ಮಾಲಿನ್ಯ ಉಂಟುಮಾಡುವ ವಾಹನಗಳಿಗೆ ಬ್ರೇಕ್ ಹಾಕಲು 'ಹಸಿರು ತೆರಿಗೆ' ಅಸ್ತ್ರ

ದೇಶಾದ್ಯಂತ ಹೆಚ್ಚುತ್ತಿರುವ ವಾಯುಮಾಲಿನ್ಯ ಪ್ರಮಾಣಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಕೇಂದ್ರ ಸರ್ಕಾರವು ಹಸಿರು ತೆರಿಗೆ ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದು, 8 ವರ್ಷ ಮೇಲ್ಪಟ್ಟ ಸಾರಿಗೆ ವಾಹನಗಳಿಗೆ ಮತ್ತು 15 ವರ್ಷ ಮೇಲ್ಪಟ್ಟ ಖಾಸಗಿ ವಾಹನಗಳಿಗೆ ಹಸಿರು ತೆರಿಗೆ ವಿಧಿಸುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದೆ.

ಮಾಲಿನ್ಯ ಉಂಟುಮಾಡುವ ವಾಹನಗಳಿಗೆ ಬ್ರೇಕ್ ಹಾಕಲು 'ಹಸಿರು ತೆರಿಗೆ' ಅಸ್ತ

ವಾಯುಮಾಲಿನ್ಯವನ್ನು ಪರಿಣಾಮಕಾರಿಯಾಗಿ ತಗ್ಗಿಸಲು ಹಳೆಯ ವಾಹನಗಳಿಗೆ ಹಸಿರು ತೆರಿಗೆ ವಿಧಿಸುವ ಪ್ರಸ್ತಾಪಕ್ಕೆ ಕೇಂದ್ರ ರಸ್ತೆಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು ಅನುಮೋದನೆ ನೀಡಿದ್ದು, ಹೊಸ ಹಸಿರು ತೆರಿಗೆ ಅಧಿಸೂಚನೆಯನ್ನು ಅಧಿಕೃತವಾಗಿ ಹೊರಡಿಸುವ ಮುನ್ನ ಹೊಸ ಪ್ರಸ್ತಾವನೆಯ ಕುರಿತು ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಅಭಿಪ್ರಾಯ ಸಂಗ್ರಹಸಲಾಗುತ್ತಿದೆ.

ಮಾಲಿನ್ಯ ಉಂಟುಮಾಡುವ ವಾಹನಗಳಿಗೆ ಬ್ರೇಕ್ ಹಾಕಲು 'ಹಸಿರು ತೆರಿಗೆ' ಅಸ್ತ

ಹೊಸ ಹಸಿರು ತೆರಿಗೆ ನೀತಿಯ ಮೂಲಕ ಮಾಲಿನ್ಯ ಉಂಟುಮಾಡುವ ಹಳೆಯ ವಾಹನಗಳ ಬಳಕೆಯನ್ನು ತಡೆಯಲು ಸಾಕಷ್ಟು ಸಹಕಾರಿಯಾಗಲಿದ್ದು, ಹೊಸ ಪ್ರಸ್ತಾವನೆಗೆ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಒಪ್ಪಿಗೆ ಸಿಗುವ ಸಾಧ್ಯತೆಗಳಿವೆ.

ಮಾಲಿನ್ಯ ಉಂಟುಮಾಡುವ ವಾಹನಗಳಿಗೆ ಬ್ರೇಕ್ ಹಾಕಲು 'ಹಸಿರು ತೆರಿಗೆ' ಅಸ್ತ

ಹಸಿರು ತೆರಿಗೆಯನ್ನು 8 ವರ್ಷದ ಮೇಲ್ಪಟ್ಟ ಸಾರಿಗೆ ವಾಹನಗಳ ಫಿಟ್‌ನೆಸ್ ಪ್ರಮಾಣ ಪತ್ರ ನವೀಕರಿಸುವ ಸಂದರ್ಭದಲ್ಲಿ ಮತ್ತು 15 ವರ್ಷ ಮೇಲ್ಪಟ್ಟ ವೈಯಕ್ತಿಕ ಬಳಕೆಯ ವಾಹನಗಳ ಆರ್‌ಸಿ(ನೋಂದಣಿ ಪ್ರಮಾಣಪತ್ರ) ನವೀಕರಿಸುವ ಸಂದರ್ಭದಲ್ಲಿ ಶೇ.10 ರಿಂದ ಶೇ. 25 ರಷ್ಟು ಹೆಚ್ಚಳ ಮಾಡಬಹುದಾಗಿದೆ.

