ದೀಪಾವಳಿ ಆಫರ್: ಹೋಂಡಾ ಕಾರುಗಳ ಖರೀದಿ ಮೇಲೆ ಆಕರ್ಷಕ ಡಿಸ್ಕೌಂಟ್
ಹೋಂಡಾ ಕಾರ್ಸ್ ಇಂಡಿಯಾ(Honda Cars India) ಕಾರು ಕಂಪನಿಯು ಪ್ರಮುಖ ಕಾರುಗಳ ಖರೀದಿ ಮೇಲೆ ದೀಪಾವಳಿ ಸಂಭ್ರಮಕ್ಕಾಗಿ ಆಕರ್ಷಕ ಡಿಸ್ಕೌಂಟ್ ನೀಡುತ್ತಿದ್ದು, ಹೊಸ ಆಫರ್‌ಗಳು ಈ ತಿಂಗಳಾಂತ್ಯದ ತನಕ ಲಭ್ಯವಿರಲಿವೆ.

ದೀಪಾವಳಿ ವಿಶೇಷವಾಗಿ ಹೊಸ ವಾಹನಗಳ ಖರೀದಿಯನ್ನು ಉತ್ತೇಜಿಸಲು ಯತ್ನಿಸುತ್ತಿರುವ ಆಟೋ ಉತ್ಪಾದನಾ ಕಂಪನಿಗಳು ಪ್ರಮುಖ ವಾಹನಗಳ ಖರೀದಿ ಮೇಲೆ ಆಕರ್ಷಕ ಆಫರ್‌ಗಳನ್ನು ಘೋಷಣೆ ಮಾಡಿದ್ದು, ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ಸಹ ತನ್ನ ಪ್ರಮುಖ ಕಾರುಗಳ ಖರೀದಿ ಮೇಲೆ ಗರಿಷ್ಠ ಪ್ರಮಾಣದ ಉಳಿತಾಯದ ಆಫರ್‌ಗಳನ್ನು ನೀಡಿದೆ.

ಕೋವಿಡ್ ಪರಿಣಾಮ ಕನಿಷ್ಠ ಪ್ರಮಾಣದ ಹೊಸ ವಾಹನಗಳನ್ನು ಮಾರಾಟ ಮಾಡಿದ್ದ ವಾಹನ ಕಂಪನಿಗಳಿಗೆ ಇದೀಗ ಭಾರೀ ಪ್ರಮಾಣದ ಬೇಡಿಕೆ ಹರಿದುಬರುತ್ತಿದ್ದು, ಕುಸಿತ ಕಂಡಿದ್ದ ವಾಹನ ಮಾರಾಟವು ಸಾಕಷ್ಟು ಚೇತರಿಸಿಕೊಂಡಿದೆ.

ಹೀಗಾಗಿ ವಾಹನ ಮಾರಾಟವನ್ನು ಸುಧಾರಿಸಲು ವಿವಿಧ ವಾಹನ ಉತ್ಪಾದನಾ ಕಂಪನಿಗಳು ಗ್ರಾಹಕರಿಗೆ ಹಲವಾರು ಕೊಡುಗೆಗಳನ್ನು ಪ್ರಕಟಿಸಲಾಗುತ್ತಿದ್ದು, ಹೋಂಡಾ ಕಾರುಗಳ ಖರೀದಿ ಮೇಲೂ ಈ ತಿಂಗಳು ಹಲವಾರು ಆಫರ್ ನೀಡಲಾಗಿದೆ.

ಹೊಸ ವಾಹನ ಮಾರಾಟವನ್ನು ಸುಧಾರಿಸುವ ನಿಟ್ಟಿನಲ್ಲಿ ಪ್ರಮುಖ ಕಾರು ಕಂಪನಿಗಳು ಹೊಸ ಆಫರ್‌ಗಳನ್ನು ಘೋಷಣೆ ಮಾಡುತ್ತಿದ್ದು, ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ಕೂಡಾ ಹೆಚ್ಚಿನ ಮಟ್ಟದ ಡಿಸ್ಕೌಂಟ್, ಎಕ್ಸ್‌ಚೆಂಜ್ ಆಫರ್ ನೀಡುತ್ತಿದೆ.

