ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ ಮಾಡಿದ ಹೋಂಡಾ
ಕೋವಿಡ್ ಪರಿಣಾಮ ಇಳಿಕೆಯಾಗಿರುವ ವಾಹನ ಮಾರಾಟವನ್ನು ಸುಧಾರಿಸಲು ಯತ್ನಿಸುತ್ತಿರುವ ಆಟೋ ಉತ್ಪದನಾ ಕಂಪನಿಗಳು ವಾಹನ ಖರೀದಿ ಮೇಲೆ ಆಕರ್ಷಕ ಆಫರ್‌ಗಳನ್ನು ಘೋಷಣೆ ಮಾಡುತ್ತಿದ್ದು, ಹೋಂಡಾ ಕಾರ್ಸ್ ಕಂಪನಿಯು ಸಹ ತನ್ನ ಪ್ರಮುಖ ಖರೀದಿ ಮೇಲೆ ಹಲವಾರು ಡಿಸ್ಕೌಂಟ್ ಆಫರ್ ನೀಡುತ್ತಿದೆ.

ಕಳೆದ ವರ್ಷದ ಆರಂಭದಲ್ಲಿ ಕೋವಿಡ್ ಪರಿಣಾಮ ಕನಿಷ್ಠ ಪ್ರಮಾಣದ ಹೊಸ ವಾಹನಗಳನ್ನು ಮಾರಾಟ ಮಾಡಿದ್ದ ವಾಹನ ಕಂಪನಿಗಳಿಗೆ ಕಳೆದ ಕೆಲ ತಿಂಗಳಿನಿಂದ ಭಾರೀ ಪ್ರಮಾಣದ ಬೇಡಿಕೆ ಹರಿದುಬಂದಿತ್ತು. ಆದರೆ ಇದೀಗ ಕೋವಿಡ್ 2ನೇ ಅಲೆ ಪರಿಣಾಮ ಮತ್ತೆ ಸಂಕಷ್ಟ ಎದುರಿಸುತ್ತಿದ್ದು, ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಹೊಸ ವಾಹನ ಖರೀದಿದಾರರು ಹೊಸ ಯೋಜನೆಯಿಂದ ಹಿಂದೆ ಸರಿಯುತ್ತಿರುವುದು ಆಟೋ ಕಂಪನಿಗಳಿಗೆ ಭಾರೀ ನಷ್ಟ ಭೀತಿ ಎದುರಾಗಿದೆ.

ವಾಹನ ಮಾರಾಟವನ್ನು ಸುಧಾರಿಸುವ ಈ ಹಿನ್ನಲೆಯಲ್ಲಿ ಪ್ರಮುಖ ಕಾರು ಕಂಪನಿಗಳು ಖರೀದಿ ಪ್ರಕ್ರಿಯೆ ಉತ್ತೇಜಿಸಲು ಹೊಸ ಹೊಸ ಆಫರ್‌ಗಳನ್ನು ಘೋಷಣೆ ಮಾಡುತ್ತಿದ್ದು, ಹೋಂಡಾ ಕೂಡಾ ವಿವಿಧ ಆಫರ್‌ಗಳನ್ನು ನೀಡುತ್ತಿದೆ.

ಹೋಂಡಾ ಕಂಪನಿಯ ಹೊಸ ಆಫರ್‌ಗಳು ಈ ತಿಂಗಳಾಂತ್ಯವರೆಗೆ ಲಭ್ಯವಿರಲಿದ್ದು, ಅಮೇಜ್ ಕಂಪ್ಯಾಕ್ಟ್ ಸೆಡಾನ್, ಜಾಝ್ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮತ್ತು ಡಬ್ಲ್ಯುಆರ್-ವಿ ಕಾರುಗಳ ಮೇಲೆ ಗರಿಷ್ಠ ರೂ.33 ಸಾವಿರ ತನಕ ಡಿಸ್ಕೌಂಟ್ ನೀಡುತ್ತಿದೆ.

