Just In
- 1 hr ago
ಅನಾವರಣವಾಯ್ತು ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- 3 hrs ago
35 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಉಚಿತ ಲಸಿಕೆ ನೀಡಲು ಮುಂದಾದ ಟಿವಿಎಸ್ ಕಂಪನಿ
- 5 hrs ago
ವಾರದ ಪ್ರಮುಖ ಸುದ್ದಿ: ಏರ್ಬ್ಯಾಗ್ ಕಡ್ಡಾಯ, ಬಿಡುಗಡೆಗೆ ಸಜ್ಜಾದ ಸಿಟ್ರನ್, ಟೊಯೊಟಾ ನೌಕರರ ಮುಷ್ಕರ ಅಂತ್ಯ!
- 15 hrs ago
ವೆಂಟೊ ಟ್ರೆಂಡ್ಲೈನ್ ವೆರಿಯೆಂಟ್ ಬುಕ್ಕಿಂಗ್ ಪ್ರಕ್ರಿಯೆಗೆ ಸ್ಥಗಿತಗೊಳಿಸಿದ ಫೋಕ್ಸ್ವ್ಯಾಗನ್
Don't Miss!
- Movies
ದೀದಿ ಸಾಮ್ರಾಜ್ಯದಲ್ಲಿ ಕಮಲದ ಕೈ ಹಿಡಿದ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ
- Finance
ದಕ್ಷಿಣ ಭಾರತದ ಅತಿದೊಡ್ಡ ಆಭರಣ ರೀಟೈಲರ್ ಮೇಲೆ ಐಟಿ ದಾಳಿ
- News
ಚಿನ್ನ ಕಳ್ಳ ಸಾಗಾಣಿಕೆ ಅನುಮಾನ; 48 ಲಕ್ಷ ವಾಚ್ ಒಡೆದ ಅಧಿಕಾರಿಗಳು!
- Sports
ಐಪಿಎಲ್ 2021: ಅಧಿಕೃತ ವೇಳಾಪಟ್ಟಿ ಬಿಡುಗಡೆ, ಮೊದಲ ಪಂದ್ಯದಲ್ಲಿ ಆರ್ಸಿಬಿಗೆ ಮುಂಬೈ ಎದುರಾಳಿ
- Lifestyle
"ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?"
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕಾರುಗಳ ಬೆಲೆಯನ್ನು ಹೆಚ್ಚಿಸಿ ಹೊಸ ದರಪಟ್ಟಿ ಬಿಡುಗಡೆ ಮಾಡಿದ ಹೋಂಡಾ ಕಾರ್ಸ್
ಹೋಂಡಾ ಕಾರ್ಸ್ ಕಂಪನಿಯು ತನ್ನ ಪ್ರಮುಖ ಪ್ರಯಾಣಿಕ ಕಾರುಗಳ ಬೆಲೆಯನ್ನು ಹೆಚ್ಚಳ ಮಾಡಿದ್ದು, ಹೊಸ ದರವು ಇಂದಿನಿಂದಲೇ ಅನ್ವಯವಾಗುವಂತೆ ಹೊಸ ದರಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ.

ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿರುವ ಹೋಂಡಾ ಕಾರ್ಸ್ ಕಂಪನಿಯು ಉತ್ಪಾದನಾ ವೆಚ್ಚ ಹೆಚ್ಚಿರುವ ಹಿನ್ನಲೆಯಲ್ಲಿ ಬೆಲೆ ಹೆಚ್ಚಳ ಮಾಡಿರುವುದಾಗಿ ಹೇಳಿಕೊಂಡಿದ್ದು, ಕಾರುಗಳ ಬೆಲೆಗೆ ಅನುಗುಣವಾಗಿ ಶೇ.1 ರಿಂದ ಶೇ.2 ರಷ್ಟು ದರ ಹೆಚ್ಚಳ ಮಾಡಲಾಗಿದೆ. ಹೊಸ ದರಪಟ್ಟಿಯಲ್ಲಿ ಹೋಂಡಾ ವಿವಿಧ ಕಾರುಗಳು ಕನಿಷ್ಠ ರೂ. 5 ಸಾವಿರದಿಂದ ಗರಿಷ್ಠ ರೂ. 20 ಸಾವಿರ ತನಕ ದುಬಾರಿಯಾಗಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ದರ ಹೆಚ್ಚಿಸಲಾಗಿದೆ.

2020ರ ಅಗಸ್ಟ್‌ನಲ್ಲಿ ವಿವಿಧ ವಾಹನ ಮಾದರಿಗಳ ಬೆಲೆ ಹೆಚ್ಚಳ ಮಾಡಿದ್ದ ಬಹುತೇಕ ಆಟೋ ಕಂಪನಿಗಳು ಇದೀಗ ಮತ್ತೆ ಬೆಲೆ ಹೆಚ್ಚಳ ಮಾಡುತ್ತಿದ್ದು, ಹೋಂಡಾ ಕಾರ್ಸ್ ಕಂಪನಯು ಕೂಡಾ ತನ್ನ ಪ್ರಮುಖ ಕಾರುಗಳ ಬೆಲೆಯನ್ನು ಹೆಚ್ಚಳ ಮಾಡಿದೆ.

