Just In
- 11 min ago
ವಿನೂತನ ವೈಶಿಷ್ಟ್ಯತೆಯೊಂದಿಗೆ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನವಾದ ರಾಯಲ್ ಎನ್ಫೀಲ್ಡ್ ಮಿಟಿಯೊರ್ 350
- 48 min ago
ಹೊಸ ಜೀಪ್ ರ್ಯಾಂಗ್ಲರ್ ರೂಬಿಕಾನ್ 392 ಲಾಂಚ್ ಎಡಿಷನ್ ಬಿಡುಗಡೆ
- 1 hr ago
ಸ್ಪ್ಲೆಂಡರ್ ಬೈಕುಗಳ ಮೇಲೆ ಭರ್ಜರಿ ಡಿಸ್ಕೌಂಟ್ ನೀಡುತ್ತಿದೆ ಹೀರೋ ಮೋಟೊಕಾರ್ಪ್
- 2 hrs ago
2021ರ ಸ್ವಿಫ್ಟ್ ಕಾರಿನ ಆಕ್ಸೆಸರಿಸ್ ಪ್ಯಾಕೇಜ್ ಬಿಡುಗಡೆ ಮಾಡಿದ ಮಾರುತಿ ಸುಜುಕಿ
Don't Miss!
- News
ಅಂತರರಾಷ್ಟ್ರೀಯ ವಿಮಾನ ಸಂಚಾರದ ಮೇಲಿನ ನಿರ್ಬಂಧ ಮುಂದುವರಿಕೆ
- Movies
ನಿರ್ದೇಶಕನಿಗೆ ಅವಮಾನ: ಸ್ಟಾರ್ ನಟ ಆಗಿದ್ರೆ ಸುಮ್ಮನೆ ಬಿಡುತ್ತಿದ್ರಾ? ಚಂದ್ರಶೇಖರ್ ಅಸಮಾಧಾನ
- Finance
ಮುಂದಿನ 6 ತಿಂಗಳಿನಲ್ಲಿ ದೆಹಲಿಯ ಎಲ್ಲಾ ಸರ್ಕಾರಿ ಕಾರುಗಳು, ಎಲೆಕ್ಟ್ರಿಕ್ ಕಾರುಗಳಾಗಿ ಬದಲಾಗಲಿವೆ!
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Sports
ಐಪಿಎಲ್ 2021: ರಾಜಸ್ಥಾನ್ ರಾಯಲ್ಸ್ ಜೊತೆ ಇಶ್ ಸೋಧಿ ಒಪ್ಪಂದ
- Lifestyle
ಅರಿಶಿನದ ಈ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ, ನೀವೂ ಶಾಕ್ ಆಗ್ತೀರಾ!
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸಿ ಸೆಗ್ಮೆಂಟ್ ಸೆಡಾನ್ ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ನ್ಯೂ ಜನರೇಷನ್ ಹೋಂಡಾ ಸಿಟಿ
ಆರ್ಥಿಕ ಹಿಂಜರಿತದ ಜೊತೆಗೆ ಕರೋನಾ ವೈರಸ್ ಪರಿಣಾಮ ಸಾಕಷ್ಟು ಇಳಿಕೆ ಕಂಡಿದ್ದ ಹೊಸ ವಾಹನಗಳು ಮಾರಾಟವು ಬಹುದಿನಗಳ ನಂತರ ಸುಧಾರಣೆ ಕಂಡಿದ್ದು, ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ಕೂಡಾ ದಸರಾ ಮತ್ತು ದೀಪಾವಳಿ ಸಂಭ್ರಮಾಚರಣೆ ವೇಳೆ ಅತ್ಯಧಿಕ ಪ್ರಮಾಣದ ಕಾರು ಮಾರಾಟದೊಂದಿಗೆ ಕಳೆದ ವರ್ಷದ ಕಾರು ಮಾರಾಟ ಪಟ್ಟಿಯಲ್ಲಿ ಮುಂಚೂಣಿ ಕಾಯ್ದುಕೊಂಡಿದೆ.

