಪ್ರಸ್ತಾವನೆಯ ಕುರಿತು ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಅಭಿಪ್ರಾಯ ಸಂಗ್ರಹಸಲಾಗುತ್ತಿದೆ.

ಹೊಸ ಹಸಿರು ತೆರಿಗೆ ನೀತಿಯ ಮೂಲಕ ಮಾಲಿನ್ಯ ಉಂಟುಮಾಡುವ ಹಳೆಯ ವಾಹನಗಳ ಬಳಕೆಯನ್ನು ತಡೆಯಲು ಸಾಕಷ್ಟು ಸಹಕಾರಿಯಾಗಲಿದ್ದು, ಹೊಸ ಪ್ರಸ್ತಾವನೆಗೆ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಒಪ್ಪಿಗೆ ಸಿಗುವ ಸಾಧ್ಯತೆಗಳಿವೆ.

ಹಸಿರು ತೆರಿಗೆಯನ್ನು 8 ವರ್ಷದ ಮೇಲ್ಪಟ್ಟ ಸಾರಿಗೆ ವಾಹನಗಳ ಫಿಟ್‌ನೆಸ್ ಪ್ರಮಾಣ ಪತ್ರ ನವೀಕರಿಸುವ ಸಂದರ್ಭದಲ್ಲಿ ಮತ್ತು 15 ವರ್ಷ ಮೇಲ್ಪಟ್ಟ ವೈಯಕ್ತಿಕ ಬಳಕೆಯ ವಾಹನಗಳ ಆರ್‌ಸಿ(ನೋಂದಣಿ ಪ್ರಮಾಣಪತ್ರ) ನವೀಕರಿಸುವ ಸಂದರ್ಭದಲ್ಲಿ ಶೇ.10 ರಿಂದ ಶೇ. 25 ರಷ್ಟು ಹೆಚ್ಚಳ ಮಾಡಬಹುದಾಗಿದೆ.

ಸಾರಿಗೆ ವಾಹನಗಳಿಗೆ ವಿಧಿಸುವ ಹಸಿರು ತೆರಿಗೆಯಲ್ಲಿ ವಾಣಿಜ್ಯ ವಾಹನಗಳನ್ನು ಹೊರತುಪಡಿಸಿ ಸಾರ್ವಜನಿಕ ಬಳಕೆಯ ಬಸ್‌ಗಳಿಗೆ ತೆರಿಗೆ ವಿನಾಯ್ತಿ ದೊರೆಯಲಿದ್ದು, ಹೈಬ್ರಿಡ್, ಎಲೆಕ್ಟ್ರಿಕ್ ವಾಹನಗಳು, ಸಿಎನ್‌ಜಿ, ಎಥೆನಾಲ್, ಎಲ್‌ಪಿಜಿ ಬಳಕೆಯ ವಾಹನಗಳಿಗೂ ಹಸಿರು ತೆರಿಗೆಯಿಂದ ವಿನಾಯ್ತಿ ಸಿಗಲಿದೆ. ಆದರೆ ದೇಶಾದ್ಯಂತ ಅತಿ ಹೆಚ್ಚು ಮಾಲಿನ್ಯದಿಂದ ಬಳಲುತ್ತಿರುವ ಮಹಾನಗರಗಳಲ್ಲಿನ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ರಸ್ತೆ ತೆರಿಗೆಯನ್ನು ಶೇ. 50 ಕ್ಕೆ ಹೆಚ್ಚಳ ಮಾಡುವ ಪ್ರಸ್ತಾವನೆ ವಾಹನ ಮಾಲೀಕತ್ವವನ್ನು ಮತ್ತಷ್ಟು ದುಬಾರಿಯಾಗಿಸಲಿದೆ.

ಕೃಷಿ ವಾಹನಗಳಿಗೆ ವಿನಾಯ್ತಿ
ಹಸಿರು ಪ್ರಸ್ತಾವನೆಯಲ್ಲಿ ಕೃಷಿ ಚಟುವಟಿಕೆಯ ಪ್ರಮುಖ ಭಾಗವಾಗಿರುವ ಟ್ರ್ಯಾಕ್ಟರ್, ಕೃಷಿ ಸಂಬಂಧಿತ ವಾಹನಗಳಿಗೆ ಹೊಸ ಹಸಿರು ತೆರಿಗೆಯಿಂದ ವಿನಾಯ್ತಿ ನೀಡಲಾಗಿದ್ದು, ಹಸಿರು ತೆರಿಗೆ ಮೂಲಕ ಸಂಗ್ರಹಿಸಿದ ಆದಾಯವನ್ನು ಪ್ರತ್ಯೇಕ ಖಾತೆ ಮೂಲಕ ಮಾಲಿನ್ಯ ನಿಯಂತ್ರಣ ಯೋಜನೆಗಳಿಗೆ ಬಳಸಲಾಗುತ್ತದೆ ಎಂದು ಸಾರಿಗೆ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಹೊಸ ಪ್ರಸ್ತಾವನೆಯು ಮುಂಬರುವ 2022ರ ಎಪ್ರಿಲ್ 1 ರಿಂದ ಅಧಿಕೃತವಾಗಿ ಜಾರಿಗೆ ಬರಲಿದ್ದು, ವಿವಿಧ ರಾಜ್ಯ ಸರ್ಕಾರಗಳ ಸಲಹೆಗಳ ಆಧಾರದ ಮೇಲೆ ಹೊಸ ತೆರಿಗೆ ನೀತಿಯಲ್ಲಿ ಕೆಲವು ಬದಲಾವಣೆಗಳನ್ನು ತರುವ ಮೂಲಕ ಕಡ್ಡಾಯವಾಗಿ ಜಾರಿಗೆ ತರಲಾಗುತ್ತದೆ.

