ಪ್ರೊಲಾಗ್ ಹೆಸರಿನಲ್ಲಿ ಬಿಡುಗಡೆಯಾಗಲಿದೆ ಹೊಸ ಹೋಂಡಾ ಎಲೆಕ್ಟ್ರಿಕ್ ಎಸ್‍ಯುವಿ

ಜಪಾನ್ ಮೂಲದ ಜನಪ್ರಿಯ ಕಾರು ತಯಾರಕ ಕಂಪನಿಯಾದ ಹೋಂಡಾ ತನ್ನ ಮೊದಲ ಆಲ್-ಎಲೆಕ್ಟ್ರಿಕ್ ಎಸ್‍ಯುವಿಯನ್ನು ಪರಿಚಯಿಸಲು ಸಜ್ಜಾಗುತ್ತಿದೆ. ಇದೀಗ ಹೋಂಡಾ ಕಂಪನಿಯು ತನ್ನ ಮೊದಲ ಎಲೆಕ್ಟ್ರಿಕ್ ಎಸ್‍ಯುವಿಯ ಹೆಸರನ್ನು ಬಹಿರಂಗಪಡಿಸಿದೆ.

ಪ್ರೊಲಾಗ್ ಹೆಸರಿನಲ್ಲಿ ಬಿಡುಗಡೆಯಾಗಲಿದೆ ಹೊಸ ಹೋಂಡಾ ಎಲೆಕ್ಟ್ರಿಕ್ ಎಸ್‍ಯುವಿ

ಹೊಸ ಹೋಂಡಾ ಎಲೆಕ್ಟ್ರಿಕ್ ಎಸ್‍ಯುವಿಯು ಪ್ರೊಲಾಗ್ ಎಂಬ ಹೆಸರಿನಲ್ಲಿ ಬಿಡುಗಡೆಯಾಗಲಿದೆ. ಹೊಸ ಹೋಂಡಾ ಪ್ರೊಲಾಗ್ ಎಲೆಕ್ಟ್ರಿಕ್ ಎಸ್‍ಯುವಿಯು 2024ರಲ್ಲಿ ಉತ್ತರ ಅಮೆರಿಕಾದಲ್ಲಿ ಬಿಡುಗಡೆಯಾಗಲಿದೆ. ಅಮೆರಿಕಾ ಮಾರುಕಟ್ಟೆಯಲ್ಲಿ ಎಸ್‍ಯುವಿಗಳಿಗೆ ಹೆಚ್ಚಿನ ಆಧ್ಯತೆಗಳನ್ನು ನೀಡಲಾಗುತ್ತದೆ. ಹೋಂಡಾ ಕಂಪನಿಯು ಪ್ರೊಲಾಗ್ ಮಾದರಿಯೊಂದಿಗೆ ಎಲೆಕ್ಟ್ರಿಕ್ ವಾಹನಗಳ ವಿಭಾಗಕ್ಕೆ ಕಾಲಿಡುತ್ತಿದೆ.

ಪ್ರೊಲಾಗ್ ಹೆಸರಿನಲ್ಲಿ ಬಿಡುಗಡೆಯಾಗಲಿದೆ ಹೊಸ ಹೋಂಡಾ ಎಲೆಕ್ಟ್ರಿಕ್ ಎಸ್‍ಯುವಿ

ಇತ್ತೀಚೆಗೆ ಎಲೆಕ್ಟ್ರಿಕ್ ವಾಹನಗಳಿಗೆ ಭಾರೀ ಬೇಡಿಕೆಯನ್ನು ಪಡೆದುಕೊಳ್ಳುತ್ತಿದೆ. ಇದರಿಂದ ಹಲವು ಜನಪ್ರಿಯ ವಾಹನ ತಯಾರಕ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸುತ್ತಿದೆ. ಜನಪ್ರಿಯ ವಾಹನ ತಯಾರಕ ಕಂಪನಿಯಾದ ಹೋಂಡಾ ಕೂಡ ಇದರಲ್ಲಿ ಹಿಂದುಳಿಯಲು ಬಯಸುದಿಲ್ಲ.

ಪ್ರೊಲಾಗ್ ಹೆಸರಿನಲ್ಲಿ ಬಿಡುಗಡೆಯಾಗಲಿದೆ ಹೊಸ ಹೋಂಡಾ ಎಲೆಕ್ಟ್ರಿಕ್ ಎಸ್‍ಯುವಿ

ಇದರಿಂದ ಹೋಂಡಾ ಹೊಸ ಎಲೆಕ್ಟ್ರಿಕ್ ಎಸ್‍ಯುವಿಯನ್ನು ಅಭಿವೃದ್ದಿ ಪಡೆಸುತ್ತಿದೆ. ಈ ಪ್ರೊಲಾಗ್ ಎಲೆಕ್ಟ್ರಿಕ್ ಎಸ್‍ಯುವಿಯ ಬಗ್ಗೆ ಮಾಹಿತಿಗಳು ಮುಂದಿನ ದಿನಗಳಲ್ಲಿ ಬಹಿರಂಗವಾಗಬಹುದು ಎಂದು ನಿರೀಕ್ಷಿಸುತ್ತೇವೆ.

