ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಿಸಿದ ಹೋಂಡಾ
ಕೋವಿಡ್ ಪರಿಣಾಮ ತಗ್ಗಿರುವ ಹೊಸ ವಾಹನ ಮಾರಾಟವನ್ನು ಉತ್ತೇಜಿಸಲು ಯತ್ನಿಸುತ್ತಿರುವ ಆಟೋ ಉತ್ಪದನಾ ಕಂಪನಿಗಳು ವಿವಿಧ ವಾಹನ ಖರೀದಿ ಮೇಲೆ ಆಕರ್ಷಕ ಆಫರ್‌ಗಳನ್ನು ಘೋಷಣೆ ಮಾಡುತ್ತಿದ್ದು, ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ಸಹ ತನ್ನ ಪ್ರಮುಖ ಖರೀದಿ ಮೇಲೆ ಹಲವಾರು ಆಫರ್‌ಗಳನ್ನು ನೀಡುತ್ತಿದೆ.

ಕಳೆದ ವರ್ಷದ ಆರಂಭದಲ್ಲಿ ಕೋವಿಡ್ ಪರಿಣಾಮ ಕನಿಷ್ಠ ಪ್ರಮಾಣದ ಹೊಸ ವಾಹನಗಳನ್ನು ಮಾರಾಟ ಮಾಡಿದ್ದ ವಾಹನ ಕಂಪನಿಗಳಿಗೆ ಈ ವರ್ಷದ ಆರಂಭದಲ್ಲಿ ಭಾರೀ ಪ್ರಮಾಣದ ಬೇಡಿಕೆ ಹರಿದುಬಂದಿತ್ತು. ಆದರೆ ಇದೀಗ ಕೋವಿಡ್ 2ನೇ ಅಲೆ ಪರಿಣಾಮ ಕುಸಿದಿರುವ ವಾಹನ ಮಾರಾಟವು ಇದೀಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ವಾಹನ ಮಾರಾಟವನ್ನು ಸುಧಾರಿಸಲು ಗ್ರಾಹಕರಿಗೆ ಹಲವಾರು ಕೊಡುಗೆಗಳನ್ನು ಪ್ರಕಟಿಸಲಾಗುತ್ತಿದೆ.

ಹೊಸ ವಾಹನ ಮಾರಾಟವನ್ನು ಸುಧಾರಿಸುವ ನಿಟ್ಟಿನಲ್ಲಿ ಪ್ರಮುಖ ಕಾರು ಕಂಪನಿಗಳು ಹೊಸ ಆಫರ್‌ಗಳನ್ನು ಘೋಷಣೆ ಮಾಡುತ್ತಿದ್ದು, ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ಕೂಡಾ ವಿವಿಧ ಆಫರ್‌ಗಳನ್ನು ನೀಡುತ್ತಿದೆ.

ಮಧ್ಯಮ ಕ್ರಮಾಂಕದ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹೋಂಡಾ ಕಾರು ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಅಮೇಜ್, ಜಾಝ್, ಡಬ್ಲ್ಯುಆರ್-ವಿ, ಸಿಟಿ ಸೇರಿದಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿದ್ದು, ಎಲ್ಲಾ ಮಾದರಿಗಳಿಗೂ ಆಫರ್ ನೀಡುತ್ತಿದೆ.

ಹೋಂಡಾ ಕಂಪನಿಯ ಹೊಸ ಆಫರ್‌ಗಳು ಈ ತಿಂಗಳಾಂತ್ಯವರೆಗೆ ಲಭ್ಯವಿರಲಿದ್ದು, ಅಮೇಜ್ ಕಂಪ್ಯಾಕ್ಟ್ ಸೆಡಾನ್, ಜಾಝ್ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮತ್ತು ಡಬ್ಲ್ಯುಆರ್-ವಿ ಕಾರುಗಳ ಮೇಲೆ ಗರಿಷ್ಠ ರೂ.57 ಸಾವಿರ ತನಕ ಡಿಸ್ಕೌಂಟ್ ನೀಡುತ್ತಿದೆ.

ಅಮೇಜ್ ಕಂಪ್ಯಾಕ್ಟ್ ಸೆಡಾನ್ ಕಾರು ಖರೀದಿಯ ಮೇಲೆ ಹೋಂಡಾ ಕಂಪನಿಯು ಎಎಂಟಿ ವರ್ಷನ್ ಸೇರಿದಂತೆ ಎಲ್ಲಾ ಮಾದರಿಗಳ ಮೇಲೂ ರೂ. 57 ಸಾವಿರ ತನಕ ಆಫರ್ ನೀಡುತ್ತಿದ್ದು, ಹೊಸ ಆಫರ್‌ಗಳಲ್ಲಿ ಕ್ಯಾಶ್‌ಬ್ಯಾಕ್, ಎಕ್ಸ್‌ಚೆಂಜ್ ಸೇರಿದಂತೆ ಆಕ್ಸೆಸರಿಸ್ ಪ್ಯಾಕೇಜ್ ಪಡೆದುಕೊಳ್ಳಬಹುದಾಗಿದೆ.

