ಮಾರ್ಚ್ ತಿಂಗಳಿನಲ್ಲಿ 7,103 ಕಾರುಗಳನ್ನು ಮಾರಾಟ ಮಾಡಿದ ಹೋಂಡಾ

ಜಪಾನ್ ಮೂಲದ ವಾಹನ ತಯಾರಕ ಕಂಪನಿಯಾದ ಹೋಂಡಾ ಕಾರ್ಸ್ 2021ರ ಮಾರ್ಚ್ ತಿಂಗಳಿನ ಕಾರು ಮಾರಾಟ ವರದಿಯನ್ನು ಬಹಿರಂಗಪಡಿಸಿದೆ. ಈ ವರದಿಯ ಪ್ರಕಾರ, ಹೋಂಡಾ ಕಂಪನಿಯು ಕಳೆದ ತಿಂಗಳು ದೇಶಿಯ ಮಾರುಕಟ್ಟೆಯಲ್ಲಿ 7,103 ಯುನಿಟ್‌ಗಳನ್ನು ಮಾರಾಟ ಮಾಡಿದೆ.

ಮಾರ್ಚ್ ತಿಂಗಳಿನಲ್ಲಿ 7,103 ಕಾರುಗಳನ್ನು ಮಾರಾಟ ಮಾಡಿದ ಹೋಂಡಾ

ಕಳೆದ ವರ್ಷದ ಮಾರ್ಚ್ ತಿಂಗಳಿನಲ್ಲಿ ಹೋಂಡಾ ಕಂಪನಿಯು 3697 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.92 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಇನ್ನು ಕಳೆದ ವರ್ಷ ದೇಶದಲ್ಲಿ ಲಾಕ್ಡೌನ್ ಇದ್ದ ಕಾರಣ ಮಾರಾಟದಲ್ಲಿ ದೊಡ್ಡ ಕುಸಿತವನ್ನು ಕಂಡಿತ್ತು. ಇನ್ನು 2021ರ ಫೆಬ್ರವರಿಯಲ್ಲಿ ಹೋಂಡಾ 324 ಯುನಿಟ್‌ಗಳನ್ನು ಮಾರಾಟ ಮಾಡಿತು.

ಮಾರ್ಚ್ ತಿಂಗಳಿನಲ್ಲಿ 7,103 ಕಾರುಗಳನ್ನು ಮಾರಾಟ ಮಾಡಿದ ಹೋಂಡಾ

ಆದ್ದರಿಂದ ಇದು ತಿಂಗಳಿಗೊಮ್ಮೆ ಮಾರಾಟದಲ್ಲಿ ಶೇ.23 ರಷ್ಟು ಕುಸಿತವನ್ನು ಕಂಡಿದೆ. 20-21ರ ಹಣಕಾಸಿನ ವರ್ಷದಲ್ಲಿ ಹೋಂಡಾ ಕಂಪನಿಯು ಒಟ್ಟು 82,074 ಯುನಿಟ್‌ಗಳನ್ನು ಮಾರಾಟ ಮಾಡಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಮಾರ್ಚ್ ತಿಂಗಳಿನಲ್ಲಿ 7,103 ಕಾರುಗಳನ್ನು ಮಾರಾಟ ಮಾಡಿದ ಹೋಂಡಾ

ಹೋಂಡಾ ಕಾರ್ಸ್ ಇಂಡಿಯಾ ಲಿಮಿಟೆಡ್‌ನ ಹಿರಿಯ ಉಪಾಧ್ಯಕ್ಷ ಮತ್ತು ಮಾರ್ಕೆಟಿಂಗ್ ಮತ್ತು ಸೇಲ್ಸ್ ನಿರ್ದೇಶಕ ರಾಜೇಶ್ ಗೋಯೆಲ್ ಅವರು ಮಾತನಾಡಿ, ಹಣಕಾಸಿನ ವರ್ಷ 20-21 ಅಭೂತಪೂರ್ವ ವರ್ಷವಾಗಿದ್ದು, ಕೊರೊನಾ ಸವಾಲಿನ ನಡುವೆ ಉದ್ಯಮವು ಉತ್ತಮ ಸ್ಥಿರತೆ ತೋರಿಸಿತು ಮತ್ತು ಅನ್ಲಾಕ್ ಹಂತದಲ್ಲಿ ಸಾಕಷ್ಟು ಚೇತರಿಕೆ ಕಂಡಿದೆ.

