ಹೋಂಡಾ ಅಮೇಜ್ ಫೇಸ್‌ಲಿಫ್ಟ್ ಖರೀದಿಗಾಗಿ ಡೀಲರ್ಸ್ ಮಟ್ಟದ ಬುಕ್ಕಿಂಗ್ ಆರಂಭ

ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ಶೀಘ್ರದಲ್ಲೇ ತನ್ನ ಅಮೇಜ್ ಕಾರಿನ ಫೇಸ್‌ಲಿಫ್ಟ್ ಆವೃತ್ತಿಯನ್ನು ಬಿಡುಗಡೆ ಮಾಡಲು ಸಿದ್ದವಾಗಿದ್ದು, ಹೊಸ ಕಾರಿನ ಬುಕ್ಕಿಂಗ್ ಪ್ರಕ್ರಿಯೆಯು ಈಗಾಗಲೇ ಆಯ್ದ ಕಾರ್ ಡೀಲರ್ಸ್‌ಗಳಲ್ಲಿ ಆರಂಭವಾಗಿದೆ.

ಹೋಂಡಾ ಅಮೇಜ್ ಫೇಸ್‌ಲಿಫ್ಟ್ ಖರೀದಿಗಾಗಿ ಡೀಲರ್ಸ್ ಮಟ್ಟದ ಬುಕ್ಕಿಂಗ್ ಆರಂಭ

ಅಮೇಜ್ ಫೇಸ್‌ಲಿಫ್ಟ್ ಕಾರು ಮಾದರಿಯ ಖರೀದಿಗಾಗಿ ಹೋಂಡಾ ಕಂಪನಿಯು ಇದುವರೆಗೂ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆ ಘೋಷಣೆ ಮಾಡಿಲ್ಲವಾದರೂ ಆಸಕ್ತ ಗ್ರಾಹಕರಿಂದ ಪ್ರಮುಖ ಡೀಲರ್ಸ್‌ಗಳಲ್ಲಿ ಮುಂಗಡ ಪಾವತಿ ಸ್ವಿಕರಿಸುತ್ತಿದ್ದು, ಹೊಸ ಕಾರು ಅಗಸ್ಟ್ 17ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ.

ಹೋಂಡಾ ಅಮೇಜ್ ಫೇಸ್‌ಲಿಫ್ಟ್ ಖರೀದಿಗಾಗಿ ಡೀಲರ್ಸ್ ಮಟ್ಟದ ಬುಕ್ಕಿಂಗ್ ಆರಂಭ

ಕಂಪ್ಯಾಕ್ಟ್ ಸೆಡಾನ್ ಮಾದರಿದಗಳ ಮಾರಾಟದಲ್ಲಿ ಉತ್ತಮ ಬೇಡಿಕೆ ಹೊಂದಿರುವ ಅಮೇಜ್ ಕಾರು ಫೇಸ್‌ಲಿಫ್ಟ್ ಮಾದರಿಯೊಂದಿಗೆ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿನ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಸುಧಾರಿತ ತಂತ್ರಜ್ಞಾನ ಸೌಲಭ್ಯಗಳನ್ನು ಹೊಂದಿರಲಿದೆ.

