ಎಲೆಕ್ಟ್ರಿಕ್ ವಾಹನಗಳ ಖರೀದಿ ಮೇಲೆ ಹೊಸ ಇವಿ ನೀತಿ ಘೋಷಣೆ ಮಾಡಿದ ಹರಿಯಾಣ ಸರ್ಕಾರ

ಹೆಚ್ಚುತ್ತಿರುವ ಇಂಧನ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಸರ್ಕಾರದ ಜೊತೆಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿರುವ ಇವಿ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹವು ಹೊಸ ಬದಲಾವಣೆಗೆ ಕಾರಣವಾಗಿದೆ.

ಎಲೆಕ್ಟ್ರಿಕ್ ವಾಹನಗಳ ಖರೀದಿ ಮೇಲೆ ಹೊಸ ಇವಿ ನೀತಿ ಘೋಷಣೆ ಮಾಡಿದ ಹರಿಯಾಣ ಸರ್ಕಾರ

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಫೇಮ್ 2 ಸಬ್ಸಡಿ ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳಿಗೆ ಮತ್ತು ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಫೇಮ್ 2 ಯೋಜನೆಯ ಸಬ್ಸಡಿ ಜೊತೆಗೆ ವಿವಿಧ ರಾಜ್ಯದ ಸರ್ಕಾರಗಳು ಸಹ ಕೆಲವು ವಿನಾಯ್ತಿಗಳನ್ನು ನೀಡುತ್ತಿವೆ.

ಎಲೆಕ್ಟ್ರಿಕ್ ವಾಹನಗಳ ಖರೀದಿ ಮೇಲೆ ಹೊಸ ಇವಿ ನೀತಿ ಘೋಷಣೆ ಮಾಡಿದ ಹರಿಯಾಣ ಸರ್ಕಾರ

ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಎಲೆಕ್ಟ್ರಿಕ್ ವಾಹನಗಳ ಖರೀದಿ ಮೇಲೆ ಹೊಸ ಇವಿ ನೀತಿ ಘೋಷಣೆ ಮಾಡಿದ ಹರಿಯಾಣ ಸರ್ಕಾರ

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರ ಸರ್ಕಾರದ ಫೇಮ್ 2 ಹೊರತುಪಡಿಸಿ ರಾಜ್ಯಗಳ ಮಟ್ಟದಲ್ಲಿ ದೆಹಲಿ ಸರ್ಕಾರವು ಹೆಚ್ಚಿನ ಮಟ್ಟದ ಪ್ರೊತ್ಸಾಹ ನೀಡುತ್ತಿದ್ದು, ತದನಂತರ ವಿವಿಧ ಸರ್ಕಾರವು ಸಹ ರಾಜ್ಯ ಮಟ್ಟದಲ್ಲಿ ಹೊಸ ಇವಿ ನೀತಿ ಅಳವಡಿಸಿಕೊಳ್ಳುತ್ತಿವೆ.

ಎಲೆಕ್ಟ್ರಿಕ್ ವಾಹನಗಳ ಖರೀದಿ ಮೇಲೆ ಹೊಸ ಇವಿ ನೀತಿ ಘೋಷಣೆ ಮಾಡಿದ ಹರಿಯಾಣ ಸರ್ಕಾರ

ಹರಿಯಾಣ ಸರ್ಕಾರವು ಸಹ ಇದೀಗ ಹೊಸ ಇವಿ ವಾಹನ ನೀತಿಯನ್ನು ಪ್ರಕಟಿಸಿದ್ದು, ಇವಿ ವಾಹನಗಳನ್ನು ಖರೀದಿಸುವವರಿಗಾಗಿ ಗರಿಷ್ಠ ಪ್ರಮಾಣದ ಸಬ್ಸಡಿ ನೀಡಲು ನಿರ್ಧರಿಸಿದೆ. ಹೊಸ ಸಬ್ಸಡಿ ಯೋಜನೆ ಅಡಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು, ತ್ರಿ ಚಕ್ರ ವಾಹನಗಳು ಮತ್ತು ಇವಿ ಕಾರು ಮಾದರಿಗಳ ನೋಂದಣಿಯನ್ನು ಶುಲ್ಕಕ್ಕೆ ವಿನಾಯ್ತಿ ನೀಡಿದೆ.