ಮಾರ್ಚ್ ತಿಂಗಳಿನಲ್ಲಿ 7,103 ಕಾರುಗಳನ್ನು ಮಾರಾಟ ಮಾಡಿದ ಹೋಂಡಾ

ಹಣಕಾಸಿನ ವರ್ಷದ 2ನೇ ಭಾಗದಲ್ಲಿ 39% ನಷ್ಟು ಸಕಾರಾತ್ಮಕ ಬೆಳವಣಿಗೆಯನ್ನು ಕಾಣಲು ಎಚ್‌ಸಿಐಎಲ್‌ಗೆ ಸಹಾಯ ಮಾಡಿತು.ಗ್ರಾಹಕರ ಉತ್ತಮ ಪ್ರತಿಕ್ರಿಯೆಯಿಂದ ಮಾರುಕಟ್ಟೆಯಲ್ಲಿ ಹೊಸ ಚೈತನ್ಯವನ್ನು ಕಾಣುತ್ತಿದೆ ಎಂದು ಹೇಳಿದರು.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಮಾರ್ಚ್ ತಿಂಗಳಿನಲ್ಲಿ 7,103 ಕಾರುಗಳನ್ನು ಮಾರಾಟ ಮಾಡಿದ ಹೋಂಡಾ

ಹೋಂಡಾ ಕಂಪನಿಯು ಭಾರತದಲ್ಲಿ ತನ್ನ ಎರಡು ಹೊಸ ಹೈಬ್ರಿಡ್ ವಾಹನಗಳನ್ನು ಬಿಡುಗಡೆ ಮಾಡಲು ಯೋಜಿಸುತ್ತಿದೆ. ಈ ವರ್ಷದಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಹೋಂಡಾ ತನ್ನ ಸಿಟಿ ಹೈಬ್ರಿಡ್ ಸೆಡಾನ್ ಮತ್ತು ಹೆಚ್‌ಆರ್-ವಿ ಹೈಬ್ರಿಡ್ ಎಸ್‌ಯುವಿಯನ್ನು ಬಿಡುಗಡೆಗೊಳಿಸಲಿದೆ.

ಮಾರ್ಚ್ ತಿಂಗಳಿನಲ್ಲಿ 7,103 ಕಾರುಗಳನ್ನು ಮಾರಾಟ ಮಾಡಿದ ಹೋಂಡಾ

ಇದರಲ್ಲಿ ಹೋಂಡಾ ಸಿಟಿ ಹೈಬ್ರಿಡ್ ಕಾರು ಭಾರತದಲ್ಲಿ ದೀಪಾವಳಿ ಹಬ್ಬದ ಮೊದಲು ಬಿಡುಗಡೆಯಾಗಲಿದೆ. ಕೆಲವು ವರದಿಗಳ ಪ್ರಕಾರ ಈ ವರ್ಷದ ಮೇ ಅಥವಾ ಜೂನ್ ತಿಂಗಳಲ್ಲಿ ಬಿಡುಗಡೆಯಾಗಬಹುದು. ಹೋಂಡಾ ಸಿಟಿ ಹೈಬ್ರಿಡ್ ಮಾದರಿಯಲ್ಲಿ ಲ್ಟಿ-ಮೋಡ್ ಡ್ರೈವ್ (ಐ-ಎಂಎಂಡಿ) ಪವರ್‌ಟ್ರೇನ್ ಆಗಿದ್ದು ಅದು ಐ-ಡಿಸಿಡಿಯನ್ನು ಬದಲಾಯಿಸಿದೆ.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಮಾರ್ಚ್ ತಿಂಗಳಿನಲ್ಲಿ 7,103 ಕಾರುಗಳನ್ನು ಮಾರಾಟ ಮಾಡಿದ ಹೋಂಡಾ