ಹೋಂಡಾ ಕಾರ್ಸ್ ಕಂಪನಿಯು ಫೆಬ್ರುವರಿ 1ರಿಂದಲೇ ಹೊಸ ಕಾರುಗಳ ಬೆಲೆ ಏರಿಕೆಯಾಗುವಂತೆ ಹೊಸ ದರ ನಿಗದಿಪಡಿಸಲಾಗಿದ್ದು, ನಾಲ್ಕನೇ ತಲೆಮಾರಿನ ಸಿಟಿ ಸೆಡಾನ್ ಪೆಟ್ರೋಲ್ ಮಾದರಿಯ ಬೆಲೆ ಹೊರತುಪಡಿಸಿ ಇನ್ನುಳಿದ ಎಲ್ಲಾ ಕಾರುಗಳ ಬೆಲೆಯಲ್ಲೂ ಹೆಚ್ಚಳವಾಗಿದೆ.

ಗ್ರಾಹಕರ ಬೇಡಿಕೆಯೆಂತೆ ವಿವಿಧ ಸೆಗ್ಮೆಂಟ್‌ನಲ್ಲಿ ಸದ್ಯ ಅಮೆಜ್, ಜಾಝ್, ಡಬ್ಲ್ಯುಆರ್-ವಿ, ಸಿಟಿ, ಸಿವಿಕ್ ಮತ್ತು ಸಿ-ಆರ್‌ವಿ ಕಾರುಗಳನ್ನು ಮಾರಾಟ ಮಾಡುತ್ತಿರುವ ಹೋಂಡಾ ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದ್ದು, ಹೋಂಡಾ ಹೊಸ ಕಾರುಗಳಲ್ಲಿ ಸದ್ಯ ನ್ಯೂ ಜನರೇಷನ್ ಸಿಟಿ ಸೆಡಾನ್ ಕಾರು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ಹೊಸ ದರ ಪಟ್ಟಿಯಲ್ಲಿ ಆರಂಭಿಕ ಕಾರು ಮಾದರಿಯಾದ ಅಮೇಜ್ ಕಂಪ್ಯಾಕ್ಟ್ ಸೆಡಾನ್ ಕಾರು ಕನಿಷ್ಠ ರೂ. 5 ಸಾವಿರ ಹೆಚ್ಚುವರಿ ಬೆಲೆ ಹೊಂದಿದ್ದು, ಹೊಸ ಕಾರು ಬೆಲೆ ಹೆಚ್ಚಳದ ನಂತರ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.22ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.99 ಲಕ್ಷ ಬೆಲೆ ಹೊಂದಿದೆ.

ಜಾಝ್ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಮಾದರಿಯು ಹೊಸದರಪಟ್ಟಿಯಲ್ಲಿ ಕನಿಷ್ಠ ರೂ. 5 ಸಾವಿರ ಹೆಚ್ಚುವರಿ ಬೆಲೆ ಹೊಂದಿದ್ದು, ಹೊಸ ಕಾರು ಬೆಲೆ ಹೆಚ್ಚಳದ ನಂತರ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.55 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.9.79 ಲಕ್ಷ ಬೆಲೆ ಹೊಂದಿದೆ.

ಡಬ್ಲ್ಯುಆರ್-ವಿ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಹೊಸದರಪಟ್ಟಿಯಲ್ಲಿ ರೂ. 5 ಸಾವಿರ ಹೆಚ್ಚುವರಿ ಬೆಲೆ ಹೊಂದಿದ್ದು, ಹೊಸ ಕಾರು ಬೆಲೆ ಹೆಚ್ಚಳದ ನಂತರ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.55 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 11.05 ಲಕ್ಷ ಬೆಲೆ ಹೊಂದಿದೆ.
MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಇನ್ನು ಹೊಸದರಪಟ್ಟಿಯಲ್ಲಿ 5ನೇ ತಲೆಮಾರಿನ ಸಿಟಿ ಕಾರು ಮಾದರಿಯು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ. 10 ಸಾವಿರದಿಂದ ರೂ.20 ಸಾವಿರದಷ್ಟು ಹೆಚ್ಚುವರಿ ಬೆಲೆ ಹೊಂದಿದ್ದು, ಹೊಸ ಕಾರು ಬೆಲೆ ಹೆಚ್ಚಳದ ನಂತರ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 10.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.14.89 ಲಕ್ಷ ಬೆಲೆ ಹೊಂದಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಹೋಂಡಾ ಕಾರ್ಸ್ ಕಂಪನಿಯು ಮಾರುಕಟ್ಟೆಯಲ್ಲಿ ಸದ್ಯ 5ನೇ ತಲೆಮಾರಿನ ಸಿಟಿ ಸೆಡಾನ್ ಮಾರಾಟ ಹೊಂದಿದ್ದರು ಈ ಹಿಂದಿನ 4ನೇ ತಲೆಮಾರಿನ ಸಿಟಿ ಸೆಡಾನ್ ಮಾದರಿಯ ಪೆಟ್ರೋಲ್ ಆವೃತ್ತಿಯ ಮಾರಾಟವನ್ನು ಮುಂದುವರಿಸಿದ್ದು, ನಾಲ್ಕನೇ ತಲೆಮಾರಿನ ಆವೃತ್ತಿಯಲ್ಲಿ ಯಾವುದೇ ಬೆಲೆ ಬದಲಾವಣೆ ತರಲಾಗಿಲ್ಲ.