ಎಲೆಕ್ಟ್ರಿಕ್ ವಾಹನಗಳ ಖರೀದಿ ಮೇಲೆ ಹೊಸ ಇವಿ ನೀತಿ ಘೋಷಣೆ ಮಾಡಿದ ಹರಿಯಾಣ ಸರ್ಕಾರ

ಜೊತೆಗೆ ಹೊಸ ಇವಿ ನೀತಿ ಅಡಿಯಲ್ಲಿ ಎಲೆಕ್ಟ್ರಿಕ್ ಮತ್ತು ಸಿಎನ್‌ಜಿ ಬಸ್‌ಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲು ನಿರ್ಧರಿಸಲಾಗಿದ್ದು, ಮುಂಬರುವ ದಿನಗಳಲ್ಲಿ ಅಗತ್ಯ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ನಿರ್ಧರಿಸಲಾಗಿದೆ.

ಎಲೆಕ್ಟ್ರಿಕ್ ವಾಹನಗಳ ಖರೀದಿ ಮೇಲೆ ಹೊಸ ಇವಿ ನೀತಿ ಘೋಷಣೆ ಮಾಡಿದ ಹರಿಯಾಣ ಸರ್ಕಾರ

ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ವಿವಿಧ ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರವು ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ.

ಎಲೆಕ್ಟ್ರಿಕ್ ವಾಹನಗಳ ಖರೀದಿ ಮೇಲೆ ಹೊಸ ಇವಿ ನೀತಿ ಘೋಷಣೆ ಮಾಡಿದ ಹರಿಯಾಣ ಸರ್ಕಾರ

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ.

ಎಲೆಕ್ಟ್ರಿಕ್ ವಾಹನಗಳ ಖರೀದಿ ಮೇಲೆ ಹೊಸ ಇವಿ ನೀತಿ ಘೋಷಣೆ ಮಾಡಿದ ಹರಿಯಾಣ ಸರ್ಕಾರ

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆ ಸಾಕಷ್ಟು ಸಹಕಾರಿಯಾಗಿದ್ದು, ಇವಿ ವಾಹನಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣವು ಇದೀಗ ಹೊಸ ಸವಾಲಾಗಿದೆ.

ಎಲೆಕ್ಟ್ರಿಕ್ ವಾಹನಗಳ ಖರೀದಿ ಮೇಲೆ ಹೊಸ ಇವಿ ನೀತಿ ಘೋಷಣೆ ಮಾಡಿದ ಹರಿಯಾಣ ಸರ್ಕಾರ

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಖರೀದಿ ಮಾಡುವ ಗ್ರಾಹಕರಿಗೆ ಮಾತ್ರವಲ್ಲ ಉತ್ಪಾದಕ ಕಂಪನಿಗಳಿಗೂ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಇವಿ ವಾಹನಗಳು ಹೆಚ್ಚಿದಂತೆ ಅವುಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣಕ್ಕೂ ಯೋಜನೆ ಜಾರಿಗೆ ತರಲಾಗಿದೆ.

