2040ರ ವೇಳೆಗೆ ಪೂರ್ಣ ಪ್ರಮಾಣದಲ್ಲಿ ಎಲೆಕ್ಟ್ರಿಕ್ ಕಾರುಗಳನ್ನು ಮಾತ್ರ ಮಾರಾಟ ಮಾಡಲಿದೆ ಹೋಂಡಾ

ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಮಾಲಿನ್ಯ ಸಮಸ್ಯೆಯು ಅತಿಯಾಗಿ ಪರಿಣಮಿಸಿದ್ದು, ಮಾಲಿನ್ಯ ಉತ್ಪಾದನೆಗೆ ಇಂಧನ ಆಧರಿತ ವಾಹನಗಳೇ ಪ್ರಮುಖ ಕಾರಣವಾಗಿವೆ. ಹೀಗಾಗಿ ವಿಶ್ವದ ಪ್ರಮುಖ ರಾಷ್ಟ್ರಗಳು 2030ರ ವೇಳೆ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವನ್ನು ನಿಷೇಧಿಸಲು ಮುಂದಾಗುತ್ತಿದ್ದು, ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಪ್ರೋತ್ಸಾಹಿಸಲಾಗುತ್ತಿದೆ.

ಎಲೆಕ್ಟ್ರಿಕ್ ಕಾರುಗಳನ್ನು ಮಾತ್ರ ಮಾರಾಟ ಮಾಡಲಿದೆ ಹೋಂಡಾ

ಮಾಲಿನ್ಯ ಪ್ರಮಾಣಕ್ಕೆ ಕಡಿವಾಣ ಹಾಕಲು ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಈಗಾಗಲೇ ಹಲವಾರು ಎಲೆಕ್ಟ್ರಿಕ್ ವಾಹನ ನೀತಿ ಮೂಲಕ ಇಂಧನ ಆಧರಿತ ವಾಹನಗಳನ್ನು ತಗ್ಗಿಸಲಾಗುತ್ತಿದ್ದು, ಯುರೋಪ್ ಒಕ್ಕೂಟದಲ್ಲೂ ಈಗಾಗಲೇ ಹಲವು ರಾಷ್ಟ್ರಗಳಲ್ಲಿ 2030ಕ್ಕೆ ಇಂಧನ ಆಧರಿತ ವಾಹನ ಮಾರಾಟವನ್ನು ನಿಷೇಧಿಸುವುದಾಗಿ ನಿರ್ಣಯ ಪ್ರಕಟಿಸಿವೆ. ಇದಕ್ಕೆ ಪೂರಕವಾಗಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಸೆಳೆಯಲು ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ.

ಎಲೆಕ್ಟ್ರಿಕ್ ಕಾರುಗಳನ್ನು ಮಾತ್ರ ಮಾರಾಟ ಮಾಡಲಿದೆ ಹೋಂಡಾ

ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ಈಗಾಗಲೇ ಡೀಸೆಲ್ ಎಂಜಿನ್ ವಾಹನಗಳ ಮಾರಾಟವು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಪೂರ್ಣಪ್ರಮಾಣದ ಎಲೆಕ್ಟ್ರಿಕ್ ವಾಹನ ಬಳಕೆ ಹೆಚ್ಚಿನ ಪ್ರಮಾಣದಲ್ಲಿದೆ.

ಎಲೆಕ್ಟ್ರಿಕ್ ಕಾರುಗಳನ್ನು ಮಾತ್ರ ಮಾರಾಟ ಮಾಡಲಿದೆ ಹೋಂಡಾ

ಮುಂಬರುವ ದಿನಗಳಲ್ಲಿ ಡೀಸೆಲ್ ಜೊತೆಗೆ ಪೆಟ್ರೋಲ್ ವಾಹನಗಳ ಬಳಕೆಯನ್ನು ನಿರ್ಬಂಧಿಸುವತ್ತ ಹಲವಾರು ಹೊಸ ನೀತಿಗಳನ್ನು ಜಾರಿಗೆ ತರಲಾಗುತ್ತಿದ್ದು, ಗ್ರೇಟ್ ಬ್ರಿಟನ್, ಐರ್ಲೆಂಡ್‌ ಸೇರಿದಂತೆ ಹಲವು ರಾಷ್ಟ್ರಗಳು 2030ರ ವೇಳೆ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವ ನಿರ್ಣಯ ಪ್ರಕಟಿಸಿವೆ.