ಕಳೆದ ವರ್ಷದ ಮಾರ್ಚ್‌ನಿಂದ ಜುಲೈ ಅಂತ್ಯದವರೆಗೂ ಸತತವಾಗಿ ಹೊಸ ವಾಹನಗಳ ಮಾರಾಟದಲ್ಲಿ ಕನಿಷ್ಠ ಪ್ರಮಾಣದ ಬೆಳವಣಿಗೆಗೂ ಪರದಾಡಿದ್ದ ಆಟೋ ಕಂಪನಿಗಳು ತದನಂತರ ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಂಡವು. ಅದರಲ್ಲೂ ದಸರಾ ನಂತರ ದೀಪಾವಳಿ ಸಂಭ್ರಮದಲ್ಲೂ ಹೊಸ ವಾಹನ ಮಾರಾಟವು ನೀರಿಕ್ಷಿತ ಮಟ್ಟಕ್ಕಿಂತಲೂ ಹೆಚ್ಚು ಬೇಡಿಕೆ ಪಡೆದುಕೊಂಡ ವಿವಿಧ ಆಟೋ ಕಂಪನಿಗಳು ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿವೆ.

ಹೋಂಡಾ ಕಾರ್ಸ್ ಇಂಡಿಯಾ ಕೂಡಾ ಕಾರು ಮಾರಾಟದಲ್ಲಿ ಗರಿಷ್ಠ ಪ್ರಮಾಣದ ಪ್ರಮಾಣದ ಬೇಡಿಕೆ ಪಡೆದುಕೊಂಡಿದ್ದು, ಸಿ ಸೆಗ್ಮೆಂಟ್ ಸೆಡಾನ್ ಕಾರು ಮಾರಾಟದಲ್ಲಿ ಸಿಟಿ ಕಾರು ಮಾದರಿಯು ನ್ಯೂ ಜನರೇಷನ್ ಆವೃತ್ತಿಯು ಅಗ್ರಸ್ಥಾನ ಕಾಯ್ದುಕೊಂಡಿದೆ.

ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು 2020ರ ಅವಧಿಯಲ್ಲಿ ಬರೋಬ್ಬರಿ 21,826 ಯುನಿಟ್ ಮಾರಾಟ ಮಾಡಿದ್ದು, ನ್ಯೂ ಜನರೇಷನ್ ಮಾದರಿಯ ಬಿಡುಗಡೆಯ ನಂತರ 17,347 ಯುನಿಟ್(ಜುಲೈನಿಂದ ಡಿಸೆಂಬರ್) ಮಾರಾಟಗೊಳಿಸಿದೆ.

ಸಿ ಸೆಗ್ಮೆಂಟ್ ಸೆಡಾನ್ ಮಾದರಿಯಾಗಿರುವ ಸಿಟಿ ಕಾರು ದುಬಾರಿ ಬೆಲೆ ನಡುವೆಯೂ ಮಧ್ಯಮ ಕ್ರಮಾಂಕದ ಸೆಡಾನ್ ಕಾರುಗಳ ಮಾರಾಟದಲ್ಲಿ ಅಗ್ರಸ್ಥಾನಕಾಯ್ದುಕೊಂಡಿದ್ದು, ಸೆಡಾನ್ ಮಾದರಿಗಳಲ್ಲಿ ಮಾತ್ರವಲ್ಲ ಹೋಂಡಾ ಕಾರುಗಳ ಮಾರಾಟದಲ್ಲೇ ಸಿಟಿ ಕಾರು ಮೊದಲ ಸ್ಥಾನದಲ್ಲಿದೆ. ಕಳೆದ ತಿಂಗಳು ಸೆಡಾನ್ ಕಾರುಗಳ ಮಾರಾಟದಲ್ಲಿ ಒಟ್ಟು ಶೇ.41 ರಷ್ಟು ಪ್ರಮಾಣವನ್ನು ತನ್ನದಾಗಿಸಿಕೊಂಡಿರುವ ಸಿಟಿ ಕಾರು ಮಾದರಿಯು ಮಾರುತಿ ಸುಜುಕಿ ಸಿಯಾಜ್, ಹ್ಯುಂಡೈ ವೆರ್ನಾ, ಟೊಯೊಟಾ ಯಾರಿಸ್, ಫೋಕ್ಸ್‌ವ್ಯಾಗನ್ ವೆಂಟೊ ಮತ್ತು ಸ್ಕೋಡಾ ರ‍್ಯಾಪಿಡ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.

