ಅಕ್ಟೋಬರ್ ಅವಧಿಗಾಗಿ Honda ಕಾರುಗಳ ಖರೀದಿ ಮೇಲೆ ಆಕರ್ಷಕ ಡಿಸ್ಕೌಂಟ್
ಹೋಂಡಾ ಕಾರ್ಸ್ ಇಂಡಿಯಾ(Honda Cars India) ಕಾರು ಕಂಪನಿಯು ಪ್ರಮುಖ ಕಾರುಗಳ ಖರೀದಿ ಮೇಲೆ ಅಕ್ಟೋಬರ್ ಅವಧಿಗಾಗಿ ಆಕರ್ಷಕ ಡಿಸ್ಕೌಂಟ್ ನೀಡುತ್ತಿದ್ದು, ಹೋಂಡಾ ಕಾರ್ ಆಫರ್‌ಗಳು ಈ ತಿಂಗಳಾಂತ್ಯದ ತನಕ ಲಭ್ಯವಿರಲಿವೆ.

ಮುಂಬರುವ ಹಬ್ಬದ ಋುತುಗಳ ಸಂದರ್ಭದಲ್ಲಿ ಹೊಸ ವಾಹನಗಳ ಖರೀದಿಯನ್ನು ಉತ್ತೇಜಿಸಲು ಯತ್ನಿಸುತ್ತಿರುವ ಆಟೋ ಉತ್ಪಾದನಾ ಕಂಪನಿಗಳು ಪ್ರಮುಖ ವಾಹನಗಳ ಖರೀದಿ ಮೇಲೆ ಆಕರ್ಷಕ ಆಫರ್‌ಗಳನ್ನು ಘೋಷಣೆ ಮಾಡುತ್ತಿದ್ದು, ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ಸಹ ತನ್ನ ಪ್ರಮುಖ ಕಾರುಗಳ ಖರೀದಿ ಮೇಲೆ ಗರಿಷ್ಠ ಪ್ರಮಾಣದ ಉಳಿತಾಯದ ಆಫರ್‌ಗಳನ್ನು ನೀಡುತ್ತಿದೆ.

ಕೋವಿಡ್ ಪರಿಣಾಮ ಕನಿಷ್ಠ ಪ್ರಮಾಣದ ಹೊಸ ವಾಹನಗಳನ್ನು ಮಾರಾಟ ಮಾಡಿದ್ದ ವಾಹನ ಕಂಪನಿಗಳಿಗೆ ಇದೀಗ ಭಾರೀ ಪ್ರಮಾಣದ ಬೇಡಿಕೆ ಹರಿದುಬರುತ್ತಿದ್ದು, ಕುಸಿತ ಕಂಡಿದ್ದ ವಾಹನ ಮಾರಾಟವು ಸಾಕಷ್ಟು ಚೇತರಿಸಿಕೊಂಡಿದೆ.

ಹೀಗಾಗಿ ವಾಹನ ಮಾರಾಟವನ್ನು ಸುಧಾರಿಸಲು ವಿವಿಧ ವಾಹನ ಉತ್ಪಾದನಾ ಕಂಪನಿಗಳು ಗ್ರಾಹಕರಿಗೆ ಹಲವಾರು ಕೊಡುಗೆಗಳನ್ನು ಪ್ರಕಟಿಸಲಾಗುತ್ತಿದ್ದು, ಹೋಂಡಾ ಕಾರುಗಳ ಖರೀದಿ ಮೇಲೂ ಈ ತಿಂಗಳು ಹಲವಾರು ಆಫರ್ ನೀಡಲಾಗಿದೆ.

ಹೊಸ ವಾಹನ ಮಾರಾಟವನ್ನು ಸುಧಾರಿಸುವ ನಿಟ್ಟಿನಲ್ಲಿ ಪ್ರಮುಖ ಕಾರು ಕಂಪನಿಗಳು ಹೊಸ ಆಫರ್‌ಗಳನ್ನು ಘೋಷಣೆ ಮಾಡುತ್ತಿದ್ದು, ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ಕೂಡಾ ಹೆಚ್ಚಿನ ಮಟ್ಟದ ಡಿಸ್ಕೌಂಟ್, ಎಕ್ಸ್‌ಚೆಂಜ್ ಆಫರ್ ನೀಡುತ್ತಿದೆ.