ಮಧ್ಯಮ ಕ್ರಮಾಂಕದ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹೋಂಡಾ ಕಾರು ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಅಮೇಜ್(Amaze), ಜಾಝ್(Jazz), ಡಬ್ಲ್ಯುಆರ್-ವಿ(WR-V), ಸಿಟಿ(City) ಸೇರಿದಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿದ್ದು, ಎಲ್ಲಾ ಮಾದರಿಗಳ ಮೇಲೂ ಅಕ್ಟೋಬರ್ ಅವಧಿಯ ಆಫರ್ ಘೋಷಣೆ ಮಾಡಿದೆ.

ಹೋಂಡಾ ಕಂಪನಿಯ ಹೊಸ ಆಫರ್‌ಗಳು ಈ ತಿಂಗಳಾಂತ್ಯವರೆಗೆ ಲಭ್ಯವಿರಲಿದ್ದು, ಅಮೇಜ್ ಕಂಪ್ಯಾಕ್ಟ್ ಸೆಡಾನ್, ಜಾಝ್ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮತ್ತು ಡಬ್ಲ್ಯುಆರ್-ವಿ ಕಾರುಗಳ ಮೇಲೆ ಗರಿಷ್ಠ ರೂ. 38,608 ತನಕ ಡಿಸ್ಕೌಂಟ್ ನೀಡುತ್ತಿದೆ.

ಅಮೇಜ್ ಕಂಪ್ಯಾಕ್ಟ್ ಸೆಡಾನ್ ಕಾರು ಖರೀದಿಯ ಮೇಲೆ ಹೋಂಡಾ ಕಂಪನಿಯು ಎಎಂಟಿ ವರ್ಷನ್ ಸೇರಿದಂತೆ ಎಲ್ಲಾ ಮಾದರಿಗಳ ಮೇಲೂ ರೂ. 15 ಸಾವಿರ ತನಕ ಆಫರ್ ನೀಡುತ್ತಿದ್ದು, ಹೊಸ ಆಫರ್‌ಗಳಲ್ಲಿ ಕ್ಯಾಶ್‌ಬ್ಯಾಕ್, ಎಕ್ಸ್‌ಚೆಂಜ್ ಸೇರಿದಂತೆ ಆಕ್ಸೆಸರಿಸ್ ಪ್ಯಾಕೇಜ್ ಪಡೆದುಕೊಳ್ಳಬಹುದಾಗಿದೆ.

ಹೋಂಡಾ ಕಂಪನಿಯು ಕಳೆದ ವಾರವಷ್ಟೇ 2021ರ ಅಮೇಜ್ ಮಾದರಿಯನ್ನು ಬಿಡುಗಡೆ ಮಾಡಿದ್ದು, ಹೊಸ ಆವೃತ್ತಿಯ ಮೇಲೂ ಆಫರ್ ಪಡೆಯಬಹುದಾಗಿದೆ.

ಹೊಸ ಆಫರ್‌ಗಳಲ್ಲಿ ಕ್ರಾಸ್ಒವರ್ ಎಸ್‌ಯುುವಿ ಕಾರು ಮಾದರಿಯಾದ ಡಬ್ಲ್ಯುಆರ್-ವಿ ಮಾದರಿಯ ಎಲ್ಲಾ ಪೆಟ್ರೋಲ್ ಮತ್ತು ಡೀಸೆಲ್ ರೂಪಾಂತರಗಳ ಮೇಲೂ ಹೋಂಡಾ ಕಂಪನಿಯು ರೂ. 29,058 ತನಕ ಆಫರ್ ನೀಡುತ್ತಿದ್ದು, ಇದರಲ್ಲಿ ಕ್ಯಾಶ್ ಬ್ಯಾಕ್, ಎಕ್ಸ್‌ಚೆಂಜ್, ಕಾರ್ಪೊರೇಟ್ ಡಿಸ್ಕೌಂಟ್ ಸೇರಿದಂತೆ ಉಚಿತ ಆಕ್ಸೆಸರಿಸ್ ಪ್ಯಾಕೇಜ್ ನೀಡುತ್ತಿದೆ.

ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಮಾದರಿಯಾದ ಹೋಂಡಾ ಜಾಝ್ ಮಾದರಿಯ ಎಲ್ಲಾ ರೂಪಾಂತರಗಳ ಮೇಲೂ ಗ್ರಾಹಕರಿಗೆ ರೂ. 36,147 ತನಕ ಆಫರ್ ಲಭ್ಯವಿದ್ದು, ಇದರಲ್ಲಿ ರೂ. 10 ಸಾವಿರ ಕ್ಯಾಶ್ ಬ್ಯಾಕ್ ಆಫರ್ ಸೇರಿದಂತೆ, ಎಕ್ಸ್‌ಚೆಂಜ್, ಉಚಿತ ಆಕ್ಸೆಸರಿಸ್ ಪ್ಯಾಕೇಜ್ ಸಹ ಲಭ್ಯವಿರಲಿದೆ.

