Just In
- 2 hrs ago
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- 4 hrs ago
ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ
- 4 hrs ago
ಸಿಎನ್ಜಿ ವರ್ಷನ್ನಲ್ಲೂ ಬಿಡುಗಡೆಯಾಗಲಿದೆ ಸ್ಕೋಡಾ ರ್ಯಾಪಿಡ್ ಸೆಡಾನ್
- 4 hrs ago
ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ
Don't Miss!
- News
ಪೆಟ್ರೋಲ್, ಡೀಸೆಲ್ ದರ ಏರಿಕೆ: ಕೇಂದ್ರಕ್ಕೆ ಬಿಸಿ ಮುಟ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ
- Movies
ಬಿಗ್ಬಾಸ್: ಪ್ರಶಾಂತ್ ಸಂಬರ್ಗಿ ಮೇಲೆ ಉರಿದು ಬಿದ್ದ ಮನೆ ಸದಸ್ಯರು
- Education
UAS Dharwad Recruitment 2021: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮಾ.10ಕ್ಕೆ ನೇರ ಸಂದರ್ಶನ
- Sports
ಐಎಸ್ಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಆಟೋ, ಟ್ಯಾಕ್ಸಿಗಳ ಮೋಟಾರು ವಾಹನ ತೆರಿಗೆಯನ್ನು ಮನ್ನಾ ಮಾಡಿದ ಸರ್ಕಾರ
ದೆಹಲಿ-ಎನ್‌ಸಿಆರ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಆಟೋಗಳು, ಟ್ಯಾಕ್ಸಿಗಳ ಮೋಟಾರು ವಾಹನ ತೆರಿಗೆಯನ್ನು ಹರಿಯಾಣ ಸರ್ಕಾರವು ಮನ್ನಾ ಮಾಡಿದೆ. ಇದರಿಂದಾಗಿ ಆ ಪ್ರದೇಶದ ಜನರಿಗೆ ಸಾರಿಗೆ ಮಾರ್ಗಗಳನ್ನು ಕಂಡುಹಿಡಿಯುವಲ್ಲಿ ತೊಂದರೆಗಳಾಗುವುದು ತಪ್ಪಲಿದೆ.

ಬುಧವಾರ ನಡೆದ ಹರಿಯಾಣ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಾರಿಗೆ ಸೇವೆಯನ್ನು ಬಲಪಡಿಸುವುದು ಇದರ ಹಿಂದಿರುವ ಮುಖ್ಯ ಉದ್ದೇಶವಾಗಿದೆ. ಈ ವಿನಾಯಿತಿಯನ್ನು ಎನ್‌ಸಿಆರ್ ರಾಜ್ಯಗಳಿಗೆ ನೀಡುವ ಗುತ್ತಿಗೆ ಕ್ಯಾರೇಜ್ ಲೈಸೆನ್ಸ್ ಅಡಿಯಲ್ಲಿ ನೀಡಲಾಗುತ್ತದೆ. ಈ ವಿನಾಯಿತಿ ಪರಸ್ಪರ ಸಾಮಾನ್ಯ ಸಾರಿಗೆ ಒಪ್ಪಂದದಡಿಯಲ್ಲಿ ಬರುತ್ತದೆ.