ಇದರೊಂದಿಗೆ 1.5-ಲೀಟರ್ ಅಟ್ಕಿನ್ಸನ್-ಸೈಕಲ್ ಡಿಒಹೆಚ್‌ಸಿ ಐ-ವಿಟಿಇಸಿ ನಾಲ್ಕು-ಸಿಲಿಂಡರ್ ಎಂಜಿನ್ ಹೊಂದಿದೆ. ಈ ಎಂಜಿನ್ 98 ಬಿಹೆಚ್‍ಪಿ ಪವರ್ ಮತ್ತು 127 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ ಮತ್ತು ಎರಡು ಮೋಟರ್‌ಗಳಿಗೆ ಹೊಂದಿಕೆಯಾಗುತ್ತದೆ. ಇನ್ನು ಎಲೆಕ್ಟ್ರಿಕ್ ಮೋಟರ್ ಅಸಿಸ್ಟ್ ಜನರೇಟರ್ ಆಗಿ ಕಾರ್ಯನಿರ್ವಹಿಸುತ್ತದೆ ಮತ್ತು ಅದು ಸ್ಟಾರ್ಟರ್ ಆಗಿ ಕಾರ್ಯನಿರ್ವಹಿಸುತ್ತದೆ.

ಮಾರ್ಚ್ ತಿಂಗಳಿನಲ್ಲಿ 7,103 ಕಾರುಗಳನ್ನು ಮಾರಾಟ ಮಾಡಿದ ಹೋಂಡಾ

ಇನ್ನು ಹೋಂಡಾ ಈ ಹೆಚ್‌ಆರ್-ವಿ ಹೈಬ್ರಿಡ್ ಎಸ್‍ಯುವಿಯನ್ನು ಜಪಾನ್‌ನಲ್ಲಿ ಇತ್ತೀಚೆಗೆ ಅನಾವರಣಗೊಳಿಸಿತು. ಈ 2021ರ ಹೋಂಡಾ ಹೆಚ್‌ಆರ್-ವಿ ಹೈಬ್ರಿಡ್ ಎಸ್‍ಯುವಿಯು ಹೊಸ ನವೀಕರಣಗಳನ್ನು ಪಡೆದುಕೊಂಡಿದೆ. ಜಪಾನ್‌ನಲ್ಲಿ ಹೊಂಡಾ ಹೆಚ್‌ಆರ್-ವಿ ಎಸ್‍ಯುವಿಯು ಹೋಂಡಾ ವೆಜೆಲ್ ಎಂಬ ಹೆಸರಿನಲ್ಲಿ ಮಾರಾಟ ಮಾಡಲಾಗುತ್ತದೆ.

ಮಾರ್ಚ್ ತಿಂಗಳಿನಲ್ಲಿ 7,103 ಕಾರುಗಳನ್ನು ಮಾರಾಟ ಮಾಡಿದ ಹೋಂಡಾ

ಫೆಬ್ರವರಿ ತಿಂಗಳ ಮಾರಟಕ್ಕೆ ಹೋಲಿಸಿದರೆ ಹೋಂಡಾ ಕಾರುಗಳು ಮಾರಾಟದಲ್ಲಿ ಕುಸಿತವನ್ನು ಕಂಡಿದೆ. ಹೊಂಡಾ ಕಂಪನಿಗೆ ಮಾರಾಟದಲ್ಲಿ ಸಿಟಿ ಕಾರು ಹೆಚ್ಚಿನ ಕೊಡುಗೆಯನ್ನು ನೀಡುತ್ತಿದೆ. ಆದರೆ ಇದರ ಮಾದರಿಗಳು ಮಾರಾಟದಲ್ಲಿ ಹೆಚ್ಚಿನ ಕೊಡುಗೆಯನ್ನು ನೀಡುವಲ್ಲಿ ವಿಫಲವಾಗಿದೆ.

Most Read Articles

Kannada
Read more on ಹೋಂಡಾ honda
English summary
Honda Sales Down By 23% Month-On-Month. Read In Kannada.
Story first published: Thursday, April 1, 2021, 20:29 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X