15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನಗಳಿಗೆ ಸ್ಕ್ರ್ಯಾಪಿಂಗ್ ನೀತಿ ಜಾರಿ
ರಸ್ತೆಸಾರಿಗೆ ಅಭಿವೃದ್ಧಿ ಮಂಡಳಿಯ 40ನೇ ಸಭೆಯಲ್ಲಿ ಹಸಿರು ತೆರಿಗೆ ನೀತಿ ಕುರಿತಂತೆ ಹಲವಾರು ಚರ್ಚೆಗಳನ್ನು ಕೈಗೊಂಡ ಸಚಿವ ನಿತಿನ್ ಗಡ್ಕರಿಯವರು 15 ವರ್ಷಕ್ಕಿಂತ ಮೇಲ್ಪಟ್ಟ ಸರ್ಕಾರಿಗಳ ವಾಹನಗಳ ನೋಂದಣಿಯನ್ನು ರದ್ದುಗೊಳಿಸುವ ನೀತಿಗೆ ಅನುಮೋದನೆ ನೀಡಿದ್ದಾರೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಬಹುದಿನಗಳಿಂದ ಚರ್ಚೆಯಲ್ಲಿರುವ ಸ್ಕ್ರ್ಯಾಪಿಂಗ್ ನೀತಿಯನ್ನು ಸಾರ್ವಜನಿಕರ ವಾಹನಗಳ ಮೇಲೆ ಜಾರಿ ತರುವುದಕ್ಕೂ ಮುನ್ನ ಅವಧಿ ಮೀರಿದ ಸರ್ಕಾರಿ ವಾಹನಗಳಿಗೆ ಅನ್ವಯವಾಗುವಂತೆ ಹೊಸ ಸ್ಕ್ರ್ಯಾಪಿಂಗ್ ನೀತಿಯನ್ನು ಜಾರಿ ತರಲಾಗಿದೆ.

ಕಳೆದ ವಾರ ಪ್ರಧಾನಿ ಮೋದಿ ನೇತೃತ್ವದ ಸಭೆಯಲ್ಲಿ ಆರ್ಥಿಕ ತಜ್ಞರು ಮತ್ತು ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ಅಭಿಪ್ರಾಯದಂತೆ ಸ್ಕ್ರ್ಯಾಪಿಂಗ್ ನೀತಿಯನ್ನು ಸಾಮೂಹಿಕವಾಗಿ ಜಾರಿಗೆ ತರದೆ ಮೊದಲ ಹಂತದಲ್ಲಿ ಸರ್ಕಾರಿ ವಾಹನಗಳ ಮೇಲೆ ಅನ್ವಯವಾಗುವಂತೆ ಹೊಸ ನೀತಿ ಜಾರಿಗೆ ತರಲು ನಿರ್ಣಯ ಕೈಗೊಳ್ಳಲಾಗಿದೆ.
MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಸಲಹಾ ಸಮಿತಿಯ ಅಭಿಪ್ರಾಯಕ್ಕೆ ಪ್ರಧಾನಿ ಮೋದಿಯವರು ಕೂಡಾ ಒಪ್ಪಿಗೆ ಸೂಚಿಸಿದ್ದು, ಹೊಸ ಸ್ಕ್ರ್ಯಾಪಿಂಗ್ ನೀತಿಯನ್ನು ಬಜೆಟ್‌ಗೆ ಮುಂಚಿತವಾಗಿ ಅಂತಿಮಗೊಳಿಸುವಂತೆ ಸೂಚನೆ ನೀಡಲಾಗಿದೆ. ಜೊತೆಗೆ 15 ವರ್ಷಗಳಿಗೂ ಹೆಚ್ಚು ಕಾಲ ಬಳಕೆಯಲ್ಲಿರುವ ಸರ್ಕಾರಿ ವಾಹನಗಳನ್ನು ಗುರುತಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಆದೇಶಿಸಲು ಸೂಚನೆ ನೀಡಿರುವ ಪ್ರಧಾನಿ ಮೋದಿಯವರು ಸ್ಕ್ರ್ಯಾಪಿಂಗ್ ನೀತಿಯನ್ನು ಜಾರಿಗೆ ತರುವುದು ಸರ್ಕಾರದ ಸಂಕಲ್ಪವಾಗಿದೆ ಎಂದಿದ್ದಾರೆ.