ಎಲೆಕ್ಟ್ರಿಕ್ ಕಾರುಗಳನ್ನು ಮಾತ್ರ ಮಾರಾಟ ಮಾಡಲಿದೆ ಹೋಂಡಾ

ಇದೀಗ ಆಟೋ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಜಪಾನ್ ಕೂಡಾ ಸಾಂಪ್ರದಾಯಿಕ ಇಂಧನ ಚಾಲಿತ ವಾಹನಗಳ ಮಾರಾಟವನ್ನು 2030ರಿಂದಲೇ ಸಂಪೂರ್ಣವಾಗಿ ನಿಷೇಧಿಸುತ್ತಿರುವುದಾಗಿ ಮಾಹಿತಿ ನೀಡಿದ್ದು, ಮಾಲಿನ್ಯ ತಡೆ ಮತ್ತು ಭವಿಷ್ಯದ ದೃಷ್ಠಿಯಿಂದ ಇಂಧನದ ಮೇಲೆ ಅವಂಲನೆಯನ್ನು ತಪ್ಪಿಸಲು ಎಲೆಕ್ಟ್ರಿಕ್ ಬ್ಯಾಟರಿ ಚಾಲಿತ ವಾಹನಗಳ ಬಳಕೆಯತ್ತ ಗಮನಹರಿಸುತ್ತಿದೆ.

ಎಲೆಕ್ಟ್ರಿಕ್ ಕಾರುಗಳನ್ನು ಮಾತ್ರ ಮಾರಾಟ ಮಾಡಲಿದೆ ಹೋಂಡಾ

ಹೋಂಡಾ ಕಾರ್ಸ್ ಕಂಪನಿಯು ಕಳೆದ ವರ್ಷದ ಅಗಸ್ಟ್ ಮೊದಲ ಮೊದಲ ವಾರದಲ್ಲಿ ಯುರೋಪಿನ ಪ್ರಮುಖ ಮಾರುಕಟ್ಟೆಗಳಲ್ಲಿ ಹೊಸ ಇ ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡುವ ಮೂಲಕ ಹೊಸ ಸಂಚಲನಕ್ಕೆ ಕಾರಣವಾಗಿದ್ದು, 2025ರ ವೇಳೆದ ಸುಮಾರು 25ರಷ್ಟು ಕಾರು ಮಾದರಿಗಳನ್ನು ಮತ್ತು ದ್ವಿಚಕ್ರ ವಾಹನಗಳನ್ನು ಎಲೆಕ್ಟ್ರಿಕ್ ಮಾದರಿಯಾಗಿ ಮಾರಾಟ ಮಾಡಲಿದೆ.

ಎಲೆಕ್ಟ್ರಿಕ್ ಕಾರುಗಳನ್ನು ಮಾತ್ರ ಮಾರಾಟ ಮಾಡಲಿದೆ ಹೋಂಡಾ

2030ರ ವೇಳೆ ಯುರೋಪ್ ಮಾರುಕಟ್ಟೆಯಲ್ಲಿ ಸಂಪೂರ್ಣವಾಗಿ ಎಲೆಕ್ಟ್ರಿಕ್ ಮಾದರಿಗಳನ್ನು ಮಾತ್ರವೇ ಮಾರಾಟ ವಿಶ್ವಾದ್ಯಂತ ವಾಹನ ಮಾರಾಟ ಜಾಲ ಹೊಂದಿರುವ ಕಂಪನಿಯು 2040ರ ವೇಳೆ ವಿಶ್ವಾದ್ಯಂತ ಎಲೆಕ್ಟ್ರಿಕ್ ವಾಹನ ಮಾದರಿಗಳನ್ನು ಮಾತ್ರ ಮಾರಾಟ ಮಾಡಲು ನಿರ್ಧರಿಸಿವೆ.

ಎಲೆಕ್ಟ್ರಿಕ್ ಕಾರುಗಳನ್ನು ಮಾತ್ರ ಮಾರಾಟ ಮಾಡಲಿದೆ ಹೋಂಡಾ

ಅಧಿವೃದ್ದಿ ಹೊಂದಿರುವ ರಾಷ್ಟ್ರಗಳು 2030ರಿಂದಲೇ ಶೇ.100ರಷ್ಟು ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ತವಕದಲ್ಲಿದ್ದರೆ ಅಭಿವೃದ್ದಿ ಹೊಂದುತ್ತಿರುವ ಮತ್ತು ಬಡತನದಿಂದ ಬಳಲತ್ತಿರುವ ರಾಷ್ಟ್ರಗಳು ಸಂಪೂರ್ಣ ಎಲೆಕ್ಟ್ರಿಕ್ ನೀತಿ ಅನುಸ್ಠಾನಕ್ಕೆ ಇನ್ನು ಕೆಲವು ಸಮಯ ಕೇಳುತ್ತಿವೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಎಲೆಕ್ಟ್ರಿಕ್ ಕಾರುಗಳನ್ನು ಮಾತ್ರ ಮಾರಾಟ ಮಾಡಲಿದೆ ಹೋಂಡಾ