ಎಲೆಕ್ಟ್ರಿಕ್ ವಾಹನಗಳ ಖರೀದಿ ಮೇಲೆ ಹೊಸ ಇವಿ ನೀತಿ ಘೋಷಣೆ ಮಾಡಿದ ಹರಿಯಾಣ ಸರ್ಕಾರ

ಸದ್ಯ ಕೇಂದ್ರ ಸರ್ಕಾರದ ಹೊಸ ಯೋಜನೆಗೆ ಅನುಗುಣವಾಗಿ ವಿವಿಧ ನಗರಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆ ನಿಧಾನವಾಗಿ ಹೆಚ್ಚಳವಾಗುತ್ತಿದ್ದು, ಖಾಸಗಿ ಮತ್ತು ಸರ್ಕಾರಿ ಸಹಭಾಗೀತ್ವದಲ್ಲಿ ಚಾರ್ಜಿಂಗ್ ನಿಲ್ದಾಣಗಳು ಒಂದೊಂದಾಗಿ ಕಾರ್ಯನಿರ್ವಹಣೆ ಆರಂಭಿಸುತ್ತಿವೆ.

ಎಲೆಕ್ಟ್ರಿಕ್ ವಾಹನಗಳ ಖರೀದಿ ಮೇಲೆ ಹೊಸ ಇವಿ ನೀತಿ ಘೋಷಣೆ ಮಾಡಿದ ಹರಿಯಾಣ ಸರ್ಕಾರ

ಸರ್ಕಾರಿ ಸ್ವಾಮ್ಯದ ಕನ್ವರ್ಜೆನ್ಸ್ ಎನರ್ಜಿ ಸರ್ವೀಸಸ್ ಲಿಮಿಟೆಡ್ (ಸಿಇಎಸ್ಎಲ್) ಸಂಸ್ಥೆಯು ಕೂಡಾ ದೇಶಾದ್ಯಂತ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸುತ್ತಿದ್ದು, ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೆಷನ್ ಲಿಮಿಟೆಡ್(ಹೆಚ್‌ಪಿಸಿಎಲ್)ನೊಂದಿಗೆ ಹೊಸ ಒಪ್ಪಂದ ಮಾಡಿಕೊಂಡಿದೆ.

ಎಲೆಕ್ಟ್ರಿಕ್ ವಾಹನಗಳ ಖರೀದಿ ಮೇಲೆ ಹೊಸ ಇವಿ ನೀತಿ ಘೋಷಣೆ ಮಾಡಿದ ಹರಿಯಾಣ ಸರ್ಕಾರ

ಹೊಸ ಒಪ್ಪಂದದ ಪ್ರಕಾರ ಸಿಇಎಸ್ಎಲ್ ಸಂಸ್ಥೆಯು ಹೆಚ್‌ಪಿ ಪೆಟ್ರೋಲ್ ಬಂಕ್‌ಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಒಪ್ಪಿಗೆ ಸೂಚಿಸಿದ್ದು, ಮುಂದಿನ 10 ವರ್ಷಗಳ ಹೊಸ ಒಪ್ಪಂದ ಚಾಲ್ತಿಯಲ್ಲಿರಲಿದೆ.

ಎಲೆಕ್ಟ್ರಿಕ್ ವಾಹನಗಳ ಖರೀದಿ ಮೇಲೆ ಹೊಸ ಇವಿ ನೀತಿ ಘೋಷಣೆ ಮಾಡಿದ ಹರಿಯಾಣ ಸರ್ಕಾರ

ಸಿಇಎಸ್ಎಲ್ ಸಂಸ್ಥೆಯು ಗ್ರಾಹಕರ ಬೇಡಿಕೆ ಆಧಾರದ ಮೇಲೆ ಡಿಸಿ ಫಾಸ್ಟ್ ಚಾರ್ಜಿಂಗ್ ಮತ್ತು ಎಸಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ನಿರ್ಧರಿಸಲಾಗಿದ್ದು, ಮುಂದಿನ 2 ವರ್ಷದಲ್ಲಿ 2 ಸಾವಿರಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ಗಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳಿಗೆ ಚಾಲನೆ ನೀಡಲು ನಿರ್ಧರಿಸಲಾಗಿದೆ.

Most Read Articles

Kannada
English summary
Haryana government announces ev policy to offer subsidy and discount on ev purchase
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X