ಹೊಸ ಆಫರ್ ಕ್ರಾಸ್ಒವರ್ ಎಸ್‌ಯುುವಿ ಕಾರು ಮಾದರಿಯಾದ ಡಬ್ಲ್ಯುಆರ್-ವಿ ಮಾದರಿಯ ಎಲ್ಲಾ ಪೆಟ್ರೋಲ್ ಮತ್ತು ಡೀಸೆಲ್ ರೂಪಾಂತರಗಳ ಮೇಲೂ ಹೋಂಡಾ ಕಂಪನಿಯು ರೂ. 34,058 ಆಫರ್ ನೀಡುತ್ತಿದ್ದು, ಇದರಲ್ಲಿ ಕ್ಯಾಶ್ ಬ್ಯಾಕ್ ಸೇರಿದಂತೆ ಉಚಿತ ಆಕ್ಸೆಸರಿಸ್ ಪ್ಯಾಕೇಜ್ ನೀಡುತ್ತಿದೆ.

ಇನ್ನು ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಮಾದರಿಯಾದ ಹೋಂಡಾ ಜಾಝ್ ಮಾದರಿಯು ಎಲ್ಲಾ ರೂಪಾಂತರಗಳ ಮೇಲೂ ಗ್ರಾಹಕರಿಗೆ ರೂ. 34,095 ತನಕ ಆಫರ್ ಲಭ್ಯವಿದ್ದು, ಇದರಲ್ಲಿ ರೂ. 5 ಸಾವಿರ ಕ್ಯಾಶ್ ಬ್ಯಾಕ್ ಆಫರ್ ಸೇರಿದಂತೆ, ಎಕ್ಸ್‌ಚೆಂಜ್, ಉಚಿತ ಆಕ್ಸೆಸರಿಸ್ ಪ್ಯಾಕೇಜ್ ಸಹ ಲಭ್ಯವಿರಲಿದೆ.

ಹೋಂಡಾ ಹೊಸ ಆಫರ್ ಸಿಟಿ ತಲೆಮಾರಿನ ಆವೃತ್ತಿಯ ಮೇಲೂ ಆಫರ್ ನೀಡುತ್ತಿದ್ದು, ನ್ಯೂ ಜನರೇಷನ್ ಸಿಟಿ ಕಾರಿನ ಮೇಲೆ ಯಾವುದೇ ಆಫರ್ ಲಭ್ಯವಿಲ್ಲ. ಹೋಂಡಾ ಕಂಪನಿಯು ನ್ಯೂ ಜನರೇಷನ್ ಸಿಟಿ ಮಾರಾಟದ ನಡುವೆಯೂ ಹಳೆಯ ಆವೃತ್ತಿಯ ಮಾರಾಟವನ್ನು ಮುಂದುವರಿಸಿದೆ.

ಹಳೆಯ ಸಿಟಿ ಸೆಡಾನ್ ಮಾದರಿಯು ಕೆಲವೇ ಕೆಲವು ವೆರಿಯೆಂಟ್‌ಗಳನ್ನು ಮಾತ್ರ ಖರೀದಿಗೆ ಲಭ್ಯವಿದ್ದು, ಕಂಪನಿಯು ಹೊಸ ಸಿಟಿ ಕಾರಿನ ಮೇಲೆ ರೂ. 22 ಸಾವಿರ ಆಫರ್ ನೀಡುತ್ತಿದೆ.

ಹೋಂಡಾ ಕಾರ್ಸ್ ಕಂಪನಿಯು ಹಳೆ ತಲೆಮಾರಿನ ಸಿಟಿ ಕಾರಿನ ಖರೀದಿಯ ರೂ. 5 ಸಾವಿರ ಕ್ಯಾಶ್‌ಬ್ಯಾಕ್ ಸೇರಿದಂತೆ ವಿವಿಧ ಆಫರ್ ನೀಡುತ್ತಿದ್ದು, ಹೊಸ ಸಿಟಿ ಕಾರಿನ ಮೇಲೆ ಯಾವುದೇ ಆಫರ್ ನೀಡಿಲ್ಲ.


Click it and Unblock the Notifications