ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರ ಮೇಲೆ ನಿಗಾ ಇಡಲು ಬರಲಿವೆ ಡ್ರೋನ್‌ಗಳು

ಗುರುಗ್ರಾಮ ಸಂಚಾರಿ ಪೊಲೀಸರು ನಗರದ ದಟ್ಟಣೆಯ ಮೇಲೆ ನಿಗಾವಹಿಸಲು ಶೀಘ್ರದಲ್ಲೇ ಡ್ರೋನ್‌ಗಳನ್ನು ಬಳಸಲಿದ್ದಾರೆ. ಡ್ರೋನ್‌ಗಳನ್ನು ಬಳಸಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವವರನ್ನು ಪತ್ತೆ ಹಚ್ಚಲಿದ್ದಾರೆ.

ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರ ಮೇಲೆ ನಿಗಾ ಇಡಲು ಬರಲಿವೆ ಡ್ರೋನ್‌ಗಳು

ನಗರದ ಸಂಚಾರ ದಟ್ಟಣೆಯನ್ನು ಗಮನಿಸಲು ಹಾಗೂ ನಿಯಮ ಉಲ್ಲಂಘಿಸುವವರನ್ನು ಪತ್ತೆಹಚ್ಚಲು ಡ್ರೋನ್‌ಗಳನ್ನು ಬಳಸಲಾಗುವುದು ಎಂದು ಗುರುಗ್ರಾಮದ ಡಿಸಿಪಿ ಹೇಳಿದ್ದಾರೆ. ಸದ್ಯಕ್ಕೆ ನಗರ ಸಂಚಾರ ದಟ್ಟಣೆಯನ್ನು ಸಿಸಿಟಿವಿ ಕ್ಯಾಮೆರಾಗಳ ನೆರವಿನಿಂದ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರ ಮೇಲೆ ನಿಗಾ ಇಡಲು ಬರಲಿವೆ ಡ್ರೋನ್‌ಗಳು

ಆದರೂ ಹೆಚ್ಚಿನ ಭದ್ರತೆಯನ್ನು ನೀಡುವ ಉದ್ದೇಶದಿಂದ ಗುರುಗ್ರಾಮ ಸಂಚಾರ ಪೊಲೀಸರು ಡ್ರೋನ್‌ಗಳನ್ನು ಬಳಸಲಿದ್ದಾರೆ. ಇತ್ತೀಚೆಗಷ್ಟೇ ಗುರುಗ್ರಾಮ ಪೊಲೀಸರು ರಾಂಗ್ ಸೈಡ್'ನಲ್ಲಿ ವಾಹನ ಚಲಾಯಿಸುವವರ ಡ್ರೈವಿಂಗ್ ಲೈಸೆನ್ಸ್ ರದ್ದುಗೊಳಿಸುವ ಕಾರ್ಯಾಚರಣೆಯನ್ನು ಆರಂಭಿಸಿದ್ದರು.

MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರ ಮೇಲೆ ನಿಗಾ ಇಡಲು ಬರಲಿವೆ ಡ್ರೋನ್‌ಗಳು

ಗುರುಗ್ರಾಮ ಸಂಚಾರ ಪೊಲೀಸರ ಮಾಹಿತಿಯ ಪ್ರಕಾರ, 2019ರಲ್ಲಿ ಗುರುಗ್ರಾಮದಲ್ಲಿ 49,671 ಜನರಿಗೆ ರಾಂಗ್ ಸೈಡ್'ನಲ್ಲಿ ವಾಹನ ಚಲಾಯಿಸಿದ ಕಾರಣಕ್ಕೆ ದಂಡ ವಿಧಿಸಲಾಗಿದ್ದರೆ, 2020ರಲ್ಲಿ 39,765 ಜನರಿಗೆ ದಂಡ ವಿಧಿಸಲಾಗಿದೆ.

ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರ ಮೇಲೆ ನಿಗಾ ಇಡಲು ಬರಲಿವೆ ಡ್ರೋನ್‌ಗಳು

ಗುರುಗ್ರಾಮ ಪೊಲೀಸರು ವಾಹನಗಳಲ್ಲಿ ಜಾತಿ ಸೂಚಕ ಸ್ಟಿಕ್ಕರ್ ಹೊಂದಿರುವ ವಾಹನ ಮಾಲೀಕರ ವಿರುದ್ಧವೂ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಪೊಲೀಸರ ಪ್ರಕಾರ ಗುರುಗ್ರಾಮದಲ್ಲಿ ಪ್ರತಿ 20 ವಾಹನಗಳಲ್ಲಿ ಒಂದು ವಾಹನವು ಜಾತಿ ಸೂಚಕ ಸ್ಟಿಕ್ಕರ್ ಹೊಂದಿರುತ್ತದೆ.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರ ಮೇಲೆ ನಿಗಾ ಇಡಲು ಬರಲಿವೆ ಡ್ರೋನ್‌ಗಳು

ಮೋಟಾರು ವಾಹನ ಕಾಯ್ದೆಯ ಪ್ರಕಾರ, ವಾಹನದ ಮೇಲೆ ಜಾತಿ ಸೂಚಕ ಪದಗಳನ್ನು ಬರೆಯುವುದರಿಂದ ಸಮಾಜದಲ್ಲಿ ಜಾತಿ ಆಧಾರಿತ ತಾರತಮ್ಯ ಉಂಟಾಗುತ್ತದೆ. ಇದರಿಂದಾಗಿ ಸಾಮಾಜಿಕ ಅಸಮಾನತೆ ಉಂಟಾಗುತ್ತದೆ.

ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರ ಮೇಲೆ ನಿಗಾ ಇಡಲು ಬರಲಿವೆ ಡ್ರೋನ್‌ಗಳು

ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯ ವಾರ್ಷಿಕ ವರದಿ ಪ್ರಕಾರ ದೇಶದಲ್ಲಿ ಸಂಭವಿಸುವ ಸಾವು, ಅಂಗವೈಕಲ್ಯಗಳಿಗೆ ರಸ್ತೆ ಅಪಘಾತಗಳು ಪ್ರಮುಖ ಕಾರಣವಾಗಿವೆ. ವಿಶ್ವದ 199 ದೇಶಗಳ ಪೈಕಿ ರಸ್ತೆ ಅಪಘಾತ ಸಾವಿನ ಸಂಖ್ಯೆಯಲ್ಲಿ ಭಾರತವು ಮೊದಲ ಸ್ಥಾನದಲ್ಲಿದೆ.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರ ಮೇಲೆ ನಿಗಾ ಇಡಲು ಬರಲಿವೆ ಡ್ರೋನ್‌ಗಳು

ವಿಶ್ವದ 11%ನಷ್ಟು ಭಾರತೀಯರು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿದ್ದಾರೆ. ಸಾರಿಗೆ ಇಲಾಖೆಯ ವರದಿಯ ಪ್ರಕಾರ ಭಾರತದಲ್ಲಿ 2019ರಲ್ಲಿ ಒಟ್ಟು 4,49,002 ಅಪಘಾತಗಳು ಸಂಭವಿಸಿದ್ದು, 1,51,113 ಜನರು ಸಾವನ್ನಪ್ಪಿದ್ದರೆ, 4,51,361 ಜನರು ಗಾಯಗೊಂಡಿದ್ದಾರೆ.

ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರ ಮೇಲೆ ನಿಗಾ ಇಡಲು ಬರಲಿವೆ ಡ್ರೋನ್‌ಗಳು

2019ರ ಸೆಪ್ಟೆಂಬರ್ ತಿಂಗಳಿನಲ್ಲಿ ಹೊಸ ಮೋಟಾರು ವಾಹನ ಕಾಯ್ದೆ ಜಾರಿಗೆ ಬಂದ ನಂತರ ಪರಿಸ್ಥಿತಿ ಸ್ವಲ್ಪ ಮಟ್ಟಿಗೆ ಮಾತ್ರ ಸುಧಾರಿಸಿದೆ ಎಂದು ಸಾರಿಗೆ ಇಲಾಖೆಯು ಕಳವಳ ವ್ಯಕ್ತಪಡಿಸಿದೆ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರ ಮೇಲೆ ನಿಗಾ ಇಡಲು ಬರಲಿವೆ ಡ್ರೋನ್‌ಗಳು

ಭಾರತೀಯ ರಸ್ತೆಗಳನ್ನು ಸುರಕ್ಷಿತವಾಗಿಸಲು ಇಲಾಖೆಯು ಹೊಸ ಯೋಜನೆಗಳನ್ನು ರೂಪಿಸುತ್ತಿದ್ದು, ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಪ್ರಯತ್ನಿಸಲಾಗುತ್ತಿದೆ.

ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರ ಮೇಲೆ ನಿಗಾ ಇಡಲು ಬರಲಿವೆ ಡ್ರೋನ್‌ಗಳು

ಇತ್ತೀಚೆಗೆ ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿರವರು ಕಳಪೆ ರಸ್ತೆಗಳನ್ನು ನಿರ್ಮಿಸುವ ಏಜೆನ್ಸಿಗೆ ಶಿಕ್ಷೆ ವಿಧಿಸುವ ಕಾನೂನನ್ನು ಜಾರಿಗೆ ತರಲಾಗುವುದು ಎಂದು ಹೇಳಿದ್ದರು.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರ ಮೇಲೆ ನಿಗಾ ಇಡಲು ಬರಲಿವೆ ಡ್ರೋನ್‌ಗಳು

ದೇಶದಲ್ಲಿ ಸಂಭವಿಸುವ ರಸ್ತೆ ಅಪಘಾತಗಳಿಗೆ ಹದಗೆಟ್ಟ ರಸ್ತೆಗಳೂ ಸಹ ಕಾರಣವಾಗಿವೆ. ಸಾರಿಗೆ ಇಲಾಖೆಯು ರಸ್ತೆ ಸುರಕ್ಷತೆ ಬಗ್ಗೆ ಸಾಮಾಜಿಕ ಮಾಧ್ಯಮಗಳ ಮೂಲಕ ಜನರಿಗೆ ಅರಿವು ಮೂಡಿಸುತ್ತಿದೆ.

ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರ ಮೇಲೆ ನಿಗಾ ಇಡಲು ಬರಲಿವೆ ಡ್ರೋನ್‌ಗಳು

ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿರವರು 2025ರ ವೇಳೆಗೆ ರಸ್ತೆ ಅಪಘಾತಗಳ ಸಂಖ್ಯೆಯನ್ನು 50%ನಷ್ಟು ಕಡಿಮೆ ಮಾಡುವ ಗುರಿಯನ್ನು ಹೊಂದಿದ್ದಾರೆ.

Most Read Articles

Kannada
English summary
Gurugram Police to use Drones to monitor traffic norms violations. Read in Kannada.
Story first published: Thursday, March 18, 2021, 20:48 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X