ಮಧ್ಯಮ ಕ್ರಮಾಂಕದ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹೋಂಡಾ ಕಾರು ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಅಮೇಜ್(Amaze), ಜಾಝ್(Jazz), ಡಬ್ಲ್ಯುಆರ್-ವಿ(WR-V), ಸಿಟಿ(City) ಸೇರಿದಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿದ್ದು, ಎಲ್ಲಾ ಮಾದರಿಗಳ ಮೇಲೂ ಅಕ್ಟೋಬರ್ ಅವಧಿಯ ಆಫರ್ ಘೋಷಣೆ ಮಾಡಿದೆ.

ಹೋಂಡಾ ಕಂಪನಿಯ ಹೊಸ ಆಫರ್‌ಗಳು ಈ ತಿಂಗಳಾಂತ್ಯವರೆಗೆ ಲಭ್ಯವಿರಲಿದ್ದು, ಅಮೇಜ್ ಕಂಪ್ಯಾಕ್ಟ್ ಸೆಡಾನ್, ಜಾಝ್ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮತ್ತು ಡಬ್ಲ್ಯುಆರ್-ವಿ ಕಾರುಗಳ ಮೇಲೆ ಗರಿಷ್ಠ ರೂ.53 ಸಾವಿರ ತನಕ ಡಿಸ್ಕೌಂಟ್ ನೀಡುತ್ತಿದೆ.

ಅಮೇಜ್ ಕಂಪ್ಯಾಕ್ಟ್ ಸೆಡಾನ್ ಕಾರು ಖರೀದಿಯ ಮೇಲೆ ಹೋಂಡಾ ಕಂಪನಿಯು ಎಎಂಟಿ ವರ್ಷನ್ ಸೇರಿದಂತೆ ಎಲ್ಲಾ ಮಾದರಿಗಳ ಮೇಲೂ ರೂ. 18 ಸಾವಿರ ತನಕ ಆಫರ್ ನೀಡುತ್ತಿದ್ದು, ಹೊಸ ಆಫರ್‌ಗಳಲ್ಲಿ ಕ್ಯಾಶ್‌ಬ್ಯಾಕ್, ಎಕ್ಸ್‌ಚೆಂಜ್ ಸೇರಿದಂತೆ ಆಕ್ಸೆಸರಿಸ್ ಪ್ಯಾಕೇಜ್ ಪಡೆದುಕೊಳ್ಳಬಹುದಾಗಿದೆ.

ಹೋಂಡಾ ಕಂಪನಿಯು ಕಳೆದ ವಾರವಷ್ಟೇ 2021ರ ಅಮೇಜ್ ಮಾದರಿಯನ್ನು ಬಿಡುಗಡೆ ಮಾಡಿದ್ದು, ಹೊಸ ಆವೃತ್ತಿಯ ಮೇಲೆ ಯಾವುದೇ ಆಫರ್ ನೀಡುತ್ತಿಲ್ಲ. ಬದಲಾಗಿ 2020ರ ಮಾದರಿಯ ಮೇಲೆ ಮಾತ್ರ ಆಫರ್ ನೀಡುತ್ತಿದ್ದು, ಹಳೆಯ ಸ್ಟಾಕ್ ಮುಗಿಯುವ ತನಕ ಮಾತ್ರ ಈ ಆಫರ್ ಲಭ್ಯವಿರಲಿದೆ.

ಹೊಸ ಆಫರ್‌ಗಳಲ್ಲಿ ಕ್ರಾಸ್ಒವರ್ ಎಸ್‌ಯುುವಿ ಕಾರು ಮಾದರಿಯಾದ ಡಬ್ಲ್ಯುಆರ್-ವಿ ಮಾದರಿಯ ಎಲ್ಲಾ ಪೆಟ್ರೋಲ್ ಮತ್ತು ಡೀಸೆಲ್ ರೂಪಾಂತರಗಳ ಮೇಲೂ ಹೋಂಡಾ ಕಂಪನಿಯು ರೂ. 40 ಸಾವಿರ ತನಕ ಆಫರ್ ನೀಡುತ್ತಿದ್ದು, ಇದರಲ್ಲಿ ಕ್ಯಾಶ್ ಬ್ಯಾಕ್ ಸೇರಿದಂತೆ ಉಚಿತ ಆಕ್ಸೆಸರಿಸ್ ಪ್ಯಾಕೇಜ್ ನೀಡುತ್ತಿದೆ.

ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಮಾದರಿಯಾದ ಹೋಂಡಾ ಜಾಝ್ ಮಾದರಿಯ ಎಲ್ಲಾ ರೂಪಾಂತರಗಳ ಮೇಲೂ ಗ್ರಾಹಕರಿಗೆ ರೂ. 45 ಸಾವಿರ ತನಕ ಆಫರ್ ಲಭ್ಯವಿದ್ದು, ಇದರಲ್ಲಿ ರೂ. 15 ಸಾವಿರ ಕ್ಯಾಶ್ ಬ್ಯಾಕ್ ಆಫರ್ ಸೇರಿದಂತೆ, ಎಕ್ಸ್‌ಚೆಂಜ್, ಉಚಿತ ಆಕ್ಸೆಸರಿಸ್ ಪ್ಯಾಕೇಜ್ ಸಹ ಲಭ್ಯವಿರಲಿದೆ.

ಇನ್ನುಳಿದಂತೆ ಹೋಂಡಾ ಹೊಸ ಆಫರ್ ಸಿಟಿ ಸೆಡಾನ್ ಆವೃತ್ತಿಯ ಮೇಲೂ ಆಫರ್ ನೀಡುತ್ತಿದ್ದು, ಹೊಸ ಆಫರ್‌ಗಳಲ್ಲಿ ರೂ.53 ಸಾವಿರ ತನಕ ಆಫರ್ ಲಭ್ಯವಿವೆ.

ಹೋಂಡಾ ಕಂಪನಿಯು ಸದ್ಯ ನ್ಯೂ ಜನರೇಷನ್ ಸಿಟಿ ಮಾರಾಟದ ನಡುವೆಯೂ ನಾಲ್ಕನೇ ತಲೆಮಾರಿನ ಸಿಟಿ ಸೆಡಾನ್ ಕಾರಿನ ಮಾರಾಟವನ್ನು ಸಹ ಮುಂದುವರಿಸಿದ್ದು, ಹೊಸ ಸಿಟಿ ಮಾದರಿಯ ಮೇಲೆ ಕ್ಯಾಶ್‌ಬ್ಯಾಕ್, ಎಕ್ಸ್‌ಚೆಂಜ್ ಮತ್ತು ಆಕ್ಸೆಸರಿಸ್ ಒಳಗೊಂಡ ಆಫರ್ ಮತ್ತು ಹಳೆಯ ಸಿಟಿ ಸೆಡಾನ್ ಮಾದರಿಯ ಮೇಲೆ ಲಾಯಲ್ಟಿ ಬೋನಸ್, ಎಕ್ಸ್‌ಚೆಂಜ್ ಮತ್ತು ಕ್ಯಾಶ್‌ಬ್ಯಾಕ್ ಒಳಗೊಂಡು ರೂ.57 ಸಾವಿರ ಮೌಲ್ಯದ ಆಫರ್ ನೀಡುತ್ತಿದೆ.

ಸದ್ಯ ಖರೀದಿಗೆ ಲಭ್ಯವಿರುವ ಹಳೆಯ ತಲೆಮಾರಿನ ಸಿಟಿ ಸೆಡಾನ್ ಮಾದರಿಯು ಕೆಲವೇ ಕೆಲವು ವೆರಿಯೆಂಟ್‌ಗಳನ್ನು ಮಾತ್ರ ಖರೀದಿಗೆ ಲಭ್ಯವಿದ್ದು, ಹೊಸ ಸಿಟಿ ಕಾರು ಮಾದರಿಯು ಮಾತ್ರ ವಿವಿಧ ಎಂಜಿನ್ ಆಯ್ಕೆಗಳೊಂದಿಗೆ ಅತ್ಯುತ್ತಮ ಬೇಡಿಕೆ ಹೊಂದಿದೆ.

ಇನ್ನು ಹೋಂಡಾ ಕಂಪನಿಯು ಮುಂಬರುವ ದಿನಗಳಲ್ಲಿ ಫೇಸ್‌ಲಿಫ್ಟ್ ಅಮೇಜ್ ಕಾರಿನ ಮೂಲಕ ಮಾರಾಟವನ್ನು ಸುಧಾರಿಸುವ ನಿರೀಕ್ಷೆಯಿದ್ದು, ಉತ್ತಮ ಅಪ್‌ಗ್ರೇಡ್‌ಗಳೊಂದಿಗೆ ಬಂದಿರುವ ಕಂಪ್ಯಾಕ್ಟ್ ಸೆಡಾನ್ ಮಾದರಿಯು ಉತ್ತಮ ತಾಂತ್ರಿಕ ಅಂಶಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

2021ರ ಅಮೇಜ್ ಕಾರ್ 1.2-ಲೀಟರ್ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಮಾರಾಟ ಮಾಡಲಾಗುತ್ತಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.32 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 11.15 ಲಕ್ಷ ಬೆಲೆ ಹೊಂದಿದೆ.


Click it and Unblock the Notifications