ಪ್ರೊಲಾಗ್ ಹೆಸರಿನಲ್ಲಿ ಬಿಡುಗಡೆಯಾಗಲಿದೆ ಹೊಸ ಹೋಂಡಾ ಎಲೆಕ್ಟ್ರಿಕ್ ಎಸ್‍ಯುವಿ

ಟೆಸ್ಲಾ, ಫೋಕ್ಸ್‌ವ್ಯಾಗನ್, ಫೋರ್ಡ್ ಮತ್ತು ಟೊಯೋಟಾದಂತಹ ಪ್ರತಿಸ್ಪರ್ಧಿಗಳಿಗೆ ಪೈಪೋಟಿ ನೀಡಲು ಹೋಂಡಾ ಪ್ರಯತ್ನಿಸಬಹುದು. ಅಮೆರಿಕಾದ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಮತ್ತು ಮಾರಾಟ ಹೆಚ್ಚುತ್ತಿದೆ.

ಪ್ರೊಲಾಗ್ ಹೆಸರಿನಲ್ಲಿ ಬಿಡುಗಡೆಯಾಗಲಿದೆ ಹೊಸ ಹೋಂಡಾ ಎಲೆಕ್ಟ್ರಿಕ್ ಎಸ್‍ಯುವಿ

ನಮ್ಮ ಮೊದಲ ಸಂಪುಟ ಹೋಂಡಾ ಬಿಇವಿ ಎಲೆಕ್ಟ್ರಿಕ್ ಆಗಿ ಪರಿವರ್ತನೆಯನ್ನು ಪ್ರಾರಂಭಿಸುತ್ತದೆ ಮತ್ತು ಹೋಂಡಾ ಪ್ರೊಲಾಗ್ ಎಂಬ ಹೆಸರು ಭವಿಷ್ಯದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಅಮೇರಿಕನ್ ಹೋಂಡಾದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಡೇವ್ ಗಾರ್ಡ್ನರ್ ಹೇಳಿದರು.

ಪ್ರೊಲಾಗ್ ಹೆಸರಿನಲ್ಲಿ ಬಿಡುಗಡೆಯಾಗಲಿದೆ ಹೊಸ ಹೋಂಡಾ ಎಲೆಕ್ಟ್ರಿಕ್ ಎಸ್‍ಯುವಿ

ಗ್ರಾಹಕರಿಗೆ ಬ್ಯಾಟರಿ-ಚಾಲಿತ ಎಸ್‍ಯುವಿಗಳಿಗೆ ಹೋಂಡಾ ನಿರೀಕ್ಷಿಸುವ ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ಪ್ಯಾಕೇಜಿಂಗ್ ಅನ್ನು ಒದಗಿಬಹುದು. ಹಲವು ಅಂತರರಾಷ್ಟ್ರೀಯ ಮಾರುಕಟ್ತೆಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಮೇಲೆ ಸಬ್ಸಿಡಿಗಳನ್ನು ನೀಡುತ್ತಿದೆ.

ಪ್ರೊಲಾಗ್ ಹೆಸರಿನಲ್ಲಿ ಬಿಡುಗಡೆಯಾಗಲಿದೆ ಹೊಸ ಹೋಂಡಾ ಎಲೆಕ್ಟ್ರಿಕ್ ಎಸ್‍ಯುವಿ

ಇದರಿಂದ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಹೆಚ್ಚಾಗುತ್ತಿದೆ. ಹೋಂಡಾ ಕಂಪನಿಯು ತನ್ನ ಮೊದಲ ಎಲೆಕ್ಟ್ರಿಕ್ ಎಸ್‍ಯುವಿಯನ್ನು ಅಮೆರಿಕಾ ಮಾರುಕಟ್ಟೆಗಳಲ್ಲಿ ಪರಿಚಯಿಸುತ್ತಿದೆ, ಆದರೆ ಇತರ ಯುರೋಪ್ ಸೇರಿದಂತೆ ಹಲವು ಪ್ರಮುಖ ಮಾರುಕಟ್ಟೆಗಲ್ಲಿಯು ಹೋಂಡಾ ಎಲೆಕ್ಟ್ರಿಕ್ ಎಸ್‍ಯುವಿಯು ಭವಿಷ್ಯದಲ್ಲಿ ಬಿಡುಗಡೆಯಾಗಬಹುದು.

ಪ್ರೊಲಾಗ್ ಹೆಸರಿನಲ್ಲಿ ಬಿಡುಗಡೆಯಾಗಲಿದೆ ಹೊಸ ಹೋಂಡಾ ಎಲೆಕ್ಟ್ರಿಕ್ ಎಸ್‍ಯುವಿ

ಭಾರತೀಯ ಮಾರುಕಟ್ಟೆಯಲ್ಲಿ ಹೋಂಡಾ ಕಂಪನಿಯು ಎಲೆಕ್ಟ್ರಿಕ್ ಮಾದರಿಯನ್ನು ಪರಿಚಯಿಸುತ್ತದೆಯೇ ಎಂಬುವುದು ಬಹಿರಂಗವಾಗಿಲ್ಲ. ಆದರೆ ಭವಿಷ್ಯದಲ್ಲಿ ಪರಿಚಯಿಸಬಹುದು. ಮುಂದಿನ ದಿನಗಳಲ್ಲಿ ಹೊಸ ಹೋಂಡಾ ಎಲೆಕ್ಟ್ರಿಕ್ ಎಸ್‍ಯುವಿಯ ಬಗ್ಗೆ ಹೆಚ್ಚಿನ ಮಾಹಿತಿಗಳು ಬಹಿರಂಗವಾಗಬಹುದು.

Most Read Articles

Kannada
Read more on ಹೋಂಡಾ honda
English summary
Honda Prologe Announced Will Be company's 1st Ev Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X