ಸದ್ಯಕ್ಕೆ ಹರಿಯಾಣದಲ್ಲಿ ನೋಂದಣಿಯಾಗಿ ಆರ್‌ಸಿಟಿಎ ಅಡಿಯಲ್ಲಿ ಪರವಾನಗಿ ಹೊಂದಿರುವ ಆಟೋ ಹಾಗೂ ಟ್ಯಾಕ್ಸಿಗಳು ಎನ್‌ಸಿಆರ್ ರಾಜ್ಯಗಳಾದ ಉತ್ತರ ಪ್ರದೇಶ, ರಾಜಸ್ಥಾನ ಹಾಗೂ ದೆಹಲಿಯಲ್ಲಿ ಚಾಲನೆ ಮಾಡಲು ಯಾವುದೇ ತೆರಿಗೆಯನ್ನು ಪಾವತಿಸಬೇಕಾಗಿಲ್ಲ.
MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಈ ಕುರಿತು ಸರ್ಕಾರವು ಹೊರಡಿಸಿರುವ ಹೇಳಿಕೆಯಲ್ಲಿ, ಈ ನಿರ್ಧಾರವು ಹರಿಯಾಣ ಹೊರತುಪಡಿಸಿ ಎನ್‌ಸಿಆರ್ ರಾಜ್ಯಗಳಲ್ಲಿ ಕಾರ್ಯನಿರ್ವಹಿಸುವ ಟ್ಯಾಕ್ಸಿ, ಆಟೋಗಳಿಗೆ ಒಂದೇ ರೀತಿಯ ಮೋಟಾರು ವಾಹನ ತೆರಿಗೆಯಲ್ಲಿ ವಿನಾಯಿತಿ ನೀಡಲಿದೆ ಎಂದು ಹೇಳಿದೆ.

ಇನ್ನು ಮುಂದೆ ಎನ್‌ಸಿಆರ್ ವಾಹನಗಳಿಗೆ ಹರಿಯಾಣದಲ್ಲಿ ಯಾವುದೇ ತೆರಿಗೆ ವಿಧಿಸುವುದಿಲ್ಲ. ಇದು ಸಂಚಾರ ದಟ್ಟಣೆಯನ್ನು ನಿವಾರಿಸುವುದಲ್ಲದೆ, ಗ್ರಾಹಕರ ಮೇಲೆ ಉಂಟಾಗುವ ಭಾರವನ್ನು ಕಡಿಮೆ ಮಾಡಿ, ಸಾರಿಗೆ ವ್ಯವಸ್ಥೆಯನ್ನು ಸುಧಾರಿಸುತ್ತದೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ವಿನಾಯಿತಿ ನೀಡಲಾಗುತ್ತಿದೆಯಾದರೂ ಸಾರ್ವಜನಿಕ ಸಾರಿಗೆಯನ್ನು ಸುಧಾರಿಸಲು ಸಹ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಕರೋನಾ ಅವಧಿಯಲ್ಲಿ ಸಣ್ಣ ವಾಹನಗಳು ಭಾರಿ ಪ್ರಮಾಣದ ನಷ್ಟವನ್ನು ಅನುಭವಿಸಿವೆ.

ಈ ಪರಿಸ್ಥಿತಿಯಲ್ಲಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿದೆ. ದೆಹಲಿ ಎನ್‌ಸಿಆರ್ ಬಗ್ಗೆ ಹೇಳುವುದಾದರೆ, ದೆಹಲಿಯ ಬಹುತೇಕ ಪ್ರದೇಶಗಳಲ್ಲಿ ಮೆಟ್ರೋ ಸಂಚಾರವನ್ನು ಪುನರಾರಂಭಿಸಲಾಗಿದೆ. ಮೆಟ್ರೋ ರೈಲು ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿಯೂ ಕಾರ್ಯನಿರ್ವಹಿಸುತ್ತದೆ.
MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಇತ್ತೀಚೆಗೆ ಸುಪ್ರೀಂ ಕೋರ್ಟ್ ದೇಶಾದ್ಯಂತ ಎಲೆಕ್ಟ್ರಿಕ್ ರಿಕ್ಷಾಗಳ ನೋಂದಣಿಯನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಈ ಬಗ್ಗೆ ಆದೇಶ ನೀಡಿರುವ ಸುಪ್ರೀಂ ಕೋರ್ಟ್,ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ರಿಕ್ಷಾಗಳನ್ನು ನೋಂದಾಯಿಸುವುದನ್ನು ನಿಷೇಧಿಸಿದೆ.