ಹೋಂಡಾ ಅಮೇಜ್ ಫೇಸ್‌ಲಿಫ್ಟ್ ಖರೀದಿಗಾಗಿ ಡೀಲರ್ಸ್ ಮಟ್ಟದ ಬುಕ್ಕಿಂಗ್ ಆರಂಭ

ಅಮೇಜ್ ಫೇಸ್‌ಲಿಫ್ಟ್ ಆವೃತ್ತಿಯಲ್ಲಿ ಹೋಂಡಾ ಕಂಪನಿಯು ಹೊಸ ವಿನ್ಯಾಸದ 16-ಇಂಚಿನ ಅಲಾಯ್ ವ್ಹೀಲ್, ಮರು ವಿನ್ಯಾಸಗೊಳಿಸಲಾದ ಫ್ರಂಟ್ ಮತ್ತು ರಿಯರ್ ಬಂಪರ್, ಆಯ್ದ ವೆರಿಯೆಂಟ್‌ಗಳಲ್ಲಿ ಎಲೆಕ್ಟ್ರಿಕ್ ಸನ್‌ರೂಫ್, ಹೈ ಎಂಡ್ ಮಾದರಿಗಳಲ್ಲಿ ಕನೆಕ್ಟೆಡ್ ಫೀಚರ್ಸ್ ಜೋಡಣೆ ಮಾಡಲಿದೆ.

ಹೋಂಡಾ ಅಮೇಜ್ ಫೇಸ್‌ಲಿಫ್ಟ್ ಖರೀದಿಗಾಗಿ ಡೀಲರ್ಸ್ ಮಟ್ಟದ ಬುಕ್ಕಿಂಗ್ ಆರಂಭ

ಹೊಸ ಕಾರಿನಲ್ಲಿ ಡ್ಯುಯಲ್ ಟೋನ್ ಬಣ್ಣಗಳನ್ನು ಸಹ ನೀಡಲಾಗುತ್ತಿದ್ದು, ಕಂಪ್ಯಾಕ್ಟ್ ಸೆಡಾನ್ ಮಾದರಿಯು ಮತ್ತಷ್ಟು ಆಕರ್ಷಕವಾಗಿದೆ. ಆದರೆ ಹೊಸ ಕಾರಿನಲ್ಲಿ ಈ ಹಿಂದಿನಂತೆಯೇ ಎಂಜಿನ್ ಆಯ್ಕೆ ಮುಂದುವರಿಯಲಿದ್ದು, ಹೊಸ ಬದಲಾವಣೆಗಳೊಂದಿಗೆ ಅಮೇಜ್ ಕಾರು ಮತ್ತಷ್ಟು ದುಬಾರಿಯಾಗಲಿದೆ.

ಹೋಂಡಾ ಅಮೇಜ್ ಫೇಸ್‌ಲಿಫ್ಟ್ ಖರೀದಿಗಾಗಿ ಡೀಲರ್ಸ್ ಮಟ್ಟದ ಬುಕ್ಕಿಂಗ್ ಆರಂಭ

ಸದ್ಯ ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಯಲ್ಲೂ ಅಮೇಜ್ ಕಾರು ಖರೀದಿಗೆ ಲಭ್ಯವಿದ್ದು, ಪ್ರತಿ ಮಾದರಿಯಲ್ಲೂ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

ಹೋಂಡಾ ಅಮೇಜ್ ಫೇಸ್‌ಲಿಫ್ಟ್ ಖರೀದಿಗಾಗಿ ಡೀಲರ್ಸ್ ಮಟ್ಟದ ಬುಕ್ಕಿಂಗ್ ಆರಂಭ

ಅಮೇಜ್ ಕಾರಿನಲ್ಲಿ ವಿವಿಧ ಸೌಲಭ್ಯಗಳನ್ನು ಹೊಂದಿರುವ ಪ್ರಮುಖ ಸ್ಪೆಷಲ್ ಎಡಿಷನ್‌ಗಳಲ್ಲೂ ಮಾರಾಟವಾಗುತ್ತಿದ್ದು, ಇದೀಗ ಬಿಡುಗಡೆಗೆ ಸಿದ್ದವಾಗಿರುವ ಫೇಸ್‌ಲಿಫ್ಟ್ ಮಾದರಿಯು ಸಾಕಷ್ಟು ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ.