ಇನ್ನುಳಿದಂತೆ ಹೋಂಡಾ ಹೊಸ ಆಫರ್ ಸಿಟಿ ಸೆಡಾನ್ ಆವೃತ್ತಿಯ ಮೇಲೂ ಆಫರ್ ನೀಡುತ್ತಿದ್ದು, ಹೊಸ ಆಫರ್‌ಗಳಲ್ಲಿ ರೂ.38 ಸಾವಿರ ತನಕ ಆಫರ್ ಲಭ್ಯವಿವೆ. ಹೊಸ ಸಿಟಿ ಮಾದರಿಯ ಮೇಲೆ ಕ್ಯಾಶ್‌ಬ್ಯಾಕ್, ಎಕ್ಸ್‌ಚೆಂಜ್ ಮತ್ತು ಆಕ್ಸೆಸರಿಸ್ ಒಳಗೊಂಡ ಆಫರ್ ಲಭ್ಯವಿದೆ.

ಇನ್ನು ಕೋವಿಡ್ ನಂತರ ವಾಣಿಜ್ಯ ಚಟುವಟಿಕೆಗಳು ಹೊಸ ಸವಾಲಾಗಿ ಪರಿಣಮಿಸಿದ್ದು, ಹೋಂಡಾ ಕಾರ್ಸ್ ಇಂಡಿಯಾ ಕೂಡಾ ಹಲವಾರು ಸುರಕ್ಷಾ ಮಾರ್ಗಸೂಚಿಗಳೊಂದಿಗೆ ತನ್ನ ಕಾರು ಮಾರಾಟವನ್ನು ಸುರಕ್ಷಿತ ಮಾರ್ಗಗಳೊಂದಿಗೆ ಗರಿಷ್ಠ ಸುರಕ್ಷತೆಯನ್ನು ಖಾತ್ರಿಪಡಿಸುತ್ತಿದೆ.

ಸುರಕ್ಷಿತ ಕಾರು ಮಾರಾಟಕ್ಕಾಗಿ ಹೆಚ್ಚು ಒತ್ತು ನೀಡುತ್ತಿರುವ ಹೋಂಡಾ ಕಾರ್ಸ್ ಕಂಪನಿಯು ಕಾರುಗಳ ಮಾರಾಟಕ್ಕಾಗಿ ಪ್ರತ್ಯೇಕವಾದ ಪ್ಲ್ಯಾಟ್‌ಫಾರ್ಮ್ ತೆರೆದಿದ್ದು, ಗ್ರಾಹಕರು ಶೋರೂಂಗಳಿಗೆ ಭೇಟಿ ನೀಡದೆ ತಮ್ಮ ಇಷ್ಟದ ಕಾರು ಮಾದರಿಯನ್ನು ಆನ್‌ಲೈನ್ ಮೂಲಕವೇ ವಿಕ್ಷಣೆ ಮಾಡುವ ಅವಕಾಶ ನೀಡುತ್ತಿದೆ.

ವರ್ಚುವಲ್ ಶೋರೂಂನಲ್ಲಿ ಹೋಂಡಾ ನಿರ್ಮಾಣದ ಎಲ್ಲಾ ಕಾರು ಮಾದರಿಗಳು ವೀಕ್ಷಣೆಗೆ ಲಭ್ಯವಿದ್ದು, ಇದು ಗ್ರಾಹಕರಿಗೆ ನೇರವಾಗಿ ಶೋರೂಂ ಭೇಟಿ ನೀಡಿದ ಅನುಭವವನ್ನೇ ನೀಡುತ್ತದೆ. ಇದು ಸದ್ಯ ಕರೋನಾ ವೈರಸ್ ಪರಿಣಾಮ ಗ್ರಾಹಕರಿಗೂ ಮತ್ತು ಶೋರೂಂ ಸಿಬ್ಬಂದಿಯ ಆರೋಗ್ಯ ದೃಷ್ಠಿಯಿಂದಲೂ ಉತ್ತಮ ಕ್ರಮವಾಗಿದ್ದು, ವೈರಸ್ ಹರಡುವಿಕೆಯನ್ನು ತಪ್ಪಿಸಲು ಅನುಕೂಲಕವಾಗಲಿದೆ.


Click it and Unblock the Notifications