ಹೀಗಾಗಿ ಹಂತ-ಹಂತವಾಗಿ ಎಲೆಕ್ಟ್ರಿಕ್ ವಾಹನಗಳನ್ನು ಮಾರಾಟವನ್ನು ವಿಸ್ತರಿಸಲಿರುವ ಹೋಂಡಾ ಕಂಪನಿಯು 2040ರ ವೇಳೆ ಪೂರ್ಣ ಪ್ರಮಾಣದಲ್ಲಿ ಎಲೆಕ್ಟ್ರಿಕ್ ಮಾದರಿಗಳನ್ನು ಮಾತ್ರ ಮಾರಾಟ ಮಾಡುವ ಯೋಜನೆಯಲ್ಲಿದ್ದು, ಹೋಂಡಾ ನಿರ್ಮಾಣದ ಮಾರ್ಡನ್ ರೆಟ್ರೋ ವಿನ್ಯಾಸವನ್ನು ಹೊಸ ಇ ಕಾರು ಆಕರ್ಷಕ ಬ್ಯಾಟರಿ ಆಯ್ಕೆಯೊಂದಿಗೆ ಮಾರಾಟಗೊಳ್ಳುತ್ತಿದೆ.

ಎಲೆಕ್ಟ್ರಿಕ್ ಕಾರುಗಳನ್ನು ಮಾತ್ರ ಮಾರಾಟ ಮಾಡಲಿದೆ ಹೋಂಡಾ

ಬ್ಯಾಟರಿ ಆಯ್ಕೆ ಮತ್ತು ಫೀಚರ್ಸ್‌ಗಳಿಗೆ ಅನುಗುಣವಾಗಿ ಪ್ರಮುಖ ಎರಡು ಮಾದರಿಗಳಲ್ಲಿ ಮಾರಾಟಗೊಳ್ಳುತ್ತಿರುವ ಹೋಂಡಾ ಇ ಕಾರು ಸಾಮಾನ್ಯ ಮತ್ತು ಸುಧಾರಿತ ಬ್ಯಾಟರಿ ಆಯ್ಕೆ ಹೊಂದಿದ್ದು, ಸಾಮಾನ್ಯ ಬ್ಯಾಟರಿ ಹೊಂದಿರುವ ಮಾದರಿಯು ಪ್ರತಿ ಚಾರ್ಜ್‌ಗೆ 200 ಕಿ.ಮೀ ನಿಂದ 250 ಕಿ.ಮೀ ಸ್ಟ್ಯಾಂಡರ್ಡ್ ಮೈಲೇಜ್ ಹೊಂದಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಎಲೆಕ್ಟ್ರಿಕ್ ಕಾರುಗಳನ್ನು ಮಾತ್ರ ಮಾರಾಟ ಮಾಡಲಿದೆ ಹೋಂಡಾ

ಆಸಕ್ತ ಗ್ರಾಹಕರು ಇದೇ ಕಾರು ಮಾದರಿಯಲ್ಲಿ ಹೆಚ್ಚುವರಿ ಬ್ಯಾಟರಿ ಆಯ್ಕೆಗಳ ಮೂಲಕ ಪ್ರತಿ ಚಾರ್ಜ್‌ಗೆ 520 ಕಿ.ಮೀ ಮೈಲೇಜ್ ವರೆಗೂ ಹೆಚ್ಚಿಸಿಕೊಳ್ಳಬಹುದಾಗಿದ್ದು, ಹೋಂಡಾ ಇ ಕಾರು ತನ್ನ ಹೊಸ ಫೀಚರ್ಸ್ ಮೂಲಕ ವಿಶ್ವದ ಜನಪ್ರಿಯ ಎಲೆಕ್ಟ್ರಿಕ್ ಕಾರು ವಿಭಾಗದಲ್ಲೇ ಈಗಾಗಲೇ ಹಲವಾರು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.

Most Read Articles

Kannada
Read more on ಹೋಂಡಾ honda
English summary
Honda Cars aims to sell only electric cars by 2040. Read in Kannada.
Story first published: Saturday, April 24, 2021, 20:44 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X