ಹೋಂಡಾ ಅಮೇಜ್ ಫೇಸ್‌ಲಿಫ್ಟ್ ಖರೀದಿಗಾಗಿ ಡೀಲರ್ಸ್ ಮಟ್ಟದ ಬುಕ್ಕಿಂಗ್ ಆರಂಭ

ಅಮೇಜ್ ಕಾರಿನಲ್ಲಿ ಎಂಜಿನ್ ಆಯ್ಕೆಗೆ ಅನುಗುಣವಾಗಿ ಇ, ಎಸ್, ವಿ ಮತ್ತು ವಿಎಕ್ಸ್ ವೆರಿಯೆಂಟ್‌ಗಳಲ್ಲಿ ಮಾರಾಟಗೊಳ್ಳುತ್ತಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.22 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.9.99 ಲಕ್ಷ ಬೆಲೆ ಹೊಂದಿದೆ.

ಹೋಂಡಾ ಅಮೇಜ್ ಫೇಸ್‌ಲಿಫ್ಟ್ ಖರೀದಿಗಾಗಿ ಡೀಲರ್ಸ್ ಮಟ್ಟದ ಬುಕ್ಕಿಂಗ್ ಆರಂಭ

ಪೆಟ್ರೋಲ್ ಮಾದರಿಯು 1.2-ಲೀಟರ್ ಎಂಜಿನ್ ಹೊಂದಿದ್ದರೆ ಡೀಸೆಲ್ ಮಾದರಿಯು 1.-5-ಲೀಟರ್ ಎಂಜಿನ್ ಆಯ್ಕೆ ಹೊಂದಿದ್ದು, ಪ್ರತಿ ಮಾದರಿಯಲ್ಲೂ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಆವೃತ್ತಿಗಳನ್ನು ನೀಡಲಾಗುತ್ತಿದೆ.

ಹೋಂಡಾ ಅಮೇಜ್ ಫೇಸ್‌ಲಿಫ್ಟ್ ಖರೀದಿಗಾಗಿ ಡೀಲರ್ಸ್ ಮಟ್ಟದ ಬುಕ್ಕಿಂಗ್ ಆರಂಭ

1.2-ಲೀಟರ್ ಪೆಟ್ರೋಲ್ ಎಂಜಿನ್ 89-ಬಿಎಚ್‌ಪಿ ಮತ್ತು 110-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, 1.5-ಲೀಟರ್ ಡೀಸೆಲ್ ಮಾದರಿಯು ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 79-ಬಿಎಚ್‌ಪಿ ಮತ್ತು 160-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಅತ್ಯುತ್ತಮ ಇಂಧನ ದಕ್ಷತೆ ಹೊಂದಿದೆ.

ಹೋಂಡಾ ಅಮೇಜ್ ಫೇಸ್‌ಲಿಫ್ಟ್ ಖರೀದಿಗಾಗಿ ಡೀಲರ್ಸ್ ಮಟ್ಟದ ಬುಕ್ಕಿಂಗ್ ಆರಂಭ

ಹೊಸ ಎಮಿಷನ್ ಅನುಸಾರವಾಗಿ ಬಿಎಸ್-6 ಎಂಜಿನ್ ಆಯ್ಕೆ ಪಡೆದುಕೊಂಡಿರುವ ಅಮೇಜ್ ಕಂಪ್ಯಾಕ್ಟ್ ಸೆಡಾನ್ ಮಾದರಿಯು ಹ್ಯುಂಡೈ ಔರಾ, ಮಾರುತಿ ಸುಜುಕಿ ಡಿಜೈರ್, ಫೋರ್ಡ್ ಆಸ್ಪೈರ್, ಟಾಟಾ ಟಿಗೋರ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡುತ್ತಿದ್ದು, ಕಂಪ್ಯಾಕ್ಟ್ ಸೆಡಾನ್ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಡಿಜೈರ್ ನಂತರ ಎರಡನೇ ಸ್ಥಾನದಲ್ಲಿದೆ.

Most Read Articles

Kannada
Read more on ಹೋಂಡಾ honda
English summary
Honda Amaze Facelift Unofficial Bookings Start. Read in Kannada.
Story first published: Sunday, July 25, 2021, 14:02 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X