2020ರ ಜುಲೈ ಆರಂಭದಲ್ಲಿ ಸಿಟಿ ಸೆಡಾನ್ ಮಾದರಿಯನ್ನು ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಗೊಳಿಸಿದ ನಂತರ ಇದೀಗ ಅತಿಹೆಚ್ಚು ಗ್ರಾಹಕರ ಬೇಡಿಕೆ ಪಡೆದುಕೊಂಡಿದ್ದು, ಸೆಡಾನ್ ಕಾರು ಮಾರಾಟವು ಕಳೆದ ವರ್ಷಕ್ಕಿಂತಲೂ ಶೇ. 29 ರಷ್ಟು ಏರಿಕೆಯಾಗಿದೆ.

ಇನ್ನು ನ್ಯೂ ಜನರೇಷನ್ ಸಿಟಿ ಕಾರು ವಿ, ವಿಎಕ್ಸ್, ಜೆಡ್ಎಕ್ಸ್ ಆವೃತ್ತಿಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದ್ದು, ಹೊಸ ಕಾರು ಸಿ ಸೆಗ್ಮೆಂಟ್ ಸೆಡಾನ್ ಕಾರುಗಳಲ್ಲೇ ಅತ್ಯುತ್ತಮ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ. ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 10.89 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 14.64 ಲಕ್ಷದೊಂದಿಗೆ ಸೆಡಾನ್ ಪ್ರಿಯರ ಆಕರ್ಷಣೆಗೆ ಕಾರಣವಾಗಿದೆ.

ಹೊಸ ಕಾರಿನಲ್ಲಿ ಕಟಿಂಗ್ ಎಡ್ಜ್ ಎಲ್ಇಡಿ ಹೆಡ್‍ಲ್ಯಾಂಪ್, ಎಲ್ಇಡಿ ಟೈಲ್ ಲ್ಯಾಂಪ್, ಎಲ್‌ಇಡಿ ಡಿಆರ್‌ಎಲ್, ಎಲ್ ಶೇಪ್ಡ್ ಎಲ್ಇಡಿ ಟರ್ನ್ ಸಿಗ್ನಲ್, ಡೈನಾಮಿಕ್ ಇಂಡಿಕೇಟರ್ ನೀಡಲಾಗಿದ್ದು, ಹೊಸ ಕಾರು 10ನೇ ತಲೆಮಾರಿನ ಸಿವಿಕ್ ಸೆಡಾನ್ ಮಾದರಿಯಿಂದಲೂ ಹಲವಾರು ಫೀಚರ್ಸ್‌ಗಳನ್ನು ಎರವಲು ಪಡೆದುಕೊಂಡಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಹೊಸ ಸಿಟಿ ಕಾರಿನಲ್ಲಿ ಈ ಬಾರಿ ಡಬಲ್ ಓವರ್‌ಹೆಡ್ ಕ್ಯಾಮ್ ಸೆಟಪ್‌ನೊಂದಿಗೆ ಹೊಸದಾಗಿ 1.5-ಲೀಟರ್ ಪೆಟ್ರೋಲ್ ಎಂಜಿನ್(ಎಲ್15ಬಿ) ನೀಡಲಾಗುತ್ತಿದ್ದು, ಈ ಹೊಸ ಎಂಜಿನ್ 120-ಬಿಎಚ್‌ಪಿ ಮತ್ತು 145-ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ.

ಹಾಗೆಯೇ ಡೀಸೆಲ್ ಮಾದರಿಯು 1.5-ಲೀಟರ್ 100-ಬಿಎಚ್‌ಪಿ, 200-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಸ್ಟ್ಯಾಂಡರ್ಡ್ ಆಗಿ ಎರಡು ಮಾದರಿಯಲ್ಲೂ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಪರ್ಫಾಮೆನ್ಸ್ ಪ್ರಿಯರಿಗಾಗಿ ಪೆಟ್ರೋಲ್ ಹೈ ಎಂಡ್ ಮಾದರಿಯಲ್ಲಿ ಮಾತ್ರ 7-ಸ್ಪೀಡ್ ಸಿವಿಟಿ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದ್ದು, ಪೆಟ್ರೋಲ್ ಮಾದರಿಯು ಪ್ರತಿ ಲೀಟರ್‌ಗೆ 17ರಿಂದ 18 ಕಿ.ಮೀ ಮತ್ತು ಡೀಸೆಲ್ ಮಾದರಿಯು ಪ್ರತಿ ಲೀಟರ್‌ಗೆ 22ರಿಂದ 23 ಕಿ.ಮೀ ಇಂಧನ ದಕ್ಷತೆಯನ್ನು ಹೊಂದಿರಲಿದೆ.