ಮಾಲಿನ್ಯ ಉಂಟುಮಾಡುವ ವಾಹನಗಳಿಗೆ ಬ್ರೇಕ್ ಹಾಕಲು 'ಹಸಿರು ತೆರಿಗೆ' ಅಸ್ತ

ಸಾರಿಗೆ ವಾಹನಗಳಿಗೆ ವಿಧಿಸುವ ಹಸಿರು ತೆರಿಗೆಯಲ್ಲಿ ವಾಣಿಜ್ಯ ವಾಹನಗಳನ್ನು ಹೊರತುಪಡಿಸಿ ಸಾರ್ವಜನಿಕ ಬಳಕೆಯ ಬಸ್‌ಗಳಿಗೆ ತೆರಿಗೆ ವಿನಾಯ್ತಿ ದೊರೆಯಲಿದ್ದು, ಹೈಬ್ರಿಡ್, ಎಲೆಕ್ಟ್ರಿಕ್ ವಾಹನಗಳು, ಸಿಎನ್‌ಜಿ, ಎಥೆನಾಲ್, ಎಲ್‌ಪಿಜಿ ಬಳಕೆಯ ವಾಹನಗಳಿಗೂ ಹಸಿರು ತೆರಿಗೆಯಿಂದ ವಿನಾಯ್ತಿ ಸಿಗಲಿದೆ. ಆದರೆ ದೇಶಾದ್ಯಂತ ಅತಿ ಹೆಚ್ಚು ಮಾಲಿನ್ಯದಿಂದ ಬಳಲುತ್ತಿರುವ ಮಹಾನಗರಗಳಲ್ಲಿನ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ರಸ್ತೆ ತೆರಿಗೆಯನ್ನು ಶೇ. 50 ಕ್ಕೆ ಹೆಚ್ಚಳ ಮಾಡುವ ಪ್ರಸ್ತಾವನೆ ವಾಹನ ಮಾಲೀಕತ್ವವನ್ನು ಮತ್ತಷ್ಟು ದುಬಾರಿಯಾಗಿಸಲಿದೆ.

ಮಾಲಿನ್ಯ ಉಂಟುಮಾಡುವ ವಾಹನಗಳಿಗೆ ಬ್ರೇಕ್ ಹಾಕಲು 'ಹಸಿರು ತೆರಿಗೆ' ಅಸ್ತ

ಕೃಷಿ ವಾಹನಗಳಿಗೆ ವಿನಾಯ್ತಿ

ಹಸಿರು ಪ್ರಸ್ತಾವನೆಯಲ್ಲಿ ಕೃಷಿ ಚಟುವಟಿಕೆಯ ಪ್ರಮುಖ ಭಾಗವಾಗಿರುವ ಟ್ರ್ಯಾಕ್ಟರ್, ಕೃಷಿ ಸಂಬಂಧಿತ ವಾಹನಗಳಿಗೆ ಹೊಸ ಹಸಿರು ತೆರಿಗೆಯಿಂದ ವಿನಾಯ್ತಿ ನೀಡಲಾಗಿದ್ದು, ಹಸಿರು ತೆರಿಗೆ ಮೂಲಕ ಸಂಗ್ರಹಿಸಿದ ಆದಾಯವನ್ನು ಪ್ರತ್ಯೇಕ ಖಾತೆ ಮೂಲಕ ಮಾಲಿನ್ಯ ನಿಯಂತ್ರಣ ಯೋಜನೆಗಳಿಗೆ ಬಳಸಲಾಗುತ್ತದೆ ಎಂದು ಸಾರಿಗೆ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಮಾಲಿನ್ಯ ಉಂಟುಮಾಡುವ ವಾಹನಗಳಿಗೆ ಬ್ರೇಕ್ ಹಾಕಲು 'ಹಸಿರು ತೆರಿಗೆ' ಅಸ್ತ

ಹೊಸ ಪ್ರಸ್ತಾವನೆಯು ಮುಂಬರುವ 2022ರ ಎಪ್ರಿಲ್ 1 ರಿಂದ ಅಧಿಕೃತವಾಗಿ ಜಾರಿಗೆ ಬರಲಿದ್ದು, ವಿವಿಧ ರಾಜ್ಯ ಸರ್ಕಾರಗಳ ಸಲಹೆಗಳ ಆಧಾರದ ಮೇಲೆ ಹೊಸ ತೆರಿಗೆ ನೀತಿಯಲ್ಲಿ ಕೆಲವು ಬದಲಾವಣೆಗಳನ್ನು ತರುವ ಮೂಲಕ ಕಡ್ಡಾಯವಾಗಿ ಜಾರಿಗೆ ತರಲಾಗುತ್ತದೆ.