ಅಮೇಜ್ ಕಂಪ್ಯಾಕ್ಟ್ ಸೆಡಾನ್ ಕಾರು ಖರೀದಿಯ ಮೇಲೆ ಹೋಂಡಾ ಕಂಪನಿಯು ಎಎಂಟಿ ವರ್ಷನ್ ಹೊರತುಪಡಿಸಿ ಇನ್ನುಳಿದ ಮಾದರಿಗಳ ಮೇಲೆ ರೂ.33,496 ಸಾವಿರ ಎಕ್ಸ್‌ಚೆಂಜ್ ಆಫರ್ ನೀಡಲಾಗುತ್ತಿದೆ. ಹೊಸ ಆಫರ್‌ಗಳಲ್ಲಿ ರೂ. 15 ಸಾವಿರ ಕ್ಯಾಶ್ ಬ್ಯಾಕ್ ಸೇರಿದಂತೆ ಎಕ್ಸ್‌ಚೆಂಜ್ ಆಫರ್‌ನೊಂದಿಗೆ ವಿವಿಧ ಉಳಿತಾಯ ಯೋಜನೆಗಳನ್ನು ಪ್ರಕಟಿಸಿದೆ.
MOST READ: ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

ಕ್ರಾಸ್ಒವರ್ ಎಸ್‌ಯುುವಿ ಕಾರು ಮಾದರಿಯಾದ ಡಬ್ಲ್ಯುಆರ್-ವಿ ಮಾದರಿಯ ಎಲ್ಲಾ ಪೆಟ್ರೋಲ್ ಮತ್ತು ಡೀಸೆಲ್ ರೂಪಾಂತರಗಳ ಮೇಲೂ ಹೋಂಡಾ ಕಂಪನಿಯು ರೂ. 22,158 ಆಫರ್ ನೀಡುತ್ತಿದ್ದು, ಇದರಲ್ಲಿ ರೂ.10 ಸಾವಿರ ಕ್ಯಾಶ್ ಬ್ಯಾಕ್ ಸೇರಿದಂತೆ ಆಕ್ಸೆಸರಿಸ್ ಪ್ಯಾಕೇಜ್ ನೀಡುತ್ತಿದೆ.

ಇನ್ನು ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಮಾದರಿಯಾದ ಹೋಂಡಾ ಜಾಝ್ ಮಾದರಿಯು ಎಲ್ಲಾ ರೂಪಾಂತರಗಳ ಮೇಲೂ ಗ್ರಾಹಕರಿಗೆ ರೂ. 21,908 ಆಫರ್ ಲಭ್ಯವಿದ್ದು, ಇದರಲ್ಲಿ ರೂ. 10 ಸಾವಿರ ಕ್ಯಾಶ್ ಬ್ಯಾಕ್ ಆಫರ್ ಸೇರಿದಂತೆ ಇನ್ನುಳಿದಂತೆ ಉಚಿತ ಆಕ್ಸೆಸರಿಸ್ ಲಭ್ಯವಿರಲಿದೆ.
MOST READ: ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವ ಮುನ್ನ ತಿಳಿದಿರಬೇಕಾದ ಪ್ರಮುಖ ಅಂಶಗಳಿವು

ಅಮೇಜ್ ಕಂಪ್ಯಾಕ್ಟ್ ಸೆಡಾನ್, ಜಾಝ್ ಹ್ಯಾಚ್‌ಬ್ಯಾಕ್, ಡಬ್ಲ್ಯುಆರ್-ವಿ ಕಾರುಗಳನ್ನು ಹೊರತುಪಡಿಸಿ ಇನ್ನುಳಿದ ಕಾರುಗಳ ಮೇಲೆ ಯಾವುದೇ ಆಫರ್ ಲಭ್ಯವಿಲ್ಲವಾದರೂ ಹೋಂಡಾ ಕಂಪನಿಯು ಗ್ರಾಹಕರಿಗೆ ಸರಳ ಸಾಲಸೌಲಭ್ಯಗಳನ್ನು ಖಾತ್ರಿಪಡಿಸುತ್ತಿದೆ.


Click it and Unblock the Notifications