ಮಾಲಿನ್ಯ ಉಂಟುಮಾಡುವ ವಾಹನಗಳಿಗೆ ಬ್ರೇಕ್ ಹಾಕಲು 'ಹಸಿರು ತೆರಿಗೆ' ಅಸ್ತ

15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನಗಳಿಗೆ ಸ್ಕ್ರ್ಯಾಪಿಂಗ್ ನೀತಿ ಜಾರಿ

ರಸ್ತೆಸಾರಿಗೆ ಅಭಿವೃದ್ಧಿ ಮಂಡಳಿಯ 40ನೇ ಸಭೆಯಲ್ಲಿ ಹಸಿರು ತೆರಿಗೆ ನೀತಿ ಕುರಿತಂತೆ ಹಲವಾರು ಚರ್ಚೆಗಳನ್ನು ಕೈಗೊಂಡ ಸಚಿವ ನಿತಿನ್ ಗಡ್ಕರಿಯವರು 15 ವರ್ಷಕ್ಕಿಂತ ಮೇಲ್ಪಟ್ಟ ಸರ್ಕಾರಿಗಳ ವಾಹನಗಳ ನೋಂದಣಿಯನ್ನು ರದ್ದುಗೊಳಿಸುವ ನೀತಿಗೆ ಅನುಮೋದನೆ ನೀಡಿದ್ದಾರೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಮಾಲಿನ್ಯ ಉಂಟುಮಾಡುವ ವಾಹನಗಳಿಗೆ ಬ್ರೇಕ್ ಹಾಕಲು 'ಹಸಿರು ತೆರಿಗೆ' ಅಸ್ತ

ಬಹುದಿನಗಳಿಂದ ಚರ್ಚೆಯಲ್ಲಿರುವ ಸ್ಕ್ರ್ಯಾಪಿಂಗ್ ನೀತಿಯನ್ನು ಸಾರ್ವಜನಿಕರ ವಾಹನಗಳ ಮೇಲೆ ಜಾರಿ ತರುವುದಕ್ಕೂ ಮುನ್ನ ಅವಧಿ ಮೀರಿದ ಸರ್ಕಾರಿ ವಾಹನಗಳಿಗೆ ಅನ್ವಯವಾಗುವಂತೆ ಹೊಸ ಸ್ಕ್ರ್ಯಾಪಿಂಗ್ ನೀತಿಯನ್ನು ಜಾರಿ ತರಲಾಗಿದೆ.

ಮಾಲಿನ್ಯ ಉಂಟುಮಾಡುವ ವಾಹನಗಳಿಗೆ ಬ್ರೇಕ್ ಹಾಕಲು 'ಹಸಿರು ತೆರಿಗೆ' ಅಸ್ತ

ಕಳೆದ ವಾರ ಪ್ರಧಾನಿ ಮೋದಿ ನೇತೃತ್ವದ ಸಭೆಯಲ್ಲಿ ಆರ್ಥಿಕ ತಜ್ಞರು ಮತ್ತು ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ಅಭಿಪ್ರಾಯದಂತೆ ಸ್ಕ್ರ್ಯಾಪಿಂಗ್ ನೀತಿಯನ್ನು ಸಾಮೂಹಿಕವಾಗಿ ಜಾರಿಗೆ ತರದೆ ಮೊದಲ ಹಂತದಲ್ಲಿ ಸರ್ಕಾರಿ ವಾಹನಗಳ ಮೇಲೆ ಅನ್ವಯವಾಗುವಂತೆ ಹೊಸ ನೀತಿ ಜಾರಿಗೆ ತರಲು ನಿರ್ಣಯ ಕೈಗೊಳ್ಳಲಾಗಿದೆ.

MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಮಾಲಿನ್ಯ ಉಂಟುಮಾಡುವ ವಾಹನಗಳಿಗೆ ಬ್ರೇಕ್ ಹಾಕಲು 'ಹಸಿರು ತೆರಿಗೆ' ಅಸ್ತ

ಸಲಹಾ ಸಮಿತಿಯ ಅಭಿಪ್ರಾಯಕ್ಕೆ ಪ್ರಧಾನಿ ಮೋದಿಯವರು ಕೂಡಾ ಒಪ್ಪಿಗೆ ಸೂಚಿಸಿದ್ದು, ಹೊಸ ಸ್ಕ್ರ್ಯಾಪಿಂಗ್ ನೀತಿಯನ್ನು ಬಜೆಟ್‌ಗೆ ಮುಂಚಿತವಾಗಿ ಅಂತಿಮಗೊಳಿಸುವಂತೆ ಸೂಚನೆ ನೀಡಲಾಗಿದೆ. ಜೊತೆಗೆ 15 ವರ್ಷಗಳಿಗೂ ಹೆಚ್ಚು ಕಾಲ ಬಳಕೆಯಲ್ಲಿರುವ ಸರ್ಕಾರಿ ವಾಹನಗಳನ್ನು ಗುರುತಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಆದೇಶಿಸಲು ಸೂಚನೆ ನೀಡಿರುವ ಪ್ರಧಾನಿ ಮೋದಿಯವರು ಸ್ಕ್ರ್ಯಾಪಿಂಗ್ ನೀತಿಯನ್ನು ಜಾರಿಗೆ ತರುವುದು ಸರ್ಕಾರದ ಸಂಕಲ್ಪವಾಗಿದೆ ಎಂದಿದ್ದಾರೆ.

Most Read Articles

Kannada
English summary
Green Tax on old vehicles proposal approved. Read in Kannada.
Story first published: Tuesday, January 26, 2021, 12:14 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X